Just In
- 3 hrs ago
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬಹುದು!
- 4 hrs ago
ಹೋಂಡಾ ಆಕ್ಟೀವಾ 6Gಗೆ ಸೆಡ್ಡು ಹೊಡೆಯಲು ಮಾರುಕಟ್ಟೆಗಿಳಿದ ಹೀರೋ Xoom... ಏನಿದರ ವಿಶೇಷತೆ!
- 6 hrs ago
ಜನಪ್ರಿಯ ನಟನ ಮನೆಗೆ ಕಥೆ ಹೇಳಲು ಹೋಗಿ ಆತನ ದುಬಾರಿ ಕಾರ್ ಓಡಿಸಿಬಂದ ನಿರ್ದೇಶಕ...
- 6 hrs ago
ಭಾರತದಲ್ಲಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಯಾವಾಗ? ಅತಿ ಹೆಚ್ಚು ರೇಂಜ್ ಕೊಡಲಿದೆಯಂತೆ..!
Don't Miss!
- Sports
U-19 ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ದಾದಾ ಮೆಚ್ಚುಗೆ
- Movies
ಮೈಕಲ್ ಜಾಕ್ಸನ್ ಬಯೋಪಿಕ್ಗೆ ಶೀಘ್ರದಲ್ಲೇ ಮುಹೂರ್ತ: 'ಮೈಕೆಲ್' ಆಗಿ ನಟಿಸೋದು ಯಾರು ಗೊತ್ತಾ?
- News
ಬಿಜೆಪಿಯವರು ನಮ್ಮ ಬಳಿ ಸಿಡಿ ಇದೆ ಎಂದು ಹೇಳಿ, ಬಟ್ಟೆ ಹಾವು ತೋರಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ
- Lifestyle
ಆರೋಗ್ಯವಾಗಿರಬೇಕೆ? ಹಾಗಾದರೆ ನೀವು 3 ವಿಷಯಗಳಲ್ಲಿ ನಂಬಿಕೆ ಇಡಲೇಬೇಕು
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಎರಡು ಬ್ಯಾಟರಿ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ ಟಾಟಾ ಟಿಯಾಗೋ ಎಲೆಕ್ಟ್ರಿಕ್
ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಟಿಯಾಗೋ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಇವಿ ಕಾರು ಮಾದರಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ನೆಕ್ಸಾನ್ ಇವಿ, ನೆಕ್ಸಾನ್ ಮ್ಯಾಕ್ಸ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್ಸ್-ಟಿ ಇವಿ ಕಾರುಗಳ ಮೂಲಕ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಟಿಯಾಗೋ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎರಡು ಮಾದರಿಯ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಿದೆ.

ಟಿಯಾಗೋ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಇ, ಎಕ್ಸ್‌ಟಿ, ಎಕ್ಸ್‌ಜೆಡ್ ಪ್ಲಸ್, ಎಕ್ಸ್‌ಜೆಡ್ ಪ್ಲಸ್ ಟೆಕ್ ಲಕ್ಸ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಬ್ಯಾಟರಿ ಆಯ್ಕೆಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.79 ಲಕ್ಷ ಬೆಲೆ ಹೊಂದಿದೆ.

ಹೊಸ ಟಿಯಾಗೋ ಇವಿ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 19.2 kWh ಮತ್ತು 24 kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡಿದ್ದು, ಇದರಲ್ಲಿ 19.2 kWh ಬ್ಯಾಟರಿ ಪ್ಯಾಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದ್ದರೆ 24 kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.79 ಲಕ್ಷ ಬೆಲೆ ಹೊಂದಿದೆ.

ಬ್ಯಾಟರಿ ಮತ್ತು ಮೈಲೇಜ್
ಟಾಟಾ ಮೋಟಾರ್ಸ್ ಕಂಪನಿಯು ಆರಂಭಿಕ ಮಾದರಿಯಲ್ಲಿ 19.2 kWh ಲೀಥಿಯಂ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 250 ಕಿ.ಮೀ ಮೈಲೇಜ್ ನೀಡಲಿದ್ದರೆ ಹೈ ಎಂಡ್ ಮಾದರಿಗಳಲ್ಲಿರುವ 24 kWh ಲೀಥಿಯಂ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಗಳು ಪ್ರತಿ ಚಾರ್ಜ್‌ಗೆ 315 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಎಲೆಕ್ಟ್ರಿಕ್ ಮೋಟಾರ್ ಮತ್ತು ಪರ್ಫಾಮೆನ್ಸ್
ಟಿಯಾಗೋ ಇವಿ ಕಾರಿನಲ್ಲಿರುವ ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವನ್ನು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳೊಂದಿಗೆ ಕಾರಿನ ಗುಣಮಟ್ಟ ಹೆಚ್ಚಿಸುತ್ತದೆ.

ಜಿಪ್‌ಟ್ರಾನ್ ತಂತ್ರಜ್ಞಾನದ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಜಾಗತಿಕ ಮಟ್ಟದಲ್ಲಿ ಗಮನಸೆಳೆಯುತ್ತಿದ್ದು, ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೊಳಿಸುವಲ್ಲಿ ಯಶಸ್ವಿಯಾಗುತ್ತಿದೆ.

ಜೊತೆಗೆ ಜಿಪ್‌ಟ್ರಾನ್ ತಂತ್ರಜ್ಞಾನದಲ್ಲಿ ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಬ್ಯಾಟರಿಯ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದ್ದು, ಹೊಸ ಕಾರಿನಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಕಂಪನಿಯು ಸಿಟಿ ಮತ್ತು ಸ್ಪೋರ್ಟ್ ಡ್ರೈವ್ ಮೋಡ್ ನೀಡಲಾಗಿದೆ.

ಹೊಸ ಕಾರಿನಲ್ಲಿರುವ ಬ್ಯಾಟರಿ ಮತ್ತು ಎಲೆಕ್ಟ್ರಿಕ್ ಮೋಟಾರ್ IP67 ಮಾನದಂಡಗಳನ್ನು ಪೂರೈಸಿದ್ದು, ಇವು ಧೂಳು ಮತ್ತು ತುಕ್ಕು ನಿರೋಧಕ ವೈಶಿಷ್ಟ್ಯತೆ ಹೊಂದಿವೆ. ಜೊತೆಗೆ ಬ್ಯಾಟರಿ ಮತ್ತು ಎಲೆಕ್ಟ್ರಿಕ್ ಮೋಟಾರ್ ಮೇಲೆ ಕಂಪನಿಯು 8 ವರ್ಷ ಅಥವಾ 1.60 ಲಕ್ಷ ಕಿ.ಮೀ ಗಳಿಗೆ ಅನ್ವಯಿಸುವಂತೆ ವಾರಂಟಿ ಘೋಷಣೆ ಮಾಡಿದ್ದು, ಡಿಸಿ ಫಾಸ್ಟ್ ಚಾರ್ಜ್ ಸರ್ಪೊಟ್ ಹೊಂದಿರಲಿವೆ.

ಟಿಯಾಗೋ ಇವಿ ಕಾರಿನಲ್ಲಿ ಕಂಪನಿಯು 3.3 kW ಎಸಿ ಚಾರ್ಜ್ ಮತ್ತು 7.2 kW ಎಸಿ ಚಾರ್ಜ್ ಸೌಲಭ್ಯಗಳನ್ನು ಆಯ್ಕೆ ರೂಪದಲ್ಲಿ ನೀಡಲಾಗುತ್ತಿದ್ದು, 7.2 kW ಎಸಿ ಚಾರ್ಜ್ ಸೌಲಭ್ಯದ ಮೂಲಕ 3 ಗಂಟೆ 36 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಒಂದು ವೇಳೆ 50 kW ಸಾಮರ್ಥ್ಯದ ಡಿಸಿ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳಲ್ಲಿ ಚಾರ್ಜ್ ಮಾಡಿದ್ದಲ್ಲಿ ಕೇವಲ 57 ನಿಮಿಷಗಳಲ್ಲಿ ಸೊನ್ನೆಯಿಂದ ನೂರರಷ್ಟು ಚಾರ್ಜ್ ಮಾಡಬಹುದಾಗಿದ್ದು, 15ಎಎಂಪಿ ಹೋಂ ಚಾರ್ಜರ್ ಮೂಲಕ ಚಾರ್ಜ್ ಮಾಡಿದ್ದಲ್ಲಿ ಕನಿಷ್ಠ 15ರಿಂದ 18 ಗಂಟೆ ತೆಗೆದುಕೊಳ್ಳುತ್ತದೆ.

ಇನ್ನು ವಿನ್ಯಾಸ ಮತ್ತು ತಾಂತ್ರಿಕ ವೈಶಿಷ್ಟ್ಯತೆಗಳ ಬಗೆಗೆ ಹೇಳುವುದಾದರೆ ಹೊಸ ಇವಿ ಕಾರು ಪೆಟ್ರೋಲ್ ಮಾದರಿಯ ವಿನ್ಯಾಸವನ್ನೇ ಹೊಂದಿದ್ದು, ಇವಿ ಮಾದರಿಯಾಗಿ ಕೆಲವು ಹೆಚ್ಚುವರಿ ಫೀಚರ್ಸ್ ನೀಡಲಾಗಿದೆ.

ಹೊಸ ಕಾರಿನ ಹೆಡ್‌ಲೈಟ್ ಸುತ್ತಲೂ ಬ್ಲ್ಯೂ ಹೈಲೈಟ್ಸ್ ನೀಡಲಾಗಿದ್ದು, ಕಾರಿನ ಒಳಭಾಗದ ವಿನ್ಯಾಸದಲ್ಲೂ ಕೆಲವು ಹೊಸ ಫೀಚರ್ಸ್ ಹೊರತುಪಡಿಸಿ ಸಾಮಾನ್ಯ ಮಾದರಿಯಂತೆಯೇ ಆಕರ್ಷಣೆಯಾಗಿದೆ. ಎಲೆಕ್ಟ್ರಿಕ್ ಮಾದರಿಯಾಗಿ ಗುರುತಿಸಲು ಬ್ಲ್ಯೂ ಆಕ್ಸೆಂಟ್ ಸಹಕಾರಿಯಾಗಿದ್ದು, ಗೇರ್ ಸ್ಥಾನದಲ್ಲಿ ಇದೀಗ ಡ್ರೈವ್ ಮೋಡ್ ಡಯಲ್ ನೀಡಲಾಗಿದೆ.

ಹಾಗೆಯೇ ಹೊಸ ಇವಿ ಕಾರಿನಲ್ಲಿ 7 ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೇ, ಅಂಡ್ರಾಯಿಡ್ ಮತ್ತು ಆಟೋ ಕಾರ್ ಪ್ಲೇ, 8 ಸ್ಪೀಕರ್ಸ್ ಹರ್ಮನ್ ಆಡಿಯೋ ಸಿಸ್ಟಂ, ಜೆಡ್ ಕನೆಕ್ಟ್ ಟೆಲಿಮ್ಯಾಟಿಕ್ ಸಿಸ್ಟಂ ಹೊಂದಿದ್ದು, ಪ್ರೀಮಿಯಂ ಅನುಭವಕ್ಕಾಗಿ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ರೈನ್ ಸೆನ್ಸಿಂಗ್ ವೈಪರ್ಸ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಸ್ಟಾರ್ಟ್ ಮತ್ತು ಸ್ಟಾಪ್ ಪುಶ್ ಬಟನ್ ಸೌಲಭ್ಯಗಳಿವೆ.

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿದ್ದು, ಗ್ರಾಹಕರು ಹೊಸ ಕಾರನ್ನು ಟೀಲ್ ಬ್ಲ್ಯೂ, ಡೇ ಟೋನಾ ಗ್ರೇ, ಪ್ರಿಸ್ಟಿನ್ ವೈಟ್, ಮಿಡ್‌ನೈಟ್ ಪ್ಲಮ್ ಮತ್ತು ಟ್ರೋಪಿಕಲ್ ಮಿಸ್ಟ್ ಬಣ್ಣಗಳಲ್ಲಿ ಖರೀದಿಸಬಹುದು.