ವಾರದ ಸುದ್ದಿ: ಟೊಯೊಟಾ ಇನೋವಾ ಕ್ರಿಸ್ಟಾ ಹೊಸ ಮೈಲಿಗಲ್ಲು, ಮತ್ತೆ ಉಲ್ಬಣಿಸಲಿದೆ ಸೆಮಿಕಂಡಕ್ಟರ್ ಬಿಕ್ಕಟ್ಟು..

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳಲ್ಲಿ ಹೊಸ ಕಾರುಗಳ ಬೆಲೆ ಹೆಚ್ಚಳ, ಇನೋವಾ ಕ್ರಿಸ್ಟಾ ಹೊಸ ಮಾರಾಟ ಮೈಲಿಗಲ್ಲು ಮತ್ತು ಸೆಮಿಕಂಡಕ್ಟರ್ ಕೊರತೆಯ ಸುದ್ದಿಗಳು ಪ್ರಮುಖವಾಗಿದ್ದು, ಕೆಳಗಿನ ಸ್ಲೈಡ್‌ಗಳಲ್ಲಿ ಈ ವಾರದ ಪ್ರಮುಖ ಸುದ್ದಿಗಳ ಮತ್ತಷ್ಟು ಮಾಹಿತಿಗಳನ್ನು ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಆಟೋ ಉದ್ಯಮವನ್ನು ಕಾಡಲಿದೆ ಸೆಮಿಕಂಡಕ್ಟರ್ ಕೊರತೆ

ಹೊಸ ವಾಹನಗಳಿಗೆ ಗ್ರಾಹಕರ ಬೇಡಿಕೆ ಹೆಚ್ಚುತ್ತಿದ್ದರೂ ಬಿಡಿಭಾಗಗಳ ಪೂರೈಕೆ ಆಗುತ್ತಿರುವ ವಿಳಂಬವು ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದ್ದು, ಇದೀಗ ಮತ್ತೊಂದು ಬಿಕ್ಕಟ್ಟು ಎದುರಾಗಿದೆ. ಚೀನಾ ಮತ್ತು ತೈವಾನ್ ನಡುವಿನ ಆಂತರಿಕ ಬಿಕ್ಕಟ್ಟು ಪರಿಸ್ಥಿತಿಯು ಉದ್ವಿಗ್ನತೆಗೆ ತಿರುಗಿದರೆ ಸೆಮಿ ಕಂಡಕ್ಟರ್ ಉತ್ಪಾದನಾ ಕಂಪನಿಗಳು ಅಪಾಯಕ್ಕೆ ಒಳಗಾಗಬಹುದಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸೆಮಿಕಂಡಕ್ಟರ್ ಚಿಪ್ ಆಧುನಿಕ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಹೊಸ ತಲೆಮಾರಿನ ವಾಹನಗಳ ಪ್ರಮುಖ ತಾಂತ್ರಿಕ ಅಂಶವಾಗಿದ್ದು, ಈಗಾಗಲೇ ಕಳೆದ ಎರಡು ವರ್ಷಗಳಿಂದ ಚಿಪ್ ಪೂರೈಕೆಯಲ್ಲಿನ ಕೊರತೆ ಎದುರಿಸುತ್ತಿರುವ ಆಟೋ ಉತ್ಪಾದನಾ ಕಂಪನಿಗಳಿಗೆ ಇದೀಗ ಚೀನಾ ಮತ್ತು ತೈವಾನ್ ನಡುವಿನ ಬಿಕ್ಕಟ್ಟು ಮತ್ತಷ್ಟು ಹೊಡೆತ ನೀಡಲಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಇದಕ್ಕೆ ಕಾರಣವೆಂದರೆ ಜಾಗತಿಕ ಮಾರುಕಟ್ಟೆಗೆ ಪೂರೈಕೆಯಾಗುವ ಅರ್ಧದಷ್ಟು ಸೆಮಿಕಂಡಕ್ಟರ್ ಪೂರೈಕೆ ಕಂಪನಿಗಳು ತೈವಾನ್‌ನಲ್ಲಿ ನೆಲೆಗೊಂಡಿದ್ದು, ಆಂತರಿಕ ಬಿಕ್ಕಟ್ಟು ಪರಿಸ್ಥಿತಿಯು ಉದ್ವಿಗ್ನತೆಗೆ ತಿರುಗಿದರೆ ಅದು ಖಂಡಿತವಾಗಿಯೂ ಆಟೋ ಉದ್ಯಮಕ್ಕೆ ಭಾರೀ ಹೊಡೆತ ಕೊಡಲಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಇನೋವಾ ಕ್ರಿಸ್ಟಾ ಹೊಸ ಮೈಲಿಗಲ್ಲು

ಮಲ್ಟಿ ಪ್ಯಾಸೆಂಜರ್ ವೆಹಿಕಲ್(ಎಂಪಿವಿ) ಕಾರು ಮಾರಾಟ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಟೊಯೊಟೊ ಇನೋವಾ ಕ್ರಿಸ್ಟಾ ಕಾರು ದುಬಾರಿ ಬೆಲೆ ನಡುವೆಯೂ ಉತ್ತಮ ಬೇಡಿಕೆ ಹೊಂದಿದ್ದು, ಬಿಡುಗಡೆಗೊಂಡ 17 ವರ್ಷಗಳಲ್ಲಿ(2005ರಲ್ಲಿ ಬಿಡುಗಡೆ) ಹಲವಾರು ಹೊಸ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಪ್ರತಿಸ್ಪರ್ಧಿ ಮಾದರಿಗಳಿಂತಲೂ ವಿನೂತನ ಸೌಲಭ್ಯಗಳೊಂದಿಗೆ ಎಂಪಿವಿ ಗ್ರಾಹಕರ ಆಯ್ಕೆಯಲ್ಲಿ ಅಗ್ರಸ್ಥಾನದಲ್ಲಿರುವ ಇನೋವಾ ಕ್ರಿಸ್ಟಾ ಕಾರು ಮಾದರಿಯು ಕಾಲ ಕಾಲಕ್ಕೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಇದುವರೆಗೆ ಇದು ಬರೋಬ್ಬರಿ 10 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೆಚ್ಚಳವಾಗಲಿದೆ ಸ್ಕಾರ್ಪಿಯೋ-ಎನ್ ದರ

ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ-ಎನ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಮೂಲಕ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಅತ್ಯುತ್ತಮ ಬೆಲೆಯೊಂದಿಗೆ ಭಾರೀ ಪ್ರಮಾಣದ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಸ್ಕಾರ್ಪಿಯೋ-ಎನ್ ಮಾದರಿಗಾಗಿ ಇದುವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ. ಸದ್ಯ ನಿಗದಿಪಡಿಸಲಾಗಿರುವ ಬೆಲೆಗಳು ಮೊದಲ ಹಂತದಲ್ಲಿ ಬುಕಿಂಗ್ ಮಾಡಿರುವ 25 ಸಾವಿರ ಗ್ರಾಹಕರಿಗೆ ಮಾತ್ರ ಅನ್ವಯಿಸಲಿದ್ದು, 25 ಸಾವಿರ ಯುನಿಟ್ ನಂತರ ಬುಕಿಂಗ್ ದಾಖಲಿಸಿರುವ ಗ್ರಾಹಕರಿಗೆ ಹೊಸ ದರ ಅನ್ವಯವಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸೆಲ್ಟೋಸ್ ಮಾದರಿಯಲ್ಲಿ ಹೊಸ ಸೇಫ್ಟಿ ಫೀಚರ್ಸ್

2022 ಮಾದರಿಯನ್ನು ಪರಿಚಯಿಸುವ ಬದಲು ಕಿಯಾ ಪ್ರಸ್ತುತ ಕಿಯಾ ಸೆಲ್ಟೋಸ್ ಎಸ್‌ಯುವಿಯಲ್ಲಿ 6 ಏರ್‌ಬ್ಯಾಗ್‌ಗಳನ್ನು ಸ್ಟಾಂಡರ್ಡ್ ಆಗಿ ಸೇರಿಸಿದೆ. ಇದರಿಂದ ಕಿಯಾ ಎಸ್‍ಯುವಿಯ ಬೇಸ್ ರೂಪಾಂತರ ಬೆಲೆಯನ್ನು ರೂ.30 ಸಾವಿರದಷ್ಟು ಹೆಚ್ಚಳವಾಗಿದೆ. ಇದೀಗ ಕಿಯಾ ಸೆಲ್ಟೋಸ್ ಎಸ್‍ಯುವಿಯ ಆರಂಭಿಕ ಬೆಲೆಯು ರೂ.10.49 ಲಕ್ಷವಾಗಿದ್ದು, ಆರು ಏರ್‌ಬ್ಯಾಗ್‌ಗಳೊಂದಿಗೆ ಸೆಲ್ಟೋಸ್ ಸರ್ಕಾರದ ಕಡ್ಡಾಯ ಆರು-ಏರ್‌ಬ್ಯಾಗ್ ನಿಯಮವನ್ನು ಅನುಸರಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

2020ರ ನವೆಂಬರ್ ತಿಂಗಳಿನಲ್ಲಿ ಸೆಲ್ಟೋಸ್ GNCAP ಮೂಲಕ ಪರೀಕ್ಷಿಸಿದಾಗ, 3-ಸ್ಟಾರ್ ಸುರಕ್ಷತಾ ರೇಟಿಂಗ್‌ ಅನ್ನು ಪಡೆದುಕೊಂಡಿದೆ. ಪರೀಕ್ಷಿಸಲಾದ ಮೂಲ HTE ಟ್ರಿಮ್ ಕೇವಲ ಎರಡು ಏರ್‌ಬ್ಯಾಗ್‌ಗಳನ್ನು ಹೊಂದಿತ್ತು. ಇದೀಗ ಆರು ಏರ್‌ಬ್ಯಾಗ್‌ಗಳು ಈಗ ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿರುವುದರಿಂದ ಮತ್ತೊಮ್ಮೆ ಪರೀಕ್ಷಿಸಿದರೆ ಅದರ ಸೇಫ್ಟಿ ರೇಟಿಂಗ್ ಉತ್ತಮವಾಗಲಿದೆ ಎನ್ನಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಗ್ರ್ಯಾಂಡ್ ವಿಟಾರಾಗೆ ಭರ್ಜರಿ ಬೇಡಿಕೆ

ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಹೊಸ ಎಸ್‌ಯುವಿಗಾಗಿ ಜುಲೈ 11 ರಂದು ಬುಕಿಂಗ್ ಆರಂಭವಾಗಿದ್ದು, 20 ಸಾವಿರಕ್ಕೂ ಹೆಚ್ಚು ಗ್ರಾಹಕರಿಂದ ಬುಕಿಂಗ್ ದಾಖಲಾಗಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಗ್ರ್ಯಾಂಡ್ ವಿಟಾರಾವನ್ನು ಸ್ಮಾರ್ಟ್ ಹೈಬ್ರಿಡ್ (ಮೈಲ್ಡ್ ಹೈಬ್ರಿಡ್) ಮತ್ತು ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ (ಬಲವಾದ ಹೈಬ್ರಿಡ್) ಪವರ್‌ಟ್ರೇನ್ ಆಯ್ಕೆಗಳಲ್ಲಿ ನೀಡಲಾಗುತ್ತದ್ದು, ಹೊಸ ಎಸ್‌ಯುವಿಯನ್ನು ಸುಜುಕಿಯ ಗ್ಲೋಬಲ್-ಸಿ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ಧಿಪಡಿಸಲಾಗಿದೆ. ಪೆಟ್ರೋಲ್ ಹೈಬ್ರಿಡ್ ಎಂಜಿನ್ ಅಭಿವೃದ್ದಿಯಲ್ಲಿ ಈಗಾಗಲೇ ಸಾಕಷ್ಟು ಮುನ್ನಡೆ ಸಾಧಿಸಿರುವ ಟೊಯೊಟಾ ಕಂಪನಿಯು ಇದೀಗ ಹೈರೈಡರ್ ಮತ್ತು ಗ್ರಾಂಡ್ ವಿಟಾರಾ ಮಾದರಿಗಳಾಗಿ ವಿವಿಧ ಟ್ಯೂನ್ ಹೊಂದಿರುವ 1.5 ಲೀಟರ್ ಟಿಎನ್‌ಜಿಎ ಅಟ್ಕಿನ್ಸನ್ ಸೈಕಲ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

70 ಸಾವಿರ ದಾಟಿದ ಹೊಸ ಬ್ರೆಝಾ ಬುಕಿಂಗ್

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬ್ರೆಝಾ ಎಸ್‍ಯುವಿಯನ್ನು ಈ ವರ್ಷದ ಜೂನ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಹೊಸ ಮಾರುತಿ ಸುಜುಕಿ ಬ್ರೆಝಾ ಎಸ್‍ಯುವಿಯು 70 ಸಾವಿರಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಮಾರುತಿ ಸುಜುಕಿ ಕಂಪನಿಯು 2022ರ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರೀ ಬದಲಾವಣೆಯೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 13.96 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಮಾದರಿಯ ಎಲ್ಎಕ್ಸ್‌ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ವೆಂಟ್‌ಗಳನ್ನು ಹೊಂದಿದ್ದು, 1.5 ಲೀಟರ್ ಕೆ15ಸಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೋಂಡಾ ಕಾರುಗಳ ಬೆಲೆ ಹೆಚ್ಚಳ

ಹೆಚ್ಚುತ್ತಿರುವ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಹೊಸ ವಾಹನಗಳ ಬೆಲೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಹೆಚ್ಚಳವಾಗುತ್ತಿದ್ದು, ಜಪಾನ್ ಕಾರು ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಕಾರ್ಸ್ ಕೂಡಾ ಭಾರತದಲ್ಲಿ ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಳ ಮಾಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರ್ಸ್ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆಯನ್ನು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಶೇ.1ರಿಂದ ಶೇ.1.50 ರಷ್ಟು ಬೆಲೆ ಹೆಚ್ಚಿಸಿದ್ದು, ಹೊಸ ದರಪಟ್ಟಿಯಲ್ಲಿ ಪ್ರಮುಖ ಮಾದರಿಗಳ ಬೆಲೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ. 6 ಸಾವಿರದಿಂದ ರೂ. 39 ಸಾವಿರದಷ್ಟು ಹೆಚ್ಚಿಸಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟಾಟಾ ಕಾರುಗಳ ಮೇಲೆ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 20 ಸಾವಿರದಿಂದ ಗರಿಷ್ಠ ರೂ. 40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಹೊಸ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಾರುಗಳ ಖರೀದಿ ಹೆಚ್ಚಿಸಲು ವಿವಿಧ ಆಫರ್‌ಗಳನ್ನು ಸಹ ಘೋಷಣೆ ಮಾಡಿದೆ. ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಮತ್ತು ನೆಕ್ಸಾನ್ ಕಾರುಗಳ ಮೇಲೆ ವಿಶೇಷ ಆಫರ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.

Most Read Articles

Kannada
English summary
Top auto news of the week china taiwan tensions innova new sales milestone and more
Story first published: Sunday, August 7, 2022, 8:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X