ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಕಾಂಪ್ಯಾಕ್ಟ್ ಎಸ್‌ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯವಾದ ಮತ್ತು ಹೆಚ್ಚು ಪೈಪೋಟಿಯಿಂದ ಕೂಡಿದ ವಿಭಾಗವಾಗಿದೆ, ಬಹುತೇಕ ಎಲ್ಲಾ ಜನಪ್ರಿಯ ಕಾರು ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ಈ ವಿಭಾಗದಲ್ಲಿ ಬಿಡುಗಡೆಗೊಳಿಸುತ್ತಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಹೊಸ ಕಾರನ್ನು ಖರೀದಿಸಲು ಸೇರುವ ಗ್ರಾಹಕರು ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅತ್ಯುತ್ತಮ ಪೀಚರ್ಸ್, ಪ್ರಾಯೋಗಿಕತೆ, ಕಾರ್ಯಕ್ಷಮತೆ ಮತ್ತು ಹೆಚ್ಚಿನ ಸ್ಪೇಸ್ ನಿಂದ ಕೂಡಿರುತ್ತದೆ. ಈ ಕಾರಣದಿಂದ ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಗಳು ಹೆಚ್ಚು ಜನಪ್ರಿಯತೆಗಳಿಸುತ್ತಿದೆ, ಇನ್ನು ಸಣ್ಣ ಕಾರುಗಳಿಂದ ಕಾಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಸೀಟ್ ಎತ್ತರ ಇರುವುದರಿಂದ ಲಾಂಗ್ ರೈಡ್ ತೆರಳಲು ಉತ್ತಮವಾಗಿದೆ. 2022ರ ಜೂನ್‌ ತಿಂಗಳಿನಲ್ಲಿ ಈ ಜನಪ್ರಿಯ ವಿಭಾಗದಲ್ಲಿ ಅತಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳ ಮಾಹಿತಿ ಇಲ್ಲಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಟಾಟಾ ನೆಕ್ಸಾನ್

ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿ 2022ರ ಜೂನ್‌ನಲ್ಲಿ ತನ್ನ ವಿಭಾಗದಲ್ಲಿ ಹೆಚ್ಚು ಮಾರಾಟವಾದ ಮಾದರಿಯಾಗಿ ಹೊರಹೊಮ್ಮಿತು. 2022ರ ಜೂನ್‌ನಲ್ಲಿ ಟಾಟಾ ನೆಕ್ಸಾನ್ ಮಾದರಿಯ 14,295 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಇದೇ ಅವಧಿಯಲ್ಲಿ 8,033 ಯುನಿಟ್ ಮಾರಾಟಕ್ಕೆ ಹೋಲಿಸಿದರೆ. ಶೇಕಡಾ 78 ರಷ್ಟು ಬಲವಾದ ಬೆಳವಣಿಗೆಯನ್ನು ದಾಖಲಿಸಿದೆ,

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಕುತೂಹಲಕಾರಿಯಾಗಿ, ನೆಕ್ಸಾನ್ ದೇಶದಲ್ಲಿ ನಾಲ್ಕನೇ ಹೆಚ್ಚು ಮಾರಾಟವಾದ ಮಾದರಿಯಾಗಿ ಹೊರಹೊಮ್ಮಿದೆ ಮತ್ತು ಕಳೆದ ತಿಂಗಳು ಹುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಆಲ್ಟೊವನ್ನು ಮೀರಿಸಿದೆ. ಐಸಿಇ ಆವೃತ್ತಿಯ ಹೊರತಾಗಿ, ನೆಕ್ಸಾನ್ ಇವಿಗಾಗಿ ಟಾಟಾ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಈ ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ. ಕಳೆದ ತಿಂಗಳ ಮಾರಾಟದಲ್ಲಿ ಟಾಟಾ ನೆಕ್ಸಾನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. ಈ ಟಾಟಾ ನೆಕ್ಸಾನ್ ಎಸ್‍ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಟಾಟಾ ಪಂಚ್

ಬೆಸ್ಟ್ ಸೆಲ್ಲರ್ ಪಟ್ಟಿಗೆ ಸೇರಲು ಟಾಟಾ ಮೋಟಾರ್ಸ್‌ನ ಮತ್ತೊಂದು ಮಾದರಿ ಇಲ್ಲಿದೆ. ಪಂಚ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿ, 2022ರ ಜೂನ್ ತಿಂಗಳಿನಲ್ಲಿ ಈ ಮಾದರಿಯ 10,414 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಆ ಮೂಲಕ ಕಳೆದ ತಿಂಗಳು ತನ್ನ ವಿಭಾಗದಲ್ಲಿ ಎರಡನೇ ಹೆಚ್ಚು ಮಾರಾಟವಾದ ವಾಹನವಾಗಿ ಹೊರಹೊಮ್ಮಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿಯು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಯಶಸ್ಸನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಟಾ ಪಂಚ್ ಮಾದರಿಯು ನೂತನ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿಯಾಗಿದೆ. ಇನ್ನು ಈ ಹೊಸ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಈ ಹೊಸ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಪೈಪೋಟಿ ನೀಡುತ್ತದೆ. ಪಂಚ್ ಎಸ್‌ಯುವಿಯು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಎಸ್‌ಯುವಿಯಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಈ ಎಂಜಿನ್ 83 ಬಿಎಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ, ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿಯಲ್ಲಿ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ, ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿದೆ,

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಹ್ಯುಂಡೈ ವೆನ್ಯೂ

ಈ ವೆನ್ಯೂ 112 ಶೇಕಡಾ ಬೆಳವಣಿಗೆಯ ಹೊರತಾಗಿಯೂ ಎರಡನೇ ಶ್ರೇಣಿಯನ್ನು ಕಳೆದುಕೊಂಡಿದೆ. ಇದಲ್ಲದೆ, ಹ್ಯುಂಡೈನ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಪಂಚ್‌ನಿಂದ ಕೇವಲ 93 ಯುನಿಟ್ ಗಳಿಂದ ಮಾರಾಟ ಮಾಡಲಾಗಿದೆ. 2021ರ ಜೂನ್ ತಿಂಗಳಿನಲಿ ಮಾರಾಟವಾದ 4,865 ಯುನಿಟ್‌ಗಳಿಗೆ ಹೋಲಿಸಿದರೆ ಕಂಪನಿಯು ಕಳೆದ ತಿಂಗಳು ಭಾರತದಲ್ಲಿ ವೆನ್ಯೂನ 10,321 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಈ ಹೊಸ ಹ್ಯುಂಡೈ ವೆನ್ಯೂ ಹೆಚ್ಚಿನ ಬದಲಾವಣೆಗಳನ್ನು ಪಡೆದುಕೊಂಡಿದೆ. ಇದು ನಿಜವಾಗಿಯೂ ತುಂಬಾ ರಿಫ್ರೆಶ್ ಆಗಿ ಕಾಣುತ್ತದೆ ಎಂದು ಹೇಳಬಹುದು.ಸಿಲೂಯೆಟ್ ಒಂದೇ ಆಗಿರುವಾಗ ಹೊಸ ವಿನ್ಯಾಸ ಬದಲಾವಣೆಗಳು ನಿಜವಾಗಿಯೂ ಸರಳವಾಗಿದೆ. ಹಳೆಯ ಮಾದರಿಗೆ ಹೋಲಿಸಿದರೆ ಹ್ಯುಂಡೈ ವೆನ್ಯೂ ತುಂಬಾ ವಿಭಿನ್ನವಾಗಿ ಕಾಣುತ್ತದೆ. ಹೊಸ ಹ್ಯುಂಡೈ ವೆನ್ಯೂ ರಿಫ್ರೆಶ್ಡ್ ಫ್ರಂಟ್ ಫಾಸಿಯಾವನ್ನು ಹೊಂದಿದೆ ಮತ್ತು ಇದು ಹೊಸ ಗ್ರಿಲ್‌ನ ಸೌಜನ್ಯವಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಗಳಿವು: ಟಾಟಾ ಮೋಟಾರ್ಸ್ ಮೈಲುಗೈ

ಇದು 'ಪ್ಯಾರಾಮೆಟ್ರಿಕ್ ಜ್ಯುವೆಲ್ ಗ್ರಿಲ್' ಎಂದು ಕರೆಯಲ್ಪಡುವ ವಿಶಾಲವಾದ ಗ್ರಿಲ್ ಆಗಿದ್ದು ಅದು ಅಸಾಧಾರಣವಾಗಿ ಕಾಣುತ್ತದೆ ವಿಶೇಷವಾಗಿ ನೀವು ಸಾಕಷ್ಟು ಕಡಿಮೆ ಬ್ಲಿಂಗ್ ಅನ್ನು ಇಷ್ಟಪಡುವವರಾಗಿದ್ದರೆ. ಈ ಗ್ರಿಲ್ ಡಾರ್ಕ್ ಕ್ರೋಮ್ ಅಸ್ಸೆಂಟ್ ಗಳನ್ನು ಪಡೆಯುತ್ತದೆ ಮತ್ತು ಇದು ಅಲಂಕಾರಿಕವಾಗಿ ಕಾಣುತ್ತದೆ.ಇದು ಇನ್ನೂ ಸ್ಪ್ಲಿಟ್ ಹೆಡ್‌ಲ್ಯಾಂಪ್ ವೈಶಿಷ್ಟ್ಯವನ್ನು ಪಡೆಯುತ್ತದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ನ ಕೆಳಭಾಗ ಸ್ವಲ್ಪ ರಿಫ್ರೆಶ್ ಮಾಡಲಾಗಿದೆ. ವಿನ್ಯಾಸವು ಒಂದೇ ಆಗಿರುತ್ತದೆ, ಆದರೆ ಕ್ರೋಮ್ ಸುತ್ತುವರಿದವುಗಳನ್ನು LED DRL ಗಳಿಂದ ಬದಲಾಯಿಸಲಾಗುತ್ತದೆ. ಇದು ಕಡಿಮೆ ಮತ್ತು ಹೆಚ್ಚಿನ ಕಿರಣಗಳನ್ನು ಕ್ರಮವಾಗಿ ನಿರ್ವಹಿಸಲು ಎಲ್ಇಡಿ ಪ್ರೊಜೆಕ್ಟರ್ ಮತ್ತು ರಿಫ್ಲೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಸಹ ಒಳಗೊಂಡಿದೆ.

Most Read Articles

Kannada
English summary
Top 3 bestselling compact suvs in june 2022 tata nexon leads chart details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X