Just In
Don't Miss!
- Sports
CWG 2022: ಕಂಚಿನ ಪದಕ ಗೆದ್ದ ಪತ್ನಿ ಕುರಿತು ಹೆಮ್ಮೆ ವ್ಯಕ್ತಪಡಿಸಿದ ದಿನೇಶ್ ಕಾರ್ತಿಕ್
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
- News
ಗಣರಾಜ್ಯೋತ್ಸವಕ್ಕಿಂತ ಸ್ವಾತಂತ್ರ್ಯೋತ್ಸವದಂದು ರಾಷ್ಟ್ರಧ್ವಜ ಹಾರಾಟ ವಿಭಿನ್ನ ಯಾಕೆ?
- Movies
ಪುಟ್ಟಕ್ಕನ ಮನೆಯಲ್ಲಿ ಮನೆಮಾಡಿದ ವರಮಹಲಕ್ಷ್ಮೀ ಹಬ್ಬ
- Lifestyle
Raksha Bandhan 2022: ರಕ್ಷಾಬಂಧನದಂದು ಸಹೋದರನ ಸುರಕ್ಷತೆಗಾಗಿ ಸಹೋದರಿಯರು ಈ ದೇವರನ್ನು ಪ್ರಾರ್ಥಿಸಿ
- Finance
ನಿಮ್ಮ ಸಂಸ್ಥೆ ಪಿಎಫ್ ಮೊತ್ತ ಜಮೆ ಮಾಡುತ್ತಿದೆಯೇ, ಹೀಗೆ ಚೆಕ್ ಮಾಡಿ
- Technology
ಚೀನಾ ಫೋನ್ ಬ್ಯಾನ್ ಮಾಡಿದ್ರೆ, ದೇಶಿಯ ಮೊಬೈಲ್ ಕಂಪನಿಗಳಿಗೆ ಲಾಭವೇ?
- Travel
ಇತಿಹಾಸ ಮತ್ತು ಪ್ರಕೃತಿಯ ಮಿಶ್ರಣ ನಂದಿ ಬೆಟ್ಟಗಳು
ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡ ಟಾಟಾ ನೆಕ್ಸಾನ್
ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ 2017ರಲ್ಲಿ ಬಿಡುಗಡೆಗೊಳಿಸಲಾಗಿದೆ.

ಟಾಟಾ ನೆಕ್ಸಾನ್ 2017 ರಲ್ಲಿ ಪ್ರಾರಂಭವಾದಾಗಿನಿಂದ ಭಾರತೀಯ ವಾಹನ ತಯಾರಕರಿಗೆ ವಾಲ್ಯೂಮ್ ಜನರೇಟರ್ ಆಗಿದೆ. ವಾಸ್ತವವಾಗಿ, ಸಬ್‌ಕಾಂಪ್ಯಾಕ್ಟ್ ಸತತ ಆರನೇ ತಿಂಗಳಿಗೆ ಅತಿ ಹೆಚ್ಚು ಮಾರಾಟವಾಗುವ ಸಬ್ -4 ಮೀಟರ್ ಎಸ್‌ಯುವಿಯಾಗಿ ಮುಂದುವರೆದಿದೆ. 2022ರ ಮೇ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಸ್‍ಯುವಿಯ 14,614 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಮೇ ತಿಂಗಳಿನಲ್ಲಿ 6,439 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 127 ಪ್ರತಿಶತದಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಟಾಟಾ ನೆಕ್ಸಾನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಹಿಂದಿಕ್ಕಿ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದ ಮಾರಾಟದಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆದುಕೊಂಡಿತು.

2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನವು ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿ ಬೇಡಿಕೆಯು ಹೆಚ್ಚಾಗುತ್ತಿದೆ. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಪ್ಯೂರ್ ಸಿಲ್ವರ್ ಬಣ್ಣದ ಆಯ್ಜೆಯನ್ನು ಇತ್ತೀಚೆಗೆ ಸ್ಥಗಿತಗೊಳಿಸಿತ್ತು ಇದು ಎಲ್ಲಾ ರೂಪಾಂತರಗಳೊಂದಿಗೆ ಲಭ್ಯವಿತ್ತು.

ಇನ್ನು ಈ ಬಣ್ಣವನ್ನು ಹೊರತುಪಡಿಸಿ ಟಾಟಾ ನೆಕ್ಸಾನ್ ಅಟ್ಲಾಸ್ ಬ್ಲ್ಯಾಕ್, ಪೊಲಿಜ್ ಗ್ರೀನ್, ಕ್ಯಾಲ್ಗರಿ ವೈಟ್, ಫ್ಲೇಮ್ ರೆಡ್ ಮತ್ತು ಡೇಟೋನಾ ಗ್ರೇ ಎಂಬ ಬಣ್ಣಗಳಲ್ಲಿ ಲಭ್ಯವಿರಲಿದೆ. ಈ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯು ದೇಶದಲ್ಲೇ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಒಂದಾಗಿದೆ.

ಇನ್ನು ಕಳೆದ ತಿಂಗಳ ಮಾರಾಟದಲ್ಲಿ ಟಾಟಾ ನೆಕ್ಸಾನ್ ತನ್ನ ಪ್ರಬಲ ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಸೇರಿದಂತೆ ಇತರ ಎಲ್ಲಾ ಮಾದರಿಗಳನ್ನು ಹಿಂದಿಕ್ಕಿಅಗ್ರಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಜನಪ್ರಿಯ ಮಾದರಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ. ಇದರಿಂದ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಹೊಸ ಅಪ್‌ಡೇಟ್ ಗಳನ್ನು ಪಡೆದುಕೊಂಡಿತ್ತು.

ಟಾಟಾ ನೆಕ್ಸಾನ್ ಎಸ್‍ಯುವಿಯ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ.

ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ಹೊಂದಿದೆ, ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಇನ್ನು ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಹೆಚ್ಚು ಪೈಪೋಟಿ ಇರುವುದರಿಂದ ಟಾಟಾ ತನ್ನ ನೆಕ್ಸಾನ್ ಕಾರಿನ ಇಂಟಿರಿಯರ್ ಅನ್ನು ಇತ್ತೀಚೆಗೆ ನವೀಕರಿಸಿತು. ಇದರ ಇಂಟಿರಿಯರ್ ಅಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನಿಯಂತ್ರಿಸಲು ಬಳಸಲಾಗಿದ್ದ ಎಸಿ ವೆಂಟ್ ಗಳ ಅಡಿಯಲ್ಲಿ ಇರಿಸಲಾಗಿರುವ ಫಿಸಿಕಲ್ ಬಟನ್ ಗಳನ್ನು ತೆಗೆದುಹಾಕಿದೆ. ಬದಲಾಗಿ ಟಾಟಾ ಅಲ್ಲಿ ನೆಕ್ಸಾನ್ ಲೋಗೊವನ್ನು ಇರಿಸಿದೆ.ಇನ್ನು ರೆಡಿಯೋವನ್ನು ನಿಯಂತ್ರಿಸಲು ಇದ್ದ ರೋಟರಿ ಡಯಲ್‌ಗಳನ್ನು ಸಹ ತೆಗೆದುಹಾಕಲಾಗಿದೆ, ಇನ್ಫೋಟೈನ್‌ಮೆಂಟ್ ಯುನಿಟ್'ಗೆ ಸಂಯೋಜಿಸಲಾಗಿದೆ.

ವಾಲ್ಯೂಮ್ ನಾಬ್ ಅನ್ನು ಮ್ಯೂಟ್ ಮತ್ತು ಪವರ್ ಆಫ್ ಕಾರ್ಯಗಳಿಗೆ ಸಹ ಬಳಸಬಹುದು.ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಒಳಗೊಂಡಿದೆ. ಈ ಎಕ್ಸ್‌ಎಂ(ಎಸ್) ವೆರಿಯೆಂಟ್‌ನಲ್ಲಿ ಹೆಡ್‌ಲ್ಯಾಂಪ್, ರೈನ್-ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀಯರಿಂಗ್-ಮೌಂಟಡ್ ಕಂಟ್ರೋಲ್ ಗಳನ್ನು ಕೂಡ ಒಳಗೊಂಡಿವೆ. ಕಾಸ್ಮೆಟಿಕ್ ನವೀಕರಣಗಳನ್ನು ಕೂಡ ನಡೆಸಿದ್ದಾರೆ. ಅತ್ಯಂತ ಜನಪ್ರಿಯ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್ ಎಸ್‍ಯುವಿಗಳಿಗೆ ಶೀಘ್ರದಲ್ಲೇ ಹೊಸ ಫೀಚರ್ಸ್ ಗಳನ್ನು ಪರಿಚಯಿಸಬಹುದು. ಎರಡೂ ಮಾದರಿಗಳು ವೈರ್‌ಲೆಸ್ ಚಾರ್ಜಿಂಗ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಕನೆಕ್ಟಿವಿಟಿ ಮತ್ತು ವೆಂಟಿಲೇಟೆಡ್ ಫ್ರಂಟ್ ಮತ್ತು ರಿಯರ್ ಸೀಟ್‌ಗಳನ್ನು ಸ್ಟ್ಯಾಂಡರ್ಡ್ ಫಿಟ್‌ಮೆಂಟ್‌ಗಳಾಗಿ ಸ್ವೀಕರಿಸುವ ಸಾಧ್ಯತೆಯಿದೆ.

ಇನ್ನು ಸಾಮಾನ್ಯ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ. ಇದಕ್ಕೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯು ಮಾರಾಟದಲ್ಲಿ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ.