Just In
- 1 hr ago
ಕೈಗೆಟುಕುವ ಬೆಲೆ, ಹಲವು ಫೀಚರ್ಸ್ಗಳೊಂದಿಗೆ ಲಭ್ಯವಿರುವ ಟಾಪ್ 5 ಅಡ್ವೆಂಚರ್ ಬೈಕ್ಗಳಿವು!
- 1 hr ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಟೊಯೊಟಾ ಹೈರೈಡರ್ ಎಸ್‌ಯುವಿ
- 1 hr ago
ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..
- 3 hrs ago
ಕಾರಿಗೆ ಆ್ಯಸಿಡ್ ಎರಚಿದ ಆರೋಪ: ಮಹಿಳೆ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್
Don't Miss!
- News
ಬಿಬಿಎಂಪಿ 1000 ಗುಂಡಿ ಇವೆ ಎಂದರೆ, ಪೊಲೀಸರು ಪ್ರಕಾರ 2000 ರಸ್ತೆ ಗುಂಡಿಗಳು
- Sports
ನಿವೃತ್ತಿಯ ಚಿಂತನೆಯಲ್ಲಿ ಇಂಗ್ಲೆಂಡ್ ಕಂಡ ಶ್ರೇಷ್ಠ ನಾಯಕ!: ವಾರದೊಳಗೆ ನಿವೃತ್ತಿ ಘೋಷಿಸಲಿರುವ ಕ್ರಿಕೆಟಿಗ ಯಾರು?
- Finance
ರಷ್ಯಾದಿಂದ ಹಳದಿ ಲೋಹ ಆಮದಿಗೆ ಜಿ7 ನಿರ್ಬಂಧ ಹೇರಿಕೆ: ಚಿನ್ನದ ದರ ಏರಿಕೆ
- Movies
ಬಾಕ್ಸಾಫೀಸ್ ಉಳಿಸಿಕೊಳ್ಳಲು ಬಾಲಿವುಡ್ ಹರಸಾಹಸ: ಸಾಲು ಸಾಲು ಸಿನಿಮಾ ರಿಲೀಸ್!
- Lifestyle
ಆರೋಗ್ಯಕರ ಮಗುವನ್ನು ಪಡೆಯಲು ಪುರುಷರಿಗೆ ಸರಿಯಾದ ವಯಸ್ಸು ಯಾವುದು?
- Education
NEET UG Exam 2022 : ನೀಟ್ ಮುಂದೂಡಿಕೆಗೆ ಒತ್ತಾಯ !...ಪರೀಕ್ಷೆಯ ಸಂಪೂರ್ಣ ವಿವರ
- Technology
ಡೇಟಾ ಲಿಮಿಟ್ ಬಯಸದ ಗ್ರಾಹಕರಿಗೆ ಬಿಎಸ್ಎನ್ಎಲ್ನ ಈ ಪ್ಲಾನ್ ಬೆಸ್ಟ್!
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನೆಕ್ಸಾನ್ ಕಾಜಿರಂಗ ಎಡಿಷನ್
ಟಾಟಾ ಮೋಟಾರ್ಸ್(Tata Motors) ಕಂಪನಿಯು 2022ರ ಐಪಿಎಲ್‌ನ ಅಧಿಕೃತ ಪ್ರಾಯೋಜಕತ್ವ ವಹಿಸಿರುವ ಹಿನ್ನಲೆಯಲ್ಲಿ ತನ್ನ ಪ್ರಮುಖ ಎಸ್‌ಯುವಿ ಮಾದರಿಗಳಲ್ಲಿ ಕಾಜಿರಂಗ ಸ್ಪೆಷಲ್ ಎಡಿಷನ್ ಪರಿಚಯಿಸುತ್ತಿದ್ದು, ಪಂಚ್ ಜೊತೆಗೆ ನೆಕ್ಸಾನ್, ಹ್ಯಾರಿಯರ್ ಮತ್ತು ಸಫಾರಿ ಮಾದರಿಗಳಲ್ಲೂ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದೆ.

ಐಪಿಎಲ್ ಸರಣಿಯಲ್ಲಿ ಸತತ ನಾಲ್ಕನೇ ವರ್ಷವೂ ಪ್ರಾಯೋಜಕತ್ವ ವಹಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಈ ಬಾರಿಯ ಐಪಿಎಲ್‌ನಲ್ಲಿ ಹೊಚ್ಚ ಹೊಸ ಪಂಚ್ ಕಾರು ಮಾದರಿಯನ್ನು ವಿಶೇಷ ಮಾದರಿಯೊಂದಿಗೆ ಪ್ರದರ್ಶನಗೊಳಿಸಲು ನಿರ್ಧರಿಸಿದ್ದು, ಪ್ರಾಯೋಜಕತ್ವ ವಿಶೇಷತೆಗಾಗಿ ಟಾಟಾ ಕಂಪನಿಯು ಪಂಚ್ ಕಾರಿನಲ್ಲಿ ಕಾಜಿರಂಗ ಎನ್ನುವ ವಿಶೇಷ ಆವೃತ್ತಿಯನ್ನು ಅಭಿವೃದ್ದಿಪಡಿಸಿದೆ.

ಈ ಮೊದಲು ಪಂಚ್ ಕಾರು ಮಾದರಿಗಾಗಿ ಮಾತ್ರ ಕಾಜಿರಂಗ ಆವೃತ್ತಿಯನ್ನು ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಇನ್ನುಳಿದ ಎಸ್‌ಯುವಿ ಮಾದರಿಗಳಿಗೂ ಹೊಸ ಆವೃತ್ತಿಗಳಾದ ನೆಕ್ಸಾನ್, ಹ್ಯಾರಿಯರ್ ಮತ್ತು ಸಫಾರಿ ಮಾದರಿಗಳಲ್ಲೂ ಹೊಸ ಆವೃತ್ತಿ ಪರಿಚಯಿಸಲು ನಿರ್ಧರಿಸಿದೆ.

ವಿಶೇಷ ಕಾರು ಮಾದರಿಯ ಮೂಲಕ ಅಳಿವಿಂಚಿನಲ್ಲಿರುವ ಘೆಂಡಾಮೃಗಗಳ ಸಂರಕ್ಷಣೆಗೆ ಸಹಕಾರ ನೀಡಲು ಭಾರೀ ಪ್ರಮಾಣ ದೇಣಿಗೆ ಸಂಗ್ರಹಿಸಲು ನಿರ್ಧರಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಕಾರಿನಲ್ಲಿ ಹೊಸ ಆವೃತ್ತಿಯನ್ನು ಅಭಿವೃದ್ದಿಪಡಿಸಿದ್ದು, ಪಂಚ್ ಕಾಜಿರಂಗ ಎಡಿಷನ್ ಮಾತ್ರ ಹರಾಜು ಮಾಡಲಿರುವ ಟಾಟಾ ಮೋಟಾರ್ಸ್ ಕಂಪನಿಯು ಇನ್ನುಳಿದ ಎಸ್‌ಯುವಿ ಮಾದರಿಗಳಲ್ಲಿನ ಕಾಜಿರಂಗ ಮಾದರಿಗಳನ್ನು ಸಾಮಾನ್ಯ ಕಾರು ಮಾದರಿಯೆಂತೆಯೇ ಮಾರಾಟಗೊಳಿಸಲಿದೆ.

ಹೀಗಾಗಿ ಪಂಚ್ ಕಾರಿನಲ್ಲಿ ಒಂದೇ ಯುನಿಟ್ ಕಾಜಿರಂಗ ಮಾದರಿಯು ಹೆಚ್ಚಿನ ಬೆಲೆಗೆ ಹರಾಜುಗೊಳ್ಳಬಹುದೆಂಬ ನೀರಿಕ್ಷೆಗಳಿದ್ದು, ಇನ್ನುಳಿದ ಕಾರು ಮಾದರಿಗಳಲ್ಲಿ ಪರಿಚಯಿಸಲಾಗುವ ಕಾಜಿರಂಗ ಮಾದರಿಗಳು ಟಾಪ್ ಎಂಡ್ ಮಾದರಿಯನ್ನು ಆಧರಿಸಿ ಖರೀದಿಗೆ ಲಭ್ಯವಿರಲಿವೆ.

ಐಪಿಎಲ್‌ನಲ್ಲಿ ಪ್ರದರ್ಶನಗೊಳ್ಳುವ ಹೊಸ ಪಂಚ್ ಕಾಜಿರಂಗ ಆವೃತ್ತಿಯು ಟೂರ್ನಿ ಮುಕ್ತಾಯದ ನಂತರ ಹರಾಜುಗೊಳ್ಳಲಿದ್ದು, ಹರಾಜು ಪ್ರಕ್ರಿಯೆಯಿಂದ ಬಂದ ಹಣವನ್ನು ಟಾಟಾ ಮೋಟಾರ್ಸ್ ಸಂಪೂರ್ಣವಾಗಿ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಂರಕ್ಷಣಾ ಅಭಿವೃದ್ದಿ ಕಾರ್ಯಗಳಿಗೆ ದೇಣಿಗೆ ನೀಡಲಿದೆ.

2020ರಲ್ಲಿ ಭೀಕರ ಪ್ರವಾಹದ ಪರಿಣಾಮ ಹೆಚ್ಚಿನ ಮಟ್ಟದ ಹಾನಿಗೊಳಗಾಗಿದ್ದ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು ಅಭಿವೃದ್ದಿ ಕಾರ್ಯಗಳಿಗೆ ಸಹಾಯಹಸ್ತ ಚಾಚಲು ವಿಶೇಷ ಕಾರು ಮಾದರಿಗಳನ್ನು ಅಭಿವೃದ್ದಿಪಡಿಸಿ ಹರಾಜು ಪ್ರಕ್ರಿಯೆ ನಡೆಸಲು ನಿರ್ಧರಿಸಿದ್ದು, ಹೈ ಎಂಡ್ ಮಾದರಿಗಳನ್ನು ಆಧರಿಸಿ ನಿರ್ಮಾಣವಾಗಿರುವ ಕಾಜಿರಂಗ ಆವೃತ್ತಿಗಳು ವಿಶೇಷ ಬಣ್ಣದ ಆಯ್ಕೆ ಮತ್ತು ಲೊಗೊ ಮೂಲಕ ಆಕರ್ಷಕ ವಿನ್ಯಾಸ ಹೊಂದಿವೆ.

ಪಂಚ್ ಮಾದರಿಯು ಐಪಿಎಲ್ ಮುಕ್ತಾಯದ ನಂತರ ಹರಾಜುಗೊಳ್ಳಲಿದ್ದರೆ ಇನ್ನುಳಿದ ಮಾದರಿಗಳು ಸಹ ಐಪಿಎಲ್ ಮುಕ್ತಾಯದ ನಂತರಷ್ಟೇ ಖರೀದಿಗೆ ಲಭ್ಯವಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರು ಮಾದರಿಗಳನ್ನು ಈಗಾಗಲೇ ಆಯ್ದ ಡೀಲರ್ಸ್‌ಗಳಲ್ಲಿ ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.

ಹೊಸ ಆವೃತ್ತಿಗಳು ಆಕರ್ಷಕ ಬಣ್ಣದ ಆಯ್ಕೆ ಜೊತೆಗೆ ಕೆಲವು ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇನ್ನುಳಿದಂತೆ ಎಲ್ಲಾ ತಾಂತ್ರಿಕ ಸೌಲಭ್ಯಗಳು ಸಾಮಾನ್ಯ ಮಾದರಿಯಲ್ಲಿರುವಂತೆಯೇ ಇರಲಿವೆ.

ಕಾಜಿರಂಗ ಆವೃತ್ತಿಗಳಿಗೆ ಮೆಟೆರಿಯಲ್ ಬ್ರೋಂಜ್ ಬಣ್ಣದ ಆಯ್ಕೆ ನೀಡಲಾಗಿದ್ದು, ಹೊಸ ಬಣ್ಣದ ಜೊತೆಗೆ ಕಾರಿನ ಹಿಂಬದಿಯ ಟೈಲ್‌ಗೇಟ್, ವ್ಹೀಲ್, ಫೆಂಡರ್‌ಗಳು ಮತ್ತು ಇಂಟಿರಿಯರ್‌ನಲ್ಲಿ ರೈನೊ ಬ್ಯಾಜ್ಡ್ ಹೊಂದಿರುವ ಹೆಡ್‌ರೆಸ್ಟ್ ಜೊತೆಗೆ ಕಾರಿನ ಇಂಟಿರಿಯರ್‌ನಲ್ಲಿ ರೈನೊ ಮೋಟಿಫ್ ಜೋಡಿಸಲಾಗಿದೆ.

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆಗಳೊಂದಿಗೆ ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಬೆಳವಣಿಗೆ ಸಾಧಿಸುತ್ತಿದ್ದು, 2022ರ ಜನವರಿ ಅವಧಿಯಲ್ಲಿನ ಪ್ರಯಾಣಿಕರ ಕಾರು ಮಾರಾಟದಲ್ಲಿ ಶೇ.51 ರಷ್ಟು ಬೆಳವಣಿಯೊಂದಿಗೆ 40 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಸೆಮಿಕಂಡಕ್ಟರ್ ಕೊರತೆ ಮತ್ತು ಕೋವಿಡ್‌ನಿಂದ ಉಂಟಾಗುತ್ತಿರುವ ಆರ್ಥಿಕ ಏರಿಳಿತದ ನಡುವೆಯೂ ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ್ದು, ಜನವರಿ ಅವಧಿಯ ಕಾರು ಮಾರಾಟದಲ್ಲಿ ಶೇ.51 ರಷ್ಟು ಬೆಳವಣಿಯೊಂದಿಗೆ ಪ್ರಮುಖ ಕಾರು ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಜನವರಿ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 40,777 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಜನವರಿ ಅವಧಿಯಲ್ಲಿ ಮಾರಾಟಗೊಂಡಿದ್ದ 26,978 ಯುನಿಟ್‌ಗಿಂತಲೂ ಶೇ.51 ರಷ್ಟು ಹೆಚ್ಚಳವಾಗಿದೆ.

2022ರ ಜನವರಿ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ. 26 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 72,485 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಜನವರಿ ಅವಧಿಯಲ್ಲಿ ಮಾರಾಟ ಮಾಡಿದ್ದ 57,649 ಯನಿಟ್ ವಾಹನಗಳಿಂತ ಶೇ.26 ರಷ್ಟು ಹೆಚ್ಚಳವಾಗಿದೆ.

ಕಳೆದ ಕೆಲ ತಿಂಗಳಿನಿಂದ ಸ್ವದೇಶಿ ಕಾರುಗಳಿಗೆ ಹೆಚ್ಚಿನ ಬೇಡಿಕೆ ದಾಖಲಾಗುತ್ತಿರುವುದೇ ಟಾಟಾ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಯಾಣಿಕ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ಟಾಟಾ ಕಂಪನಿಯು ಈ ಬಾರಿ ವಾಣಿಜ್ಯ ವಾಹನ ಮಾರಾಟದಲ್ಲೂ ಶೇ.7 ರಷ್ಟು ಮುನ್ನಡೆ ಸಾಧಿಸಿದೆ.