Just In
Don't Miss!
- News
ಯುಎಪಿಎ ಅಡಿ ಯಾವುದೇ ವಕ್ತಿಯನ್ನು ವಿಚಾರಣೆಗೊಳಪಡಿಸಬಹುದು-ಹೈಕೋರ್ಟ್ ಆದೇಶ
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Sports
ICC Womens ODI Ranking: ಅಗ್ರ 10ರೊಳಗೆ ಸ್ಮೃತಿ ಮಂಧಾನ, 11ನೇ ಸ್ಥಾನದಲ್ಲಿ ರಾಜೇಶ್ವರಿ
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್
ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಪವರ್ ಕಂಪನಿಯು ಸಹಭಾಗೀತ್ವ ಯೋಜನೆಗಳೊಂದಿಗೆ ದೇಶಾದ್ಯಂತ ಇವಿ ನಿಲ್ದಾಣಗಳ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗಳನ್ನು ಆರಂಭಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ನಗರಿ ಮುಂಬೈನಲ್ಲಿ 150 ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಗುರಿತಲುಪಿತು.

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನಗಳಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ತದನಂತರ ವಿವಿಧ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಳ್ಳುತ್ತಿವೆ.

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹಾಗೆಯೇ ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯ ಕೂಡಾ ಪ್ರಮುಖವಾಗಿದ್ದು, ಈಗಾಗಲೇ ಹಲವಾರು ಖಾಸಗಿ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಚಾರ್ಜಿಂಗ್ ನಿಲ್ದಾಣಗಳ ಜಾಲವನ್ನು ವಿಸ್ತರಿಸುತ್ತಿವೆ.

ಟಾಟಾ ಪವರ್ ಕಂಪನಿಯು ವಿವಿಧ ಕಂಪನಿಗಳ ಜೊತೆ ಸಹಭಾಗಿತ್ವ ಯೋಜನೆ ಅಡಿಯಲ್ಲಿ ಇವಿ ನಿಲ್ದಾಣಗಳನ್ನು ಆರಂಭಿಸುತ್ತಿದ್ದು, ಕಂಪನಿಯು ಇದೀಗ ಮುಂಬೈ ಮಾಹಾನಗರದ ವ್ಯಾಪ್ತಿಯಲ್ಲಿ ಇದುವರೆಗೆ 150 ಇವಿ ಚಾರ್ಜಿಂಗ್ ನಿಲ್ದಾಣಗಳ ಆರಂಭಿಸಿರುವುದಾಗಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

ಹೊಸ ಚಾರ್ಜಿಂಗ್ ನಿಲ್ದಾಣಗಳೊಂದಿಗೆ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ ತೀವ್ರಗೊಳಿಸಲು ಸಹಕಾರಿಯಾಗ ಭರವಸೆ ವ್ಯಕ್ತಪಡಿಸಿದ್ದು, ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಹೆಚ್ಚಿಸುವ ಭರವಸೆ ವ್ಯಕ್ತಪಡಿಸಿದೆ.

ಸದ್ಯ ಆರಂಭಗೊಂಡಿರುವ 150 ಚಾರ್ಜಿಂಗ್ ನಿಲ್ದಾಣಗಳನ್ನು ಸಹಭಾಗಿತ್ವ ಯೋಜನೆ ಅಡಿಯಲ್ಲಿ ಪ್ರಮುಖ ಮಾಲ್ಗಳು, ಬೃಹತ್ ಪ್ರಮಾಣದ ಶಾಪಿಂಗ್ ಕಾಂಪ್ಲೆಕ್ಸ್ಗಳು, ಆಸ್ಪತ್ರೆಗಳು ಮತ್ತು ವಸತಿ ಸಂಕೀರ್ಣಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗಿದೆ.

ಮುಂಬೈ ನಗರಾದ್ಯಂತ ಟಾಟಾ ಪವರ್ ಕಂಪನಿಯು ನಿರ್ಮಾಣ ಮಾಡಿರುವ ಹೊಸ ಚಾರ್ಜಿಂಗ್ ನಿಲ್ದಾಣಗಳು ಆದ್ಯತೆ ಮೇಲೆ ನಿರ್ಮಾಣವಾಗಿರುವುದರಿಂದ ನಗರದ ಯಾವುದೇ ಪ್ರದೇಶಕ್ಕೂ ತೆರಳಿದರೂ ಚಾರ್ಜಿಂಗ್ ಸೌಲಭ್ಯವು ಲಭ್ಯವಾಗುವಂತೆ ತೆರೆಯಲಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಆರಂಭವಾಗಲಿವೆ.

ಇನ್ನೊಂದು ವಿಶೇಷವೆಂದರೆ ಟಾಟಾ ಪವರ್ ಕಂಪನಿಯು ಹೊಸ ಚಾರ್ಜಿಂಗ್ ನಿಲ್ದಾಣಗಳಿಗೆ ಸರಬರಾಜು ಮಾಡಲಾಗುವ ವಿದ್ಯುತ್ ಅನ್ನು ಗಾಳಿ, ನೀರು ಮತ್ತು ಸೌರಶಕ್ತಿಯಂತಹ ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುತ್ತಿದ್ದು, ಭವಿಷ್ಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಗಣನೀಯವಾಗಿ ತಗ್ಗಿಸುವತ್ತ ಕಂಪನಿಯು ಕಾರ್ಯನಿರ್ವಹಿಸಲಿದೆ ಎಂದು ಟಾಟಾ ಪವರ್ನ ಅಧ್ಯಕ್ಷ ಸಂಜಯ್ ಬಂಗಾ ಅವರು ಹೊಸ ಯೋಜನೆ ಕುರಿತಾಗಿ ಮಾತನಾಡಿದ್ದಾರೆ.

ಟಾಟಾ ಪವರ್ ಕಂಪನಿಯು ದೇಶಾದ್ಯಂತ ಈಗಾಗಲೇ ಪ್ರಮುಖ ಕಂಪನಿಗಳ ಜೊತೆಗೂಡಿ ಒಂದು ಸಾವಿರಕ್ಕೂ ಅಧಿಕ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆದಿದ್ದು, ಇತ್ತೀಚೆಗೆ ಕಂಪನಿಯು ಅಪೊಲೊ ಟೈರ್ಸ್ ಜೊತೆಗೂಡಿ ಮತ್ತಷ್ಟು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ಸಿದ್ದವಾಗಿದೆ.

ಹೊಸ ಪಾಲುದಾರಿಕೆ ಯೋಜನೆ ಅಡಿ ಗ್ರಾಹಕರ ಬೇಡಿಕೆ ಅನುಸಾರವಾಗಿ ಟಾಟಾ ಪವರ್ ಕಂಪನಿಯು ಅಪೊಲೊ ಟೈರ್ಸ್ ಮಾರಾಟ ಮಳಿಗೆಗಳ ಪಾರ್ಕಿಂಗ್ ಆವರಣಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ವಿದ್ಯುತ್ ಪೂರೈಕೆ ಲಭ್ಯತೆ ಆಧಾರದ ಮೇಲೆ ಡಿಸಿ 001, ಎಸಿ, ಟೈಪ್2, ಫಾಸ್ಟ್ ಡಿಸಿ ಚಾರ್ಜರ್ಗಳು 50kwh ಯಿಂದ 240kwh ಸಾಮರ್ಥ್ಯ ಹೊಂದಿರಲಿವೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಅಪೊಲೊ ಟೈರ್ಸ್ ಕಂಪನಿಯ ಅಧಿಕೃತ 150ಕ್ಕೂ ಹೆಚ್ಚು ಮಾರಾಟ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಮಾರಾಟ ಮಳಿಗೆಗಳಲ್ಲಿ ಸ್ಥಳದ ಲಭ್ಯತೆ ಆಧಾರದ ಮೇಲೆ ವಿವಿಧ ಮಾದರಿಯ ಚಾರ್ಜಿಂಗ್ ನಿಲ್ದಾಣಗಳನ್ನು ಟಾಟಾ ಪವರ್ ಜೋಡಣೆ ಮಾಡಲಿದೆ.

2026ರ ವೇಳೆಗೆ ಸಂಭಾವ್ಯವಾಗಿ ಸಂಚರಿಸಬಹುದಾದ ಎರಡು ಮಿಲಿಯನ್ ಎಲೆಕ್ಟ್ರಿಕ್ ವಾಹನಗಳ(ಇವಿ) ಚಾರ್ಜಿಂಗ್ ಅಗತ್ಯವನ್ನು ಪೂರೈಸಲು 4 ಲಕ್ಷ ಫಾಸ್ಟ್ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸುವ ಸರ್ಕಾರದ ಉಪಕ್ರಮವನ್ನು ಪ್ರಮುಖ ಚಾರ್ಜಿಂಗ್ ನಿಲ್ದಾಣ ನಿರ್ಮಾಣಗಳು ಬೆಂಬಲಿಸುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಸಾರ್ವಜನಿಕ ಬಳಕೆಗೆ ಲಭ್ಯವಾಗಲಿವೆ.