ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್(Tata Motors) ಕಂಪನಿಯು ಹೊಸ ವರ್ಷದಲ್ಲಿ ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಳ ಮಾಡಿರುವುದಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಜನವರಿ 1ರಿಂದಲೇ ಹೊಸ ದರ ಅನ್ವಯಿಸುವಂತೆ ಬೆಲೆ ಏರಿಕೆ ಮಾಡಿರುವುದಾಗಿ ಘೋಷಣೆ ಮಾಡಿದೆ. ಆದರೆ ಬೆಲೆ ಹೆಚ್ಚಳದೊಂದಿಗೆ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆಯಲ್ಲಿ ತುಸು ಇಳಿಕೆ ಕೂಡಾ ಮಾಡಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಕೂಡಾ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸುವುದರ ಜೊತೆಗೆ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಹೊಸ ದರಪಟ್ಟಿಯಲ್ಲಿ ಆಲ್‌ಟ್ರೊಜ್ ಕಾರಿನ ಡೀಸೆಲ್ ಮತ್ತು ಸಾಮಾನ್ಯ ಪೆಟ್ರೋಲ್ ಮಾದರಿಯ ರೂ.2 ಸಾವಿರದಿಂದ ರೂ. 20 ಸಾವಿರ ತನಕ ಬೆಲೆ ಹೆಚ್ಚಳ ಪಡೆದುಕೊಂಡರೆ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆಯಲ್ಲಿ ರೂ. 8 ಸಾವಿರ ತನಕ ಇಳಿಕೆ ಮಾಡಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಕೂಡಾ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.0.50 ರಿಂದ ಶೇ. 0.90 ರಷ್ಟು ಹೆಚ್ಚಳ ಮಾಡಲಾಗಿದ್ದು, ಬೆಲೆ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಫೀಚರ್ಸ್‌ಗಳನ್ನು ಸಹ ನೀಡಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಕಾರು ಮಾದರಿಯ ಮೂಲಕ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಆಲ್‌ಟ್ರೊಜ್ ಮಾದರಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯನ್ನು ಸಹ ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದಿರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ತಿಂಗಳಿಗೆ ಒಂದು ಬಾರಿಗೆ ವೆರಿಯೆಂಟ್‌ಗಳ ಉನ್ನತೀಕರಣ ಮತ್ತು ಹೊಸ ವೆರಿಯೆಂಟ್ ಅಭಿವೃದ್ದಿಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದು, ಇದೀಗ ಆಲ್‌ಟ್ರೊಜ್ ಮಾದರಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಮಾರಾಟಕ್ಕೆ ಸಿದ್ದವಾಗಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಆಲ್‌ಟ್ರೊಜ್ ಕಾರು ಮಾದರಿಯು ಹೊಸದಾಗಿ ಸದ್ಯ ಬಿಡುಗಡೆ ಮಾಡಲಾದ ಎಕ್ಸ್‌ಇ ಪ್ಲಸ್ ಜೊತೆಗೆ ಎಕ್ಸ್‌ಇ, ಎಕ್ಸ್ಎಂ ಪ್ಲಸ್, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಮತ್ತು ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್‌‌ಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಎಲ್ಲಾ ರೂಪಾಂತರಗಳು 1.2 ಲೀಟರ್ ರೆವೊಟ್ರಾನ್ ಪೆಟ್ರೋಲ್ ಮತ್ತು 1.5 ಲೀಟರ್ ಟರ್ಬೊ ಚಾರ್ಜ್ಡ್ ರೆವೊಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದ್ದು, ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗುತ್ತಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಬಿಡುಗಡೆಯಾಗಲಿರುವ 5-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಯನ್ನು ಪಂಚ್ ಮಾದರಿಯೊಂದಿಗೆ ಹಂಚಿಕೊಳ್ಳಲಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಆಲ್‌ಟ್ರೊಜ್ ಮಾದರಿಯಲ್ಲಿ ಟಾಟಾ ಕಂಪನಿಯು ಕಳೆದ ಒಂದು ವರ್ಷದಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸದ್ಯ ಆರಂಭಿಕವಾಗಿ ರೂ. 5.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.69 ಲಕ್ಷ ಬೆಲೆ ಹೊಂದಿದೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಐ-ಟರ್ಬೊ ಮಾದರಿಯು ಸಿಟಿ ಮತ್ತು ಸ್ಟೋರ್ಟ್ ಡ್ರೈವಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಸದ್ಯಕ್ಕೆ ಹೊಸ ಮಾದರಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವ ಕಂಪನಿಯು ಶೀಘ್ರದಲ್ಲೇ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸಹ ನೀಡಲಿದೆಯೆಂತೆ.

ಆಲ್‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಕಾರಿನ ಟರ್ಬೊ ಮಾದರಿಗಳಲ್ಲಿ ಮತ್ತು ಸಾಮಾನ್ಯ ಪೆಟ್ರೋಲ್ ಮಾದರಿಯ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ಕನೆಕ್ಟೆಡ್ ಟೆಕ್ನಾಲಜಿ ಬಳಕೆ ಮಾಡಿದ್ದು, ಹೊಸ ತಂತ್ರಜ್ಞಾನವು ಕಾರಿಗೆ ಗರಿಷ್ಠ ಭದ್ರತೆ ನೀಡುತ್ತದೆ.

Most Read Articles

Kannada
English summary
Tata reduced the prices of altroz turbo petrol variants up to rs 8000
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X