ಪಂಚ್ ಮೈಕ್ರೊ ಎಸ್‌ಯುವಿ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಪಂಚ್ ಮೈಕ್ರೊ ಎಸ್‌ಯುವಿ ಕಾರು ಮಾದರಿಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ನಂತರ ಟಾಟಾ ನಿರ್ಮಾಣದ ಎರಡನೇ ಅತಿ ಹೆಚ್ಚು ಬೇಡಿಕೆಯ ಕಾರು ಮಾದರಿಯಾಗಿ ಹೊರಹೊಮ್ಮುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಕಳೆದ ವರ್ಷ ಅಕ್ಟೋಬರ್ ಕೊನೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದ ಪಂಚ್ ಕಾರು ಮಾದರಿಯು ಇದುವರೆಗೆ 1.50 ಲಕ್ಷಕ್ಕೂ ಹೆಚ್ಚು ಗ್ರಾಹಕರಿಂದ ಬುಕ್ಕಿಂಗ್‌ ಪಡೆದುಕೊಂಡಿದ್ದು, ಇದುವರೆಗೆ ಸುಮಾರು 1 ಲಕ್ಷ ಯುನಿಟ್ ವಿತರಣೆ ಉತ್ಪಾದನೆ ಪೂರ್ಣಗೊಳಿಸಲಾಗಿದೆ. ಟಾಟಾ ಕಂಪನಿಯ ಇತ್ತೀಚಿನ ಮಾಹಿತಿ ಪ್ರಕಾರ ಪಂಚ್ ಕಾರು 1 ಲಕ್ಷ ಯುನಿಟ್ ಉತ್ಪಾದನೆ ಪೂರ್ಣಗೊಳ್ಳುವ ಮೂಲಕ ಗ್ರಾಹಕರಿಗೆ ವಿತರಣೆ ಮಾಡಿರುವುದಾಗಿ ಹೇಳಿಕೊಂಡಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಪಂಚ್ ಕಾರು ಮಾದರಿಯು ವಿಶೇಷ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಬಿಡುಗಡೆಯಾದ ಕೇವಲ ಹತ್ತು ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ವಿತರಣೆಯಾಗಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಪಂಚ್ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಉತ್ತಮ ಪಾಲು ದಾಖಲಿಸುತ್ತಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತಹತ್ವದ ಬದಲಾವಣೆಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಹೊಸ ಪಂಚ್ ಕಾರು ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಎರಡು ವಿಶೇಷ ಆವೃತ್ತಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಸ್ಟ್ಯಾಂಡರ್ಡ್ ಮತ್ತು ಕಾಜಿರಂಗ ಎಡಿಷನ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.93 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.49 ಲಕ್ಷ ಬೆಲೆ ಹೊಂದಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಪಂಚ್ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಯಾಗಿ ಪ್ಯೂರ್ ವೆರಿಯೆಂಟ್ ಮಾರಾಟಗೊಳ್ಳುತ್ತಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ಬೆಸ್ ವೆರಿಯೆಂಟ್‌ನಲ್ಲೂ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ. 1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಪ್ರತಿ ಮಾದರಿಯಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ ಹೊಂದಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಪ್ಯೂರ್ ಮಾದರಿಯಲ್ಲಿ ಕಂಪನಿಯು ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಸ್ಯಾವಿ ಕಂಟ್ರೋಲ್, ಆರ್‌ಪಿಎಎಸ್, ಸೆಂಟ್ರೇಲ್ ಲಾಕಿಂಗ್ ಜೊತೆ ಕೀ, ಐಎಸಿ ಮತ್ತು ಇಎಸ್ಎಸ್ ಟೆಕ್ನಾಲಜಿ, ಫ್ರಂಟ್ ಪವರ್ ವಿಂಡೋ, ಟಿಲ್ಟ್ ಸ್ಟೀರಿಂಗ್, 90 ಡಿಗ್ರಿ ಡೋರ್ ಓಪನ್, ರಿಯರ್ ಪ್ಲ್ಯಾಟ್ ಫ್ಲೊರ್, ಬ್ಲ್ಯಾಕ್ ಒಡಿಹೆಚ್, ಹ್ಯುಮಿನಿಟಿ ಕ್ರೊಮ್ ಲೈನ್, ಪೆಟೆಂಡ್ ಬಂಪರ್, ಡೋರ್, ವೀಲ್ಹ್ ಆರ್ಚ್, ಸಿಲ್ ಕ್ಲಾಡಿಂಗ್ ಜೋಡಣೆ ಮಾಡಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಅಡ್ವೆಂಚರ್ ಮಾದರಿಯಲ್ಲಿ 4 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, 4 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಫೋರ್ಟ್, ಎಲೆಕ್ಟ್ರಿಕ್ ಮೂಲಕ ಹೊಂದಾಣಿಕೆ ಮಾಡಿಕೊಳ್ಳಬಹುದಾದ ರಿಯರ್ ವ್ಯೂ ಮಿರರ್, ಆಲ್ ಪವರ್ ವಿಂಡೋ, ಫಾಲೋ ಮಿ ಹೋಂ ಹೆಡ್‌ಲ್ಯಾಂಪ್, ಆಂಟಿ ಗ್ಲೆರ್ ಐಆರ್‌ಎಂವಿ, ಸೆಂಟ್ರಲ್ ರಿಮೋಟ್ ಲಾಕಿಂಗ್ ಜೊತೆ ಫ್ಲಿಪ್ ಕೀ, ಫುಲ್ ವ್ಹೀಲ್ ಕವರ್ ಮತ್ತು ಬಾಡಿ ಕಲರ್ ರಿಯರ್ ವ್ಯೂ ಮಿರರ್ ನೀಡಲಾಗಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಅಕಾಂಪ್ಲಿಶೆಡ್ ಆವೃತ್ತಿಯಲ್ಲಿ ಹೊಂದಾಣಿಕೆ ಮಾಡಬಹುದಾದ 7 ಇಂಚಿನ ಹರ್ಮನ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ, 4 ಸ್ಪೀಕರ್ಸ್ ಮತ್ತು 2 ಟ್ವಿಟರ್, ರಿಯರ್ ವ್ಯೂ ಕ್ಯಾಮೆರಾ, ಎಲ್ಇಡಿ ಟೈಲ್ ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್, ಆರ್15 ಹೈಪರ್ ಸ್ಟೈಲ್ ವ್ಹೀಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಒನ್ ಟಚ್ ಡೋರ್ ವಿಂಡೋ ಡೌನ್, ಕ್ರೂಸ್ ಕಂಟ್ರೋಲ್, ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಮತ್ತು ಸಿಟಿವಿ ಮಾದರಿಯಾಗಿ ಟ್ರಾಕ್ಷನ್ ಕಂಟ್ರೋಲ್ ಸೌಲಭ್ಯವಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಹೈ ಎಂಡ್ ಮಾದರಿಯಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್, ರೂಫ್ ರೈಲ್ಸ್, 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಹೆಡ್‌ಲ್ಯಾಂಪ್, ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ಡಿಸೈನ್ ಹೊಂದಿದ್ದು, ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಪಂಚ್ ಮೈಕ್ರೊ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಜೊತೆಗೆ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ನಂತರ ಎಲ್ಲಾ ಕಾರು ಮಾದರಿಗಳಲ್ಲೂ ಗರಿಷ್ಠ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

Article Published On: Thursday, August 11, 2022, 13:53 [IST]
English summary
Tata punch achieves a new milestone 1 00 000 sales mark details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+