ಏಪ್ರಿಲ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳಿವು..
ಇತ್ತೀಚಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಾರು ಅನಾವರಣಗಳು ಮತ್ತು ಬಿಡುಗಡೆಗಳು ನಡೆಯುತ್ತಿವೆ. ಕೊರೋನಾ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆಯಾದ ಬಳಿಕ ಭಾರತದಲ್ಲಿ ಕಾರು ಮಾರಾಟವು ಕ್ರಮೇಣ ವೇಗವನ್ನು ಪಡೆದುಕೊಳ್ಳುತ್ತಿದೆ.

ಆದರೆ ಸಿಮಿಕಂಡಕ್ಟರ್ ಪೂರೈಕೆಯಲ್ಲಿ ನಡೆಯುತ್ತಿರುವ ಕೊರತೆಯು ದೇಶದ ಪ್ರಮುಖ ಕಾರು ತಯಾರಕರ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತಿದೆ. ಪ್ರಸ್ತುತ ಸನ್ನಿವೇಶದ ಹೊರತಾಗಿಯೂ, ಕಠಿಣ ಪರಿಸ್ಥಿತಿಗಳಲ್ಲಿಯು ಕೆಲವು ಕಾರುಗಳು ಉತ್ತಮವಾಗಿ ಮಾರಾಟವಾಗುತ್ತಿವೆ. 2022ರ ಏಪ್ರಿಲ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿ ಬಹಿರಂಗವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯು ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2022ರ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳ ಪಟ್ಟಿ ಇಲ್ಲಿವೆ.

ಮಾರುತಿ ಸುಜುಕಿ ವ್ಯಾಗನ್‌ಆರ್
2022ರ ಏಪ್ರಿಲ್ ತಿಂಗಳ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ವ್ಯಾಗನ್‌ಆರ್ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳ ಮಾರಾಟದಲ್ಲಿ ಶೇಕಡಾ ಐದು ಕುಸಿತದ ಹೊರತಾಗಿಯೂ ಭಾರತೀಯ ವಾಹನ ತಯಾರಕ ಮಾರುತಿ ಸುಜುಕಿ ದೇಶದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಯಾಗಿ ಮುಂದುವರೆದಿದೆ.

ಕಂಪನಿಯು ಕಳೆದ ತಿಂಗಳು ವ್ಯಾಗನ್‌ಆರ್‌ನ 17,766 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2021ರ ಏಪ್ರಿಲ್ ತಿಂಗಳಿನಲ್ಲಿ ವ್ಯಾಗನ್‌ಆರ್‌ನ 18,656 ಯುನಿಟ್‌ಗಳನ್ನು ಮಾರುತಿ ಸುಜುಕಿ ಕಂಪನಿಯು ಮಾರಾಟಗೊಳಿಸಿತ್ತು. ವ್ಯಾಗನ್ ಆರ್ ದೇಶದಲ್ಲಿನ ಹೆಚ್ಚಿನ ಇಂಧನ ಬೆಲೆಗಳಿಂದಾಗಿ CNG ಆಯ್ಕೆಯನ್ನು ಹುಡುಕುತ್ತಿರುವ ಖರೀದಿದಾರರಲ್ಲಿ ವಿಶೇಷವಾಗಿ ಜನಪ್ರಿಯ ಆಯ್ಕೆಯಾಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ. ಈ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಉತ್ತಮ ಬೇಡಿಕೆಯಿಂದ ಮಾರಾಟವಾಗುತ್ತಿದೆ. ಈಗ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಅದೇ 1.0-ಲೀಟರ್ ಮತ್ತು 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಗಳ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತದೆ. ಎಸ್-ಸಿಎನ್‌ಜಿ ಮಾದರಿಯಲ್ಲಿ 1.0-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದು 58 ಬಿಹೆಚ್‌ಪಿ ಮತ್ತು 78 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಜೋಡಿಸಲಾಗಿದೆ.

ಈ ವ್ಯಾಗನ್ಆರ್ ಅನ್ನು ಎಲ್ಎಕ್ಸ್ಐ ಮತ್ತು ಎಲ್ಎಕ್ಸ್ಐ(ಒ) ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಇದರಲ್ಲಿ ಸುರಕ್ಷತೆಗಾಗಿ ಡ್ರೈವರ್-ಸೈಡ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ಹೈಸ್ಪೀಡ್ ಅಲರ್ಟ್, ಸೀಟ್‌ಬೆಲ್ಟ್ ರಿಮೈಂಡರ್, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಇತರ ಪೀಚರ್ ಗಳನ್ನು ಕೂಡ ಒಳಗೊಂಡಿವೆ.

ಮಾರುತಿ ಎರ್ಟಿಗಾ
ಕಳೆದ ತಿಂಗಳು, ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುವ ಎರಡು ಕಾರುಗಳು ತನ್ನ ಬ್ರಾಂಡ್‌ನಿಂದ ಹೊರಹೊಮ್ಮಿರುವುದು ಮಾರುತಿ ಸುಜುಕಿ ಇಂಡಿಯಾಗೆ ಹೆಮ್ಮೆಯನ್ನು ತಂದುಕೊಟ್ಟಿದೆ. ಕಳೆದ ತಿಂಗಳು ದೇಶದಲ್ಲಿ ಹೆಚ್ಚು ಮಾರಾಟವಾಗುವ ಎರಡನೇ ಮಾದರಿಯಾಗಿ ಹೊರಹೊಮ್ಮಿದೆ.

ಕಂಪನಿಯು ಕಳೆದ ತಿಂಗಳು ಎರ್ಟಿಗಾದ 14,889 ಯುನಿಟ್‌ಗಳನ್ನು ಮಾರಾಟ ಮಾಡಿತು, 2021ರ ಏಪ್ರಿಲ್ ತಿಂಗಳಿನಲ್ಲಿ ಮಾರಾಟವಾದ 8,644 ಯುನಿಟ್‌ಗಳಿಗೆ ಹೋಲಿಸಿದರೆ, ಆ ಮೂಲಕ ಶೇಕಡಾ 72 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. . ದೇಶದಲ್ಲಿ 2022ರ ಎರ್ಟಿಗಾ ಬಿಡುಗಡೆಗೆ ಮಾರಾಟದಲ್ಲಿನ ಗಮನಾರ್ಹ ಬೆಳವಣಿಗೆಯನ್ನು ಕಾರಣವೆಂದು ಹೇಳಬಹುದು.

ಎರ್ಟಿಗಾದಲ್ಲಿ ಏಕೈಕ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತವ ಸಾಮರ್ಥ್ಯವನ್ನು ಹೊಂದಿದೆ, ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಟಾಟಾ ನೆಕ್ಸಾನ್
ಕಳೆದ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಸ್‌ಯುವಿಯ 13,471 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ತಿಂಗಳಿನಲ್ಲಿ 6,938 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ನೆಕ್ಸಾನ್ ವರ್ಷದಿಂದ ವರ್ಷಕ್ಕೆ 94% ನಷ್ಟು ಬೃಹತ್ ಮಾರಾಟದ ಬೆಳವಣಿಗೆಯನ್ನು ದಾಖಲಿಸಿದೆ.

ಈ ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ. ಕಳೆದ ತಿಂಗಳ ಮಾರಾಟದಲ್ಲಿ ಟಾಟಾ ನೆಕ್ಸಾನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು.

ಈ ಟಾಟಾ ನೆಕ್ಸಾನ್ ಎಸ್‍ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಹ್ಯುಂಡೈ ಕ್ರೆಟಾ
ಹ್ಯುಂಡೈ 2022ರ ಏಪ್ರಿಲ್ ತಿಂಗಳಿನಲ್ಲಿ 12,651 ಕ್ರೆಟಾ ಎಸ್‌ಯುವಿಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ 12,463 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಈ ಎಸ್‍ಯುವಿ ವರ್ಷದಿಂದ ವರ್ಷಕ್ಕೆ 2 ಶೇಕಡಾ ಮಾರಾಟ ಬೆಳವಣಿಗೆಯನ್ನು ಪಡೆದುಕೊಂಡಿದೆ,

ಮಾರುತಿ ಸುಜುಕಿ ವಿಟಾರಾ ಬ್ರೆಝಾ
ಕಳೆದ ತಿಂಗಳಿನಲ್ಲಿ ಮಾರುತಿ ಸುಜುಕಿಯು ವಿಟಾರಾ ಬ್ರೆಝಾದ 11,764 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷ ಇದೇ ತಿಂಗಳಿನಲ್ಲಿ 11,220 ಮಾರಾಟ ಮಾಡಿತ್ತು. ಮಾರುತಿ ಸುಜುಕಿ ವಿಟಾರಾ ಬ್ರೆಝಾ ವರ್ಷದಿಂದ ವರ್ಷಕ್ಕೆ ಶೇಕಡಾ 5 ರ ಮಾರಾಟದ ಬೆಳವಣಿಗೆಯನ್ನು ದಾಖಲಿಸಿದೆ.

ಈ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಮಾರುತಿ ಸುಜುಕಿ ಕಂಪನಿಯು ಹೆಚ್ಚಿನ ಸುರಕ್ಷತೆಗಾಗಿ, ಹೆಚ್ಚಿನ ಏರ್‌ಬ್ಯಾಗ್‌ಗಳನ್ನು (ಪ್ರಸ್ತುತ ಮಾದರಿಯು ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಮಾತ್ರ ಪಡೆಯುವುದರಿಂದ) ನೀಡಬಹುದು. 2022ರ ಬ್ರೆಝಾವನ್ನು ಸುಜುಕಿ ಹಾರ್ಟೆಕ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸುವ ಸಾಧ್ಯತೆಯಿದೆ, ಇದು ನಾಲ್ಕು ಸ್ಟಾರ್‌ಗಳ ಪ್ರಸ್ತುತ ಗ್ಲೋಬಲ್ ಎನ್‌ಸಿಎಪಿ ಸುರಕ್ಷತಾ ರೇಟಿಂಗ್ ಅನ್ನು ಇನ್ನಷ್ಟು ಸುಧಾರಿಸುತ್ತದೆ.

ಈ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ದೇಶದ ಅತಿದೊಡ್ಡ ಕಾರು ತಯಾರಕರು ಹೊಸ ಬ್ರೆಝಾವನ್ನು ನವೀಕರಿಸಲಾಗುತ್ತಿದೆ. ಹೊಸ ಮಾರುತಿ ಸುಜುಕಿ ಬ್ರೆಝಾ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.


Click it and Unblock the Notifications