ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ವಾಹನ ಮಾರುಕಟ್ಟೆಯಲ್ಲಿ ಸದ್ಯ ಹೊಸ ಕಾರುಗಳ ಮಾರಾಟವು ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಪ್ರಮುಖ ಕಾರು ಕಂಪನಿಗಳು ತಮ್ಮ ಬಹುನೀರಿಕ್ಷಿತ ಮಾದರಿಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿವೆ. ಹೊಸ ಕಾರುಗಳ ಪಟ್ಟಿಯಲ್ಲಿ ಈ ಬಾರಿ ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಹೈಬ್ರಿಡ್ ಮಾದರಿಗಳು ಪ್ರಮುಖ ಆಕರ್ಷಣೆಯಾಗಲಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳು ಯಾವುವು? ಮತ್ತು ಹೊಸ ಕಾರುಗಳ ಫೀಚರ್ಸ್ ಮತ್ತು ಅಂದಾಜು ಬೆಲೆ ಮಾಹಿತಿಯನ್ನು ಇಲ್ಲಿ ನೋಡೋಣ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಮಹೀಂದ್ರಾ ಎಕ್ಸ್‌ಯುವಿ300 ಸ್ಪೋರ್ಟ್ಜ್

ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಎಕ್ಸ್‌ಯುವಿ300 ಫೇಸ್‌ಲಿಫ್ಟ್ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಇದೇ ತಿಂಗಳು 7ರಂದು ಅಧಿಕೃತವಾಗಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಹೊಸ ಎಕ್ಸ್‌ಯುವಿ300 ಫೇಸ್‌ಲಿಫ್ಟ್ ಮಾದರಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಕೆಲವು ಹೊಸ ಫೀಚರ್ಸ್ ಮತ್ತು ವಿನ್ಯಾಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಕಾರಿನಲ್ಲಿ ಕಂಪನಿಯು ಈ ಬಾರಿ ಸ್ಟ್ಯಾಂಡರ್ಡ್ ಮಾದರಿಗಳೊಂದಿಗೆ ಹೊಸದಾಗಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಸ್ಪೋರ್ಟ್ಜ್ ವರ್ಷನ್ ಬಿಡುಗಡೆ ಮಾಡುತ್ತಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಎಕ್ಸ್‌ಯುವಿ300 ಮಾದರಿಯನ್ನು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ತಾಂತ್ರಿಕ ಅಂಶಗಳೊಂದಿಗೆ ಸ್ಟ್ಯಾಂಡರ್ಡ್ ಮಾದರಿಯಲ್ಲಿ ಮಾರಾಟಗೊಳಿಸುತ್ತಿದ್ದು, ಫೇಸ್‌ಲಿಫ್ಟ್ ಮಾದರಿಯೊಂದಿಗೆ ಹೊಸ ಕಾರು ಈ ಬಾರಿ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಸ್ಪೋರ್ಟ್ಜ್ ಮಾದರಿಯು ಕೂಡಾ ಬಿಡುಗಡೆಯಾಗಲಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಎಕ್ಸ್‌ಯುವಿ 300 ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಕಂಪನಿಯು ಹೆಚ್ಚಿನ ಪರ್ಫಾಮೆನ್ಸ್ ಹೊಂದಿರುವ ಟರ್ಬೊ ವರ್ಷನ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಬಿವೈಡಿ ಅಟ್ಟೊ 3

ಭಾರತದಲ್ಲಿ ಮೊದಲ ಹಂತದಲ್ಲಿ ಇ6 ಎಂಪಿವಿ ಕಾರು ಬಿಡುಗಡೆ ಮಾಡಿದ್ದ ಕಂಪನಿಯು ಇದೀಗ ಎಸ್‌ಯುವಿ ವಿಭಾಗಕ್ಕೆ ಹೊಸ ಅಟ್ಟೊ 3 ಪರಿಚಯಿಸುತ್ತಿದ್ದು, ಹೊಸ ಕಾರು ಮುಂದಿನ ತಿಂಗಳು 11ರಂದು ಭಾರತದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಬಿವೈಡಿ ಅಟ್ಟೊ 3 ಎಸ್‌ಯುವಿ ಮಾದರಿಯು ಇದೀಗ ಭಾರತದಲ್ಲಿ ಕೆಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿ ಜೆಡ್ಎಸ್ ಇವಿ ಮತ್ತು ಹ್ಯುಂಡೈ ಕೊನಾ ಇವಿ ಕಾರುಗಳಿಗೆ ಇದು ಉತ್ತಮ ಪೈಪೋಟಿಯಾಗಲಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಅಟ್ಟೊ 3 ಎಸ್‌ಯುವಿ ಮಾದರಿಯಲ್ಲಿ ಬಿವೈಡಿ ಕಂಪನಿಯು 60.48kWh ಮತ್ತು 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಯಿದ್ದು, ಗ್ರಾಹಕರು ತಮ್ಮ ಅಗತ್ಯತೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಖರೀದಿಸಬಹುದಾಗಿದೆ. 60.48kWh ಬ್ಯಾಟರಿ ಪ್ಯಾಕ್ ಮಾದರಿಯು ಪ್ರತಿ ಚಾರ್ಜ್‌ಗೆ 420 ಕಿ.ಮೀ ಮೈಲೇಜ್ ಹೊಂದಿದ್ದರೆ 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಮಾದರಿಯು 320 ಕಿ.ಮೀ ಮೈಲೇಜ್ ಹೊಂದಿದ್ದು, ಉತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್

ಹ್ಯುಂಡೈ ಕಂಪನಿಯು ಕೊನಾ ಇವಿ ಕಾರು ಮಾದರಿಯನ್ನು ಗ್ರಾಹಕರ ಬೇಡಿಕೆಯೆಂತೆ ನವೀಕೃತ ಮಾದರಿಯನ್ನು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಬಹುದಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಪ್ರಮುಖ ತಾಂತ್ರಿಕ ಅಂಶಗಳನ್ನು ಪರಿಚಯಿಸಲಾಗಿದ್ದು, ಹೊಸ ವಿನ್ಯಾಸದ ಎಲ್ಇಡಿ ಡಿಆರ್‌ಎಲ್‌ಗಳು, ಟು ವರ್ಟಿಕಲ್ ಸ್ಲಾಟ್ ಹೊಂದಿರುವ ಬಂಪರ್, ಸಿಲ್ವರ್ ಆಕ್ಸೆಂಟ್ ಸೇರಿದಂತೆ ಪ್ರಮುಖ ಬದಲಾವಣೆಗಳು ಎಲೆಕ್ಟ್ರಿಕ್ ಎಸ್‌ಯುವಿ ಪ್ರಿಯರನ್ನು ಆಕರ್ಷಿಸಲಿವೆ. ಜೊತೆಗೆ ಹೊಸ ಕಾರಿನ ಹಿಂಭಾಗದ ವಿನ್ಯಾಸದಲ್ಲೂ ಪ್ರಮುಖ ಬದಲಾವಣೆಗಳಾಗಿದ್ದು, ಸ್ಪಿಟ್ ಟೈಲ್ ಲ್ಯಾಂಪ್ ಪ್ರತ್ಯೇಕಗೊಂಡಿರುವ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಿಗ್ನಲ್, ಆಕ್ಸಿಲರಿ ಟೈಲ್‌ಲ್ಯಾಂಪ್ ನೀಡಲಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಇದರೊಂದಿಗೆ ಹೊಸ ಕಾರಿನಲ್ಲಿ ಸುಧಾರಿತ ವಿನ್ಯಾಸದ ಅಲಾಯ್ ವೀಲ್ಹ್, ಆಕರ್ಷಕ ವಿನ್ಯಾಸದ ರೂಫ್ ರೈಲ್ಸ್ ನೀಡಲಾಗಿದ್ದು, ಹೊಸ ಕಾರಿನ ಒಳಭಾಗದಲ್ಲಿ ಫುಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೊಟ್ ಮಾಡುವ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಿಸಲಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

2022ರ ಎಂಜಿ ಹೆಕ್ಟರ್ ಎಸ್‍ಯುವಿ

ಎಂಜಿ ಮೋಟಾರ್ ಇಂಡಿಯಾ ತನ್ನ ಅತ್ಯಂತ ಜನಪ್ರಿಯ ಎಸ್‌ಯುವಿ ಮಾದರಿಯಾದ ಹೆಕ್ಟರ್ ಎಸ್‍ಯುವಿಯನ್ನು ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, 2022ರ ಮಾದರಿಯಲ್ಲಿ ಕಂಪನಿಯು ಹಲವಾರು ಬದಲಾವಣೆಗಳನ್ನು ತಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಹೊಸ ಎಸ್‌ಯುವಿ ಮಾದರಿಯು ಹೊರ ಭಾಗದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಪಡೆದುಕೊಳ್ಳದಿದ್ದರೂ ಇಂಟಿರಿಯರ್ ಸಾಕಷ್ಟು ಸುಧಾರಣೆಗೊಂಡಿದ್ದು, ಹೆಚ್ಚಿನ ಸುರಕ್ಷತೆಗಾಗಿ ಈ ಬಾರಿ ಹೊಸ ಕಾರಿನಲ್ಲಿ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ನೀಡಲಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಐಯಾನಿಕ್ 5 ಇವಿ

ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ ಓವರ್ ಎಸ್‌ಯುವಿ ಮಾದರಿಯು ಶೀಘ್ರದಲ್ಲಿಯೇ ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಯಾದ ಕಿಯಾ ಇವಿ6 ಮಾದರಿಗಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಹ್ಯುಂಡೈ ಕಂಪನಿಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣಾಗಿ ಮುಂಬರುವ ಕೆಲವೇ ದಿನಗಳಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಎಸ್‌ಯುವಿ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪನಿಯು ಭಾರತದಲ್ಲೂ ಸಹ ತನ್ನ ಹೊಸ ಇವಿ ಕಾರುಗಳ ಬಿಡುಗಡೆಯಾಗಿ ಬೃಹತ್ ಯೋಜನೆಗೆ ರೂಪಿಸುತ್ತಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಐಯಾನಿಕ್ 5 ಕಾರು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಚಾರ್ಜ್‌ಗೆ ಗರಿಷ್ಠ ಮೈಲೇಜ್ ಹಿಂದಿಗಿರುಗಿಸಲಿದ್ದು, ಯಎಸ್ ಎನ್ವಿರೋನ್ಮೆಂಟ್ ಪ್ರೊಟೆಕ್ಷನ್ ಎಜೆನ್ಸಿ(EPA) ಸಂಸ್ಥೆಯು ನೀಡಿರುವ ಪ್ರಮಾಣ ಪತ್ರದಲ್ಲಿ ಹೊಸ ಕಾರಿ ಅಧಿಕೃತ ಮೈಲೇಜ್ ಪ್ರಮಾಣವು ಪ್ರತಿ ಚಾರ್ಜ್‌ಗೆ 488 ಕಿ.ಮೀ ಆಗಿದೆ.

Most Read Articles

Kannada
English summary
Top 5 cars expected to be launched in october details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X