ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಭಾರೀ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಇಂಧನಗಳಲ್ಲಿ ಚಲಿಸುವ ವಾಹನಗಳತ್ತ ಮುಖ ಮಾಡಿದ್ದಾರೆ. ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳಿಗಿಂತ ಸಿಎನ್‌ಜಿ ವಾಹನಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ದುಬಾರಿ ಎಂಬುದು ಇದಕ್ಕೆ ಪ್ರಮುಖ ಕಾರಣ. ಬಹುತೇಕ ಎಲ್ಲಾ ಪ್ರಮುಖ ವಾಹನ ತಯಾರಕ ಕಂಪನಿಗಳು ಸಿಎನ್‌ಜಿ ವಾಹನಗಳನ್ನು ಬಿಡುಗಡೆಗೊಳಿಸುವಲ್ಲಿ ನಿರತವಾಗಿವೆ. ಭಾರತದಲ್ಲಿ ಈಗಾಗಲೇ ಹಲವು ಕಂಪನಿಗಳ ಸಿಎನ್‌ಜಿ ಕಾರುಗಳು ಮಾರಾಟವಾಗುತ್ತಿವೆ. ಮುಂಬರುವ ದಿನಗಳಲ್ಲಿ ಇನ್ನೂ ಹಲವು ಸಿಎನ್‌ಜಿ ಕಾರುಗಳು ಬಿಡುಗಡೆಯಾಗಲಿವೆ. ಇದರಲ್ಲಿ ಹೆಚ್ಚಿನ ಮೈಲೇಜ್ ನೀಡುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳು ಸಿಎನ್‌ಜಿ ವರ್ಷನ್‌ನಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಹ್ಯಾಚ್‌ಬ್ಯಾಕ್‌ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಮಾರುತಿ ಬಲೆನೊ ಸಿಎನ್‌ಜಿ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು ಕಳೆದ ಕೆಲವು ತಿಂಗಳುಗಳಿಂದ ತಮ್ಮ ಜನಪ್ರಿಯ ಕಾರುಗಳನ್ನು ನವೀಕರಿಸಿ ಬಿಡುಗಡೆಗೊಳಿಸುತ್ತಿದೆ. ಇದು ಕಳೆದ ವರ್ಷದ ಕೊನೆಯಲ್ಲಿ ಎರಡನೇ ತಲೆಮಾರಿನ ಸೆಲೆರಿಯೊದ ಚೊಚ್ಚಲ ಪ್ರಾರಂಭದೊಂದಿಗೆ ಪ್ರಾರಂಭವಾಯಿತು.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಇಂಡೋ-ಜಪಾನೀಸ್ ತಯಾರಕರು ಇತ್ತೀಚೆಗೆ ಹತ್ತು ಲಕ್ಷ ಮಾರಾಟದ ಮೈಲಿಗಲ್ಲನ್ನು ಸಾಧಿಸಿರುವ ತನ್ನ S-CNG ಶ್ರೇಣಿಯನ್ನು ಮತ್ತಷ್ಟು ವಿಸ್ತರಿಸಲಿದೆ ಮತ್ತು ಹೆಚ್ಚಿನ ನೆಕ್ಸಾ ಮಾದರಿಗಳು ಸಿಎನ್‌ಜಿ ಆವೃತ್ತಿಗಳಾಗಿ ನವೀಕರಿಸಲಾಗುತ್ತಿದೆ. ಬಲೆನೊ ತಂತ್ರಜ್ಞಾನವನ್ನು ಪಡೆಯುವ ಸಾಲಿನಲ್ಲಿ ಮೊದಲನೆಯದು ಎಂದು ನಿರೀಕ್ಷಿಸಲಾಗಿದೆ. ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಅನ್ನು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಪರಿಚಯಿಸಲಾಗುವುದು

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಏಕೆಂದರೆ ಇದು 1.2-ಲೀಟರ್ ನಾಲ್ಕು ಸಿಲಿಂಡರ್ K12N ಪೆಟ್ರೋಲ್ ಎಂಜಿನ್‌ನಲ್ಲಿ ತಂತ್ರಜ್ಞಾನವನ್ನು ಅಳವಡಿಸಿದ ಮೊದಲ ಕಾರು ಆಗಬಹುದು. ಪವರ್‌ಟ್ರೇನ್ ಪ್ರಸ್ತುತ 90 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಲಿಂಕ್ ಆಗಿದೆ ಮತ್ತು 5-ಸ್ಪೀಡ್ ಎಎಂಟಿ ಒಂದು ಆಯ್ಕೆಯಾಗಿದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಪ್ರಿ-ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ನೀಡಲಾಗಿದ್ದ ಸಿವಿಟಿ ಬದಲಿಗೆ ಎಎಂಟಿ ಆಗಿದೆ. ಸಿಎನ್‌ಜಿ ರೂಪಾಂತರದಲ್ಲಿ ಕಾರ್ಯಕ್ಷಮತೆಯ ಅಂಕಿಅಂಶಗಳು ಕಡಿಮೆಯಾಗುವುದನ್ನು ನಾವು ನಿರೀಕ್ಷಿಸಬಹುದು ಮತ್ತು ಐದು-ಸ್ಪೀಡ್ ಮ್ಯಾನ್ಯುವಲ್ ಆಗಿರುವ ಏಕೈಕ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಇದನ್ನು ಆಯ್ದ ಟ್ರಿಮ್‌ಗಳಲ್ಲಿ ಮಾರಾಟ ಮಾಡಬಹುದು. ಉಳಿದಂತೆ ಬಲೆನೊ ಸಿಎನ್‌ಜಿ ಕಾರಿನಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಮಾರುತಿ ಸ್ವಿಫ್ಟ್ ಸಿಎನ್‌ಜಿ

ಮಾರುತಿ ಸುಜುಕಿಯ ಟಾಪ್-ಸೆಲ್ಲಿಂಗ್ ಹ್ಯಾಚ್‌ಬ್ಯಾಕ್‌ಗಳಲ್ಲಿ ಒಂದಾದ ಸ್ವಿಫ್ಟ್ ಶೀಘ್ರದಲ್ಲೇ ಸಿಎನ್‌ಜಿ ರೂಪಾಂತರಗಳನ್ನು ಸ್ವೀಕರಿಸಲಿದೆ. ಡಿಜೈರ್ ಸಿಎನ್‌ಜಿಯಂತೆಯೇ, ಮಾರುತಿ ಸ್ವಿಫ್ಟ್ ಸಿಎನ್‌ಜಿಯು ಸಿಎನ್‌ಜಿ ಕಿಟ್‌ನೊಂದಿಗೆ 1.2ಲೀ ಡ್ಯುಯಲ್‌ಜೆಟ್ ಕೆ12ಸಿ ಪೆಟ್ರೋಲ್ ಎಂಜಿನ್‌ನೊಂದಿಗೆ ಬರುತ್ತದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಸಿಎನ್‌ಜಿ ಮೋಡ್‌ನಲ್ಲಿ, ಹ್ಯಾಚ್‌ಬ್ಯಾಕ್ 70 ಬಿಹೆಚ್‍ಪಿ ಪವರ್ ಮತ್ತು 95 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ಸಾಮಾನ್ಯ ಪೆಟ್ರೋಲ್ ಎಂಜಿನ್ ಗಿಂತ ಕಡಿಮೆಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್ ಕಳೆದ 15 ವರ್ಷದಿಂದ ದೇಶಿಯ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ದೇಶಿಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ. ಈ ಹ್ಯಾಚ್‌ಬ್ಯಾಕ್ ಯಾವಾಗಲೂ ಅದರ ಆಧುನಿಕ ಸ್ಟೈಲಿಂಗ್, ದಕ್ಷ ಪವರ್‌ಟ್ರೇನ್‌ಗಳು, ಮೈಲೇಕ್ ಮತ್ತು ಅದರ ಸಾಮರ್ಥ್ಯಕ್ಕಾಗಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಟೊಯೊಟಾ ಗ್ಲಾಂಝಾ ಸಿಎನ್‌ಜಿ

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಇತ್ತೀಚೆಗೆ ನವೀಕರಿಸಿದ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದೀಗ ಟೊಯೊಟಾ ಕಂಪನಿಯು ಈ ಹೊಸ ಗ್ಲಾಂಝಾ ಕಾರು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯೊಂದಿಗೆ ಶೀಘ್ರದಲ್ಲೇ ಪರಿಚಯಿಸಲು ನಿರ್ಧರಿಸಲಾಗಿದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಈ 2022ರ ಟೊಯೊಟಾ ಗ್ಲಾಂಝಾ ಮುಂಬರುವ ಸಿಎನ್‌ಜಿ ಆವೃತ್ತಿಯ ಬಗ್ಗೆ ಮಾಹಿತಿಯನ್ನು ಬ್ರ್ಯಾಂಡ್‌ನ ಅಧಿಕೃತ ಭಾರತೀಯ ವೆಬ್‌ಸೈಟ್ ಬಹಿರಂಗಪಡಿಸಿದೆ. ಟೊಯೊಟಾ ಹ್ಯಾಚ್‌ಬ್ಯಾಕ್ ಮಾದರಿಯು ಮಾರುತಿ ಸೆಲೆರಿಯೊ ಸಿಎನ್‌ಜಿ ಬಿಡುಗಡೆಯ ನಂತರ ಸಿಎನ್‌ಜಿ ಪಡೆಯುವ ಸಾಧ್ಯತೆಯಿದೆ. ಟೊಯೊಟಾ ಗ್ಲಾಂಝಾದ ಮುಂಬರುವ ಸಿಎನ್‌ಜಿ ಪವರ್‌ಟ್ರೇನ್ ಸ್ಟ್ಯಾಂಡರ್ಡ್ ಕಾರಿನಂತೆ ಅದೇ 1.2 ಲೀಟರ್ ಎಂಜಿನ್ ಅನ್ನು ಒಳಗೊಂಡಿರುತ್ತದೆ,

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಜೊತೆಗೆ ಫ್ಯಾಕ್ಟರಿ-ಫಿಟ್ ಮಾಡಿದ ಸಿಎನ್‌ಜಿ ಕಿಟ್ ಅನ್ನು ಸೇರಿಸಲಾಗಿದೆ. ವಿಶೇಷಣಗಳನ್ನು ಬಹಿರಂಗಪಡಿಸಲಾಗಿಲ್ಲ, ಆದರೆ ನೈಸರ್ಗಿಕ ಅನಿಲದಲ್ಲಿ ಚಾಲನೆಯಲ್ಲಿರುವಾಗ ಪವರ್ ಮತ್ತು ಟಾರ್ಕ್ ಉತ್ಪಾದನೆಯು ಸ್ವಲ್ಪಮಟ್ಟಿಗೆ ಇಳಿಯುತ್ತದೆ. ಈ ಸಿಎನ್‌ಜಿ ಆವೃತ್ತಿಯಲ್ಲಿ ಕೇವಲ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಲಭ್ಯವಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಪೆಟ್ರೋಲ್ ಆವೃತ್ತಿಯು ಹೆಚ್ಚುವರಿಯಾಗಿ 5-ಸ್ಪೀಡ್ ಎಎಂಟಿ ಆಯ್ಕೆಯನ್ನು ಪಡೆಯುತ್ತದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾದ ಟೊಯೊಟಾ ಗ್ಲಾಂಝಾ ಇ-ಸಿಎನ್‌ಜಿ, 25 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಅಂಕಿ ಅಂಶವು ಪೆಟ್ರೋಲ್‌ಗೆ ಹೋಲಿಸಿದರೆ ಸಮಾನ ದಕ್ಷತೆಯಾಗಿದೆ, ಆದರೆ ನಿಜವಾದ ಸಿಎನ್‌ಜಿ ಮೈಲೇಜ್ ಅಂಕಿಅಂಶವಲ್ಲ, ಇದನ್ನು ಕಿ.ಮೀಕೆಜಿ ಸ್ವರೂಪದಲ್ಲಿ ಪ್ರಸ್ತುತಪಡಿಸಲಾಗುತ್ತದೆ. ಈ ಹೊಸ ಪವರ್‌ಟ್ರೇನ್ ಬಗ್ಗೆ ಶೀಘ್ರದಲ್ಲೇ ಮಾಹಿತಿಗಳು ಬಹಿರಂಗವಾಗಬಹುದು. ಮುಂಬರುವ ಗ್ಲಾಂಝಾ ಇ-ಸಿಎನ್‌ಜಿ ಬೆಲೆಯು ತುಸು ದುಬಾರಿಯಾಗಿರುತ್ತದೆ.

ಸಿಎನ್‌ಜಿ ವರ್ಷನ್‌ನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಕಾರುಗಳಿವು..

ಈ ಹೊಸ ಪವರ್‌ಟ್ರೇನ್ ಆಯ್ಕೆಯನ್ನು ಗ್ಲಾಂಝಾದ ಮಧ್ಯಮ ಟ್ರಿಮ್ ಮಟ್ಟಗಳು ಮಾತ್ರ ಪಡೆಯುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ ಮಾರುತಿ ಬಲೆನೊ ಎಸ್-ಸಿಎನ್‌ಜಿಗೆ ಅದೇ ರೀತಿ ಇರುತ್ತದೆ. ವಟೊಯೊಟಾ ಗ್ಲಾಂಝಾ ಸಿಎನ್‌ಜಿ ಕಾರಿನಲ್ಲಿ ಉಳಿದಂತೆ ಯಾವುದೇ ಪ್ರಮುಖ ವ್ಯತ್ಯಾಸಗಳನ್ನು ಹೊಂದಿರುವುದಿಲ್ಲ.

Most Read Articles

Kannada
English summary
Three popular hatchbacks soon get cng version details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X