ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ದುಬಾರಿ ಇಂಧನಗಳ ಪರಿಣಾಮ ಹೊಸ ಕಾರು ಖರೀದಿದಾರರು ಹೆಚ್ಚು ಮೈಲೇಜ್ ಪ್ರೇರಿತ ಸಿಎನ್‌ಜಿ ಕಾರುಗಳತ್ತ ಮುಖ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಉತ್ಪಾದನಾ ಕಂಪನಿಗಳು ಸಹ ಹೆಚ್ಚು ಮೈಲೇಜ್ ಪ್ರೇರಿತ ಸಿಎನ್‌ಜಿ ಮಾದರಿಗಳನ್ನು ಪರಿಚಯಿಸುತ್ತಿವೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಸಿಎನ್‌ಜಿ ಕಾರಗಳ ಮಾರಾಟದಲ್ಲಿ ಮಾರುತಿ ಸುಜುಕಿ ಕಂಪನಿಯು ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಮಾರುತಿ ಸುಜುಕಿ ನಿರ್ಮಾಣದ ಪ್ರಮುಖ ಸಿಎನ್‌ಜಿ ಕಾರುಗಳು ಮಾರುಕಟ್ಟೆ ಪ್ರವೇಶಿಸಿದ ನಂತರ ಇತರೆ ಕಾರು ಉತ್ಪಾದನಾ ಕಂಪನಿಗಳು ಸಹ ತಮ್ಮ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ. ಸಿಎನ್‌ಜಿ ಕಾರುಗಳು ಪೆಟ್ರೋಲ್ ಕಾರುಗಳೊಂದಿಗೆ ಸಂಯೋಜನೆ ಹೊಂದಿದ್ದು, ಇವು ಡೀಸೆಲ್ ಕಾರು ಮಾದರಿಗಳಿಂತಲೂ ಹೆಚ್ಚಿನ ಮೈಲೇಜ್ ಜೊತೆಗೆ ಪರಿಸರ ಸ್ನೇಹಿ ಮಾದರಿಗಳಾಗಿವೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಪರ್ಯಾಯ ಇಂಧನ ವ್ಯವಸ್ಥೆಯಾಗಿ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) [Compressed natural gas] ವಾಹನಗಳನ್ನು ಬಳಕೆ ಮಾಡಲಾಗುತ್ತಿದ್ದು, ಇದು ವಾತಾವರಣಕ್ಕೆ ಹೊರಬಿಡುವ ಮಾಲಿನ್ಯದ ಪ್ರಮಾಣವೂ ಕಡಿಮೆಯಾಗಿದ್ದು, ಮಿತವ್ಯಯವೆನಿಸಿಕೊಂಡಿದೆ. ಹೀಗಿದ್ದರೂ ಪೆಟ್ರೋಲ್ ಅಥವಾ ಡೀಸೆಲ್ ಕಾರುಗಳಿಗೆ ಹೋಲಿಸಿದಾಗ ಸಿಎನ್‌ಜಿ ಕಾರುಗಳ ಎಂಜಿನ್ ಕಾರ್ಯಕ್ಷಮತೆ ಸ್ವಲ್ಪ ಕಡಿಮೆಯಾಗಿರಲಿದ್ದು, ಅದೇ ಅದರಲ್ಲಿ ಇಂಧನ ದಕ್ಷತೆ ಹೆಚ್ಚಿರುತ್ತದೆ. ಹಾಗಾದರೆ ಲಭ್ಯವಿರುವ ಹೆಚ್ಚಿನ ಮಟ್ಟದ ಮೈಲೇಜ್ ಪ್ರೇರಿತ ಸಿಎನ್‌ಜಿ ಕಾರುಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಮಾರುತಿ ಸುಜುಕಿ ನ್ಯೂ ಜನರೇಷನ್ ಸೆಲೆರಿಯೊ ಸಿಎನ್‌ಜಿ

ನ್ಯೂ ಜನರೇಷನ್ ಸೆಲೆರಿಯೊ ಕಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮಧ್ಯಂತರದಲ್ಲಿರುವ ವಿಎಕ್ಸ್ಐ ವೆರಿಯೆಂಟ್‌ನಲ್ಲಿ ಸಿಎನ್‌ಜಿ ಮಾದರಿಯು ಖರೀದಿಗೆ ಲಭ್ಯವಿದೆ. ಇದು ಸ್ಟ್ಯಾಂಡರ್ಡ್ ವಿಎಕ್ಸ್ಐ ಪೆಟ್ರೋಲ್ ಮಾದರಿಗಿಂತಲೂ ರೂ. 95 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಸೆಲೆರಿಯೊ ಸಿಎನ್‌ಜಿ ಹೆಚ್ಚು ಮೈಲೇಜ್ ಹಿಂದಿರುಗಿಸುತ್ತದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಹೊಸ ಸೆಲೆರಿಯೊ ಸಿಎನ್‌ಜಿ ಅತ್ಯಂತ ಇಂಧನ ದಕ್ಷತೆಯ ಕಾರು ಎಂದು ಮಾರುತಿ ಸುಜುಕಿ ಹೇಳಿಕೊಂಡಿದ್ದು, ಸೆಲೆರಿಯೊ ಸಿಎನ್‌ಜಿ ಕಾರು ಪ್ರತಿ ಕೆಜಿ ಸಿಎನ್‌ಜಿಗೆ ಗರಿಷ್ಠ 35.60 ಕಿಮೀ ಮೈಲೇಜ್ ನೀಡುತ್ತದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಪೆಟ್ರೋಲ್ ಎಂಜಿನ್ ಹೊಂದಿರುವ ನ್ಯೂ ಜನರೇಷನ್ ಸೆಲೆರಿಯೊ ಕಾರು ಮಾದರಿಯು ಪ್ರತಿ ಲೀಟರ್‌ಗೆ 26.68 ಮೈಲೇಜ್ ಹೊಂದಿದ್ದು, ಸಿಎನ್‌ಜಿ ಮಾದರಿಯು ದೀರ್ಘಾವಧಿಯಲ್ಲಿ ಪೆಟ್ರೋಲ್ ಮಾದರಿಗಿಂತ ಹೆಚ್ಚು ಮಿತವ್ಯಯಕಾರಿಯಾಗಿದೆ. ಸೆಲೆರಿಯೊ ಸಿಎನ‌ಜಿ ಮಾದರಿಯಲ್ಲಿ ಪೆಟ್ರೋಲ್ ಮಾದರಿಯಂತೆಯೇ 1.0-ಲೀಟರ್ ಕೆ10ಸಿ ಡ್ಯುಯಲ್ ಜೆಟ್ ಎಂಜಿನ್ ಹೊಂದಿದ್ದು, ಈ ಎಂಜಿನ್ 57 ಬಿಎಚ್‌ಪಿ ಮತ್ತು 82.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ವ್ಯಾಗನ್ಆರ್ ಸಿಎನ್‌ಜಿ

ಮಾರುತಿ ಸುಜುಕಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟಮಾಡುತ್ತಿರುವ ಅತ್ಯುತ್ತಮ ಮೈಲೇಜ್ ಪ್ರೇರಿತ ಸಿಎನ್‌ಜಿ ಕಾರುಗಳಲ್ಲಿ ಜನಪ್ರಿಯ ವ್ಯಾಗನ್‌ಆರ್ ಹ್ಯಾಚ್‌ಬ್ಯಾಕ್ ಕೂಡಾ ಒಂದಾಗಿದೆ. ಟಾಲ್ ಬಾಯ್ ಎಂದೇ ಪ್ರಸಿದ್ದಿಯಾಗಿರುವ ವ್ಯಾಗನ್ಆರ್ ಮಾದರಿಯು ಪೆಟ್ರೋಲ್ ಮಾದರಿಯೊಂದಿಗೆ ಸಿಎನ್‌ಜಿ ಆಯ್ಕೆಯನ್ನು ಸಹ ಹೊಂದಿದ್ದು, ಇದು ಪ್ರತಿ ಕೆಜಿ ಸಿಎನ್‌ಜಿಗೆ 32.52 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ವ್ಯಾಗನ್‌ಆರ್ ಸಿಎನ್‌ಜಿ ಆವೃತ್ತಿಯು ಇಂಟೆಲಿಜೆಂಟ್ ಇಂಜೆಕ್ಷನ್ ಸಿಸ್ಟಂನೊಂದಿಗೆ ಡ್ಯುಯಲ್ ಇಸಿಯುಗಳನ್ನು ಒಳಗೊಂಡಿದ್ದು, ಇದು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸದ್ಯ ರೂ. 6.86 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಆಲ್ಟೊ ಸಿಎನ್‌ಜಿ

ಮಾರುತಿ ಸುಜುಕಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ಜನಪ್ರಿಯ ಕಾರುಗಳನ್ನು ಹೊಂದಿದ್ದು, ಮಧ್ಯಮ ವರ್ಗದ ಜನರ ಮೆಚ್ಚಿಗೆಗೆ ಕಾರಣವಾಗಿರುವ ಮಾರುತಿ ಸುಜುಕಿ ಗ್ರಾಹಕರ ಬೇಡಿಕೆಯೆಂತೆ ಕಾರು ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ. ಸದ್ಯ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಕಂಪನಿಯು ಪೆಟ್ರೋಲ್ ಮತ್ತು ಸಿಎನ್‌ಜಿ ಮಾದರಿಗಳ ಮೇಲೆ ಹೆಚ್ಚಿನ ಗಮನಹರಿಸಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಮಾರುತಿ ಸುಜುಕಿ ಸಿಎನ್‌ಜಿ ಕಾರುಗಳಲ್ಲಿ ಆಲ್ಟೊ ಸಿಎನ್‌ಜಿ ಕಾರು ಕೂಡಾ ಹೆಚ್ಚಿನ ಬೇಡಿಕೆ ಹೊಂದಿದ್ದು, ಇದು ಮ್ಯಾನುವಲ್ ಮಾದರಿಯೊಂದಿಗೆ ಪ್ರತಿ ಕೆಜಿ ಸಿಎನ್‌ಜಿಗೆ ಗರಿಷ್ಠ 31.59 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. 0.8-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯೊಂದಿಗೆ ಇದು 48 ಬಿಹೆಚ್‍ಪಿ ಮತ್ತು 69 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಟಿಗೋರ್ ಮತ್ತು ಟಿಯಾಗೋ ಸಿಎನ್‌ಜಿ

ಟಾಟಾ ಮೋಟಾರ್ಸ್ ಕಂಪನಿಯು ಟಿಯಾಗೋ ಮತ್ತು ಟಿಗೋರ್ ಕಾರು ಮಾದರಿಗಳ ಸಿಎನ್‌ಜಿ ಆವೃತ್ತಿಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಟಿಯಾಗೋ ಸಿಎನ್‌ಜಿ ಹ್ಯಾಚ್‌ಬ್ಯಾಕ್ ಮಾದರಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಪ್ಲಸ್ ವೆರಿಯೆಂಟ್ ಹೊಂದಿದ್ದರೆ ಟಿಗೋರ್ ಸಿಎನ್‌ಜಿ ಕಂಪ್ಯಾಕ್ಟ್ ಸೆಡಾನ್ ಮಾದರಿಯು ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ವೆರಿಯೆಂಟ್‌‌ಗಳಲ್ಲಿ ಖರೀದಿಗೆ ಲಭ್ಯವಿವೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಹೊಸ ಟಿಯಾಗೋ ಸಿಎನ್‌ಜಿ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳು ಸ್ಟ್ಯಾಂಡರ್ಡ್ ಪೆಟ್ರೋಲ್ ಮಾದರಿಗಿಂತಲೂ ರೂ. 1 ಲಕ್ಷದಷ್ಟು ದುಬಾರಿಯಾಗಿದ್ದರೂ ಪರಿಸರ ಸ್ನೇಹಿ ಸಿಎನ್‌ಜಿ ತಂತ್ರಜ್ಞಾನದೊಂದಿಗೆ ಅತ್ಯಧಿಕ ಮೈಲೇಜ್ ಪ್ರೇರಣೆ ಹೊಂದಿವೆ. ಹೊಸ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6,27,900 ದಿಂದ ಟಾಪ್ ಎಂಡ್ ಮಾದರಿಯು ರೂ. 7,79,900 ಬೆಲೆ ಹೊಂದಿದ್ದರೆ ಟಿಗೋರ್ ಸಿಎನ್‌ಜಿ ಆವೃತ್ತಿಯು ಪ್ರಮುಖ ಎರಡು ವೆರಿಯೆಂಟ್‌ಗಳೊಂದಿಗೆ ಆರಂಭಿಕವಾಗಿ ರೂ. 7,84,900 ದಿಂದ ಟಾಪ್ ಎಂಡ್ ಮಾದರಿಯು ರೂ. 8,56,900 ಬೆಲೆ ಹೊಂದಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಹೊಸ ಕಾರುಗಳಲ್ಲಿ ಟಾಟಾ ಕಂಪನಿಯು 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆ ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಕಿಟ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಪೆಟ್ರೋಲ್ ಮಾದರಿಗಿಂತಲೂ ಕಡಿಮೆ ಬಿಎಚ್‌ಪಿ ಉತ್ಪಾದನೆ ಹೊಂದಿದ್ದರೂ ಪ್ರತಿ ಕೆಜಿಗೆ ಸಿಎನ್‌ಜಿ‌ಗೆ 28 ಕಿ.ಮೀ 32 ಕಿ.ಮೀ ಮೈಲೇಜ್‌ ಹಿಂದಿರುಗಿಸುತ್ತವೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಹ್ಯುಂಡೈ ಔರಾ

ಸಿಎನ್‌ಜಿ ಕಾರುಗಳ ವಿಭಾಗದಲ್ಲಿ ಹ್ಯುಂಡೈ ಔರಾ ಮಾದರಿಯು ಕೂಡಾ ಉತ್ತಮ ಬೇಡಿಕೆ ಹೊಂದಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇದು ಮಾರುತಿ ಸುಜುಕಿ ಡಿಜೈರ್ ಸಿಎನ್‌ಜಿ ಮಾದರಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಔರಾ ಮಾದರಿಯಲ್ಲಿ ಹ್ಯುಂಡೈ ಕಂಪನಿಯು ಅಳವಡಿಸಿರುವ ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಕಿಟ್ ಹೊಂದಿದ್ದು, ಇದು ಪ್ರತಿ ಕೆಜಿ ಸಿಎನ್‌ಜಿಗೆ ಗರಿಷ್ಠ 28 ಕಿ.ಮೀ ಮೈಲೇಜ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.88 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Top 5 mileage cng cars in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X