ಜನವರಿ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಟಾಪ್-3 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..
ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ಜನಪ್ರಿಯವಾದ ಮತ್ತು ಹೆಚ್ಚು ಪೈಪೋಟಿಯಿಂದ ಕೂಡಿದ ವಿಭಾಗವಾಗಿದೆ, ಬಹುತೇಕ ಎಲ್ಲಾ ಜನಪ್ರಿಯ ಕಾರು ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ಈ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿವೆ.

ಹೊಸ ಕಾರನ್ನು ಖರೀದಿಸಲು ಸೇರುವ ಗ್ರಾಹಕರು ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅತ್ಯುತ್ತಮ ಪೀಚರ್ಸ್, ಪ್ರಾಯೋಗಿಕತೆ, ಕಾರ್ಯಕ್ಷಮತೆ ಮತ್ತು ಹೆಚ್ಚಿನ ಸ್ಪೇಸ್ ನಿಂದ ಕೂಡಿರುತ್ತದೆ. ಈ ಕಾರಣದಿಂದ ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಗಳು ಹೆಚ್ಚು ಜನಪ್ರಿಯತೆಗಳಿಸುತ್ತಿದೆ, ಇನ್ನು ಸಣ್ಣ ಕಾರುಗಳಿಂದ ಕಾಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಸೀಟ್ ಎತ್ತರ ಇರುವುದರಿಂದ ಲಾಂಗ್ ರೈಡ್ ತೆರಳಲು ಉತ್ತಮವಾಗಿದೆ. ಕಳೆದ ತಿಂಗಳಿನಲ್ಲಿ ಈ ಜನಪ್ರಿಯ ವಿಭಾಗದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಾಂಪ್ಯಾಕ್ಟ್ ಎಸ್‌ಯುವಿಗಳ ಮಾಹಿತಿ ಇಲ್ಲಿದೆ.

ಟಾಟಾ ನೆಕ್ಸಾನ್
ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಟಾಟಾ ನೆಕ್ಸಾನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ.

2022ರ ಜನವರಿ ತಿಂಗಳಿನಲ್ಲಿ ನೆಕ್ಸಾನ್ ಮಾದರಿಯ 13,816 ಯೂನಿಟ್‌ಗಳನ್ನು ಮಾರಾಟವಾಗಿವೆ. ಕಳೆದ ವರ್ಷದ ಜನವರಿ ತಿಂಗಳಿನಲ್ಲಿ 8,225 ಯೂನಿಟ್‌ಗಳನ್ನು ಮಾರಾಟಗೊಳಿಸಲಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.68 ಪ್ರತಿಶತದಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನವು ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ.

ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಹ್ಯುಂಡೈ ವೆನ್ಯೂ
2022ರ ಜನವರಿ ತಿಂಗಳಿನಲ್ಲಿ ಹ್ಯುಂಡೈ ವೆನ್ಯೂ ಮಾದರಿಯ 11,377 ಯೂನಿಟ್‌ಗಳನ್ನು ಮಾರಾಟವಾಗಿವೆ, ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ 11,779 ಯೂನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ ಮೂರರಷ್ಟು ಕುಸಿತಕ್ಕೆ ಸಾಕ್ಷಿಯಾಗಿದೆ. ಹುಂಡೈ ವೆನ್ಯೂ ಈ ವಿಭಾಗದಲ್ಲಿ ಎರಡನೇ ಬೆಸ್ಟ್ ಸೆಲ್ಲರ್ ಆಗಿದೆ,

ಈ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

ಹ್ಯುಂಡೈ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವೆನ್ಯೂ ಮಾದರಿಯಲ್ಲಿ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಇದು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಿಂತಲೂ ಹೆಚ್ಚಿನ ಪರ್ಫಾಮೆನ್ಸ್ ಮತ್ತು ತಾಂತ್ರಿಕವಾಗಿ ಬಲಿಷ್ಠ ಕಾರು ಮಾದರಿಯಾಗಿದೆ.

ಟಾಟಾ ಪಂಚ್
ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ತನ್ನ ಪಂಚ್ ಮೈಕ್ರೋ-ಎಸ್‌ಯುವಿಯನ್ನು ಬಿಡುಗಡೆ ಮಾಡಿತು. ಈ ಟಾಟಾ ಪಂಚ್ (Tata Punch) ಮೈಕ್ರೋ ಎಸ್‌ಯುವಿಯು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಯಶಸ್ಸನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಭಾರತೀಯ ಮಾರುಕಟ್ಟೆಗೆ ಟಾಟಾದ ಹೊಸ ಉತ್ಪನ್ನ, ಪಂಚ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿ ವೇಗವಾಗಿ ಮಾರಾಟವಾಗುವ ಪಟ್ಟಿಗೆ ಏರಿದೆ. ಪಂಚ್ ಜನವರಿ 2022 ರಲ್ಲಿ 10,027-ಯೂನಿಟ್ ಮಾರಾಟವನ್ನು ನೋಂದಾಯಿಸಿದೆ. . ಹೆಚ್ಚುವರಿಯಾಗಿ, ಪಂಚ್ ಕಳೆದ ತಿಂಗಳು ದೇಶದಲ್ಲಿ ಟಾಪ್-10 ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಟಾಟಾ ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ, ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿದೆ.


Click it and Unblock the Notifications