ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಹೊಸ ಕಾರುಗಳ ಮಾರಾಟದಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಇದೀಗ ತನ್ನ ಹೊಸ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಗಾಗಿ ಹೊಸ ಕ್ಯಾಮೋ ಎಡಿಷನ್ ಪರಿಚಯಿಸಲು ಸಿದ್ದವಾಗುತ್ತಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಪ್ರತಿ ಎರಡು ತಿಂಗಳಿಗೆ ಒಂದು ಬಾರಿ ಹೊಸ ಫೀಚರ್ಸ್‌‌ಗಳನ್ನು ಅಥವಾ ಬಣ್ಣಗಳ ಆಯ್ಕೆ ಬದಲಾವಣೆಯನ್ನು ಮಾಡುತ್ತಿದ್ದು, ಇದೀಗ ಹೊಸದಾಗಿ ಬಿಡುಗಡೆಗೊಂಡು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಪಂಚ್ ಮೈಕ್ರೊ ಎಸ್‌ಯುವಿಗಾಗಿ ಅಡ್ವೆಂಚರ್ ವೈಶಿಷ್ಟ್ಯತೆಗಳನ್ನು ಹೊಂದಿರುವ ಕ್ಯಾಮೋ ಎಡಿಷನ್ ಪರಿಚಯಿಸುತ್ತಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಕ್ಯಾಮೋ ಎಡಿಷನ್ ಅನ್ನು ಈ ಹಿಂದೆ ಹ್ಯಾರಿಯರ್ ಎಸ್‌ಯುವಿಯಲ್ಲಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಹೊಸದಾಗಿ ಪಂಚ್ ಕಾರಿನಲ್ಲಿ ಪರಿಚಯಿಸುತ್ತಿದ್ದು, ಮುಂಬರುವ ದಸರಾ ಸಂಭ್ರಮದ ವೇಳೆಗೆ ಖರೀದಿಗೆ ಲಭ್ಯಲಿರಲಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಕ್ಯಾಮೋ ಎಡಿಷನ್ ವಿಶೇಷವಾಗಿ ಅಡ್ವೆಂಚರ್ ವೈಶಿಷ್ಟ್ಯತೆಗಳನ್ನು ಹೊಂದಿರಲಿದ್ದು, ಆಯಿವ್ ಗ್ರೀನ್ ಬಣ್ಣದ ಆಯ್ಕೆಯು ಸಾಕಷ್ಟು ಆಕರ್ಷಕವಾಗಿ ಕಾರಣುತ್ತದೆ. ಜೊತೆಗೆ ಕ್ಯಾಮೋ ಬ್ಯಾಡ್ಜಿಂಗ್, ಗ್ಲಾಸಿ ಬ್ಲ್ಯಾಕ್ ಹೊಂದಿರುವ ಫ್ರಂಟ್ ಹೆಡ್‌ಲೈಟ್ಸ್, ಟ್ರೈ-ಆರೋ' ಕ್ಯಾಮೊ ಗ್ರಾಫಿಕ್ಸ್ ಸೌಲಭ್ಯಗಳನ್ನು ಹೊಂದಿಲಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಇದರ ಜೊತೆಗೆ ಆಸಕ್ತ ಗ್ರಾಹಕರಿಗಾಗಿ ಆಕ್ಸೆಸರಿಸ್ ಪ್ಯಾಕೇಜ್ ಹೊಸ ಕ್ಯಾಮೋ ಎಡಿಷನ್‌ನಲ್ಲಿ ಜೋಡಿಸಲಿದ್ದು, ಹೊಸ ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ರೂ. 20 ಸಾವಿರದಿಂದ ರೂ. 30 ಸಾವಿರದಷ್ಟು ದುಬಾರಿಯಾಗಲಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಪಂಚ್ ಮೈಕ್ರೊ ಎಸ್‌ಯುವಿ ಕಾರು ಮಾದರಿಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ನಂತರ ಟಾಟಾ ನಿರ್ಮಾಣದ ಎರಡನೇ ಅತಿ ಹೆಚ್ಚು ಬೇಡಿಕೆಯ ಕಾರು ಮಾದರಿಯಾಗಿ ಹೊರಹೊಮ್ಮುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಕಳೆದ ವರ್ಷ ಅಕ್ಟೋಬರ್ ಕೊನೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದ ಪಂಚ್ ಕಾರು ಮಾದರಿಯು ಇದುವರೆಗೆ 1.60 ಲಕ್ಷಕ್ಕೂ ಹೆಚ್ಚು ಗ್ರಾಹಕರಿಂದ ಬುಕ್ಕಿಂಗ್‌ ಪಡೆದುಕೊಂಡಿದ್ದು, ಇದುವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಪಂಚ್ ಕಾರು ಮಾದರಿಯು ವಿಶೇಷ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಬಿಡುಗಡೆಯಾದ ಕೇವಲ ಹನ್ನೊಂದು ತಿಂಗಳ ಅವಧಿಯಲ್ಲಿ ಹಲವಾರು ದಾಖಲೆಗಳಲ್ಲಿ ಕಾರಣವಾಗಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಪಂಚ್ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಉತ್ತಮ ಪಾಲು ದಾಖಲಿಸುತ್ತಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತಹತ್ವದ ಬದಲಾವಣೆಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಹೊಸ ಪಂಚ್ ಕಾರು ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಎರಡು ವಿಶೇಷ ಆವೃತ್ತಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಸ್ಟ್ಯಾಂಡರ್ಡ್ ಮತ್ತು ಕಾಜಿರಂಗ ಎಡಿಷನ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.93 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.49 ಲಕ್ಷ ಬೆಲೆ ಹೊಂದಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಪಂಚ್ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಯಾಗಿ ಪ್ಯೂರ್ ವೆರಿಯೆಂಟ್ ಮಾರಾಟಗೊಳ್ಳುತ್ತಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ಬೆಸ್ ವೆರಿಯೆಂಟ್‌ನಲ್ಲೂ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ. 1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಕ್ಯಾಮೋ ಎಡಿಷನ್‌ನೊಂದಿಗೆ ಮಿಂಚಲಿದೆ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಪ್ರತಿ ಮಾದರಿಯಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ ಹೊಂದಿದೆ.

Article Published On: Thursday, September 22, 2022, 13:49 [IST]
English summary
Tata punch new camo edition teased details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+