Just In
- 11 hrs ago
ಮಂಗಳೂರಿನಲ್ಲಿರುವ ಒಕಿನಾವ ಇವಿ ಸ್ಕೂಟರ್ ಮಾರಾಟ ಮಳಿಗೆಯಲ್ಲಿ ಅಗ್ನಿ ಅವಘಡ
- 12 hrs ago
ಮ್ಯೂಸಿಕಲ್ ಸ್ಕೂಟರ್ನ ವಿಡಿಯೋ ಹಂಚಿಕೊಂಡು "ಭಾರತದಲ್ಲಿ ಮಾತ್ರ" ಎಂದ ಆನಂದ್ ಮಹೀಂದ್ರಾ
- 14 hrs ago
ಕೋಟಿ ಬೆಲೆಯ ಮರ್ಸಿಡಿಸ್ ಜಿಎಲ್ಎಸ್ ಎಸ್‍ಯುವಿ ಖರೀದಿಸಿದ ನಟ ವರುಣ್ ಧವನ್
- 15 hrs ago
ಮೇ ತಿಂಗಳಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟ ದಾಖಲಿಸಿದ 8 ಮಾರುತಿ ಸುಜುಕಿ ಕಾರುಗಳು
Don't Miss!
- News
ಬಿಬಿಎಂಪಿ ವಾರ್ಡ್ ಮರುವಿಂಗಡಣೆ; ವೆಬ್ಸೈಟ್ನಲ್ಲಿ ಸಿಗಲಿದೆ ಪೂರ್ಣ ಮಾಹಿತಿ
- Lifestyle
Today RashiBhavishya: ಶನಿವಾರದ ದಿನ ಭವಿಷ್ಯ: ವೃಷಭ, ಕುಂಭ, ಮೀನ ರಾಶಿಯ ಉದ್ಯೋಗಿಗಳು ಕಚೇರಿ ಕೆಲಸದ ಮೇಲೆ ಗಮನಹರಿಸಿ
- Sports
ENG vs NZ: ನ್ಯೂಜಿಲೆಂಡ್ ವಿರುದ್ಧ ಸತತ 2ನೇ ಶತಕ ದಾಖಲಿಸಿದ ಜಾನಿ ಬೈಸ್ಟ್ರೋವ್
- Finance
ಈ 220 ಉದ್ಯೋಗಿಗಳಿಗೆ ವಾರ್ಷಿಕ 1 ಕೋಟಿ ರು ಸಂಬಳ, ಯಾವ್ದು ಕಂಪನಿ?
- Movies
ಕಾರ್ತಿಕ್ ಆರ್ಯನ್ಗೆ ಕೋಟಿಗಟ್ಟಲೆ ಮೌಲ್ಯದ ಕಾರು ಉಡುಗೊರೆ ನೀಡಿದ ನಿರ್ಮಾಪಕ!
- Education
CLAT 2022 Result : ಕ್ಲಾಟ್ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲಿ ಪ್ರಕಟ
- Technology
60,000ರೂ.ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಲ್ಯಾಪ್ಟಾಪ್ಗಳು!
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ ಟಾಪ್-5 ಡೀಸೆಲ್ ಕಾರುಗಳಿವು...
ಭಾರತೀಯ ಮಾರುಕಟ್ಟೆಯಲ್ಲಿ ಡೀಸೆಲ್ ಚಾಲಿತ ವಾಹನಗಳು ಹೆಚ್ಚು ಜನಪ್ರಿಯವಾಗಿತ್ತು. .ಆದರೆ ಇಂದಿನ ದಿನಗಳಲ್ಲಿ ಅವುಗಳ ಲಭ್ಯತೆ ಕಡಿಮೆಯಾಗುತ್ತಿದೆ. ವಿವಿಧ ವಾಹನ ತಯಾರಕರು ಡೀಸೆಲ್ ಕಾರುಗಳನ್ನು ಸ್ಥಗಿತಗೊಳಿಸಿದೆ. ಇದಕ್ಕೆ ಪ್ರಮುಖ ಕಾರಣ ಬಿಎಸ್6 ಮಾಲಿನ್ಯ ನಿಯಮವಾಗಿದೆ.

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕೂಡ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಇದರ ನಡುವೆಯೂ ಹಲವಾರು ಜನಪ್ರಿಯ ಕಂಪನಿಗಳ ಡೀಸೆಲ್ ಕಾರುಗಳು ಮಾರಾಟ ಮಾಡುತ್ತಿದೆ. ಭಾರತದಲ್ಲಿ ಇನ್ನೂ ಡೀಸೆಲ್ ಕಾರುಗಳನ್ನು ಆದ್ಯತೆ ನೀಡುವ ಗ್ರಾಹಕರಿದ್ದಾರೆ. ಇಂಧನ ದಕ್ಷತೆಯ ಅಂಕಿಅಂಶಗಳ ಹೊರತಾಗಿ, ಡೀಸೆಲ್ ಕಾರುಗಳು ಅದರ ಬಲವಾದ ಟಾಋಕ್ ನಿಂದ ಗ್ರಾಹಕರ ಗಮನಸೆಳೆಯುತ್ತಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕೈಗೆಟುಕುವ ಟಾಪ್-5 ಡೀಸೆಲ್ ಕಾರುಗಳ ಮಾಹಿತಿ ಇಲ್ಲಿದೆ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್
ಈ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಪ್ರಸ್ತುತ ಭಾರತದಲ್ಲಿ ಅತ್ಯಂತ ಕೈಗೆಟುಕುವ ಡೀಸೆಲ್ ಕಾರು. ಇದಲ್ಲದೆ, ಅದರ ಅತ್ಯುತ್ತಮ ಇಂಧನ ದಕ್ಷತೆಯ ಅಂಕಿಅಂಶಗಳು ಮತ್ತು ಪ್ರಯತ್ನವಿಲ್ಲದ ಡ್ರೈವಿಂಗ್ ಗುಣಲಕ್ಷಣಗಳನ್ನು ಹೊಂದಿದೆ.ಹ್ಯಾಚ್‌ಬ್ಯಾಕ್ ಉತ್ತಮ ನಗರ ಕಾರು.

ಇದರ ಜೊತೆಗೆ, ಹ್ಯುಂಡೈ ಗ್ರ್ಯಾಂಡ್ i10 ನಿಯೋಸ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್ ಜೊತೆಗೆ Apple CarPlay ಮತ್ತು Android Auto, MID ಜೊತೆಗೆ ಡಿಜಿಟಲ್ ಸ್ಪೀಡೋಮೀಟರ್, ಕ್ರೂಸ್ ಕಂಟ್ರೋಲ್, ಕೂಲ್ಡ್ ಗ್ಲೋವ್ ಬಾಕ್ಸ್ ಮತ್ತು ಇನ್ನೂ ಹೆಚ್ಚಿನ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಭಾರತದಲ್ಲಿ ಹ್ಯುಂಡೈ ಗ್ರಾಂಡ್ i10 ನಿಯೋಸ್ ಬೆಲೆ ರೂ 7.22 - 8.51 ಲಕ್ಷ (ಎಕ್ಸ್ ಶೋ ರೂಂ, ಭಾರತ) ನಡುವೆ ಇದೆ.

ಈ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿ 1.2-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 73.7 ಬಿಹೆಚ್‍ಪಿ ಪವರ್ ಮತ್ತು 190 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 5-ಸ್ಪೀಡ್ ಮ್ಯಾನುವಲ್ ಮತ್ತು AMT ಗೇರ್‌ಬಾಕ್ಸ್‌ಗಳ ಆಯ್ಕೆಯೊಂದಿಗೆ ಬರುತ್ತದೆ. ಈ ಕಾರು RAI ಪ್ರಮಾಣೀಕೃತ ಪ್ರಕಾರ 25.1 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇಂಧನ ದಕ್ಷತೆಯ ಅಂಕಿ ಅಂಶದೊಂದಿಗೆ ಹ್ಯಾಚ್‌ಬ್ಯಾಕ್ ತನ್ನ ವಿಭಾಗದಲ್ಲಿ ಹೆಚ್ಚು ಇಂಧನ-ಸಮರ್ಥ ಹ್ಯಾಚ್‌ಬ್ಯಾಕ್ ಆಗಿದೆ.

ಟಾಟಾ ಆಲ್‌ಟ್ರೊಜ್
ಸ್ವದೇಶಿ ಬ್ರಾಂಡ್ ಆಲ್‌ಟ್ರೊಜ್ ಅನ್ನು 2020ರ ಜನವರಿ ತಿಂಗಳಿನಲ್ಲಿ ALFA ARC (ಅಗೈಲ್ ಲೈಟ್ ಫ್ಲೆಕ್ಸಿಬಲ್ ಅಡ್ವಾನ್ಸ್ಡ್) ಆರ್ಕಿಟೆಕ್ಚರ್ ನಿಂದ ಆಧಾರವಾಗಿರುವ ಮೊದಲ ಉತ್ಪನ್ನವಾಗಿ ಪರಿಚಯಿಸಿತು ಮತ್ತು ಇದು ಅತ್ಯಂತ ಆಕರ್ಷಕ ಮತ್ತು ಸುರಕ್ಷಿತ ಕಾರು ಹಣವು ಕೈಗೆಟುಕುವ ಮಾದರಿಯಾಗಿದೆ. ಹ್ಯಾಚ್‌ಬ್ಯಾಕ್ ಬೆಲೆಗ ರೂ 7.42 - 10.15 ಲಕ್ಷ (ಎಕ್ಸ್-ಶೋರೂಂ, ಭಾರತ) ವರೆಗೆ ಇದೆ.

ಈ ಕಾರಿನಲ್ಲಿ 1.5-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಆಗಿದ್ದು, ಈ ಎಂಜಿನ್ 90 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಆಲ್ಟ್ರೋಜ್‌ನ ಡೀಸೆಲ್ ಆವೃತ್ತಿಯು ಇನ್ನೂ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಬರಬೇಕಿದೆ. ಈ ಎಂಜಿನ್ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿರುವ ಟಾಟಾ ಆಲ್ಟ್ರೊಜ್ 25.11 ಕಿಮೀ ಲೀಟರ್ ಮೈಲೇಜ್ ಅನ್ನು ನೀಡುತ್ತದೆ.

ಈ ಟಾಟಾ ಆಲ್‌ಟ್ರೊಜ್ ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಸುರಕ್ಷಿತ ಹ್ಯಾಚ್‌ಬ್ಯಾಕ್ ಆಗಿದೆ. ಇ ಟಾಟಾ ಆಲ್‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೈಲ್‌ಲೈಟ್ ಮತ್ತು ಅಲಾಯ್ ವ್ಹೀಲ್‌ಗಳನ್ನು ಒಳಗೊಂಡಿವೆ.

ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಹುಂಡೈ ಔರಾ
ಹುಂಡೈ ಔರಾ ಕಾರು ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್‌ನ ಸೆಡಾನ್ ರೂಪಾಂತರವಾಗಿದೆ. ಹ್ಯುಂಡೈ ಔರಾ ಗ್ರ್ಯಾಂಡ್ ಐ10 ನಿಯೋಸ್‌ಗಿಂತ ಹೆಚ್ಚಿನ ಬೂಟ್ ಜಾಗವನ್ನು ನೀಡುತ್ತದೆ ಮತ್ತು ಇದು ಉತ್ತಮ ಫ್ಯಾಮಿಲಿ ಕಾರ್ ಆಗಿದೆ.

ಔರಾ ಸೆಡಾನ್‌ನ ಡೀಸೆಲ್ ಆವೃತ್ತಿಯು ಹುಂಡೈ ಗ್ರಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್‌ನ ಅದೇ 1.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು AMT ಗೇರ್‌ಬಾಕ್ಸ್‌ಗಳ ಆಯ್ಕೆಯೊಂದಿಗೆ ಬರುತ್ತದೆ. ಹುಂಡೈ ಔರಾ ಬೆಲೆ ರೂ 7.97 - 9.42 ಲಕ್ಷ (ಎಕ್ಸ್ ಶೋ ರೂಂ, ಭಾರತ) ನಡುವೆ ಇದೆ.

ಈ ಹುಂಡೈ ಔರಾ ಕಾರಿನಲ್ಲಿ ಬೂಮ್‌ಬರ್ಗ್ ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ಸ್, 15-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಎಲ್ಇಡಿ ಟೈಲ್ ಲೈಟ್ಸ್, ಕೀ ಲೆಸ್ ಎಂಟ್ರಿ, 8-0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, ವಾಯ್ಸ್ ರೆಕಗ್ನಿಷನ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು ಲೆದರ್ ವ್ಯಾರ್ಪ್ ಸ್ಟಿರಿಂಗ್ ವ್ಹೀಲ್ ಹೊಂದಿದೆ.

ಹ್ಯುಂಡೈ ಐ20
ಈ ಹುಂಡೈ ಐ20 1.5ಎಲ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ, ಈ ಎಂಜಿನ್ 98.63 ಬಿಹೆಚ್‍ಪಿ ಪವರ್ ಮತ್ತು 98.63 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. , ಎಂಜಿನ್ ಕೇವಲ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ಗೆ ಸ್ಟ್ಯಾಂಡರ್ಡ್ ಆಗಿ ಸಂಯೋಜಿತವಾಗಿದೆ. ಈ ಕಾರಿನ ಬೆಲೆ ರೂ 8.29 - 10.85 ಲಕ್ಷ (ಭಾರತ ಎಕ್ಸ್ ಶೋ ರೂಂ) ನಡುವೆ ಇದೆ.

ಈ ಹ್ಯುಂಡೈ ಐ20 ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೆಚ್ಚು ಸ್ಪೋರ್ಟಿ ಮತ್ತು ಬೋಲ್ಡ್ ಲುಕ್ ಅನ್ನು ಹೊಂದಿದೆ. ಹ್ಯುಂಡೈ ಐ20 ಹ್ಯಾಚ್‌ಬ್ಯಾಕ್ ಕಾರಿನ ಹಿಂದಿನ ಮಾದರಿಯು ಕೂಡ ಆಕರ್ಷಕ ಲುಕ್ ಅನ್ನು ಹೊಂದಿತ್ತು. ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಹ್ಯುಂಡೈ ಐ20 ಗ್ರಾಹಕರನ್ನು ತನ್ನತ ಸೆಳೆಯುವಂತಹ ಆಕರ್ಷಕ ಲುಕ್ ಮತ್ತು ಸ್ಟೈಲಿಶ್ ನಿಂದ ಹೆಚ್ಚು ಜನಪ್ರಿಯವಾಗಿದೆ.

ಇನ್ನು ಈ ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಹೊಂದಿದೆ. ಕಾರಿನ ಪಿಲ್ಲರ್‍ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್‍ನಲ್ಲಿ ಇರುವಂತಹ ಕೆಂಪು ಇಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇಲ್‍ಇಡಿ ಟೇಲ್‍ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಿದೆ.

ಟಾಟಾ ನೆಕ್ಸಾನ್
ಈ ಟಾಟಾ ನೆಕ್ಸಾನ್(Tata Nexon) ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ.

ಈ ಟಾಟಾ ನೆಕ್ಸಾ ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನವು ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ.

ಈ ಕಾರಿನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.