Just In
Don't Miss!
- News
ಜಾತಿ ನಿಂದನೆ ಪ್ರಕರಣ: ಬಸವರಾಜ ಹೊರಟ್ಟಿ ವಿರುದ್ಧ ತನಿಖಾ ವರದಿ ಸಲ್ಲಿಕೆ
- Sports
ಐರ್ಲೆಂಡ್ನ ಹ್ಯಾರಿ ಟೆಕ್ಟರ್ಗೆ ಬ್ಯಾಟ್ ಗಿಫ್ಟ್ ನೀಡಿದ ಹಾರ್ದಿಕ್ ಪಾಂಡ್ಯ
- Movies
ಸಿಧು ಮೂಸೆವಾಲಾ ಹಾಡಿದ್ದ ಕೊನೆಯ ಹಾಡು ಬಿಡುಗಡೆ ಆದ ಮೂರೇ ದಿನಕ್ಕೆ ಡಿಲೀಟ್!
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಅಪಾರ್ಟ್ಮೆಂಟ್‌ಗಳಲ್ಲಿ ಇವಿ ಚಾರ್ಜಿಂಗ್ ಸೌಲಭ್ಯಕ್ಕಾಗಿ ಟಾಟಾ ಪವರ್ ಜೊತೆಗೂಡಿದ ರುಸ್ತಂಜೀ ಗ್ರೂಪ್
ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ.

ಫೇಮ್ 2 ಯೋಜನೆ ಅಡಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಇವಿ ವಾಹನ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣದ ಮೇಲೂ ಗಮನಹರಿಸಲಾಗಿದೆ.

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಹೊಸ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.

ಇವಿ ವಾಹನಗಳಿಗೆ ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣಗಳ ಅವಶ್ಯಕತೆ ಅರಿತಿರುವ ದೇಶದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ರುಸ್ತಂಜೀ ಗ್ರೂಪ್ ತನ್ನ ಪ್ರಮುಖ ಅಪಾರ್ಟ್ಮೆಂಟ್‌ಗಳಲ್ಲಿ ಟಾಟಾ ಪವರ್ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪಿಸಲು ಪಾಲುದಾರಿಕೆ ಪ್ರಕಟಿಸಿದೆ.

ರುಸ್ತಂಜೀ ಗ್ರೂಪ್ ಕಂಪನಿಯು ಮುಂಬೈ ನಗರದ ಪ್ರಮುಖ ಕಡೆಗಳಲ್ಲಿ ವಸತಿ ಸಮುಚ್ಚಯಗಳನ್ನು ಹೊಂದಿದ್ದು, ವಸತಿ ಸಮುಚ್ಚಯಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಇವಿ ವಾಹನಗಳನ್ನು ಬಳಕೆಯನ್ನು ಉತ್ತೇಜಿಸಲು ನೆರವಾಗಿದೆ.

ಟಾಟಾ ಪವರ್ ಕಂಪನಿಯು ಈಗಾಗಲೇ ದೇಶಾದ್ಯಂತ ಪ್ರಮುಖ ಕಂಪನಿಗಳೊಂದಿಗೆ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪಿಸುತ್ತಿದ್ದು, ಇತ್ತೀಚೆಗೆ ಅಪೊಲೊ ಟೈರ್ಸ್ ಕಂಪನಿಯ ಜೊತೆಗೂ ಹೊಸ ಪಾಲುದಾರಿಕೆಯೊಂದಿಗೆ ಫಾಸ್ಟ್ ಚಾರ್ಜಿಂಗ್ ತೆರೆಯುವ ಯೋಜನೆಗೆ ಚಾಲನೆ ನೀಡಿದೆ.

ಟಾಟಾ ಪವರ್ ಕಂಪನಿಯು ದೇಶಾದ್ಯಂತ ಈಗಾಗಲೇ ಪ್ರಮುಖ ಕಂಪನಿಗಳ ಜೊತೆಗೂಡಿ ಒಂದು ಸಾವಿರಕ್ಕೂ ಅಧಿಕ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆದಿದ್ದು, ಇದೀಗ ಅಪೊಲೊ ಟೈರ್ಸ್ ಜೊತೆಗೂಡಿ ಮತ್ತಷ್ಟು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ಸಿದ್ದವಾಗಿದೆ.

ಹೊಸ ಪಾಲುದಾರಿಕೆ ಯೋಜನೆ ಅಡಿ ಗ್ರಾಹಕರ ಬೇಡಿಕೆ ಅನುಸಾರವಾಗಿ ಟಾಟಾ ಪವರ್ ಕಂಪನಿಯು ಅಪೊಲೊ ಟೈರ್ಸ್ ಮಾರಾಟ ಮಳಿಗೆಗಳ ಪಾರ್ಕಿಂಗ್ ಆವರಣಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ವಿದ್ಯುತ್ ಪೂರೈಕೆ ಲಭ್ಯತೆ ಆಧಾರದ ಮೇಲೆ ಡಿಸಿ 001, ಎಸಿ, ಟೈಪ್2, ಫಾಸ್ಟ್ ಡಿಸಿ ಚಾರ್ಜರ್‌ಗಳು 50kwh ಯಿಂದ 240kwh ಸಾಮರ್ಥ್ಯ ಹೊಂದಿರಲಿವೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಅಪೊಲೊ ಟೈರ್ಸ್ ಕಂಪನಿಯ ಅಧಿಕೃತ 150ಕ್ಕೂ ಹೆಚ್ಚು ಮಾರಾಟ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಮಾರಾಟ ಮಳಿಗೆಗಳಲ್ಲಿ ಸ್ಥಳದ ಲಭ್ಯತೆ ಆಧಾರದ ಮೇಲೆ ವಿವಿಧ ಮಾದರಿಯ ಚಾರ್ಜಿಂಗ್ ನಿಲ್ದಾಣಗಳನ್ನು ಟಾಟಾ ಪವರ್ ಜೋಡಣೆ ಮಾಡಲಿದೆ.

ಟಾಟಾ ಪವರ್ ಕಂಪನಿಯು ದೇಶಾದ್ಯಂತ ಪ್ರಮುಖ ಕಂಪನಿಗಳೊಂದಿಗೆ ಸುಮಾರು 1 ಸಾವಿರಕ್ಕೂ ಹೆಚ್ಚು ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ್ದು, ಫಾಸ್ಟ್ ಚಾರ್ಜಿಂಗ್ ವಿಭಾಗದಲ್ಲಿ ಸದ್ಯ ಹೆಚ್ಚಿನ ಬೇಡಿಕೆ ಹೊಂದಿದೆ.

ವಿವಿಧ ಕಂಪನಿಗಳ ಜೊತೆಗೂಡಿ ಪಾಲುದಾರಿಕೆ ಪ್ರಕಟಿಸಿರುವ ಟಾಟಾ ಪವರ್ ಕಂಪನಿಯು ಮಾಲ್, ರೆಸ್ಟೊರೆಂಟ್, ಶಾಪಿಂಗ್ ಕಾಂಪ್ಲೆಕ್ಸ್, ಹೋಟೆಲ್‌ಗಳ ಆವರಣಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ಜೋಡಣೆ ಮಾಡಿ ನಿರ್ವಹಣೆ ಮಾಡುತ್ತಿದೆ.

ಈ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಕೊನೆಯ ಮೈಲಿ ತನಕವೂ ಚಾರ್ಜಿಂಗ್ ಸೌಲಭ್ಯ ದೊರೆಯುವಂತೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರಮುಖ ಇವಿ ಕಂಪನಿಗಳು ಕೂಡಾ ಸ್ಥಳ ಲಭ್ಯತೆ ಮತ್ತು ವಿದ್ಯುತ್ ಪೂರೈಕೆ ಆಧರಿಸಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿರ್ಮಾಣಕ್ಕೆ ಚಾಲನೆ ನೀಡಿವೆ.

ಅತಿ ಕಡಿಮೆ ಅವಧಿಯ ಹೆಚ್ಚಿನ ಪ್ರಮಾಣದ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಪರಿಚಯಿಸಲಾಗುತ್ತಿದ್ದು, ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಸಹಕಾರಿಯಾಗುವಂತೆ ಹೊಸ ಯೋಜನೆ ರೂಪಿಸಲಾಗಿದೆ.

ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.