ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಪರಿಸರ ಸ್ನೇಹಿ ವಾಹನಗಳ ಬಳಕೆ ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಹೊಸ ಯೋಜನೆಗಳ ಪರಿಣಾಮ ಇವಿ ಕಾರುಗಳ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಇವಿ ಕಾರುಗಳು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಈಗಾಗಲೇ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ಮಹತ್ವದ ನಿರ್ಣಯದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ವಿಶ್ವಾದ್ಯಂತ ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿದ್ದು, ಭಾರತದಲ್ಲೂ ಕೂಡಾ ಇವಿ ಕಾರುಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಭಾರತದಲ್ಲೂ ಈಗಾಗಲೇ ಪ್ರಮುಖ ಕಾರು ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಮತ್ತಷ್ಟು ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲು ಸಜ್ಜುಗೊಂಡಿವೆ. ಇವಿ ಕಾರುಗಳು ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಎನ್ನಿಸಲಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಇವಿ ಕಾರುಗಳಲ್ಲಿ ಬಜೆಟ್ ಮತ್ತು ಐಷಾರಾಮಿ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ 2022ರ ನೆಕ್ಸಾನ್ ಇವಿ ಆವೃತ್ತಿಯನ್ನು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲು ಸಿದ್ದಗೊಳ್ಳುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಳ್ಳಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ನೆಕ್ಸಾನ್ ಇವಿ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದ್ದು, 2020ರ ಆವೃತ್ತಿಯು 40kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್

ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಟಿಗೋರ್ ಎಲೆಕ್ಟ್ರಿಕ್ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೆ ಆಲ್‌ಟ್ರೊಜ್ ಇವಿ ಮಾದರಿಯನ್ನು ಸಹ ಬಿಡುಗಡೆ ಮಾಡಲಿದೆ. ಹೊಸ ಕಾರು 2022ರ ಕೊನೆಯಲ್ಲಿ ಬಿಡುಗಡೆಯಾಗಬಹುದಾಗಿದ್ದು, ಆಕರ್ಷಕ ಬೆಲೆಯೊಂದಿಗೆ ಒಂದು ಬಾರಿ ಚಾರ್ಜ್ ಮಾಡಿದರೆ ಕನಿಷ್ಠ 300 ರಿಂದ ಗರಿಷ್ಠ 320 ಕಿ.ಮೀ ಪ್ರಯಾಣ ಮಾಡಬಹುದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಕಂಪನಿಯು ಇವಿ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಆರಂಭಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಸದ್ಯ ಮಾರುಕಟ್ಟೆಯಲ್ಲಿರುವ ಇವಿ ಕಾರುಗಳನ್ನು ಸಾಮಾನ್ಯ ಕಾರುಗಳ ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯದ ಬೃಹತ್ ಯೋಜನೆಗಳಿಗಾಗಿ ಇದೀಗ ಪ್ರತ್ಯೇಕ ನಿಯಂತ್ರಣ ಹೊಂದಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (TPEML) ಅಂಗಸಂಸ್ಥೆಯನ್ನು ಆರಂಭಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹ್ಯುಂಡೈ ಐಯಾನಿಕ್ 5

2028ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲೂ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಐದು ವರ್ಷಗಳಲ್ಲಿ ಆರು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆಗಾಗಿ ಕಂಪನಿಯು ಸುಮಾರು ರೂ. 4 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಆರು ಹೊಸ ಎಲೆಕ್ಟ್ರಿಕ್ ಕಾರುಗಳ ಪೈಕಿ ಐಯಾನಿಕ್ 5 ಕ್ರಾಸ್ಓವರ್ ಎಸ್‌ಯುವಿ ಮಾದರಿಯು ಕೂಡಾ ಒಂದಾಗಿದ್ದು, ಹೊಸ ಕಾರು ಮಾದರಿಯನ್ನು ಹ್ಯುಂಡೈ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಪರಿಚಯಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಐಷಾರಾಮಿ ಎಲೆಕ್ಟ್ರಿಕ್ ಕಾರುಗಳಿಗೆ ಸಮನಾದ ಫೀಚರ್ಸ್ ಹೊಂದಿರವ ಹೊಸ ಐಯಾನಿಕ್ 5 ಕಾರು ಭಾರತದಲ್ಲಿ ರೂ.35 ಲಕ್ಷದಿಂದ ರೂ.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದ, ದೇಶಿಯ ಮಾರುಕಟ್ಟೆಯಲ್ಲಿ ಈ ವರ್ಷದ ಮೂರನೇ ತ್ರೈಮಾಸಿಕ ಅವಧಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಕಿಯಾ ಇವಿ6

ಕಿಯಾ ಇಂಡಿಯಾ ಕಂಪನಿಯು ಇವಿ6 ಹೆಸರನ್ನು ಭಾರತದಲ್ಲಿ ಟ್ರೇಡ್‌ಮಾರ್ಕ್ ಮಾಡಿದ್ದು, ಇದೀಗ ದಕ್ಷಿಣ ಕೊರಿಯಾದ ಕಾರು ತಯಾರಕರಾದ ಕಿಯಾ ಎಲೆಕ್ಟ್ರಿಕ್ ಫ್ಲ್ಯಾಗ್‌ಶಿಪ್‌ ಇವಿ6 ಕಾರನ್ನು ಬಿಡುಗಡೆಗೊಳಿಸುವುದಾಗಿ ಖಚಿತಪಡಿಸಿದೆ. ಕಿಯಾ ಕಂಪನಿಯು ಈ ಇವಿ6 ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕಿಂಗ್ ಅನ್ನು ಮೇ 26 ರಂದು ಪ್ರಾರಂಭಿಸಲಿದೆ ಎಂದು ಘೋಷಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಕಿಯಾ ಇವಿ6 ಎಲೆಕ್ಟ್ರಿಕ್ ಕಾರು ಯುರೋಪ್ ನಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಈ ಕಿಯಾ ಇವಿ6 E-GMP ಸ್ಕೇಟ್‌ಬೋರ್ಡ್ ಆರ್ಕಿಟೆಕ್ಚರ್ ಅನ್ನು ಆಧರಿಸಿದ ಮೊದಲ BEV ಆಗಿದೆ ಮತ್ತು ಇದು ಹ್ಯುಂಡೈ Ioniq 5 ನೊಂದಿಗೆ ಸಾಕಷ್ಟು ಸಾಮಾನ್ಯವಾಗಿದೆ. ಈ ಮೂಲಕ ಈ ಕಾರು ಗರಿಷ್ಠ 500 ಕಿ.ಮೀ ರೇಂಜ್ ಹೊಂದಿದ್ದು, ಇದು ಇತರೆ ಮಧ್ಯಮ ಕ್ರಮಾಂಕದ ಇವಿ ಮಾದರಿಗಳಿಂತಲೂ ತುಸು ದುಬಾರಿ ಎನ್ನಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಟಾಟಾ ಕರ್ವ್ ಇವಿ ಕಾನ್ಸೆಪ್ಟ್

ಟಾಟಾ ಹೊಸ ಕಾನ್ಸೆಪ್ಟ್ ಕಾರು ಕೂಪೆ ಎಸ್‌ಯುವಿ ವಿನ್ಯಾಸವನ್ನು ಪಡೆದುಕೊಂಡಿದ್ದು, ಇದು ಆಕರ್ಷಕ ಮತ್ತು ಸ್ಪೋರ್ಟಿಯಾಗಿ ಕಾಣುತ್ತದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಬಿಡುಗಡೆಯಾಗಲಿದೆ ಎಂದು ಕಂಪನಿ ತಿಳಿಸಿದ್ದು, ಹೊಸ ಕಾನ್ಸೆಪ್ಟ್ ಮಾದರಿಯು ಎಲೆಕ್ಟ್ರಿಕ್ ಮಾದರಿಯಲ್ಲಿ ಮಾತ್ರವಲ್ಲದೆ ಪೆಟ್ರೋಲ್ ಮಾದರಿಯಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹೊಸ ಕರ್ವ್ ಇವಿ ಕಾನ್ಸೆಪ್ಟ್ ಮಾದರಿಯನ್ನು ಕಂಪನಿಯು ಸಂಪೂರ್ಣವಾಗಿ ಡಿಜಿಟಲ್ ಡಿಸೈನ್ ಲಾಂಗ್ವೆಜ್ ಆಧರಿಸಿ ಅಭಿವೃದ್ದಿಗೊಳಿಸುತ್ತಿದ್ದು, 2024ರ ವೇಳೆಗೆ ಹೊಸ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹೊಸ ಕಾರು ಸಂಪೂರ್ಣವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಆಧರಿಸಿರುವುದರಿಂದ ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಅತ್ಯುತ್ತಮ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 450 ಕಿ.ಮೀ ನಿಂದ 500 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹೀಗಾಗಿ ಹೊಸ ಕಾರು ಮಾದರಿಯು ಟಾಟಾ ಮೋಟಾರ್ಸ್ ಕಂಪನಿಗೆ ಮತ್ತೊಂದು ಹೊರ ತಿರುವು ನೀಡಲಿದ್ದು, ಇವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಒಟ್ಟು 5 ಹೊಸ ಇವಿ ಕಾರು ಮಾದರಿಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹ್ಯುಂಡೈ ಕೊನಾ ಫೇಸ್‌ಲಿಫ್ಟ್

ಹ್ಯುಂಡೈ(Hyundai) ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯಾದ ಕೊನಾ(Kona) ಎಸ್‌ಯುವಿ ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುತ್ತಿದ್ದು, ಕಂಪನಿಯು ಇದೀಗ ಕೊನಾ ಕಾರಿನ ನವೀಕೃತ ಮಾದರಿಯನ್ನು ವಿವಿಧ ಮಾರುಕಟ್ಟೆಗಳಿಗೆ ಪರಿಚಯಿಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಪ್ರಮಾಣದ ಮಾರಾಟ ಸಂಖ್ಯೆ ಹೊಂದಿರುವ ಹ್ಯುಂಡೈ ಕೊನಾ ಇವಿ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ನವೀಕೃತ ಮಾದರಿಯನ್ನು ಪರಿಚಯಿಸಿರುವ ಹ್ಯುಂಡೈ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ನವೀಕೃತ ಕೊನಾ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹೊಸ ಕಾರು ಸಾಮಾನ್ಯ ಕಾರುಗಳಿಂತ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಮಹೀಂದ್ರಾ ಇಎಕ್ಸ್‌ಯುವಿ300

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಹೊಸ ಇಎಕ್ಸ್‌ಯುವಿ(eXUV300) ಕಾರನ್ನು ಮಾರುಕಟ್ಟೆಯಲ್ಲಿನ ಸನ್ನಿವೇಶವನ್ನು ಆಧರಿಸಿ ಇದೀಗ ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹೊಸ ಕಾರು ಈ ವರ್ಷಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಂಪನಿಯು ಇಎಕ್ಸ್‌ಯುವಿ300 ಬಿಡುಗಡೆಗೂ ಮುನ್ನ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಇವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿ ಟಾಟಾ ನೆಕ್ಸಾನ್ ಇವಿ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಗಳಿವು!

ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 380 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಟಾಟಾ ನೆಕ್ಸಾನ್ ಇವಿ ಬೆಲೆಗೆ ಸರಿಸಮನಾಗಿ ಬಿಡುಗಡೆ ಹೊಂದಬಹುದಾಗಿದ್ದು, ಹೊಸ ಕಾರು ಎಂಜಿ ಜೆಡ್ಎಸ್ ಇವಿ ಮಾದರಿಗೂ ಸಹ ಪೈಪೋಟಿ ನೀಡಲಿದೆ.

Most Read Articles

Kannada
English summary
Top 5 upcoming electric cars in india details
Story first published: Wednesday, April 27, 2022, 23:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X