ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಪವರ್ ಕಂಪನಿಯು ಸಹಭಾಗೀತ್ವ ಯೋಜನೆಗಳೊಂದಿಗೆ ದೇಶಾದ್ಯಂತ ಇವಿ ನಿಲ್ದಾಣಗಳ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗಳನ್ನು ಆರಂಭಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ನಗರಿ ಮುಂಬೈನಲ್ಲಿ 150 ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಗುರಿತಲುಪಿತು.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನಗಳಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ತದನಂತರ ವಿವಿಧ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಳ್ಳುತ್ತಿವೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಹಾಗೆಯೇ ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯ ಕೂಡಾ ಪ್ರಮುಖವಾಗಿದ್ದು, ಈಗಾಗಲೇ ಹಲವಾರು ಖಾಸಗಿ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಚಾರ್ಜಿಂಗ್ ನಿಲ್ದಾಣಗಳ ಜಾಲವನ್ನು ವಿಸ್ತರಿಸುತ್ತಿವೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಟಾಟಾ ಪವರ್ ಕಂಪನಿಯು ವಿವಿಧ ಕಂಪನಿಗಳ ಜೊತೆ ಸಹಭಾಗಿತ್ವ ಯೋಜನೆ ಅಡಿಯಲ್ಲಿ ಇವಿ ನಿಲ್ದಾಣಗಳನ್ನು ಆರಂಭಿಸುತ್ತಿದ್ದು, ಕಂಪನಿಯು ಇದೀಗ ಮುಂಬೈ ಮಾಹಾನಗರದ ವ್ಯಾಪ್ತಿಯಲ್ಲಿ ಇದುವರೆಗೆ 150 ಇವಿ ಚಾರ್ಜಿಂಗ್ ನಿಲ್ದಾಣಗಳ ಆರಂಭಿಸಿರುವುದಾಗಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಹೊಸ ಚಾರ್ಜಿಂಗ್ ನಿಲ್ದಾಣಗಳೊಂದಿಗೆ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ ತೀವ್ರಗೊಳಿಸಲು ಸಹಕಾರಿಯಾಗ ಭರವಸೆ ವ್ಯಕ್ತಪಡಿಸಿದ್ದು, ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಹೆಚ್ಚಿಸುವ ಭರವಸೆ ವ್ಯಕ್ತಪಡಿಸಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಸದ್ಯ ಆರಂಭಗೊಂಡಿರುವ 150 ಚಾರ್ಜಿಂಗ್ ನಿಲ್ದಾಣಗಳನ್ನು ಸಹಭಾಗಿತ್ವ ಯೋಜನೆ ಅಡಿಯಲ್ಲಿ ಪ್ರಮುಖ ಮಾಲ್‌ಗಳು, ಬೃಹತ್ ಪ್ರಮಾಣದ ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಆಸ್ಪತ್ರೆಗಳು ಮತ್ತು ವಸತಿ ಸಂಕೀರ್ಣಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಮುಂಬೈ ನಗರಾದ್ಯಂತ ಟಾಟಾ ಪವರ್ ಕಂಪನಿಯು ನಿರ್ಮಾಣ ಮಾಡಿರುವ ಹೊಸ ಚಾರ್ಜಿಂಗ್ ನಿಲ್ದಾಣಗಳು ಆದ್ಯತೆ ಮೇಲೆ ನಿರ್ಮಾಣವಾಗಿರುವುದರಿಂದ ನಗರದ ಯಾವುದೇ ಪ್ರದೇಶಕ್ಕೂ ತೆರಳಿದರೂ ಚಾರ್ಜಿಂಗ್ ಸೌಲಭ್ಯವು ಲಭ್ಯವಾಗುವಂತೆ ತೆರೆಯಲಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಆರಂಭವಾಗಲಿವೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಇನ್ನೊಂದು ವಿಶೇಷವೆಂದರೆ ಟಾಟಾ ಪವರ್ ಕಂಪನಿಯು ಹೊಸ ಚಾರ್ಜಿಂಗ್ ನಿಲ್ದಾಣಗಳಿಗೆ ಸರಬರಾಜು ಮಾಡಲಾಗುವ ವಿದ್ಯುತ್ ಅನ್ನು ಗಾಳಿ, ನೀರು ಮತ್ತು ಸೌರಶಕ್ತಿಯಂತಹ ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುತ್ತಿದ್ದು, ಭವಿಷ್ಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಗಣನೀಯವಾಗಿ ತಗ್ಗಿಸುವತ್ತ ಕಂಪನಿಯು ಕಾರ್ಯನಿರ್ವಹಿಸಲಿದೆ ಎಂದು ಟಾಟಾ ಪವರ್‌ನ ಅಧ್ಯಕ್ಷ ಸಂಜಯ್ ಬಂಗಾ ಅವರು ಹೊಸ ಯೋಜನೆ ಕುರಿತಾಗಿ ಮಾತನಾಡಿದ್ದಾರೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಟಾಟಾ ಪವರ್ ಕಂಪನಿಯು ದೇಶಾದ್ಯಂತ ಈಗಾಗಲೇ ಪ್ರಮುಖ ಕಂಪನಿಗಳ ಜೊತೆಗೂಡಿ ಒಂದು ಸಾವಿರಕ್ಕೂ ಅಧಿಕ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆದಿದ್ದು, ಇತ್ತೀಚೆಗೆ ಕಂಪನಿಯು ಅಪೊಲೊ ಟೈರ್ಸ್ ಜೊತೆಗೂಡಿ ಮತ್ತಷ್ಟು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ಸಿದ್ದವಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ಹೊಸ ಪಾಲುದಾರಿಕೆ ಯೋಜನೆ ಅಡಿ ಗ್ರಾಹಕರ ಬೇಡಿಕೆ ಅನುಸಾರವಾಗಿ ಟಾಟಾ ಪವರ್ ಕಂಪನಿಯು ಅಪೊಲೊ ಟೈರ್ಸ್ ಮಾರಾಟ ಮಳಿಗೆಗಳ ಪಾರ್ಕಿಂಗ್ ಆವರಣಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ವಿದ್ಯುತ್ ಪೂರೈಕೆ ಲಭ್ಯತೆ ಆಧಾರದ ಮೇಲೆ ಡಿಸಿ 001, ಎಸಿ, ಟೈಪ್2, ಫಾಸ್ಟ್ ಡಿಸಿ ಚಾರ್ಜರ್‌ಗಳು 50kwh ಯಿಂದ 240kwh ಸಾಮರ್ಥ್ಯ ಹೊಂದಿರಲಿವೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಅಪೊಲೊ ಟೈರ್ಸ್ ಕಂಪನಿಯ ಅಧಿಕೃತ 150ಕ್ಕೂ ಹೆಚ್ಚು ಮಾರಾಟ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಮಾರಾಟ ಮಳಿಗೆಗಳಲ್ಲಿ ಸ್ಥಳದ ಲಭ್ಯತೆ ಆಧಾರದ ಮೇಲೆ ವಿವಿಧ ಮಾದರಿಯ ಚಾರ್ಜಿಂಗ್ ನಿಲ್ದಾಣಗಳನ್ನು ಟಾಟಾ ಪವರ್ ಜೋಡಣೆ ಮಾಡಲಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 150 ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ ಟಾಟಾ ಪವರ್

2026ರ ವೇಳೆಗೆ ಸಂಭಾವ್ಯವಾಗಿ ಸಂಚರಿಸಬಹುದಾದ ಎರಡು ಮಿಲಿಯನ್ ಎಲೆಕ್ಟ್ರಿಕ್ ವಾಹನಗಳ(ಇವಿ) ಚಾರ್ಜಿಂಗ್ ಅಗತ್ಯವನ್ನು ಪೂರೈಸಲು 4 ಲಕ್ಷ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸರ್ಕಾರದ ಉಪಕ್ರಮವನ್ನು ಪ್ರಮುಖ ಚಾರ್ಜಿಂಗ್ ನಿಲ್ದಾಣ ನಿರ್ಮಾಣಗಳು ಬೆಂಬಲಿಸುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಸಾರ್ವಜನಿಕ ಬಳಕೆಗೆ ಲಭ್ಯವಾಗಲಿವೆ.

Most Read Articles

Kannada
English summary
Tata power starts 150 ev charging stations details
Story first published: Friday, June 24, 2022, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X