Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅತ್ಯಧಿಕ ಮೈಲೇಜ್ ಪ್ರೇರಿತ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಟಿವಿಸಿ ಬಿಡುಗಡೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ವಿಸ್ತರಿತ ಬ್ಯಾಟರಿ ಸೌಲಭ್ಯದ ನೆಕ್ಸಾನ್ ಇವಿ ಮ್ಯಾಕ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರಿನ ತಾಂತ್ರಿಕ ಸೌಲಭ್ಯಗಳ ಕುರಿತಾಗಿ ಕಂಪನಿಯು ಟಿವಿ ಜಾಹೀರಾತು ಪ್ರಕಟಿಸಿದೆ.

ಹೊಸ ನೆಕ್ಸಾನ್ ಇವಿ ಮಾಕ್ಸ್ ಕಾರು ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಮತ್ತು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಫೀಚರ್ಸ್ ಕುರಿತಾಗಿ ಕಂಪನಿಯು ಹೊಸ ಜಾಹೀರಾತು ಪ್ರಕಟಿಸಿದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 17.74 ಲಕ್ಷ ಬೆಲೆ ಹೊಂದಿದೆ.

ಸ್ಟ್ಯಾಂಡರ್ಡ್ ನೆಕ್ಸಾನ್ ಇವಿ ಮಾದರಿಗಿಂತಲೂ ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದ್ದು, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಲಾಗಿದೆ.

ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಲಾಗಿದ್ದು, ಆರಂಭಿಕ ಮಾದರಿಯು ರೂ. 17.74 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 19.24 ಲಕ್ಷ ಬೆಲೆ ಹೊಂದಿದೆ.

ಇದರಲ್ಲಿ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಒಂದೇ ವೇಳೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯನ್ನು ಟಾಟಾ ಪವರ್ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡುವುದಾದರೆ ಸೊನ್ನೆಯಿಂದ ಶೇ.80 ಚಾರ್ಜ್ ಮಾಡಲು ಕೇವಲ 50 ನಿಮಿಷ ತೆಗೆದುಕೊಳ್ಳಲಿದ್ದು, ಹೋಂ ಚಾರ್ಜರ್ ಸೌಲಭ್ಯವು ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದು ಎನ್ನಲಾಗಿದೆ.

ಹೊಸ ನೆಕ್ಸಾನ್ ಇವಿ ಮಾಕ್ಸ್ ಮಾದರಿಯಲ್ಲಿ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವ ಮಾದರಿಗಾಗಿ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಅಭಿವೃದ್ದಿಗೊಳಿಸಿದೆ.

ಇದರೊಂದಿಗೆ ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಮಾಕ್ಸ್ ಮಾದರಿಯು 95kW ಎಲೆಕ್ಟ್ರಿಕ್ ಮೋಟಾರ್ ಮೂಲಕವೇ ಇದೀಗ 143 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಇದು ಹಳೆಯ ಮಾದರಿಗಿಂತಲೂ 14 ಬಿಎಚ್‌ಪಿ ಮತ್ತು 5 ಎನ್ಎಂ ಟಾರ್ಕ್ ಹೆಚ್ಚಳವಾಗಿದೆ.

ಹೊಸ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಜೊತೆಗೆ ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಸಹ ಉನ್ನತೀಕರಿಸಿದ್ದು, ಹೊಸ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಆಗಿ ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಏರ್ ಪ್ಯೂರಿಫೈರ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ವೆರ್‌ಲೆಸ್ ಚಾರ್ಜರ್, ವೆಂಟಿಲೆಟೆಡ್ ಸೀಟುಗಳು ಸೇರಿದಂತೆ ಕೆಲವು ಹೊಸ ತಾಂತ್ರಿಕ ಅಂಶಗಳನ್ನು ಸೇರ್ಪಡೆಗೊಳಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮಾದರಿಯ ಬಿಡುಗಡೆಯೊಂದಿಗೆ ಸ್ಟ್ಯಾಂಡರ್ಡ್ ನೆಕ್ಸಾನ್ ಇವಿ ಮಾದರಿಯನ್ನು 30kWh ಬ್ಯಾಟರಿ ಪ್ಯಾಕ್‌ನೊಂದಿಗೆ ಮಾರಾಟ ಮುಂದುವರಿಸಲಿದ್ದು, ನೆಕ್ಸಾನ್ ಇವಿ ಮಾದರಿಯನ್ನು ಇದೀಗ ಗ್ರಾಹಕರು ತಮ್ಮ ಬಜೆಟ್‌ಗೆ ಅನುಗುಣವಾಗಿ ನೆಕ್ಸಾನ್ ಇವಿ ಅಥವಾ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳನ್ನು ಖರೀದಿಸಬಹುದಾಗಿದೆ.

ನೆಕ್ಸಾನ್ ಇವಿ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ಜಿಪ್‌ಟ್ರಾನ್ ತಂತ್ರಜ್ಞಾನವು ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನಿರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿ ಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದೆ.