ಏಪ್ರಿಲ್ ತಿಂಗಳ ಮಾರಾಟದಲ್ಲಿ ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಎಸ್‌ಯುವಿ ವಿಭಾಗವು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ಜನಪ್ರಿಯ ಮತ್ತು ಹೆಚ್ಚು ಪೈಪೋಟಿಯಿಂದ ಕೂಡಿದ ವಿಭಾಗವಾಗಿದೆ, ಬಹುತೇಕ ಎಲ್ಲಾ ಜನಪ್ರಿಯ ಕಾರು ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ಈ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿವೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಹೊಸ ಕಾರನ್ನು ಖರೀದಿಸಲು ಸೇರುವ ಗ್ರಾಹಕರು ಎಸ್‌ಯುವಿ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಎಸ್‌ಯುವಿ ಮಾದರಿಯು ಅತ್ಯುತ್ತಮ ಪೀಚರ್ಸ್, ಪ್ರಾಯೋಗಿಕತೆ, ಕಾರ್ಯಕ್ಷಮತೆ ಮತ್ತು ಹೆಚ್ಚಿನ ಸ್ಪೇಸ್ ನಿಂದ ಕೂಡಿರುತ್ತದೆ. ಈ ಕಾರಣದಿಂದ ಎಸ್‌ಯುವಿ ಮಾದರಿಗಳು ಹೆಚ್ಚು ಜನಪ್ರಿಯತೆಗಳಿಸುತ್ತಿದೆ, ಇನ್ನು ಸಣ್ಣ ಕಾರುಗಳಿಂದ ಎಸ್‌ಯುವಿಗಳಲ್ಲಿ ಸೀಟ್ ಎತ್ತರ ಇರುವುದರಿಂದ ಲಾಂಗ್ ರೈಡ್ ತೆರಳಲು ಉತ್ತಮವಾಗಿದೆ. ಕಳೆದ ತಿಂಗಳಿನಲ್ಲಿ ಈ ಜನಪ್ರಿಯ ವಿಭಾಗದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-5 ಎಸ್‌ಯುವಿಗಳ ಮಾಹಿತಿ ಇಲ್ಲಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಟಾಟಾ ನೆಕ್ಸಾನ್

ಕಳೆದ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಸ್‌ಯುವಿಯ 13,471 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ತಿಂಗಳಿನಲ್ಲಿ 6,938 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ನೆಕ್ಸಾನ್ ವರ್ಷದಿಂದ ವರ್ಷಕ್ಕೆ 94% ನಷ್ಟು ಬೃಹತ್ ಮಾರಾಟದ ಬೆಳವಣಿಗೆಯನ್ನು ದಾಖಲಿಸಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಈ ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಕಳೆದ ತಿಂಗಳ ಮಾರಾಟದಲ್ಲಿ ಟಾಟಾ ನೆಕ್ಸಾನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನವು ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಈ ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೆಟಾ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹ್ಯುಂಡೈ 2022ರ ಏಪ್ರಿಲ್ ತಿಂಗಳಿನಲ್ಲಿ 12,651 ಕ್ರೆಟಾ ಎಸ್‌ಯುವಿಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ 12,463 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಈ ಎಸ್‍ಯುವಿ ವರ್ಷದಿಂದ ವರ್ಷಕ್ಕೆ 2 ಶೇಕಡಾ ಮಾರಾಟ ಬೆಳವಣಿಗೆಯನ್ನು ವರದಿ ಮಾಡಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಮಾರುತಿ ಸುಜುಕಿ ವಿಟಾರಾ ಬ್ರೆಝಾ

ಕಳೆದ ತಿಂಗಳಿನಲ್ಲಿ ಮಾರುತಿ ಸುಜುಕಿಯು ವಿಟಾರಾ ಬ್ರೆಝಾದ 11,764 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷ ಇದೇ ತಿಂಗಳಿನಲ್ಲಿ 11,220 ಮಾರಾಟ ಮಾಡಿತ್ತು. ಮಾರುತಿ ಸುಜುಕಿ ವಿಟಾರಾ ಬ್ರೆಝಾ ವರ್ಷದಿಂದ ವರ್ಷಕ್ಕೆ ಶೇಕಡಾ 5 ರ ಮಾರಾಟದ ಬೆಳವಣಿಗೆಯನ್ನು ದಾಖಲಿಸಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಟಾಟಾ ಪಂಚ್

ಟಾಟಾ ಮೋಟಾರ್ಸ್‌ನ ಚಿಕ್ಕ ಎಸ್‌ಯುವಿ, ಪಂಚ್ ಕಾರು ಖರೀದಿದಾರರಿಂದ ಅಗಾಧ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಸಣ್ಣ ಎಸ್‌ಯುವಿ ದೇಶದ ಟಾಪ್ 10 ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಸ್ಥಾನಪಡೆಯುವಲ್ಲಿ ಯಶಸ್ವಿಯಾಗಿದೆ. 2022ರ ಏಪ್ರಿಲ್ ತಿಂಗಳಿನ ನೇ ಅತ್ಯುತ್ತಮ ಮಾರಾಟವಾದ ಎಸ್‍ಯುವಿಯಾಗಿದೆ. ಕಳೆದ ತಿಂಗಳು ಪಂಚ್ ಮೈಕ್ರೋ ಎಸ್‍ಯುವಿಯ 10,132 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಈ ಟಾಟಾ ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 1.2-ಲೀಟರ್ ರಿವೊಟ್ರಾನ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಇನ್ನು ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ, ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ.

ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿದ ಟಾಟಾ ನೆಕ್ಸಾನ್

ಹ್ಯುಂಡೈ ವೆನ್ಯೂ

ಹ್ಯುಂಡೈ ಕಂಪನಿಯು ವೆನ್ಯೂ ಕಾಂಪ್ಯಾಕ್ಟ್ ಎಸ್‌ಯುವಿಯ 8,392 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ 11,245 ಕ್ಕೆ ಹೋಲಿಸಿದರೆ.ಹುಂಡೈನ ಸಬ್-4 ಮೀಟರ್ ಎಸ್‍ಯುವಿ ವೆನ್ಯೂ ವರ್ಷದಿಂದ ವರ್ಷಕ್ಕೆ 25 ಪ್ರತಿಶತದಷ್ಟು ಮಾರಾಟ ಕುಸಿತವನ್ನು ವರದಿ ಮಾಡಿದೆ.

Article Published On: Thursday, May 5, 2022, 15:42 [IST]
English summary
Top 5 selling suvs in april 2022 find here all details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+