Just In
- 25 min ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 2 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 16 hrs ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
- 17 hrs ago
ಭಾರತದಲ್ಲಿ ಹೊಸ ಕವಾಸಕಿ ನಿಂಜಾ 400 ಸೂಪರ್ಸ್ಪೋರ್ಟ್ ಬೈಕ್ ಬಿಡುಗಡೆ
Don't Miss!
- News
ಶೀಘ್ರವೇ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಪಿಯೂಷ್ ಗೋಯಲ್
- Sports
IND vs IRE: ಮೊದಲ ಟಿ20 ಪಂದ್ಯಕ್ಕೂ ಮುನ್ನ ವಿಶ್ವಕಪ್ ಬಗ್ಗೆ ಹಾರ್ದಿಕ್ ಪಾಂಡ್ಯ ಮಹತ್ವದ ಹೇಳಿಕೆ
- Movies
ನವೀನ್ ಸಜ್ಜು ಮೈಸೂರು ಮನೆ ಹೇಗಿದೆ ಗೊತ್ತಾ?
- Technology
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Finance
ಜೂನ್ 26: ಕಚ್ಚಾತೈಲ ದರ ಚೇತರಿಕೆ, ಭಾರತದಲ್ಲಿ ಇಂಧನ ದರ ಆಗಿಲ್ಲ ಏರಿಕೆ!
- Education
SSC MTS Admit Card 2022 : ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯಾದ ನೆಕ್ಸಾನ್ ಇವಿ ಮಾದರಿಯನ್ನು ಉನ್ನತೀಕರಿಸಿದ ಬ್ಯಾಟರಿ ಪ್ಯಾಕ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಬ್ಯಾಟರಿ ಪ್ಯಾಕ್ ಜೊತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಸರಿದೂಗಿಸಲು ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಹೊಸ ಕಾರುಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಹ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಇದೀಗ ಟಾಟಾ ಪ್ರಮುಖ ಇವಿ ಕಾರುಗಳ ವಿವಿಧ ವೆರಿಯೆಂಟ್ಗಳ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಹೆಚ್ಚಳ ಮಾಡಲಾಗಿದ್ದು, ಹೊಸ ದರ ಪಟ್ಟಿಯಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಟಿಗೋರ್ ಇವಿ ಕಾರಿನ ಬೆಲೆಯಲ್ಲಿ ಸಾಕಷ್ಟು ಹೆಚ್ಚಳವಾಗಿದೆ.

ಹೊಸ ದರ ಪಟ್ಟಿಯಲ್ಲಿ ನೆಕ್ಸಾನ್ ಇವಿ ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 14.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.40 ಲಕ್ಷ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ರೂ. 25 ಸಾವಿರದಷ್ಟು ದುಬಾರಿಯಾಗಿದೆ.

ಸದ್ಯ ನೆಕ್ಸಾನ್ ಸ್ಟ್ಯಾಂಡರ್ಡ್ ಎಲೆಕ್ಟ್ರಿಕ್ ಕಾರು ಎಕ್ಸ್ಎಂ, ಎಕ್ಸ್ಝಡ್ ಪ್ಲಸ್, ಎಕ್ಸ್ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್ಗಳಿವೆ.

ನೆಕ್ಸಾನ್ ಇವಿ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ಹೊಸ ತಂತ್ರಜ್ಞಾನ ಪ್ರೇರಿತ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ 40.5kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಜೊತೆ ಹಳೆಯ ಮಾದರಿಯಾದ ನೆಕ್ಸಾನ್ ಇವಿ ಮಾರಾಟವನ್ನು ಸಹ ಮುಂದುವರಿಸಲಾಗಿದ್ದು, ಮೈಲೇಜ್ ಹೆಚ್ಚಳ ಬಯಸುವ ಗ್ರಾಹಕರು ಹೈ ಎಂಡ್ ಮಾದರಿಯನ್ನು ಖರೀದಿಸಬಹುದಾಗಿದೆ.

ಎಆರ್ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ ನೆಕ್ಸಾನ್ ಇವಿ ಕಾರು ಇಕೋ ಡ್ರೈವ್ ಮೋಡ್ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಪ್ರತಿ ಚಾರ್ಜ್ಗೆ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇನ್ನು ಹೊಸ ದರ ಪಟ್ಟಿಯಲ್ಲಿ ನೆಕ್ಸಾನ್ ಇವಿ ಮಾದರಿಯು ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ರೂ. 25 ಸಾವಿರದಷ್ಟು ದುಬಾರಿಯಾಗಿದ್ದರೆ ಟಿಗೋರ್ ಇವಿ ಮಾದರಿಯ ಬೆಲೆಯಲ್ಲೂ ಎಕ್ಸ್ಶೋರೂಂ ಪ್ರಕಾರ ರೂ.25 ಸಾವಿರದಷ್ಟು ದರ ಹೆಚ್ಚಳವಾಗಿದೆ.

ದರ ಹೆಚ್ಚಳ ನಂತರ ಟಿಗೋರ್ ಇವಿ ಮಾದರಿಯು ಆರಂಭಿಕವಾಗಿ ರೂ. 12.24 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.64 ಲಕ್ಷ ಬೆಲೆ ಹೊಂದಿದ್ದು, ಟಿಗೋರ್ ಇವಿ ಮಾದರಿಯು ಹೊಸ ತಂತ್ರಜ್ಞಾನ ಪ್ರೇರಿತ 55kW ಎಲೆಕ್ಟ್ರಿಕ್ ಮೋಟಾರ್ ಮತ್ತು 26kWh ಲೀಥಿಯಂ ಅಯಾನ್ ಜೋಡಣೆ ಹೊಂದಿದೆ.

ಹೊಸ ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆಯು ಕಾರಿನ ಕಾರ್ಯಕ್ಷಮತೆ ಹೆಚ್ಚಳದೊಂದಿಗೆ ಮೈಲೇಜ್ನಲ್ಲೂ ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ಕಾರು ಪ್ರತಿ ಚಾರ್ಜ್ಗೆ ಗರಿಷ್ಠ 306 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಜಿಪ್ಟ್ರಾನ್ ಪವರ್ಟ್ರೈನ್ ತಂತ್ರಜ್ಞಾನವನ್ನು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೊಸ ಪವರ್ಟ್ರೈನ್ನಲ್ಲಿ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ನೀರು ಮತ್ತು ಧೂಳಿನಿಂದ ರಕ್ಷಣೆ ಹೊಂದಿರುವ ಹೊಸ ಪವರ್ಟ್ರೈನ್ ಮೇಲೆ ಟಾಟಾ ಕಂಪನಿಯು 8 ವರ್ಷ ಅಥವಾ 1.60 ಲಕ್ಷ ಕಿ.ಮೀ ಮೇಲೆ ಸ್ಟ್ಯಾಂಡರ್ಡ್ ವಾರಂಟಿ ನೀಡುತ್ತಿದ್ದು, ನವೀಕೃತ ಮಾದರಿಯಲ್ಲಿ ಹೊಸ ಪವರ್ಟ್ರೈನ್ ಜೊತೆ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳು ಸಹ ಬದಲಾವಣೆಗೊಂಡಿವೆ.