ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಕಳೆದ ತಿಂಗಳು ಹಲವು ಹೊಸ ಕಾರು ಮಾದರಿಗಳು ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಿವೆ.
ಹೊಸ ಕಾರು ಮಾದರಿಗಳಲ್ಲಿ ಫೇಸ್‌ಲಿಫ್ಟ್ ಸೇರಿದಂತೆ ಇವಿ ಕಾರುಗಳು ಮತ್ತು ಸಾಮಾನ್ಯ ಎಂಜಿನ್ ಆಯ್ಕೆ ಹೊಂದಿರುವ ಹೊಚ್ಚ ಹೊಸ ಮಾದರಿಗಳು ಸಹ ಬಿಡುಗಡೆಗೊಂಡಿದ್ದು, ಕಳೆದ ತಿಂಗಳು ಬಿಡುಗಡೆಯಾಗಿರುವ ಪ್ರಮುಖ ಕಾರುಗಳ ಬೆಲೆ, ಎಂಜಿನ್ ಮಾಹಿತಿ, ಫೀಚರ್ಸ್‌ಗಳ ಮಾಹಿತಿ ಇಲ್ಲಿವೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಕಿಯಾ ಇವಿ6 ಬಿಡುಗಡೆ

ಕಿಯಾ ಇಂಡಿಯಾ ಕಂಪನಿಯು ತನ್ನ ಹೊಚ್ಚ ಇವಿ6 ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದ್ದು, ಜಿಟಿ ಲೈನ್ ಫ್ರಂಟ್ ವ್ಹೀಲ್ ಡ್ರೈವ್ ವೆರಿಯೆಂಟ್ ಎಕ್ಸ್‌ಶೋರೂಂ ಪ್ರಕಾರ ರೂ. 59.95 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್ ಜಿಟಿ ಲೈನ್ ಆಲ್ ವ್ಹೀಲ್ ಡ್ರೈವ್ ಮಾದರಿಯು ರೂ. 64.95 ಲಕ್ಷ ಬೆಲೆ ಹೊಂದಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಹೊಸ ಇವಿ6 ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್(E-GMP) ಅನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಇದು ಬ್ರ್ಯಾಂಡ್‌ನ ಭವಿಷ್ಯದ ಶ್ರೇಣಿಯ ಎಲೆಕ್ಟ್ರಿಕ್ ಕೊಡುಗೆಗಳ ಆಧಾರವಾಗಿದೆ. ಹೊಸ ಕಾರಿನಲ್ಲಿ ಕಂಪನಿಯು 77.4kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಅತ್ಯಧಿಕ ಮೈಲೇಜ್ ನೀಡಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 528 ಕಿ.ಮೀ ಮೈಲೇಜ್ ರೇಂಜ್ ಖಚಿತಪಡಿಸುತ್ತದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಹೊಸ ಕಾರನ್ನು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡಿರುವುದರಿಂದ ತುಸು ದುಬಾರಿ ಎನ್ನಿಸಲಿರುವ ಹೊಸ ಕಾರು ಮುಂಬರುವ ಕೆಲವು ವರ್ಷಗಳಲ್ಲಿ ಭಾರತದಲ್ಲಿಯೇ ಜೋಡಣೆಯಾಗಲಿದ್ದು, ಇವಿ6 ಜೊತೆಗೆ ಕಂಪನಿಯು ಶೀಘ್ರದಲ್ಲಿಯೇ ತನ್ನ ಬಜೆಟ್ ಇವಿ ಮಾದರಿಯನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಫೋಕ್ಸ್‌ವ್ಯಾಗನ್ ವರ್ಟಸ್

ಫೋಕ್ಸ್‌ವ್ಯಾಗನ್ ಇಂಡಿಯಾ ತನ್ನ ಬಹುನಿರೀಕ್ಷಿತ ವರ್ಟಸ್ ಸೆಡಾನ್ ಕಾರು ಮಾದರಿಯನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದ್ದು, ಈ ಹೊಸ ಸೆಡಾನ್ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11.21 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 17.91 ಲಕ್ಷ ಬೆಲೆ ಹೊಂದಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಹೊಸ ಕಾರು ಸ್ಕೋಡಾ ಸ್ಲಾವಿಯಾ ಮಾದರಿಯೊಂದಿಗೆ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಹಂಚಿಕೊಂಡಿದ್ದು, ಹೊಸ ಕಾರು ಎಂಜಿನ್ ಆಯ್ಕೆಗೆ ಅನುಗುಣವಾಗಿ ಕಂಫರ್ಟ್‌ಲೈನ್, ಹೈಲೈನ್ ಮತ್ತು ಟಾಪ್‌ಲೈನ್ ವೆರಿಯೆಂಟ್ ಹೊಂದಿದೆ. 1.0 ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

2.0 ಇಂಡಿಯಾ ಯೋಜನೆಯ ಅಡಿಯಲ್ಲಿ ಹೊಸ ಕಾರುಗಳನ್ನು ಪರಿಚಯಿಸಿರುವ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಕಂಪನಿಯು ಸಹಭಾಗಿತ್ವ ಯೋಜನೆ ಅಡಿ ಒಟ್ಟು ನಾಲ್ಕು ಕಾರುಗಳನ್ನು ಬಿಡುಗಡೆ ಮಾಡಿದ್ದು, ಸ್ಕೋಡಾ ಕಂಪನಿಯು ಕುಶಾಕ್, ಸ್ಲಾವಿಯಾ ಮಾದರಿಯನ್ನು ಮತ್ತು ಫೋಕ್ಸ್‌ವ್ಯಾಗನ್ ಕಂಪನಿಯು ಟೈಗನ್, ವರ್ಟಸ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಮಹೀಂದ್ರಾ ಸ್ಕಾರ್ಪಿಯೋ-ಎನ್

ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಕಾರು ಮಾದರಿಯು 2.0-ಲೀಟರ್ ಪೆಟ್ರೋಲ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಹೊಸ ಕಾರನ್ನು ಗ್ರಾಹಕರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿ ಮಾಡಬಹುದಾಗಿದ್ದು, ಹೊಸ ಕಾರಿನ ಹೈಎಂಡ್ ಮಾದರಿಗಳಲ್ಲಿ 4x4 ಡ್ರೈವ್ ಸಿಸ್ಟಂ ನೀಡಲಾಗಿದೆ. ವ್ಹೀಲ್‌ಬೇಸ್ ಸೌಲಭ್ಯವು ಪ್ರಸ್ತುತ ಮಾದರಿಗಿಂತಲೂ 70 ಎಂಎಂ ಹೆಚ್ಚು ಉದ್ದವಾಗಿರುವುದರಿಂದ ಮೂರನೇ ಸಾಲಿನ ಪ್ರಯಾಣಿಕರಿಗೆ ಉತ್ತಮ ಸ್ಥಳಾವಕಾಶ ಒದಗಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಸದ್ಯಕ್ಕೆ ಹೊಸ ಕಾರಿನ ಮ್ಯಾನುವಲ್ ಮಾದರಿಗಳ ಬೆಲೆ ಮಾತ್ರ ಬಹಿರಂಗವಾಗಿದ್ದು, ಆಟೋಮ್ಯಾಟಿಕ್ ಆವೃತ್ತಿಗಳ ಬೆಲೆ ಮಾಹಿತಿಯನ್ನು ಈ ತಿಂಗಳು 30ರಂದು ಬಹಿರಂಗಪಡಿಸಲಾಗುತ್ತಿದೆ. ಇದರೊಂದಿಗೆ ಹೊಸ ಕಾರು ಖರೀದಿಗಾಗಿ ಅಧಿಕೃತ ಬುಕಿಂಗ್ ಕೂಡಾ ಆರಂಭವಾಗಲಿದ್ದು, ಮೂರನೇ ಸಾಲಿನ ಆಸನಕ್ಕಾಗಿ ಹೊಸ ಕಾರಿನಲ್ಲಿ 206 ಎಂಎಂ ಹೆಚ್ಚುವರಿ ಉದ್ದಳತೆ ನೀಡಲಾಗಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

2022ರ ಮಾರುತಿ ಸುಜುಕಿ ಬ್ರೆಝಾ

ಮಾರುತಿ ಸುಜುಕಿ ಕಂಪನಿಯು 2022ರ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರೀ ಬದಲಾವಣೆಯೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 13.96 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಮಾದರಿಯ ಎಲ್ಎಕ್ಸ್‌ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ವೆಂಟ್‌ಗಳನ್ನು ಹೊಂದಿದ್ದು, 1.5 ಲೀಟರ್ ಕೆ15ಸಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಹೊಸ ಕಾರು 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 104.6 ಬಿಎಚ್‌ಪಿ ಮತ್ತು 137 ಎನ್ಎಂ ಉತ್ಪಾದನೆ ಮೂಲಕ ಉತ್ತಮ ಇಂಧನ ದಕ್ಷತೆ ಕಾಯ್ದುಕೊಂಡಿದೆ. ಜೊತೆಗೆ ಹೊಸ ಕಾರು ಸನ್‌ರೂಫ್, 360 ಡಿಗ್ರಿ ಕ್ಯಾಮೆರಾ, ಆರು ಏರ್‌ಬ್ಯಾಗ್‌ಗಳು ಸೇರಿದಂತೆ ಉತ್ತಮ ಸುರಕ್ಷಾ ಸೌಲಭ್ಯಗಳನ್ನು ಹೊಂದಿದ್ದು, ಕನೆಕ್ಟೆಡ್ ಫೀಚರ್ಸ್ ಮೂಲಕ 9.0-ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಟಚ್‌ಸ್ಕ್ರೀನ್‌ ಅಳವಡಿಸಲಾಗಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

2022ರ ಹ್ಯುಂಡೈ ವೆನ್ಯೂ

ಹೊಸ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಇ, ಎಸ್, ಎಸ್(ಒ), ಎಸ್ಎಕ್ಸ್ ಮತ್ತು ಎಸ್ಎಕ್ಸ್(ಒ) ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.53 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.57 ಲಕ್ಷ ಬೆಲೆ ಹೊಂದಿದೆ.

ಜೂನ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಅತ್ಯುತ್ತಮ ಕಾರು ಮಾದರಿಗಳಿವು!

ಹ್ಯುಂಡೈ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿನಂತೆ 1.2 ಲೀಟರ್ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ನವೀಕೃತ ವಿನ್ಯಾಸದೊಂದಿಗೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

Most Read Articles

Kannada
English summary
Top 5 best cars launched in june 2022 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X