ಐಷಾರಾಮಿ ಲುಕ್ ಹೊಂದಿರುವ ಟಾಟಾ ಸಫಾರಿ ಡಾರ್ಕ್ ಎಡಿಷನ್ ಬಿಡುಗಡೆ
ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಹೊಸ ಕಾರು ಮಾದರಿಗಳಲ್ಲಿ ನಿರಂತರವಾಗಿ ಬದಲಾವಣೆ ತರುತ್ತಿದ್ದು, ಕಂಪನಿಯು ತನ್ನ ಫ್ಲ್ಯಾಗ್‌ಶಿಫ್ ಎಸ್‌ಯುವಿ ಮಾದರಿಯಾದ ಸಫಾರಿ ಮಾದರಿಯಲ್ಲಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿದೆ.

ಡಾರ್ಕ್ ಎಡಿಷನ್‌ಗಳನ್ನು ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ನೆಕ್ಸಾನ್, ಆಲ್‌ಟ್ರೊಜ್ ಮತ್ತು ಹ್ಯಾರಿಯರ್ ಮಾದರಿಗಳಲ್ಲಿ ಮಾರಾಟಗೊಳಿಸುತ್ತಿದ್ದು, ಕಂಪನಿಯು ಇದೀಗ ಸಫಾರಿ ಎಸ್‌ಯುವಿ ಮಾದರಿಯಲ್ಲೂ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಡಾರ್ಕ್ ಎಡಿಷನ್ ಮಾದರಿಯು ಸಫಾರಿ ಎಸ್‌ಯುವಿಯ ಎಕ್ಸ್‌ಟಿ ಪ್ಲಸ್, ಎಕ್ಸ್‌ಟಿಎ ಪ್ಲಸ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್‌ಎ ಪ್ಲಸ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಸಂಪೂರ್ಣ ಕಪ್ಪು ಬಣ್ಣದೊಂದಿಗೆ ಐಷಾರಾಮಿ ಲುಕ್ ಹೊಂದಿರುವ ಸಫಾರಿ ಡಾರ್ಕ್ ಎಡಿಷನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19.05 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22.51 ಲಕ್ಷ ಬೆಲೆ ಹೊಂದಿದೆ.

ಸಫಾರಿ ಎಸ್‌ಯುವಿ ಮಾದರಿಯು ಇದೀಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸ್ಟ್ಯಾಂಡರ್ಡ್, ಡಾರ್ಕ್ ಮತ್ತು ಅಡ್ವೆಂಚರ್ ಪೆರಸೊನಾ ಆವೃತ್ತಿಗಳನ್ನು ಹೊಂದಿದ್ದು, ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.19 ಲಕ್ಷ ಬೆಲೆ ಹೊಂದಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಸಂಪೂರ್ಣವಾಗಿ ಕಪ್ಪು ಬಣ್ಣ ಆಯ್ಕೆಗಳನ್ನೇ ನೀಡಿದ್ದು, ಹೊಸ ಕಾರಿನ 18-ಇಂಚಿನ ಬ್ಲ್ಯಾಕ್ ಸ್ಟೋನ್ ಅಲಾಯ್ ವ್ಹೀಲ್‌ನೊಂದಿಗೆ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆಯೇ ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಹೊಸ ಕಾರಿನ ಇಂಟಿರಿಯರ್ ಕೂಡಾ ಸಂಪೂರ್ಣವಾಗಿ ಕಪ್ಪು ಬಣ್ಣವನ್ನು ಪಡೆದುಕೊಂಡಿದ್ದು, ನಪ್ಪಾ ಗ್ರಾನೈಟ್ ಬ್ಲ್ಯಾಕ್ ಹೊಂದಿರುವ ಪ್ರೀಮಿಯಂ ಲೆದರ್ ಆಸನಗಳು, ಬ್ಲ್ಯಾಕ್ ಸ್ಟೋನ್ ಮ್ಯಾಟ್ರಿಕ್ಸ್ ಡ್ಯಾಶ್‌ಬೋರ್ಡ್ ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಿವೆ.

ಇನ್ನುಳಿದಂತೆ ಎಲ್ಲಾ ತಾಂತ್ರಿಕ ಅಂಶಗಳು ವೆರಿಯೆಂಟ್‌ಗೆ ಅನುಗುಣವಾಗಿ ಡಾರ್ಕ್ ಎಡಿಷನ್‌ಗಳನ್ನು ನೀಡಲಾಗಿದ್ದು, ಸಫಾರಿ ಡಾರ್ಕ್ ಎಡಿಷನ್‌ಗಳು ಸ್ಟ್ಯಾಂಡರ್ಡ್ ಸಫಾರಿಗಿಂತಲೂ ರೂ.15 ಸಾವಿರದಿಂದ ರೂ. 57 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿವೆ.

ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗರಿಷ್ಠ ಸುರಕ್ಷತೆಗೆ ಒತ್ತು ನೀಡಿದ್ದು, ಸ್ಟ್ಯಾಂಡರ್ಡ್, ಅಡ್ವೆಂಚರ್, ಡಾರ್ಕ್ ಮೂರು ಮಾದರಿಗಳಲ್ಲೂ ಒಂದೇ ಮಾದರಿಯ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಸಫಾರಿ ಕಾರು ಮಾದರಿಯು ಪ್ರಮುಖ ಮಾದರಿಗಳೊಂದಿಗೆ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.

ಹೊಸ ಕಾರಿನ ಬೆಸ್ ಮಾದರಿಗಳಲ್ಲೂ ಟಾಟಾ ಕಂಪನಿಯು ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೌಲಭ್ಯಗಳನ್ನು ನೀಡಿದ್ದು, ಮಧ್ಯಮ ಆವೃತ್ತಿಗಳಲ್ಲಿ ಆರಂಭಿಕ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳೊಂದಿಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

ಟಾಪ್ ಎಂಡ್‌ನಲ್ಲಿರುವ ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್‌ರೂಫ್ ಸೌಲಭ್ಯ ನೀಡಲಾಗಿದ್ದು, ಅಡ್ವೆಂಚರ್ ಆವೃತ್ತಿಯಲ್ಲಿ ಗ್ರಾಹಕರ ಬೇಡಿಕೆಯ ಅನುಸಾರವಾಗಿ ಕಂಪನಿಯು ಆಫ್ ರೋಡ್ ಪರ್ಫಾಮೆನ್ಸ್‌ಗಾಗಿ 4x4 ಡ್ರೈವ್ ಸಿಸ್ಟಂ ಮಾದರಿಯನ್ನು ಸಹ ಪರಿಚಯಿಸುವ ಯೋಜನೆಯಲ್ಲಿದೆ.


Click it and Unblock the Notifications








