ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು 2022ರ ಐಪಿಎಲ್‌ನ ಅಧಿಕೃತ ಪ್ರಾಯೋಜಕತ್ವ ವಹಿಸಿದ್ದು, ಸತತ ನಾಲ್ಕನೇ ವರ್ಷವೂ ಪ್ರಾಯೋಜಕತ್ವ ವಹಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಈ ಬಾರಿಯ ಐಪಿಎಲ್‌ನಲ್ಲಿ ಹೊಚ್ಚ ಹೊಸ ಪಂಚ್ ಕಾರು ಮಾದರಿಯನ್ನು ಪ್ರದರ್ಶನಗೊಳಿಸಲು ನಿರ್ಧರಿಸಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

2022ರ ಐಪಿಎಲ್‌ನ ಅಧಿಕೃತ ಪ್ರಾಯೋಜಕತ್ವ ವಿಶೇಷತೆಗಾಗಿ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಕಾರಿನಲ್ಲಿ ಕಾಜಿರಂಗ ಎನ್ನುವ ವಿಶೇಷ ಆವೃತ್ತಿಯನ್ನು ಅಭಿವೃದ್ದಿಪಡಿಸಿದ್ದು, ಐಪಿಎಲ್‌ನಲ್ಲಿ ಪ್ರದರ್ಶನಗೊಳ್ಳುವ ಹೊಸ ಕಾಜಿರಂಗ ಆವೃತ್ತಿಯನ್ನು ಹರಾಜು ಮಾಡಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹರಾಜು ಪ್ರಕ್ರಿಯೆಯಿಂದ ಬಂದ ಹಣವನ್ನು ಸಂಪೂರ್ಣವಾಗಿ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಅಭಿವೃದ್ದಿ ಕಾರ್ಯಗಳಿಗೆ ದೇಣಿಗೆ ನೀಡಲು ನಿರ್ಧರಿಸಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

2020ರಲ್ಲಿ ಭೀಕರ ಪ್ರವಾಹ ಪರಿಣಾಮ ಹೆಚ್ಚಿನ ಮಟ್ಟದ ಹಾನಿಗೊಳಗಾಗಿದ್ದ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು ಅಭಿವೃದ್ದಿ ಕಾರ್ಯಗಳಿಗೆ ಸಹಾಯಹಸ್ತ ಚಾಚಲು ವಿಶೇಷ ಕಾರು ಮಾದರಿಯೊಂದಿಗೆ ಹರಾಜು ಪ್ರಕ್ರಿಯೆ ನಡೆಸಲು ನಿರ್ಧರಿಸಿದ್ದು, ಪ್ರಸಕ್ತ ವರ್ಷದ ಐಪಿಎಲ್‌ಗಾಗಿ ನಡೆಯುತ್ತಿರುವ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿಯೇ ಪಂಚ್ ಕಾಜಿರಂಗ ಆವೃತ್ತಿ ಕೂಡಾ ಹರಾಜುಗೊಳ್ಳಲಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಪಂಚ್ ಕಾರಿನ ಹೈ ಎಂಡ್ ಮಾದರಿಯಾದ ಕ್ರಿಯೆಟಿವ್ ಆಧರಿಸಿ ನಿರ್ಮಾಣವಾಗಿ ಕಾಜಿರಂಗ ಆವೃತ್ತಿಯು ವಿಶೇಷ ಬಣ್ಣದ ಆಯ್ಕೆ ಮತ್ತು ಲೊಗೊ ಮೂಲಕ ವಿಶೇಷ ವಿನ್ಯಾಸ ಹೊಂದಿದ್ದು, ಭಾರೀ ಮೊತ್ತಕ್ಕೆ ಹರಾಜುಕೊಳ್ಳುವ ನೀರಿಕ್ಷೆಯಲ್ಲಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಟಾಟಾ ಪಂಚ್ ಕಾಜಿರಂಗ ಆವೃತ್ತಿಗಾಗಿ ಮೆಟೆರಿಯಲ್ ಬ್ರೋಂಜ್ ಬಣ್ಣದ ಆಯ್ಕೆ ನೀಡಲಾಗಿದ್ದು, ಹೊಸ ಬಣ್ಣದ ಜೊತೆಗೆ ಕಾರಿನ ಹಿಂಬದಿಯ ಟೈಲ್‌ಗೇಟ್ ಮತ್ತು ಇಂಟಿರಿಯರ್‌ನಲ್ಲಿ ರೈನೊ ಬ್ಯಾಜ್ಡ್ ಜೊತೆಗೆ ಕಾರಿನ ಇಂಟಿರಿಯರ್‌ನಲ್ಲಿ ರೈನೊ ಮೋಟಿಫ್ ಜೋಡಿಸಲಾಗಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಆವೃತ್ತಿಯಲ್ಲಿ ಆಕರ್ಷಕ ಬಣ್ಣದ ಆಯ್ಕೆ ಜೊತೆಗೆ ಕೆಲವು ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇನ್ನುಳಿದ ಎಲ್ಲಾ ತಾಂತ್ರಿಕ ಸೌಲಭ್ಯಗಳು ಸಾಮಾನ್ಯ ಮಾದರಿಯಲ್ಲಿರುವಂತೆಯೇ ಇರಲಿವೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಸ್ಟ್ಯಾಂಡರ್ಡ್ ಪಂಚ್ ಮಾದರಿಯು ಸದ್ಯ ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರು ಬಿಡುಗಡೆಯಾದ ಕೇವಲ ಮೂರು ತಿಂಗಳ ಅವಧಿಯಲ್ಲಿ 25 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಕಳೆದ ತಿಂಗಳು ಒಂದೇ ತಿಂಗಳಿನಲ್ಲಿ 10 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಳ್ಳುವ ಮೂಲಕ ನೆಕ್ಸಾನ್ ನಂತರ ಅತಿ ಹೆಚ್ಚು ಬೇಡಿಕೆ ಹೊಂದಿದ್ದು, ಬಜೆಟ್ ಬೆಲೆಯ ಕಾರುಗಳಲ್ಲಿ ಮೊದಲ ಬಾರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಭಾರತೀಯ ಆಟೋಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹೊಸ ಪಂಚ್ ಕಾರು ಮಾದರಿಯು ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವ ಅತಿ ಹೆಚ್ಚು ಸುರಕ್ಷತೆ ಹೊಂದಿರುವ ಮಧ್ಯಮ ಕ್ರಮಾಂಕದ ಕಾರುಗಳ ಪಟ್ಟಿಯಲ್ಲಿ ಪಂಚ್ ಮೊದಲ ಸ್ಥಾನದಲ್ಲಿದ್ದು, ಹೊಸ ಕಾರಿನಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.64 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.28 ಲಕ್ಷ ಬೆಲೆ ಹೊಂದಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಪ್ರತಿ ಮಾದರಿಯಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ ಜೋಡಣೆ ಮಾಡಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ಡಿಸೈನ್ ಹೊಂದಿದ್ದು, ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಐಪಿಎಲ್ ವಿಶೇಷತೆಗಾಗಿ 'ಪಂಚ್ ಕಾಜಿರಂಗ' ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ ಟಾಟಾ ಮೋಟಾರ್ಸ್

ಹೈ ಎಂಡ್ ಮಾದರಿಯಲ್ಲಿ ವಿವಿಧ ತಾಂತ್ರಿಕ ಅಂಶಗಳೊಂದಿಗೆ ಹೆಚ್ಚುವರಿಯಾಗಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್, ರೂಫ್ ರೈಲ್ಸ್, 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಹೆಡ್‌ಲ್ಯಾಂಪ್, ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

Article Published On: Sunday, February 13, 2022, 8:59 [IST]
English summary
Tata punch kaziranga edition to be auctioned at ipl 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+