Just In
Don't Miss!
- Movies
Prakruti K Prasad:'ಬೆಟ್ಟದ ಹೂ'ನಲ್ಲಿ ಮಾಲಿನಿ ಧರಿಸಿದ್ದ ಸೀರೆಗಳು ಹರಾಜು.. ಬೇಕಿದ್ರೆ ಹೀಗೆ ಸಂಪರ್ಕಿಸಿ!
- News
ಓಲಾದಲ್ಲಿ ಎಸಿಯಿಲ್ಲ ಎಂದು 15,000 ಪರಿಹಾರ ಪಡೆದ ಬೆಂಗಳೂರಿನ ಉದ್ಯಮಿ, ವಿವರಗಳು
- Sports
Ind vs NZ1st T20: ವಾಶಿಂಗ್ಟನ್ 'ಸುಂದರ' ಆಟ ವ್ಯರ್ಥ: ಭಾರತಕ್ಕೆ ಮೊದಲ ಪಂದ್ಯದಲ್ಲೇ ಸೋಲಿನ ಆಘಾತ
- Lifestyle
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಪಾರುಪತ್ಯ ಮುಂದುವರೆಸಿದ ಟಾಟಾ ಮೋಟಾರ್ಸ್
ಭಾರತದಲ್ಲಿ ಇಂಧನ ಬೆಲೆ ಗಗನಕ್ಕೇರಿದೆ. ಇದರಿಂದ ಪಾರಾಗಲು ಹೆಚ್ಚಿನ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ. ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯು ಪ್ರತಿದಿನ ಹೆಚ್ಚಾಗುತ್ತಿದೆ.

ಇದರ ನಡುವೆ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತಿದೆ. ಇದರೊಂದಿಗೆ ಹಲವು ಎಲೆಕ್ಟ್ರಿಕ್ ಬ್ರ್ಯಾಂಡ್ ಗಳು ಕೂಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆಗೊಳಿಸುತ್ತಿದೆ. ಇನ್ನು ಈಗಾಗಲೇ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಾಗಿದೆ. ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳು ಉತ್ತಮ ಬೇಡಿಕೆಯನ್ನು ಮಾರಾಟವಾಗುತ್ತಿದೆ. ಕಳೆದ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳ ಮಾಹಿತಿ ಇಲ್ಲಿದೆ.

ಟಾಟಾ ಟಿಗೋರ್ ಇವಿ / ಟಾಟಾ ನೆಕ್ಸಾನ್ ಇವಿ
ಕಳೆದ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ತನ್ನ ಟಿಗೋರ್ ಮತ್ತು ನೆಕ್ಸಾನ್ ಇವಿ ಮಾದರಿಗಳ 2,831 ಯುನಿಟ್ ಗಳನ್ನು ಮಾರಾಟ ಮಾಡುವ ಮೂಲಕ ಎಲೆಕ್ಟ್ರಿಕ್ ಪ್ಯಾಸೆಂಜರ್ ಕಾರು ವಿಭಾಗದಲ್ಲಿ ಪ್ರಾಬಲ್ಯವನ್ನು ಮುಂದುವರೆಸಿದೆ. ಇನ್ನು 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಟಾಟಾ ಕಂಪನಿಯು 893 ಯೂನಿಟ್ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.217 ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ.

ಇದಲ್ಲದೆ ತಿಂಗಳಿನಿಂದ ತಿಂಗಳ ಮಾರಾಟದ ಅಂಕಿಅಂಶಗಳು ಹಬ್ಬದ ಸೀಸನ್‌ಗೆ ಮುಂಚಿತವಾಗಿ ಸ್ವಲ್ಪಮಟ್ಟಿಗೆ ಏರಿಕೆಯಾಗಿದ್ದು, 2022ರ ಆಗಸ್ಟ್ ತಿಂಗಳಿನಲ್ಲಿ 2,765 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 66 ಯುನಿಟ್‌ಗಳು ಹೆಚ್ಚು ಮಾರಾಟವಾಗಿವೆ.

ಸ್ಟ್ಯಾಂಡರ್ಡ್ ನೆಕ್ಸಾನ್ ಇವಿ ಮಾದರಿಗಿಂತಲೂ ಅತ್ಯಧಿಕ ರೇಂಜ್ ನೀಡುವ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಕಾರು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಲಾಗಿದೆ. ಇದರಲ್ಲಿ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

ಇನ್ನು 3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಒಂದೇ ವೇಳೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯನ್ನು ಟಾಟಾ ಪವರ್ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡುವುದಾದರೆ ಸೊನ್ನೆಯಿಂದ ಶೇ.80 ಚಾರ್ಜ್ ಮಾಡಲು ಕೇವಲ 50 ನಿಮಿಷ ತೆಗೆದುಕೊಳ್ಳಲಿದ್ದು, ಹೋಂ ಚಾರ್ಜರ್ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ನೀಡುತ್ತದೆ.

ಈ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರೋಡ್ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಪಡೆದುಕೊಳ್ಳಬಹುದು.

ಎಂಜಿ ಜೆಡ್ಎಸ್ ಇವಿ
ಮತ್ತೊಂದೆಡೆ ಎಂಜಿ ಮೋಟಾರ್ ಕಂಪನಿಗೆ ಸ್ವಲ್ಪ ಸಮಯದವರೆಗೆ ಸ್ಥಿರವಾದ ಮಾರಾಟ ಅಂಕಿಅಂಶಗಳನ್ನು ಇರಿಸಿಕೊಳ್ಳಲು ಸಾಧ್ಯವಾಗಿದೆ. ಕಳೆದ ತಿಂಗಳಿನಲ್ಲಿ ಎಂಜಿ ಮೋಟಾರ್ ತನ್ನ ಜೆಡ್ಎಸ್ ಇವಿ ಮಾದರಿಯ 280 ಯುನಿಟ್ ಗಳನ್ನು ಮಾರಾಟ ಮಾಡಲು ಯಶಸ್ವಿಯಾಗಿದೆ.

ಮಹೀಂದ್ರಾ ಇವೆರಿಟೊ
ಈ ಮಹೀಂದ್ರಾ ಇವೆರಿಟೊ ಮಹೀಂದ್ರಾಗೆ ಸಮಂಜಸವಾದ ಯಶಸ್ವಿ ಎಲೆಕ್ಟ್ರಿಕ್ ಪ್ರಯಾಣಿಕ ಕಾರು. ಕಳೆದ ತಿಂಗಳಿನಲ್ಲಿ ಮಹೀಂದ್ರಾ ಎಲೆಕ್ಟ್ರಿಕ್ ಭಾರತದಲ್ಲಿ 112 ಯುನಿಟ್ ಇವೆರಿಟೊ ಎಲೆಕ್ಟ್ರಿಕ್ ಸೆಡಾನ್‌ಗಳನ್ನು ಮಾರಾಟ ಮಾಡಿತು, ಇದು ವರ್ಷಕ್ಕೆ 489.4 ಪ್ರತಿಶತದಷ್ಟು ಮಾರಾಟದ ಬೆಳವಣಿಗೆಯನ್ನು ಸಾಧಿಸಿದೆ.

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ
ಈ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದ ಅಂಕಿಅಂಶಗಳು ಪ್ರಭಾವಶಾಲಿಯಾಗಿಲ್ಲ. ಕಂಪನಿಯು ಕಳೆದ ತಿಂಗಳಿನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಎಸ್‌ಯುವಿಯ 74 ಯೂನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದರಿಂದ ಮಾದರಿಯು ಬೆಳವಣಿಗೆಯ ಲಕ್ಷಣಗಳನ್ನು ತೋರಿಸಲು ಸಮರ್ಥವಾಗಿದೆ, ಇದು 957 ಪ್ರತಿಶತಕ್ಕಿಂತಲೂ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ.

ಬಿವೈಡಿ ಇ6
ಭಾರತದಲ್ಲಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಚೀನಾದ ವಾಹನ ತಯಾರಕರ ಮೊದಲ ಪ್ರಯತ್ನವಾಗಿದೆ. ಇಲ್ಲಿಯವರೆಗೆ ಈ ಮಾದರಿಯು ಅನೇಕರನ್ನು ಆಕರ್ಷಿಸಿದೆ ಮತ್ತು ಕಂಪನಿಯು ಕಳೆದ ತಿಂಗಳಿನಲ್ಲಿ ಈ ಬಿವೈಡಿ ಇ6 ಮಾದರಿಯ 63 ಯುನಿಟ್ ಗಳನ್ನು ಮಾರಾಟ ಮಾಡಲು ಯಶಸ್ವಿಯಾಗಿದೆ.