ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಆಧುನಿಕ ಕಾಲಘಟ್ಟದಲ್ಲಿ ಪ್ರಯಾಣಿಕರ ಬಳಕೆಯ ವಾಹನಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿದ್ದು, ಇದರ ಭಾಗವಾಗಿ ಕಾರುಗಳ ಸುರಕ್ಷತಾ ಗುಣಮಟ್ಟವನ್ನು ಸಾಕಷ್ಟು ಸುಧಾರಿಸಲಾಗುತ್ತಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಪ್ರಯಾಣಿಕ ಸುರಕ್ಷತೆ ಹೆಚ್ಚಿಸಲು ಯುರೋಪ್ ಎನ್‌ಸಿಎಪಿ ಮಾದರಿಯಲ್ಲಿ ಭಾರತೀಯ ಪ್ರಯಾಣಿಕ ಕಾರುಗಳಿಗೂ ಗರಿಷ್ಠ ಭದ್ರತೆಯನ್ನು ಖಾತ್ರಿಪಡಿಸಲು ಹೊರಟಿರುವ ಭಾರತ ಸರ್ಕಾರವು 2019ರ ಅಕ್ಟೋಬರ್ 1ರಿಂದ ಪ್ರತಿ ಕಾರಿಗೂ ನ್ಯೂ ಕಾರ್ ಅಸ್ಸೆಸ್ಮೆಂಟ್ ಪ್ರೋಗ್ರಾಂ (ಎನ್‌ಸಿಎಪಿ) ಕಡ್ಡಾಯಗೊಳಿಸಲಿದ್ದು, ಸುರಕ್ಷತೆ ಇಲ್ಲದ ಕಾರುಗಳ ಮಾರಾಟಕ್ಕೆ ಹಂತ-ಹಂತ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಕಾರುಗಳ ಗುಣಮಟ್ಟವನ್ನು ಸುಧಾರಿಸಲು ಪ್ರತಿಯೊಂದು ಕಂಪನಿಯು ಕೂಡಾ ಬದ್ದತೆ ತೋರುತ್ತಿದ್ದು, ಇದು ವಾಹನಗಳ ಬೆಲೆಗಳಲ್ಲಿ ಸ್ವಲ್ಪ ದುಬಾರಿ ಎನಿಸಿದರೂ ಪ್ರಯಾಣಿಕರ ಸುರಕ್ಷತೆಯನ್ನು ಗಮನಿಸಿದಾಗ ಇದು ಅತ್ಯುತ್ತಮ ಕ್ರಮವೆನಿಸುತ್ತಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ ಅನೇಕ ಕಾರು ಮಾದರಿಗಳು ಮಾರಾಟಕ್ಕೆ ಲಭ್ಯವಿದ್ದರೂ ಸಹ ದುಬಾರಿ ಬೆಲೆಗಳಿಂದಾಗಿ ಮಧ್ಯಮ ವರ್ಗದ ಗ್ರಾಹಕರು ಅವುಗಳನ್ನು ಖರೀದಿ ಮಾಡುವುದು ಕಷ್ಟಸಾಧ್ಯ. ಹೀಗಾಗಿ ಬಜೆಟ್ ಬೆಲೆಯಲ್ಲೂ ಕೆಲವು ಕಂಪನಿಗಳು ಅತ್ಯುತ್ತಮ ಸುರಕ್ಷಾ ಫೀಚರ್ಸ್ ಹೊಂದಿರುವ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುವಲ್ಲಿ ಯಶಸ್ವಿಯಾಗುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಅತ್ಯುತ್ತಮ ಸುರಕ್ಷಾ ಕಾರುಗಳ ಪಟ್ಟಿಯಲ್ಲಿ ಯಾವೆಲ್ಲಾ ಕಾರಗಳಿವೆ ಎನ್ನುವುದನ್ನು ಇಲ್ಲಿ ತಿಳಿಯೋಣ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಕಳೆದ ಒಂದು ದಶಕದ ಅವಧಿಯಲ್ಲಿ ಪ್ರಯಾಣಿಕ ಕಾರುಗಳಲ್ಲಿ ಹಲವಾರು ಸುರಕ್ಷಾ ಮಾನದಂಡಗಳು ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ವಾಹನಗಳಲ್ಲಿ ಗರಿಷ್ಠಿ ಸುರಕ್ಷತೆಗಾಗಿ ಅಂತರ್‌ರಾಷ್ಟ್ರೀಯ ಮಾನದಂಡಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಹೀಗಾಗಿ ಪ್ರಯಾಣಿಕ ವಾಹನಗಳ ಸುರಕ್ಷತೆ ಕುರಿತು ಜಾಗತಿಕ ಮಟ್ಟದ ಅಭಿಯಾನ ಕೈಗೊಂಡಿರುವ ಗ್ಲೊಬಲ್ ಎಸ್‌ಸಿಎಪಿ ಸಂಸ್ಥೆಯು ಭಾರತದಲ್ಲಿ #SAFERCARSFORINDIA ಅಭಿಯಾನದಡಿ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸುತ್ತಿದ್ದು, ಕ್ರ್ಯಾಶ್ ಟೆಸ್ಟಿಂಗ್ ಮೂಲಕ ರೇಟಿಂಗ್ಸ್ ನೀಡುತ್ತಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸುರಕ್ಷಾ ಕಾರು ಮಾದರಿಯಾಗಿ ಗುರುತಿಸಲು ಕನಿಷ್ಠ 3 ಅಂಕಗಳ ಅವಶ್ಯಕತೆಯಿದ್ದು, 5 ಅಂಕಗಳನ್ನು ಗಿಟ್ಟಿಸಿಕೊಂಡಿರುವ ಕಾರುಗಳು ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿವೆ. 5 ಅಂಕಗಳನ್ನು ಪಡೆಯುವಲ್ಲಿ ಬಜೆಟ್ ಬೆಲೆಯ ಕಾರುಗಳು ಸಹ ಯಶಸ್ವಿಯಾಗಿದ್ದು, ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಗಳಾದ ಮಹೀಂದ್ರಾ ಮತ್ತು ಟಾಟಾ ಅಗ್ರಸ್ಥಾನದಲ್ಲಿವೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಟಾಟಾ ಪಂಚ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ನಂತರ ಎಲ್ಲಾ ಕಾರು ಮಾದರಿಗಳಲ್ಲೂ ಗರಿಷ್ಠ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಳಿಸಿದ್ದು,ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷಾ ಫೀಚರ್ಸ್ ಅಳವಡಿಸಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ ಹೊಸ ಪಂಚ್ ಕಾರು 17 ಅಂಕಗಳಿಗೆ 16.45 ಅಂಕಗಳೊಂದಿಗೆ ಗರಿಷ್ಠ 5 ಸ್ಟಾರ್ ರೇಂಟಿಂಗ್ಸ್ ಪಡೆದುಕೊಂಡರೆ ಮಕ್ಕಳ ಸುರಕ್ಷತೆಯಲ್ಲಿ 49 ಅಂಕಗಳಿಗೆ 40.89 ಅಂಕಗಳೊಂದಿಗೆ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ. ಈ ಮೂಲಕ ಪಂಚ್ ಕಾರು ಒಟ್ಟು 66 ಅಂಕಗಳಿಗೆ 57.34 ಅಂಕಗಳನ್ನು ಪಡೆದುಕೊಂಡಿದ್ದು, ಸುರಕ್ಷಿತ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಮಹೀಂದ್ರಾ ಎಕ್ಸ್‌ಯುವಿ300

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಅಂಶಗಳನ್ನು ಹೊಂದಿರುವ ಎಕ್ಸ್‌ಯುವಿ300 ಮಾದರಿಯು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಂಡಿದ್ದು, ಬಜೆಟ್ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಕಾರು ಮಾದರಿಯಾಗಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ ಎಕ್ಸ್‌ಯುವಿ300 ಕಾರು 17 ಅಂಕಗಳಿಗೆ 16.42 ಅಂಕಗಳೊಂದಿಗೆ ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡರೆ ಮಕ್ಕಳ ಸುರಕ್ಷತೆಯಲ್ಲಿ 49 ಅಂಕಗಳಿಗೆ 37.44 ಅಂಕಗಳೊಂದಿಗೆ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ. ಈ ಮೂಲಕ ಎಕ್ಸ್‌ಯುವಿ300 ಕಾರು ಒಟ್ಟು 66 ಅಂಕಗಳಿಗೆ 53.86 ಅಂಕಗಳನ್ನು ಪಡೆದುಕೊಂಡಿದ್ದು, ಸುರಕ್ಷಿತ ಕಾರುಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಟಾಟಾ ಆಲ್‌ಟ್ರೊಜ್

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಂಡ ಟಾಟಾ ಕಾರುಗಳಲ್ಲಿ ಆಲ್‌ಟ್ರೊಜ್ ಕೂಡಾ ಪ್ರಮುಖ ಕಾರು ಮಾದರಿಯಾಗಿದ್ದು, ನೆಕ್ಸಾನ್ ಮಾದರಿಯಲ್ಲೇ ಆಲ್‌ಟ್ರೊಜ್ ಕೂಡಾ ಮುಂಭಾಗದ ಪ್ರಯಾಣಿಕರ ಸೇಫ್ಟಿ ವಿಭಾಗದಲ್ಲಿ 5 ಸ್ಟಾರ್ ಮತ್ತು ಚೈಲ್ಡ್ ಸೇಫ್ಟಿ ವಿಭಾಗದಲ್ಲಿ 3 ಸ್ಟಾರ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ ಆಲ್‌ಟ್ರೊಜ್ ಕಾರು 17 ಅಂಕಗಳಿಗೆ 16.13 ಅಂಕಗಳೊಂದಿಗೆ ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡರೆ ಮಕ್ಕಳ ಸುರಕ್ಷತೆಯಲ್ಲಿ 49 ಅಂಕಗಳಿಗೆ 29.00 ಅಂಕಗಳೊಂದಿಗೆ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ. ಈ ಮೂಲಕ ಆಲ್‌ಟ್ರೊಜ್ ಕಾರು ಒಟ್ಟು 66 ಅಂಕಗಳಿಗೆ 45.13 ಅಂಕಗಳನ್ನು ಪಡೆದುಕೊಂಡಿದ್ದು, ಸುರಕ್ಷಿತ ಕಾರುಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಟಾಟಾ ನೆಕ್ಸಾನ್

ಟಾಟಾ ನಿರ್ಮಾಣದ ನೆಕ್ಸಾನ್ ಮಾದರಿಯು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಳ್ಳುವ ಮೂಲಕ ಅತ್ಯುತ್ತಮ ಬಜೆಟ್ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಮುಂಭಾಗದ ಪ್ರಯಾಣಿಕರ ಸೇಫ್ಟಿ ವಿಭಾಗದಲ್ಲಿ 5 ಸ್ಟಾರ್ ಮತ್ತು ಚೈಲ್ಡ್ ಸೇಫ್ಟಿ ವಿಭಾಗದಲ್ಲಿ 3 ಸ್ಟಾರ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ ನೆಕ್ಸಾನ್ ಕಾರು 17 ಅಂಕಗಳಿಗೆ 16.06 ಅಂಕಗಳೊಂದಿಗೆ ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡರೆ ಮಕ್ಕಳ ಸುರಕ್ಷತೆಯಲ್ಲಿ 49 ಅಂಕಗಳಿಗೆ 25.00 ಅಂಕಗಳೊಂದಿಗೆ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ. ಈ ಮೂಲಕ ನೆಕ್ಸಾನ್ ಕಾರು ಒಟ್ಟು 66 ಅಂಕಗಳಿಗೆ 41.06 ಅಂಕಗಳನ್ನು ಪಡೆದುಕೊಂಡಿದ್ದು, ಸುರಕ್ಷಿತ ಕಾರುಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ನಿರ್ಮಾಣದ ಹೊಸ ಕಾರುಗಳು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್‌ಟೆಸ್ಟಿಂಗ್‌ನಲ್ಲಿ ಹೊಸ ದಾಖಲೆಗೆ ಕಾರಣವಾಗುತ್ತಿದ್ದು, ಎಕ್ಸ್‌ಯುವಿ700 ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡುವ 17 ಅಂಕಗಳಲ್ಲಿ 16.03 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ 41.66 ಅಂಕಗಳೊಂದಿಗೆ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಜೊತೆಗೆ ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟಂ ಸಿಸ್ಟಂ ಸೌಲಭ್ಯವನ್ನು ಪ್ರತ್ಯೇಕವಾಗಿ ಪರೀಕ್ಷಿಸಿರುವ ಗ್ಲೊಬಲ್ ಎನ್‌ಸಿಎಪಿ ಸಂಸ್ಥೆಯು ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್ ಮತ್ತು ಪೆಡೆಟ್ರೆಷಿಯನ್ ಪ್ರೊಟೆಕ್ಷನ್ ಸೌಲಭ್ಯಗಳಿಗೆಗಾಗಿ 'ಸೇಫರ್ ಛಾಯ್ಸ್' ಪ್ರಶಸ್ತಿ ನೀಡಿದೆ.

ಕ್ರ್ಯಾಶ್ ಟೆಸ್ಟ್: ಹೊಸ ಪಟ್ಟಿಯಲ್ಲಿರುವ ಟಾಪ್ 5 ಸುರಕ್ಷಿತ ಕಾರುಗಳಿವು..

ಭಾರತದಲ್ಲಿ ಎಕ್ಸ್‌ಯುವಿ700 ಕಾರು ಮಾದರಿಯು 'ಸೇಫರ್ ಛಾಯ್ಸ್' ಪ್ರಶಸ್ತಿ ಪಡೆದ ಮೊದಲ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿ ಪ್ರಯಾಣಿಕರ ಗರಿಷ್ಠ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

Most Read Articles

Kannada
English summary
Top 5 safest cars in india june 2022 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X