ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಹೊಸ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್‌(Tata Motors) ಕಂಪನಿಯು ನ್ಯೂ ಜನರೇಷನ್ ಸಫಾರಿ(Safari) ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದು, ಸಫಾರಿ ಮಾದರಿಯ ಹೊಸ ತಲೆಮಾರಿನ ಮಾದರಿಯನ್ನು ಮಾರಾಟ ಆರಂಭಿಸಿ ಯಶಸ್ವಿ ಒಂದು ವರ್ಷ ಪೂರೈಸಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

2021ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಸಫಾರಿ ಮಾದರಿಯು ಕಳೆದ ಒಂದು ವರ್ಷದಲ್ಲಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಹ್ಯಾರಿಯರ್ ಮಾದರಿಯನ್ನು ಆಧರಿಸಿರುವ ಹೊಸ ಸಫಾರಿ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಅತ್ಯುತ್ತಮ ಬೆಲೆ ಪಡೆದುಕೊಂಡಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಸಫಾರಿ ಎಸ್‌ಯುವಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸ್ಟ್ಯಾಂಡರ್ಡ್, ಡಾರ್ಕ್ ಮತ್ತು ಅಡ್ವೆಂಚರ್ ಪೆರಸೊನಾ ಆವೃತ್ತಿಗಳನ್ನು ಹೊಂದಿದ್ದು, ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.29 ಲಕ್ಷ ಬೆಲೆ ಹೊಂದಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಮೂರು ಮಾದರಿಗಳಲ್ಲೂ ಒಂದೇ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಹೊಸ ಕಾರಿನ ಬೆಸ್ ಮಾದರಿಗಳಲ್ಲೂ ಟಾಟಾ ಕಂಪನಿಯು ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೌಲಭ್ಯಗಳನ್ನು ನೀಡಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಮಧ್ಯಮ ಆವೃತ್ತಿಗಳಲ್ಲಿ ಆರಂಭಿಕ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳೊಂದಿಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಟಾಪ್ ಎಂಡ್‌ನಲ್ಲಿರುವ ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್‌ರೂಫ್ ಸೌಲಭ್ಯ ನೀಡಲಾಗಿದ್ದು, ಅಡ್ವೆಂಚರ್ ಆವೃತ್ತಿಯಲ್ಲಿ ಗ್ರಾಹಕರ ಬೇಡಿಕೆಯ ಅನುಸಾರವಾಗಿ ಕಂಪನಿಯು ಆಫ್ ರೋಡ್ ಪರ್ಫಾಮೆನ್ಸ್‌ಗಾಗಿ 4x4 ಡ್ರೈವ್ ಸಿಸ್ಟಂ ಮಾದರಿಯನ್ನು ಸಹ ಪರಿಚಯಿಸುವ ಯೋಜನೆಯಲ್ಲಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಹೊಸ ಕಾರಿನ ಪ್ರತಿ ಮಾದರಿಯಲ್ಲೂ ಸದ್ಯಕ್ಕೆ 2 ವೀಲ್ಹ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಮಾದರಿಯು ಇನ್ನು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಕಾರು ಮಾದರಿಗಳಲ್ಲಿ ನಿರಂತರವಾಗಿ ಬದಲಾವಣೆ ತರುತ್ತಿದ್ದು, ಕಂಪನಿಯು ತನ್ನ ಫ್ಲ್ಯಾಗ್‌ಶಿಫ್ ಎಸ್‌ಯುವಿ ಮಾದರಿಯಾದ ಸಫಾರಿ ಮಾದರಿಯಲ್ಲಿ ಇತ್ತೀಚೆಗೆ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿತ್ತು.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಡಾರ್ಕ್ ಎಡಿಷನ್‌ಗಳನ್ನು ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ನೆಕ್ಸಾನ್, ಆಲ್‌ಟ್ರೊಜ್ ಮತ್ತು ಹ್ಯಾರಿಯರ್ ಮಾದರಿಗಳಲ್ಲಿ ಮಾರಾಟಗೊಳಿಸುತ್ತಿದ್ದು, ಕಂಪನಿಯು ಇದೀಗ ಸಫಾರಿ ಎಸ್‌ಯುವಿ ಮಾದರಿಯಲ್ಲೂ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಡಾರ್ಕ್ ಎಡಿಷನ್ ಮಾದರಿಯು ಸಫಾರಿ ಎಸ್‌ಯುವಿಯ ಎಕ್ಸ್‌ಟಿ ಪ್ಲಸ್, ಎಕ್ಸ್‌ಟಿಎ ಪ್ಲಸ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್‌ಎ ಪ್ಲಸ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ನ್ಯೂ ಜನರೇಷನ್ ಟಾಟಾ ಸಫಾರಿ

ಸಂಪೂರ್ಣ ಕಪ್ಪು ಬಣ್ಣದೊಂದಿಗೆ ಐಷಾರಾಮಿ ಲುಕ್ ಹೊಂದಿರುವ ಸಫಾರಿ ಡಾರ್ಕ್ ಎಡಿಷನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19.05 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22.51 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನಲ್ಲಿ ಸಂಪೂರ್ಣವಾಗಿ ಕಪ್ಪು ಬಣ್ಣ ಆಯ್ಕೆಗಳನ್ನೇ ನೀಡಿದ್ದು, ಹೊಸ ಕಾರಿನ 18-ಇಂಚಿನ ಬ್ಲ್ಯಾಕ್ ಸ್ಟೋನ್ ಅಲಾಯ್ ವ್ಹೀಲ್‌ನೊಂದಿಗೆ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆಯೇ ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

Article Published On: Tuesday, February 22, 2022, 20:09 [IST]
English summary
Tata safari suv completes 1 year in indian market details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+