ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗವು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಅತಿ ಹೆಚ್ಚು ಜನಪ್ರಿಯವಾದ ಮತ್ತು ಹೆಚ್ಚು ಪೈಪೋಟಿಯಿಂದ ಕೂಡಿದ ವಿಭಾಗವಾಗಿದೆ. ಬಹುತೇಕ ಎಲ್ಲಾ ಜನಪ್ರಿಯ ಕಾರು ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ಈ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿವೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಹೊಸ ಕಾರನ್ನು ಖರೀದಿಸಲ ಬಯಸುವ ಗ್ರಾಹಕರು ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅತ್ಯುತ್ತಮ ಪೀಚರ್ಸ್, ಪ್ರಾಯೋಗಿಕತೆ, ಕಾರ್ಯಕ್ಷಮತೆ ಮತ್ತು ಹೆಚ್ಚಿನ ಸ್ಪೇಸ್ ನಿಂದ ಕೂಡಿರುತ್ತದೆ. ಈ ಕಾರಣದಿಂದ ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಗಳು ಹೆಚ್ಚು ಜನಪ್ರಿಯತೆಗಳಿಸುತ್ತಿದೆ, ಇನ್ನು ಸಣ್ಣ ಕಾರುಗಳಿಂದ ಕಾಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಸೀಟ್ ಎತ್ತರ ಇರುವುದರಿಂದ ಲಾಂಗ್ ರೈಡ್ ತೆರಳಲು ಉತ್ತಮವಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಇನ್ನು ಟರ್ಬೋಚಾರ್ಜ್ಡ್ ಪೆಟ್ರೋಲ್ ಇಂಜಿನ್‌ಗಳೊಂದಿಗೆ ಬರುವ ಕಾಂಪ್ಯಾಕ್ಟ್ ಎಸ್‍ಯುವಿಗಳು ಉತ್ತಮ ಪವರ್ ಮತ್ತು ಉತ್ತಮ ಡ್ರೈವ್ ಅನುಭವವನ್ನು ನೀಡುತ್ತದೆ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳನ್ನು ಹೊಂದಿರುವ ಟಾಪ್ 5 ಕಾಂಪ್ಯಾಕ್ಟ್ ಎಸ್‌ಯುವಿಗಳ ಪಟ್ಟಿ ಇಲ್ಲಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಟಾಟಾ ನೆಕ್ಸಾನ್

ಈ ಟಾಟಾ ನೆಕ್ಸಾನ್ ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ.ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ನೆಕ್ಸಾನ್ ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನವು ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಹ್ಯುಂಡೈ ವೆನ್ಯೂ

ಹ್ಯುಂಡೈ ವೆನ್ಯೂ ತನ್ನ ವಿಭಾಗದಲ್ಲಿ ಜನಪ್ರಿಯ ಆಯ್ಕೆಯಾಗಿದೆ ಮತ್ತು ಅನೇಕ ಪ್ರಮಾಣಿತ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ನೆಕ್ಸಾನ್‌ಗಿಂತ ಭಿನ್ನವಾಗಿ, ಹುಂಡೈ ವೆನ್ಯೂ ಎರಡು ಪೆಟ್ರೋಲ್ ಮತ್ತು ಒಂದು ಡೀಸೆಲ್ ಎಂಜಿನ್‌ನೊಂದಿಗೆ ಬರುತ್ತದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಹುಂಡೈ ವೆನ್ಯೂನಲ್ಲಿನ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 1.0-ಲೀಟರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118.35 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 3 ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ - 7-ಸ್ಪೀಡ್ DCT, 6-ಸ್ಪೀಡ್ MT ಮತ್ತು 6-ಸ್ಪೀಡ್ IMT ಯೊಂದಿಗೆ ಜೋಡಿಸಲಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಈ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ. ಹ್ಯುಂಡೈ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವೆನ್ಯೂ ಮಾದರಿಯಲ್ಲಿ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಇದು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಿಂತಲೂ ಹೆಚ್ಚಿನ ಪರ್ಫಾಮೆನ್ಸ್ ಮತ್ತು ತಾಂತ್ರಿಕವಾಗಿ ಬಲಿಷ್ಠ ಕಾರು ಮಾದರಿಯಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಮಹೀಂದ್ರಾ ಎಕ್ಸ್‌ಯುವಿ 300

ಮಹೀಂದ್ರಾ ಎಕ್ಸ್‌ಯುವಿ 300 ಎಸ್‍ಯುವಿ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದೆ. ಇದರ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 200 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು1.5 ಲೀಟರ್ ಆಯಿಲ್ ಬರ್ನರ್ ಎಂಜಿನ್ 117 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಹೆಚ್ಚು ಸುರಕ್ಷಾ ಫೀಚರ್ಸ್ ಹೊಂದಿರುವ ಎಕ್ಸ್‌ಯುವಿ300 ಎಸ್ಯುವಿಯು ಅತಿ ಹೆಚ್ಚು ಅಂಕಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್ 5 ಸ್ಟಾರ್ ರೇಟಿಂಗ್ ಪಡೆದ ಮೊದಲ ಬಜೆಟ್ ಕಾರು ಮಾದರಿಯಾಗಿದೆ. ಪ್ರತಿ ಹೊಸ ಕಾರು ಮಾದರಿಗಳಿಗೂ ಪ್ರಯಾಣಿಕರ ಸುರಕ್ಷಾ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಕಿಯಾ ಸೊನೆಟ್

ಕಿಯಾ ಸೊನೆಟ್ ಅನೇಕ ಗುಣಮಟ್ಟದ ವೈಶಿಷ್ಟ್ಯಗಳೊಂದಿಗೆ ಅತ್ಯಂತ ಆಕರ್ಷಕವಾಗಿ ಕಾಣುವ ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ. ಅದರ ಹೊರತಾಗಿ, ಕಿಯಾ ಸೊನೆಟ್ ಹುಂಡೈ ವೆನ್ಯೂ ಎಸ್‌ಯುವಿಯಂತಹ ಅದೇ ಪವರ್‌ಟ್ರೇನ್ ಆಯ್ಕೆಗಳನ್ನು ಬಳಸುತ್ತದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಈ ಕಿಯಾ ಸೊನೆಟ್ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹ್ಯುಂಡೈ ವೆನ್ಯೂಗಿಂತ ಭಿನ್ನವಾಗಿ, ಕಿಯಾ ಈ ಎಂಜಿನ್‌ನೊಂದಿಗೆ ಕೇವಲ ಎರಡು ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡುತ್ತದೆ - 6-ಸ್ಪೀಡ್ ಕ್ಲಚ್‌ಲೆಸ್ iMT ಮ್ಯಾನುವಲ್ ಟ್ರಾನ್ಸ್‌ಮಿಷನ್ ಅಥವಾ ಕ್ವಿಕ್-ಶಿಫ್ಟಿಂಗ್ 7-ಸ್ಪೀಡ್ DCT ಗೇರ್‌ಬಾಕ್ಸ್ ಅನ್ನು ನೀಡಲಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ, 6-ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ವೆಹಿಕಲ್ ಸ್ಟ್ಯಾಬಿಲಿಟಿ ಮ್ಯಾನೆಜ್‌ಮೆಂಟ್(ವಿಎಸ್ಎಂ), ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್, ಬ್ರೇಕ್ ಅಸಿಸ್ಟ್, ಎಮರ್ಜೆನ್ಸಿ ಸ್ಟಾಪ್ ಸಿಗ್ನಲ್, ಇಂಪ್ಯಾಕ್ಟ್ ಸೆನ್ಸಾರ್ ಆಟೋ ಡೋರ್ ಅನ್‌ಲಾಕ್, ಸ್ಪೀಡ್-ಸೆನ್ಸಿಂಗ್ ಆಟೋ ಡೋರ್ ಲಾಕ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೊಲ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಅನ್ನು ನೀಡಲಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಸೊನೆಟ್ ಎಸ್‍ಯುವಿ ಒಳಭಾಗದಲ್ಲೂ ಕೂಡಾ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ನೀಡಲಾಗಿದೆ. ಇದರಲ್ಲಿ ಮುಂಭಾಗದಲ್ಲಿ ವೆಂಟಿಲೆಟೆಡ್ ಲೆದರ್ ಸೀಟುಗಳು, ತ್ರಿ ಸ್ಪೋಕ್ ಡಿ ಕಟ್ ಸ್ಟೀರಿಂಗ್ ವೀಲ್ಹ್ ಜೊತೆ ಮೌಂಟೆಡ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಕನೆಕ್ಟಿಟಿಯನ್ನು ಹೊಂದಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ನಿಸ್ಸಾನ್ ಮಾಗ್ನೈಟ್

ನಿಸ್ಸಾನ್ ಮಾಗ್ನೈಟ್ ಭಾರತದಲ್ಲಿ ನೀವು ಖರೀದಿಸಬಹುದಾದ ಅತ್ಯಂತ ಕೈಗೆಟುಕುವ ಸಬ್-4ಮೀಟರ್ ಎಸ್‍ಯುವಿಗಳಲ್ಲಿ ಒಂದಾಗಿದೆ ಮತ್ತು ಎಸ್‍ಯುವಿ ಎರಡು ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಈ ನಿಸ್ಸಾನ್ ಮ್ಯಾಗ್ನೈಟ್‌ನಲ್ಲಿರುವ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 98.63 ಬಿಹೆಚ್‌ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಟ್ರಾನ್ಸ್ಮಿಷನ್ ಅಥವಾ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳೊಂದಿಗೆ ಟಾಪ್-5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು..

ಈ ಎಸ್‍ಯುವಿಯಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

Article Published On: Friday, May 6, 2022, 19:59 [IST]
English summary
Top 5 compact suvs with turbocharged petrol engines find here all details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+