ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು: ಮಾರುತಿ ಸುಜುಕಿ ಪ್ರಾಬಲ್ಯ ಮುಂದುವರಿಕೆ

ಕೊರೋನಾ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆಯಾಗಿರುವುದರಿಂದ ಇತ್ತೀಚಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳು ಅನಾವರಣಗಳು ಮತ್ತು ಬಿಡುಗಡೆಗಳು ನಡೆಯುತ್ತಿವೆ. ಅಲ್ಲದೇ ಭಾರತದಲ್ಲಿ ಕಾರು ಮಾರಾಟವು ಕ್ರಮೇಣ ವೇಗವನ್ನು ಪಡೆದುಕೊಳ್ಳುತ್ತಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಆದರೆ ಸಿಮಿಕಂಡಕ್ಟರ್ ಪೂರೈಕೆಯಲ್ಲಿ ನಡೆಯುತ್ತಿರುವ ಕೊರತೆಯು ದೇಶದ ಪ್ರಮುಖ ಕಾರು ತಯಾರಕರ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತಿದೆ. ಪ್ರಸ್ತುತ ಸನ್ನಿವೇಶದ ಹೊರತಾಗಿಯೂ, ಕಠಿಣ ಪರಿಸ್ಥಿತಿಗಳಲ್ಲಿಯು ಕೆಲವು ಕಾರುಗಳು ಉತ್ತಮವಾಗಿ ಮಾರಾಟವಾಗುತ್ತಿವೆ. 2022ರ ಏಪ್ರಿಲ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿ ಬಹಿರಂಗವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯು ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2022ರ ಜೂನ್ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳ ಪಟ್ಟಿ ಇಲ್ಲಿವೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಮಾರುತಿ ಸುಜುಕಿ ವ್ಯಾಗನ್‌ಆರ್

2022ರ ಜೂನ್ ತಿಂಗಳ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ವ್ಯಾಗನ್‌ಆರ್ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಕಂಪನಿಯು ಕಳೆದ ತಿಂಗಳು ವ್ಯಾಗನ್‌ಆರ್ ಮಾದರಿಯ 19,190 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಜೂನ್ 2021 ರಲ್ಲಿ 19,447 ಯುನಿಟ್ ಮಾರಾಟವಾಗಿದೆ, ಇದರಿಂದಾಗಿ ಮಾರಾಟದಲ್ಲಿ ಒಂದು ಶೇಕಡಾ ಕಡಿಮೆ ಇಳಿಕೆ ಕಂಡುಬಂದಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಒಟ್ಟಾರೆಯಾಗಿ, ಎಲೆಕ್ಟ್ರಾನಿ ಯುನಿಟ್ ಗಳ ಪೂರೈಕೆಯಲ್ಲಿನ ಕೊರತೆಯಿಂದಾಗಿ ಮಾರುತಿ ಸುಜುಕಿ ಜೂನ್‌ನಲ್ಲಿ ಶೇಕಡಾ 1.28 ರಷ್ಟು ಕುಸಿತ ಕಂಡಿದೆ. ವ್ಯಾಗನ್ ಆರ್ ದೇಶದಲ್ಲಿನ ಹೆಚ್ಚಿನ ಇಂಧನ ಬೆಲೆಗಳಿಂದಾಗಿ CNG ಆಯ್ಕೆಯನ್ನು ಹುಡುಕುತ್ತಿರುವ ಖರೀದಿದಾರರಲ್ಲಿ ವಿಶೇಷವಾಗಿ ಜನಪ್ರಿಯ ಆಯ್ಕೆಯಾಗಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ. ಈ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಉತ್ತಮ ಬೇಡಿಕೆಯಿಂದ ಮಾರಾಟವಾಗುತ್ತಿದೆ. ಈಗ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಅದೇ 1.0-ಲೀಟರ್ ಮತ್ತು 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಗಳ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತದೆ. ಎಸ್-ಸಿಎನ್‌ಜಿ ಮಾದರಿಯಲ್ಲಿ 1.0-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದು 58 ಬಿಹೆಚ್‌ಪಿ ಮತ್ತು 78 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ ಜೋಡಿಸಲಾಗಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಮಾರುತಿ ಸುಜುಕಿ ಸ್ವಿಫ್ಟ್

ಸ್ವಿಫ್ಟ್ ಒಂಬತ್ತು ಶೇಕಡಾ ಕುಸಿತದ ಹೊರತಾಗಿಯೂ ದೇಶದಲ್ಲಿ ಎರಡನೇ ಹೆಚ್ಚು ಮಾರಾಟವಾದ ಮಾದರಿಯಾಗಿ ಹೊರಹೊಮ್ಮಿದೆ.. ಕಂಪನಿಯು ಜೂನ್ 2022 ರಲ್ಲಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ 16,213 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ 17,727 ಯುನಿಟ್ ಮಾರಾಟಕ್ಕೆ ಹೋಲಿಸಿದರೆ. ವ್ಯಾಗನ್ ಆರ್ ಹೊರತಾಗಿ, ಎಲೆಕ್ಟ್ರಾನಿಕ್ ಯುನಿಟ್ ಗಳ ಪೂರೈಕೆಯಲ್ಲಿನ ಕೊರತೆಯಿಂದಾಗಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಉತ್ಪಾದನೆಯು ಸಹ ಪರಿಣಾಮ ಬೀರಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಮಾರುತಿ ಸುಜುಕಿ ಬಲೆನೊ

ಮಾರುತಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್, ಬಲೆನೊ ಕಳೆದ ತಿಂಗಳು ದೇಶದಲ್ಲಿ ಹೆಚ್ಚು ಮಾರಾಟವಾದ ಮೂರನೇ ಮಾದರಿಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 14,701 ಯುನಿಟ್ ಮಾರಾಟಕ್ಕೆ ಹೋಲಿಸಿದರೆ ಜೂನ್ 2022 ರಲ್ಲಿ ಇದು 16,103 ಯುನಿಟ್ ಮಾರಾಟವನ್ನು ದಾಖಲಿಸಿದೆ,

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಇದರಿಂದಾಗಿ ಶೇಕಡಾ 10 ರಷ್ಟು ಬೆಳವಣಿಗೆಯನ್ನು ಕಂಡಿದೆ. ಭಾರತೀಯ ವಾಹನ ತಯಾರಕರು ಈ ವರ್ಷದ ಆರಂಭದಲ್ಲಿ 2022 ಬಲೆನೊವನ್ನು ದೇಶದಲ್ಲಿ ಬಿಡುಗಡೆ ಮಾಡಿದರು. ಮತ್ತು, ಈ ಹೊಸ ಮಾದರಿಯು ಈ ತಿಂಗಳೂ ಜನಪ್ರಿಯ ಆಯ್ಕೆಯಾಗಿ ಮುಂದುವರಿಯುವ ನಿರೀಕ್ಷೆಯಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಟಾಟಾ ನೆಕ್ಸಾನ್

ಈ ಟಾಟಾ ನೆಕ್ಸಾನ್ ಕಳೆದ ಕೆಲವು ತಿಂಗಳುಗಳಲ್ಲಿ ದಾಖಲೆಯ ಮಾರಾಟವನ್ನು ದಾಖಲಿಸುತ್ತಿದೆ. ನೆಕ್ಸಾನ್ ಕಳೆದ ವರ್ಷದ ಇದೇ ಅವಧಿಯಲ್ಲಿ 8,033 ಯುನಿಟ್ ಮಾರಾಟಕ್ಕೆ ಹೋಲಿಸಿದರೆ ಜೂನ್ 2022 ರಲ್ಲಿ 14,295 ಯುನಿಟ್ ಮಾರಾಟದೊಂದಿಗೆ ದೇಶದಲ್ಲಿ ನಾಲ್ಕನೇ ಬೆಸ್ಟ್ ಸೆಲ್ಲರ್ ಆಗಿ ಹೊರಹೊಮ್ಮಿದೆ,

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಆ ಮೂಲಕ 78 ಪ್ರತಿಶತದಷ್ಟು ಬಲವಾದ ಬೆಳವಣಿಗೆಯನ್ನು ದಾಖಲಿಸಿದೆ. ಇದಲ್ಲದೆ, ಮಾರಾಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಟಾಟಾ ಮೋಟಾರ್ಸ್ ಈ ವರ್ಷದ ಆರಂಭದಲ್ಲಿ ನೆಕ್ಸಾನ್ ಕಾಜಿರಂಗ ಆವೃತ್ತಿಯನ್ನು ಪರಿಚಯಿಸಿತು. ಈ ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ. ಕಳೆದ ತಿಂಗಳ ಮಾರಾಟದಲ್ಲಿ ಟಾಟಾ ನೆಕ್ಸಾನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಹಿಂದಿಕ್ಕಿದೆ. ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು.ಈ ಟಾಟಾ ನೆಕ್ಸಾನ್ ಎಸ್‍ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಕಾರುಗಳು

ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೆಟಾ 2022ರ ಜೂನ್ ತಿಂಗಳಿನಲ್ಲಿ 13,790 ಯುನಿಟ್ ಮಾರಾಟದೊಂದಿಗೆ ಅಗ್ರ ಐದು ಪಟ್ಟಿಯಲ್ಲಿ ಸ್ಥಾನ ಪಡೆದಿದೆ, ಕಳೆದ ವರ್ಷದ ಇದೇ ಅವಧಿಯಲ್ಲಿ 9,941 ಯುನಿಟ್ ಮಾರಾಟಕ್ಕೆ ಹೋಲಿಸಿದರೆ, ಈ ಮೂಲಕ 39 ಶೇಕಡಾ ಬೆಳವಣಿಗೆಯನ್ನು ದಾಖಲಿಸಿದೆ.

Most Read Articles

Kannada
English summary
Top 5 best selling cars in india june 2022 details
Story first published: Friday, July 8, 2022, 12:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X