ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಟಾಟಾ ಮೋಟಾರ್ಸ್(Tata Motors) ಕಂಪನಿಯು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ವಿವಿಧ ಮಾದರಿಯ ಇವಿ ಆವೃತ್ತಿಗಳೊಂದಿಗೆ ಅತ್ಯುತ್ತಮ ಬೇಡಿಕೆ ದಾಖಲಿಸುತ್ತಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯ ನಂತರ ಹಲವಾರು ಹೊಸ ಬದಲವಾಣೆಗಳೊಂದಿಗೆ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 13,500 ಯುನಿಟ್ ಮಾರಾಟಗೊಂಡಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಟಾಟಾ ಮೋಟಾರ್ಸ್ ಕಂಪನಿಯು 2019ರಲ್ಲಿ ಮೊದಲ ಬಾರಿಗೆ ಪ್ರಯಾಣಿಕ ಬಳಕೆಯ ಎಲೆಕ್ಟ್ರಿಕ್ ಕಾರು ಪರಿಚಯಿಸಿದ ನಂತರ ಟಾಟಾ ಕಂಪನಿಯು ಇದುವರೆಗೆ ಸುಮಾರು 15 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ ನೆಕ್ಸಾನ್ ಇವಿ ಕಾರು ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಗೆ ಹೊಸ ಆಯಾಮ ನೀಡಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ನೆಕ್ಸಾನ್ ಇವಿ ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ ಹೊಸ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 2022ರ ಆವೃತ್ತಿಯಲ್ಲಿ ಮೈಲೇಜ್ ರೇಂಜ್ ಪ್ರಮಾಣವನ್ನು 380 ಕಿ.ಮೀ ನಿಂದ 420 ಕಿ.ಮೀ ಹೆಚ್ಚಿಸುವ ಸಾಧ್ಯತೆಗಳಿವೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.29 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.90 ಲಕ್ಷ ಬೆಲೆ ಪಡೆದುಕೊಂಡಿದ್ದು, ನವೀಕೃತ ಮಾದರಿಯು ಪ್ರಸ್ತುತ ಮಾದರಿಯ ಬೆಲೆಗಿಂತಲೂ ರೂ.50 ಸಾವಿರದಿಂದ ರೂ.1 ಲಕ್ಷದ ತನಕ ಹೆಚ್ಚುವರಿ ಬೆಲೆ ಹೊಂದಬಹುದಾಗಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಜಿಪ್‌ಟ್ರಾನ್ ತಂತ್ರಜ್ಞಾನವು ಟಾಟಾ ಕಂಪನಿಯನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಯಲ್ಲಿ ಸಹಕಾರಿಯಾಗುತ್ತಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಟಿಗೋರ್ ಇವಿ ಮಾದರಿಯನ್ನು ಇತ್ತೀಚೆಗೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲಾಗಿದ್ದು, ಟಿಗೋರ್ ಇವಿ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಅತ್ಯುತ್ತಮ ಮೈಲೇಜ್, ಪರ್ಫಾಮೆನ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಕಂಪನಿಯು ಇವಿ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಆರಂಭಿಸಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಸದ್ಯ ಮಾರುಕಟ್ಟೆಯಲ್ಲಿರುವ ಇವಿ ಕಾರುಗಳನ್ನು ಸಾಮಾನ್ಯ ಕಾರುಗಳ ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯದ ಬೃಹತ್ ಯೋಜನೆಗಳಿಗಾಗಿ ಇದೀಗ ಪ್ರತ್ಯೇಕ ನಿಯಂತ್ರಣ ಹೊಂದಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (TPEML) ಅಂಗಸಂಸ್ಥೆಯನ್ನು ಆರಂಭಿಸಿದೆ.

ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ಮೈಲಿಗಲ್ಲು

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಅಂಗಸಂಸ್ಥೆಯನ್ನು ರೂ. 700 ಕೋಟಿ ರೂಪಾಯಿ ಆರಂಭಿಕ ಹೂಡಿಕೆಯೊಂದಿಗೆ ಆರಂಭಗೊಳಿಸಿದ್ದು, ಪ್ರತ್ಯೇಕ ಪ್ಲ್ಯಾಟ್‌ಫಾರ್ಮ ಮೂಲಕ ಇವಿ ವಾಹನಗಳ ಮೇಲೆ ಹೆಚ್ಚಿನ ಗಮನಹರಿಸಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಬಹುತೇಕ ವಾಹನ ಕಂಪನಿಗಳು ಪ್ರತ್ಯೇಕ ವಿಭಾಗಗಳನ್ನು ತೆರೆಯುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ಇದೀಗ ಅಂಗಸಂಸ್ಥೆಯ ಮೂಲಕ ಇವಿ ಕಾರುಗಳ ಮಾರಾಟದಲ್ಲಿ ಮತ್ತಷ್ಟು ಮುಂಚೂಣಿ ಸಾಧಿಸಲಿದೆ.

More from DriveSpark

Article Published On: Monday, January 31, 2022, 12:02 [IST]
English summary
Tata nexon ev suv sales milestone 13500 units
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+