ವಾರದ ಸುದ್ದಿ: ಬ್ಯಾಟರಿ ವಿನಿಮಯ ನೀತಿ ಜಾರಿ, ಹೊಸ ಜೆಡ್ಎಸ್ ಇವಿ ಅನಾವರಣ, ಟೆಸ್ಲಾ ಮನವಿ ತಿರಸ್ಕಾರ..

ಭಾರತದಲ್ಲಿ ಇವಿ ವಾಹನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಇವಿ ವಾಹನ ಬಳಕೆಯನ್ನು ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರವು ಮಹತ್ವದ ಹೊಸ ಬ್ಯಾಟರಿ ವಿನಿಮಯ ನೀತಿ ಜಾರಿ ತಂದಿದೆ. ಇದರ ಜೊತೆಗೆ ಈ ವಾರದ ಪ್ರಮುಖ ಸುದ್ದಿಗಳಲ್ಲಿ ವಿವಿಧ ಹೊಸ ವಾಹನಗಳ ಬಿಡುಗಡೆ ಸೇರಿದಂತೆ ಆಟೋ ಉದ್ಯಮದಲ್ಲಿನ ಪ್ರಮುಖ ಬೆಳವಣಿಗೆಗಳು ಕೂಡಾ ಪ್ರಮುಖವಾಗಿದ್ದು, ಕೆಳಗಿನ ಸ್ಲೈಡ್‌ಗಳಲ್ಲಿ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್ ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಬ್ಯಾಟರಿ ವಿನಿಮಯ ನೀತಿ ಜಾರಿ

ಪ್ರಸಕ್ತ ವರ್ಷದ ಕೇಂದ್ರ ಬಜೆಟ್‌ನಲ್ಲಿ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ಒತ್ತು ನೀಡಲು ತ್ವರಿತಗತಿ ಚಾರ್ಜಿಂಗ್ ಸೌಲಭ್ಯಕ್ಕಾಗಿ ಬ್ಯಾಟರಿ ವಿನಿಮಯ ನೀತಿ ಪ್ರಕಟಿಸಲಾಗಿದೆ. ಭಾರತದಲ್ಲಿ ಇಂಧನ ಆಧಾರಿತ ವಾಹನಗಳನ್ನು ಖಡಿತಗೊಳಿಸುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳಲು ಬ್ಯಾಟರಿ ವಿನಿಮಯ ನೀತಿಯು ಪ್ರಮುಖ ಅಂಶವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಬ್ಯಾಟರಿ ವಿನಿಮಯ ತಂತ್ರಜ್ಞಾನವನ್ನು ಸಾಮೂಹಿಕ ಅಳವಡಿಕೆಯಲ್ಲಿ ಹಲವಾರು ಸವಾಲುಗಳಿದ್ದು, ಹೊಸ ನೀತಿಯ ಮೂಲಕ ಭಾರತದಲ್ಲಿ ಇವಿ ಬಳಕೆಗೆ ಇರುವ ಸವಾಲುಗಳನ್ನು ಪರಿಹರಿಸಲು ಮತ್ತು ಇವಿ ವಾಹನ ಮಾರಾಟ ಹೆಚ್ಚಿಸಲು ಗುರಿಯನ್ನು ಹೊಂದಿದೆ. ಇವಿ ವ್ಯವಹಾರದ ದಕ್ಷತೆಯನ್ನು ಸುಧಾರಿಸಲು ಸರ್ಕಾರವು ಪರಸ್ಪರ ಕಾರ್ಯಸಾಧ್ಯತೆಯ ಮಾನದಂಡಗಳನ್ನು ರೂಪಿಸುತ್ತಿದ್ದು, ಸಂಪರ್ಕಿತ ತಂತ್ರಜ್ಞಾನದ ಮೂಲಕ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಕೇಂದ್ರೀಕೃತವಾಗಿಸುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ನೀತಿಯೊಂದಿಗೆ ಇವಿ ವಾಹನ ತಯಾರಕರು ಎಲ್ಲಾ ಮಾದರಿಯ ಇವಿ ವಾಹನಗಳಲ್ಲೂ ಕಡ್ಡಾಯವಾಗಿ ಒಂದೇ ಮಾದರಿಯ ತಂತ್ರಜ್ಞಾನಗಳನ್ನು ಬಳಸಿ ಬ್ಯಾಟರಿ ವಿನಿಮಯ ಮಾನದಂಡಗಳನ್ನು ಅನುಸರಿಸಲಿದ್ದು, ವೇಗದ ಚಾರ್ಜಿಂಗ್ ತಂತ್ರಜ್ಞಾನದ ಅಗತ್ಯವಿಲ್ಲದೇ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜ್ ಮಾಡಲಾದ ಬ್ಯಾಟರಿ ಒದಗಿಸುವ ಮಾರ್ಗವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ಜೆಡ್ಎಸ್ ಇವಿ ಅನಾವರಣ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ನವೀಕೃತ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ 2022ರ ಮಾದರಿಯ ತಾಂತ್ರಿಕ ಮಾಹಿತಿಯನ್ನು ಬಹಿರಂಗಪಡಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಲ್ಲಿ ಕಂಪನಿಯು ಬಾಹ್ಯ ವಿನ್ಯಾಸದಲ್ಲಿ ಕೆಲವೇ ಕೆಲವು ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರಿನಲ್ಲಿ ಮಹತ್ವದ ಬದಲಾವಣೆ ಅಂದರೆ ಅದು ನವೀಕರಿಸಿದ ಬ್ಯಾಟರಿ ಪ್ಯಾಕ್ ಗಮನಸೆಳೆಯಲಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು 44.5 kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಚ್‌ಗೆ 419 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದ್ದು, 2022ರ ಮಾದರಿಯಲ್ಲಿ ಕಂಪನಿಯು 51 kWh ಬ್ಯಾಟರಿ ಪ್ಯಾಕ್ ಜೋಡಣೆಯೊಂದಿಗೆ ಪ್ರತಿಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಟೆಸ್ಲಾ ಕಂಪನಿ ಮನವಿ ತಿರಸ್ಕಾರ

ಭಾರತದಲ್ಲಿ ಈ ವರ್ಷದ ಮೊದಲಾರ್ಧದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದ ಅಮೆರಿಕದ ಟೆಸ್ಲಾ ಕಂಪನಿಯ ಮನವಿಯನ್ನು ಕೇಂದ್ರ ಸರ್ಕಾರವು ತಿರಸ್ಕರಿಸಿದೆ. ಹೊಸ ಕಾರು ಬಿಡುಗಡೆಗೂ ಮುನ್ನ ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳಲಿರುವ ಕಾರುಗಳ ಮೇಲಿನ ತೆರಿಗೆ ವಿನಾಯ್ತಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಪ್ರಸ್ತುತ ಜಾರಿಯಲ್ಲಿರುವ ಆಮದು ತೆರಿಗೆ ನಿಯಮದಡಿಯಲ್ಲಿ ವಿದೇಶಿ ಮಾರುಕಟ್ಟೆಯಿಂದ ಸಂಪೂರ್ಣವಾಗಿ ಕಾರುಗಳನ್ನು ಆಮದು ಮಾಡಿಕೊಂಡು ಮಾರಾಟ ಮಾಡುವುದು ಆರ್ಥಿಕವಾಗಿ ಹಿನ್ನಡೆಯಾಗುವ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದ ಟೆಸ್ಲಾ ಕಂಪನಿಯು ಆಮದು ತೆರಿಗೆಯಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳಿಗೆ ವಿನಾಯ್ತಿ ನೀಡುವಂತೆ ಮನವಿ ಸಲ್ಲಿಸಿತ್ತು. ಆದರೆ ಯಾವುದೇ ಕಾರಣಕ್ಕೂ ಸಿಬಿಯು ವಾಹನಗಳ ತೆರಿಗೆಯಲ್ಲಿ ವಿನಾಯ್ತಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟಪಡಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ಆಡಿ ಕ್ಯೂ7 ಎಸ್‍ಯುವಿ ಬಿಡುಗಡೆ

ಆಡಿ ಇಂಡಿಯಾ (Audi India) ಕಂಪನಿಯು ಹೊಸ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ (Audi Q7 facelift) ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.79.99 ಲಕ್ಷವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರು ಎರಡು ರೂಪಾಂತರಗಳಲ್ಲಿ ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳನ್ನು ಒಳಗೊಂಡಿರುತ್ತದೆ. ನವೀಕರಿಸಿದ ಈ ಹೊಸ ಎಸ್‍ಯುವಿಯಲ್ಲಿ 3.0-ಲೀಟರ್, ಟ್ವಿನ್-ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 335 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕಾರೆನ್ಸ್ ಎಂಯುವಿ ಬಿಡುಗಡೆ ಮಾಹಿತಿ ಬಹಿರಂಗ

ಭಾರತದಲ್ಲಿ ಕಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕಾರೆನ್ಸ್ ಎಂಯುವಿ ಮಾದರಿಯ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಇದೇ ತಿಂಗಳು 15ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಕಾರೆನ್ಸ್ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದ್ದು, ಹೊಸ ಕಾರು ಮೂರು ಸಾಲಿನ ಆಸನ ಸೌಲಭ್ಯಗಳನ್ನು ಹೊಂದಿರುವ ಮಧ್ಯಮ ಕ್ರಮಾಂಕದ ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರು ಪ್ರಿಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಸೆಲ್ಟೊಸ್ ಎಸ್‌ಯುವಿ ಮಾದರಿಯಲ್ಲಿರುವ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೈಲಕ್ಸ್ ಮಾದರಿಯ ಬುಕ್ಕಿಂಗ್ ಸ್ಥಗಿತ

ಟೊಯೊಟಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಬಹುನೀರಿಕ್ಷಿತ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿ ಬುಕ್ಕಿಂಗ್ ಆರಂಭಿಸಿದ್ದು, ಮುಂದಿನ ತಿಂಗಳು ಮಾರ್ಚ್ ಆರಂಭದಲ್ಲಿ ಹೊಸ ವಾಹನವನ್ನು ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಭಾರತದಲ್ಲಿ ಜನವರಿ 20ರಂದು ಹೊಸ ಹೈಲಕ್ಸ್ ಪಿಕ್‌ಅಪ್ ಮಾದರಿಯನ್ನು ಅನಾವರಣಗೊಳಿಸಿ ಬುಕ್ಕಿಂಗ್ ಆರಂಭಿಸಿದ್ದ ಟೊಯೊಟಾ ಕಂಪನಿಯು ಇದೀಗ ಬುಕ್ಕಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವುದಾಗಿ ಮಾಹಿತಿ ಹಂಚಿಕೊಂಡಿದೆ. ಭಾರತದಲ್ಲಿ 2022ರ ಅವಧಿಗಾಗಿ ಮಾರಾಟ ಮಾಡಲು ನಿರ್ಧರಿಸಲಾಗಿರುವ ನಿಗದಿತ ಯುನಿಟ್‌ಗಳಿಗಾಗಿ ಸಂಪೂರ್ಣ ಬುಕ್ಕಿಂಗ್ ದಾಖಲಾಗಿದ್ದು, ಉತ್ಪಾದನಾ ಪ್ರಮಾಣಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಬುಕ್ಕಿಂಗ್ ಸ್ವಿಕರಿಸದಿರಲು ನಿರ್ಧರಿಸಿರುವ ಕಂಪನಿಯು ತಾತ್ಕಾಲಿಕವಾಗಿ ಬುಕ್ಕಿಂಗ್ ಸ್ಥಗಿತಗೊಳಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಹೊಸ ದಾಖಲೆ

ಟಾಟಾ ಮೋಟಾರ್ಸ್(Tata Motors) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿದ್ದು, ಕಂಪನಿಯು ಸಾಮಾನ್ಯ ಕಾರುಗಳ ಮಾರಾಟದ ಜೊತೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಮುಂಚೂಣಿ ಸಾಧಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಜನವರಿ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 40,777 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 2,892 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ. ಜನವರಿ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಜನವರಿ ಅವಧಿಯಲ್ಲಿನ 514 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಶೇ. 463 ರಷ್ಟು ಹೆಚ್ಚು ಬೆಳವಣಿಗೆ ಕಂಡುಬಂದಿದೆ.

Most Read Articles

Kannada
English summary
Top auto news of the week battery swapping policy new zs ev revealed new q7 launched more
Story first published: Sunday, February 6, 2022, 9:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X