ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ತಲೆಮಾರಿನ ಸಫಾರಿ ಮಾದರಿಯೊಂದಿಗೆ ಎಸ್‌ಯುವಿ ವಿಭಾಗದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲಿ ಸಫಾರಿ ಕಾರು ಮಾದರಿಯ ಫೇಸ್‌ಲಿಫ್ಟ್ ಆವೃತ್ತಿಯ ಬಿಡುಗಡೆಗೆ ಸಿದ್ದವಾಗುತ್ತಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಸಫಾರಿ ಹೊಸ ತಲೆಮಾರಿನ ಆವೃತ್ತಿಯನ್ನು ಕಳೆದ ವರ್ಷ ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಫೇಸ್‌ಲಿಫ್ಟ್ ಆವೃತ್ತಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಸಹ ಕೈಗೊಳ್ಳುತ್ತಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟವು ಸಾಕಷ್ಟು ಏರಿಕೆ ಕಾಣುತ್ತಿದ್ದು, ಮಧ್ಯಮ ಗಾತ್ರದ ಎಸ್‌ಯುವಿಯಲ್ಲಿ ಎಕ್ಸ್‌ಯುವಿ700 ಸದ್ಯ ಮುಂಚೂಣಿಯಲ್ಲಿದ್ದರೆ ಪ್ರತಿಸ್ಪರ್ಧಿಯಾದ ಸಫಾರಿ ಕೂಡಾ ಉತ್ತಮ ಬೇಡಿಕೆ ಹೊಂದಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಎಕ್ಸ್‌ಯುವಿ700 ಮಾದರಿಗೆ ಹೆಚ್ಚಿನ ಬೇಡಿಕೆಯಿದ್ದರೂ ಪ್ರತಿಸ್ಪರ್ಧಿ ಮಾದರಿಯಾಗಿರುವ ಸಫಾರಿ ಎಸ್‌ಯುವಿಯ ಬೇಡಿಕೆ ಅನುಪಾತ ಸಾಕಷ್ಟು ಕಡಿಮೆಯಿದ್ದು, ಎಕ್ಸ್‌ಯುವಿ700 ಮಾದರಿಯಲ್ಲಿ ಫೀಚರ್ಸ್‌ಗಳನ್ನು ಸಫಾರಿಯಲ್ಲಿ ಬಯಸುವ ಗ್ರಾಹಕರು ಸಂಖ್ಯೆ ಕೂಡಾ ಹೆಚ್ಚಳವಾಗುತ್ತಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಹೀಗಾಗಿ ಎಕ್ಸ್‌ಯುವಿ700 ಮಾದರಿಗೆ ಪೈಪೋಟಿಯಾಗಿ ಕಂಪನಿಯು ಸಫಾರಿ ಫೇಸ್‌ಲಿಫ್ಟ್ ಮಾದರಿಯನ್ನು ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡುತ್ತಿದ್ದು, ಹೊಸ ಫೇಸ್‌ಲಿಫ್ಟ್ ಆವೃತ್ತಿಯು ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯದೊಂದಿಗೆ 4x4 ಡ್ರೈವ್ ಸಿಸ್ಟಂ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಜೊತೆಗೆ ಹೊಸ ಕಾರಿನಲ್ಲಿ ಕಂಪನಿಯು ಮರುವಿನ್ಯಾಸಗೊಳಿಸಲಾದ ಫ್ರಂಟ್ ಎಲ್ಇಡಿ ಹೆಡ್‌ಲ್ಯಾಂಡ್ ಡಿಸೈನ್, ಫ್ರಂಟ್ ಗ್ರಿಲ್ ಮತ್ತು ಟೈಲ್ ಲ್ಯಾಂಪ್ ಸೌಲಭ್ಯಗಳನ್ನು ನೀಡಲಿದ್ದು, ಒಳಭಾಗದಲ್ಲಿ 360 ಡಿಗ್ರಿ ಕ್ಯಾಮೆರಾ ಸೌಲಭ್ಯಕ್ಕಾಗಿ ದೊಡ್ಡದಾದ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಬಹುದಾಗಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಹೊಸದಾಗಿ ನೀಡಲಾಗುತ್ತಿರುವ ಎಡಿಎಎಸ್ ಸೌಲಭ್ಯವು ಕಾರಿನ ಮತ್ತಷ್ಟು ಸುರಕ್ಷತೆ ನೀಡುವುದರ ಜೊತೆಗೆ ಪ್ರೀಮಿಯಂ ಅನುಭವ ನೀಡಲು ಸಹಕಾರಿಯಾಗಿದ್ದು, ಎಡಿಎಎಸ್‌ನಲ್ಲಿ ಹ್ಯಾಂಡ್ ಫ್ರೀ ಪಾರ್ಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಎಮರ್ಜೆನ್ಸಿ ಬ್ರೇಕಿಂಗ್, ಟ್ರಾಫಿಕ್ ಸೈನ್ ರೆಕಾಗ್ನಿಶನ್, ಬೈಂಡ್ ಸ್ಪಾಟ್ ಮಾನಿಟರಿಂಗ್, ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್ ಸೌಲಭ್ಯಗಳಿವೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಇದಲ್ಲದೆ ಟಾಟಾ ಮೋಟಾರ್ಸ್ ಕಂಪನಿಯು ಸಫಾರಿ ಫೇಸ್‌ಲಿಫ್ಟ್ ಮಾದರಿಯಲ್ಲಿ ಹೊಸದಾಗಿ ಪೆಟ್ರೋಲ್ ಆವೃತ್ತಿಯನ್ನು ಸಹ ಪರಿಚಯಿಸುವ ಯೋಜನೆಯಲ್ಲಿದ್ದು, ಪೆಟ್ರೋಲ್ ಮಾದರಿಗಾಗಿ ಕಂಪನಿಯು ಕಳೆದ ವರ್ಷದಿಂದಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

2021ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಸಫಾರಿ ಮಾದರಿಯು ಕಳೆದ ಒಂದೂವರೆ ವರ್ಷದಲ್ಲಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹ್ಯಾರಿಯರ್ ಮಾದರಿಯನ್ನು ಆಧರಿಸಿರುವ ಹೊಸ ಸಫಾರಿಯು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಅತ್ಯುತ್ತಮ ಬೆಲೆ ಪಡೆದುಕೊಂಡಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಸಫಾರಿ ಎಸ್‌ಯುವಿ ಸದ್ಯ ಸ್ಟ್ಯಾಂಡರ್ಡ್, ಡಾರ್ಕ್ ಮತ್ತು ಅಡ್ವೆಂಚರ್ ಪೆರಸೊನಾ ಆವೃತ್ತಿಗಳನ್ನು ಹೊಂದಿದ್ದು, ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 15.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.56 ಲಕ್ಷ ಬೆಲೆ ಹೊಂದಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಮೂರು ಮಾದರಿಗಳಲ್ಲೂ ಒಂದೇ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಎಡಿಎಎಸ್ ಸೇರಿದಂತೆ ಹಲವು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಸಫಾರಿ ಫೇಸ್‌ಲಿಫ್ಟ್

ಅಡ್ವೆಂಚರ್ ಆವೃತ್ತಿಯಲ್ಲಿ ಗ್ರಾಹಕರ ಬೇಡಿಕೆಗೆ ಅನುಸಾರವಾಗಿ ಕಂಪನಿಯು ಆಫ್ ರೋಡ್ ಪರ್ಫಾಮೆನ್ಸ್‌ಗಾಗಿ 4x4 ಡ್ರೈವ್ ಸಿಸ್ಟಂ ಮಾದರಿಯನ್ನು ಸಹ ಪರಿಚಯಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಕಾರು ಮಾದರಿಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ನಿರಂತರವಾಗಿ ಬದಲಾವಣೆ ತರುತ್ತಿದೆ.

Article Published On: Thursday, August 11, 2022, 11:12 [IST]
English summary
Tata safari facelift spotted testing again details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+