ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಕೋವಿಡ್ ಅಬ್ಬರದ ನಡುವೆಯೂ ಹೊಸ ವಾಹನಗಳ ಮಾರಾಟದಲ್ಲಿ ಪ್ರಮುಖ ಕಾರು ಕಂಪನಿಗಳು ಮುಂಚೂಣಿ ಸಾಧಿಸುತ್ತಿದ್ದು, ಶೀಘ್ರದಲ್ಲಿಯೇ ಗ್ರಾಹಕರ ಬೇಡಿಕೆ ಅನುಸಾರವಾಗಿ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗಾಗಿ ಸಿದ್ದವಾಗುತ್ತಿವೆ. ಫೆಬ್ರವರಿ ತಿಂಗಳಿನಲ್ಲಿ ಪ್ರಮುಖ ಕಾರು ಉತ್ಪಾದನಾ ಕಂಪನಿಗಳ ವಿವಿಧ ಕಾರು ಮಾದರಿಗಳು ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಕಿಯಾ ಕಾರೆನ್ಸ್ ಎಸ್‌ಯುವಿ

ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ್(Carens) ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡಿರುವ ಹೊಸ ಕಾರು ಫೆಬ್ರವರಿ ಎರಡನೇ ವಾರದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಕಾರೆನ್ಸ್ ಹೊಸ ಎಸ್‌ಯುವಿ ಕಾರು ಮಾದರಿಯು ಸೆಲ್ಟೊಸ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಹೊಸ ಕಾರು ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಐಷಾರಾಮಿ ಫೀಚರ್ಸ್ ಮತ್ತು ವಿಶಾಲವಾದ ಒಳಾಂಗಣವನ್ನು ಹೊಂದಿರಲಿದ್ದು, ಹೊಸ ಕಾರು ಎಸ್‌ಯುವಿ ಜೊತೆಗೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯುವ ಎಲ್ಲಾ ವೈಶಿಷ್ಟ್ಯತೆಗಳನ್ನು ಹೊಂದಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಹೊಸ ಕಾರು ಅತ್ಯುತ್ತಮ ಒಳಾಂಗಣ ಸೌಲಭ್ಯದೊಂದಿಗೆ 6 ಸೀಟರ್ ಮತ್ತು 7 ಸೀಟರ್ ಆಸನಗಳ ಆಯ್ಕೆ ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಲಿದೆ. ಹೊಸ ಕಾರು ಮುಂಬರುವ ಫೆಬ್ರುವರಿಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷ ಬೆಲೆ ಹೊಂದಿರಬಹುದಾಗಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಹೊಸ ಕಾರಿನ ಉದ್ದಳತೆಯು ಪ್ರಮುಖ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮವಾಗಿದ್ದು, ಮೂರನೇ ಸಾಲಿನ ಪ್ರಯಾಣಿಕರಿಗೂ ಉತ್ತಮ ಲೆಗ್ ರೂಂ ಒದಗಿಸಲಾಗಿದೆ. ಇದರಿಂದ ಇದು ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯುವ ಎಲ್ಲಾ ವೈಶಿಷ್ಟ್ಯತೆಗಳು ಈ ಕಾರಿನಲ್ಲಿದ್ದು, ಹೊಸ ಕಾರಿನ ಫೀಚರ್ಸ್ ಮತ್ತು ಬಣ್ಣ ಆಯ್ಕೆ ಕಾರಿನ ಆಯ್ಕೆ ಮೌಲ್ಯ ಹೆಚ್ಚಿಸಲಿವೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಸ್ಕೋಡಾ ಸ್ಲಾವಿಯಾ ಸೆಡಾನ್

ಸ್ಕೋಡಾ(Skoda) ಕಂಪನಿಯು ತನ್ನ ಹೊಚ್ಚ ಹೊಸ ಸ್ಲಾವಿಯಾ(Slavia) ಸೆಡಾನ್ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಹೊಸ ಕಾರು ವಿವಿಧ ಎಂಜಿನ್, ಪ್ರೀಮಿಯಂ ಫೀಚರ್ಸ್ ಮತ್ತು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ರ‍್ಯಾಪಿಡ್ ಸೆಡಾನ್ ಸ್ಥಗಿತಗೊಳಿಸಿ ಸ್ಲಾವಿಯಾ ಮಾದರಿಯ ಮಾರಾಟ ಮಾಡಲು ನಿರ್ಧರಿಸಿರುವ ಸ್ಕೋಡಾ ಕಂಪನಿಯು ಹೊಸ ಕಾರನ್ನು ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ ಟಿಎಸ್ಐ ಎಂಜಿನ್ ಆಯ್ಕೆಯೊಂದಿಗೆ ಮಾರಾಟ ಮಾಡಲಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಹೊಸ ಸ್ಲಾವಿಯಾ ಕಾರು ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಮಾರುತಿ ಸುಜುಕಿ ಬಲೆನೊ ಫೇಸ್‌ಲಿಫ್ಟ್

ಮಾರುತಿ ಸುಜುಕಿಯು ತನ್ನ ಜನಪ್ರಿಯ ಬಲೆನೊ ಹ್ಯಾಚ್‌ಬ್ಯಾಕ್ ಮಾದರಿಯ ನವೀಕರಿಸಿದ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದ್ದು, ಫೆಬ್ರವರಿ ಆರಂಭದಲ್ಲಿ ಹೊಸ ಆವೃತ್ತಿಯು ಮಾರುಕಟ್ಟೆ ಪ್ರವೇಶಿಸಲಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಫೇಸ್‌ಲಿಫ್ಟ್ ಮಾದರಿಯು ಪ್ರಸ್ತುತ ಮಾರಾಟದಲ್ಲಿರುವುದಕ್ಕಿಂತ ಹೆಚ್ಚು ಪ್ರಬಲವಾಗಿದ್ದು, ಈ ಬಾರಿ ಫೇಸ್‌ಲಿಫ್ಟ್ ಮಾದರಿಯು ಉತ್ತಮ ಗುಣಮಟ್ಟದ ಬಾಡಿ ಪ್ಯಾನಲ್ ಗಳನ್ನೂ ಹೊಂದಿದೆ. ಜೊತೆಗೆ ಹೊಸ ಕಾರಿನಲ್ಲಿ ಒಳಾಂಗಣ ತಂತ್ರಜ್ಞಾನ ಸೌಲಭ್ಯಗಳನ್ನು ಹೆಚ್ಚಳವಾಗಲಿದ್ದು, ಕನೆಕ್ಟೆಡ್ ಫೀಚರ್ಸ್ ಪ್ರಮುಖ ಆಕರ್ಷಣೆಯಾಗಲಿವೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್

ಬ್ರಿಟಿಷ್ ಕಾರ್ ಬ್ರಾಂಡ್ ಈಗ ತನ್ನ ಜೆಡ್ಎಸ್ ಇವಿ ಮಾದರಿಯನ್ನು ಹಲವು ಮಹತ್ವದ ಬದಲಾವಣೆಗಳೊಂದಿಗೆ ನವೀಕರಿಸಿ ಭಾರತದಲ್ಲಿ ಪರಿಚಯಿಸಲು ಸಿದ್ದವಾಗುತ್ತಿದ್ದು, ನವೀಕರಿಸಿದ ಮಾದರಿಯು ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಪ್ರಸ್ತುತ ಮಾರುಕಟ್ಟೆಯಲ್ಲಿ ಜೆಡ್ಎಸ್ ಇವಿ ಎಸ್‍ಯುವಿಯು ಪ್ರತಿ ಚಾರ್ಜ್‌ಗೆ 419 ಕಿ.ಮೀ ರೇಂಜ್ ಹೊಂದಿದ್ದು, ನವೀಕರಿಸಿದ ಮಾದರಿಯು 500 ಕಿ.ಮೀ ಅಧಿಕ ಮೈಲೇಜ್ ನೀಡುವ ನೀರಿಕ್ಷೆಯಿದೆ. ಜೊತೆಗೆ ಮಾದರಿಯ ಮುಂಭಾಗದ ಡಿಸೈನ್ ಕೂಡಾ ತುಸು ಬದಲಾವಣೆ ಹೊಂದಲಿದ್ದು, ಪ್ರಸ್ತುತ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣುತ್ತದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಲೆಕ್ಸಸ್ ಎನ್ಎಕ್ಸ್ 350ಹೆಚ್ ಎಸ್‍ಯುವಿ

ಐಷಾರಾಮಿ ಕಾರು ತಯಾರಕ ಕಂಪನಿ ಲೆಕ್ಸಸ್ ತನ್ನ ಹೊಸ ಎನ್ಎಕ್ಸ್ 350ಹೆಚ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಲೆಕ್ಸಸ್ ಕಂಪನಿಯು ಹೊಸ ಎಸ್‍ಯುವಿಯ ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಲೆಕ್ಸಸ್ ಹೊಸ ಎನ್ಎಕ್ಸ್ 350ಹೆಚ್ ಎಸ್‍ಯುವಿಯು ಫೆಬ್ರವರಿ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಎಸ್‍ಯುವಿಯು ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್ (TNGA) ಪ್ಲಾಟ್‌ಫಾರ್ಮ್‌ನ GA-K ಆವೃತ್ತಿ ಆಧರಿಸಿ ನಿರ್ಮಾಣಗೊಂಡಿದೆ. ಹೊಸ ಲೆಕ್ಸಸ್ ಎನ್ಎಕ್ಸ್ 350ಹೆಚ್ ಎಸ್‍ಯುವಿಯು ಹೊಸ ಬ್ಲ್ಯಾಕ್ಡ್-ಔಟ್ ಸ್ಪಿಂಡಲ್ ಗ್ರಿಲ್ ಮತ್ತು ಎಲ್-ಆಕಾರದ DRL ಗಳನ್ನು ಒಳಗೊಂಡಿರುವ ನಯವಾದ ಹೆಡ್‌ಲ್ಯಾಂಪ್‌ಗಳೊಂದಿಗೆ ಅಗ್ರೇಸಿವ್ ಮುಂಭಾಗದ ವಿನ್ಯಾಸವನ್ನು ಹೊಂದಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಟೊಯೊಟಾ ಹೈಲಕ್ಸ್ ಪಿಕ್ಅಪ್

ಟೊಯೊಟಾ ಕಂಪನಿಯು ತನ್ನ ಹೊಸ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಪಿಕ್ಅಪ್ ಮುಂಬರುವ ಫೆಬ್ರವರಿ ಕೊನೆಯಲ್ಲಿ ಇಲ್ಲವೇ ಮಾರ್ಚ್ ಮೊದಲ ವಾರದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳಿವು!

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೈಲಕ್ಸ್ ಮಾದರಿಯು ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ.

Most Read Articles

Kannada
English summary
Top 5 new cars that will launch in next month february
Story first published: Friday, January 21, 2022, 18:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X