ವಾರದ ಪ್ರಮುಖ ಸುದ್ದಿ: ಹೊಸ ಅವತಾರದಲ್ಲಿ ಬಿಡುಗಡೆಯಾದ ಸ್ಕಾರ್ಪಿಯೋ-ಎನ್, ಟೊಯೊಟಾ ಹೈರೈಡರ್ ಅನಾವರಣ..

ವಾರದ ಪ್ರಮುಖ ಸುದ್ದಿಗಳಲ್ಲಿ ಹೊಸ ಕಾರುಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದ್ದು, ಇದರ ಜೊತೆಗೆ ಆಟೋ ಉದ್ಯಮಕ್ಕೆ ಸಂಬಂಧಿತ ಕೆಲವು ಬದಲಾವಣೆಗಳನ್ನು ಘೋಷಣೆ ಮಾಡಲಾಗಿದೆ.

Recommended Video

Toyota Urban Cruiser Hyryder Kannada Walkaround | ಹೈಬ್ರಿಡ್ ಎಂಜಿನ್, ಗೇರ್ ಬಾಕ್ಸ್, ವೈಶಿಷ್ಟ್ಯತೆಗಳು..

ಇನ್ನುಳಿದಂತೆ ಈ ವಾರದ ಪ್ರಮುಖ ಸುದ್ದಿಗಳಲ್ಲಿ ಹೊಸ ಕಾರುಗಳ ಬಿಡುಗಡೆಯು ಹೆಚ್ಚು ಚರ್ಚಿತ ವಿಷಯವಾಗಿದ್ದು, ಕೆಳಗಿನ ಸ್ಲೈಡ್‌ಗಳಲ್ಲಿ ಈ ವಾರದ ಪ್ರಮುಖ ಸುದ್ದಿಗಳ ಮತ್ತಷ್ಟು ಮಾಹಿತಿಗಳನ್ನು ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಿಡುಗಡೆ

ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಕಾರು ಮಾದರಿಯು 2.0-ಲೀಟರ್ ಪೆಟ್ರೋಲ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರನ್ನು ಗ್ರಾಹಕರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿ ಮಾಡಬಹುದಾಗಿದ್ದು, ಹೊಸ ಕಾರಿನ ಹೈಎಂಡ್ ಮಾದರಿಗಳಲ್ಲಿ 4x4 ಡ್ರೈವ್ ಸಿಸ್ಟಂ ನೀಡಲಾಗಿದೆ. ವ್ಹೀಲ್‌ಬೇಸ್ ಸೌಲಭ್ಯವು ಪ್ರಸ್ತುತ ಮಾದರಿಗಿಂತಲೂ 70 ಎಂಎಂ ಹೆಚ್ಚು ಉದ್ದವಾಗಿರುವುದರಿಂದ ಮೂರನೇ ಸಾಲಿನ ಪ್ರಯಾಣಿಕರಿಗೆ ಉತ್ತಮ ಸ್ಥಳಾವಕಾಶ ಒದಗಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

2022ರ ಮಾರುತಿ ಸುಜುಕಿ ಬ್ರೆಝಾ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯು 2022ರ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರೀ ಬದಲಾವಣೆಯೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 13.96 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಮಾದರಿಯ ಎಲ್ಎಕ್ಸ್‌ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ವೆಂಟ್‌ಗಳನ್ನು ಹೊಂದಿದ್ದು, 1.5 ಲೀಟರ್ ಕೆ15ಸಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರು 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 104.6 ಬಿಎಚ್‌ಪಿ ಮತ್ತು 137 ಎನ್ಎಂ ಉತ್ಪಾದನೆ ಮೂಲಕ ಉತ್ತಮ ಇಂಧನ ದಕ್ಷತೆ ಕಾಯ್ದುಕೊಂಡಿದೆ. ಜೊತೆಗೆ ಹೊಸ ಕಾರು ಸನ್‌ರೂಫ್, 360 ಡಿಗ್ರಿ ಕ್ಯಾಮೆರಾ, ಆರು ಏರ್‌ಬ್ಯಾಗ್‌ಗಳು ಸೇರಿದಂತೆ ಉತ್ತಮ ಸುರಕ್ಷಾ ಸೌಲಭ್ಯಗಳನ್ನು ಹೊಂದಿದ್ದು, ಕನೆಕ್ಟೆಡ್ ಫೀಚರ್ಸ್ ಮೂಲಕ 9.0-ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಟಚ್‌ಸ್ಕ್ರೀನ್‌ ಅಳವಡಿಸಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟೊಯೊಟಾ ಹೈರೈಡರ್ ಅನಾವರಣ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ತನ್ನ ಮಿಡ್ ಸೈಜ್ ಎಸ್‍ಯುವಿಯಾದ ಅರ್ಬನ್ ಕ್ರೂಸರ್ ಹೈರೈಡರ್ ಹೈಬ್ರಿಡ್ ಕಾರನ್ನು ಅನಾವರಣಗೊಳಿಸಿದ್ದು, ಹೊಸ ಕಾರು 1.5-ಲೀಟರ್ TNGA ಅಟ್ಕಿನ್ಸನ್ ಸೈಕಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರಿನ ಎಂಜಿನ್ 92 ಬಿಎಚ್‌ಪಿ ಮತ್ತು 122ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು 14:1 ಕಂಪ್ರೆಷನ್ ರೇಷಿಯೋ ಮತ್ತು ಟೆಂಪ್ರೇಚರ್ ಮತ್ತು ಪ್ರೆಷರ್ ಕಂಟ್ರೋಲ್ ಅನ್ನು ಹೊಂದಿದೆ. ಶೇ 40 ರಷ್ಟು ಉಷ್ಣ ದಕ್ಷತೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಎಂಜಿನ್ ಅನ್ನು 79 ಬಿಎಚ್‌ಪಿ ಮತ್ತು 141 ಎನ್ಎಂ ಟಾರ್ಕ್ ಮಾಡುವ ಸೆಲ್ಪ್ ರಿಚಾರ್ಜ್ ಎಲೆಕ್ಟ್ರಿಕ್ ಮೋಟಾರ್‌ಗೆ ಜೋಡಿಸಲಾಗಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಸರಾಸರಿ 25 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕಾರು ಯೋಜನೆ ಕೈಬಿಟ್ಟ ಗ್ರೇಟ್ ವಾಲ್ ಮೋಟಾರ್ಸ್‌

ವಿವಿಧ ಕಾರಣಾಂತರಗಳಿಂದ ಗ್ರೇಟ್ ವಾಲ್ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಹೊಸ ಕಾರು ಉತ್ಪಾದನಾ ಘಟಕ ತೆರೆಯುವ ಯೋಜನೆಯನ್ನು ಕೈಬಿಟ್ಟಿದ್ದು, ಉತ್ಪಾದನಾ ಘಟಕ ಆರಂಭಕ್ಕಾಗಿ ನೇಮಕವಾಗಿದ್ದ ಹಿರಿಯ ಉದ್ಯೋಗಿಗಳನ್ನು ಇದೀಗ ಪಿಂಕ್ ಸ್ಲಿಪ್ ಮೂಲಕ ಅಧಿಕೃತವಾಗಿ ಭಾರತದಲ್ಲಿ ತನ್ನ ವ್ಯವಹಾರವನ್ನು ಮುಕ್ತಾಯಗೊಳಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕೆಲವು ವರದಿಗಳ ಪ್ರಕಾರ ಭಾರತ-ಚೀನಾ ಗಡಿಯಲ್ಲಿನ ಉಭಯ ದೇಶಗಳ ನಡುವಿನ ಉದ್ವಿಗ್ನತೆಯಿಂದಾಗಿ ಚೀನಿ ಕಂಪನಿಗೆ ಅನುಮೋದನೆ ಪಡೆಯದಿರಲು ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಇದಲ್ಲದೆ ಏಪ್ರಿಲ್ 2020ರಿಂದ ಭಾರತದಲ್ಲಿ ಜಾರಿಯಾಗಿರುವ ಹೊಸ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಅನುಷ್ಠಾನದ ನಂತರದಲ್ಲೂ ಭಾರತದಲ್ಲಿನ ನಿಯಂತ್ರಕ ಅನುಮೋದನೆಗಳನ್ನು ಪಡೆಯುವಲ್ಲಿ ಚೀನಾ ಕಂಪನಿಗಳು ಸಮಸ್ಯೆಯನ್ನು ಎದುರಿಸುತ್ತಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟೈರ್ ಉತ್ಪಾದನೆಗಾಗಿ ಹೊಸ ಮಾನದಂಡ

ಭಾರತದಲ್ಲಿ ಟೈರ್ ಮಾರುಕಟ್ಟೆಯು ಹೆಚ್ಚಾಗಿ ಅಸಂಘಟಿತವಾಗಿದ್ದು, ಅದನ್ನು ನಿಯಂತ್ರಿಸಲಾಗುತ್ತಿಲ್ಲ. ಇದರಿಂದ ಹೊಸ ಮಾನದಂಡಗಳ ಮೂಲಕ ಟೈರ್ ಉತ್ಪಾದನೆಗೆ ಕನಿಷ್ಠ ಗುಣಮಟ್ಟಗಳ ಅಳವಡಿಕೆ ಖಚಿತಪಡಿಸಲು ಮುಂದಾಗಿರುವ ಕೇಂದ್ರ ಸಾರಿಗೆ ಇಲಾಖೆಯು ಟೈರ್ ಉತ್ಪಾದಕರಿಗೆ ಹೊಸ ಮಾನದಂಡಗಳನ್ನು ಪರಿಚಯಿಸುತ್ತಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಮಾನದಂಡಗಳ ಪ್ರಕಾರ, ಟೈರ್ ಉತ್ಪಾದನೆಗಾಗಿ ಕಾರು, ಬಸ್ ಮತ್ತು ಟ್ರಕ್ ಟೈರ್ ತಯಾರಕರು ರೋಲಿಂಗ್ ರೆಸಿಸ್ಟೆನ್ಸ್, ರೋಲಿಂಗ್ ಸೌಂಡ್ ಮತ್ತು ವೆಟ್ ಗ್ರಿಪ್ ಮಾನದಂಡಗಳನ್ನು ಟೈರ್‌ನಲ್ಲಿ ಅಳವಡಿಸುವುದು ಕಡ್ಡಾಯವಾಗಲಿದೆ. ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ (AMI) 142:2019 ರಲ್ಲಿ ವ್ಯಾಖ್ಯಾನಿಸಲಾದ ಉದ್ಯಮದ ಮಾನದಂಡಗಳು ವಾಹನದ ಟೈರ್ ಗುಣಮಟ್ಟವನ್ನು ವ್ಯಾಖ್ಯಾನಿಸಲಿದ್ದು, ಪ್ರಯಾಣಿಕ ಕಾರುಗಳು, ಲಘು ವಾಣಿಜ್ಯ ವಾಹನಗಳು ಮತ್ತು ಭಾರೀ ವಾಣಿಜ್ಯ ವಾಹನಗಳನ್ನು ಈ ಮಾನದಂಡಗಳನ್ನು ಕಡ್ಡಾಯವಾಗಿ ಅನುಸರಿಸಬೇಕಾಗುತ್ತದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸಿಟ್ರನ್ ಸಿ3 ಕಾರಿನ ಅಧಿಕೃತ ಬುಕಿಂಗ್ ಆರಂಭ

ಹೊಸ ಸಿಟ್ರನ್ ಸಿ3 ಕಾರು ಮಾದರಿಗಾಗಿ ರೂ.21 ಸಾವಿರ ಮುಂಗಡದೊಂದಿಗೆ ಬುಕಿಂಗ್ ಆರಂಭವಾಗಿದ್ದು, ಸಿಟ್ರನ್ ಕಂಪನಿಯು ಹೊಸ ಕಾರನ್ನು ಇದೇ ತಿಂಗಳು 20ರಂದು ಬಿಡುಗಡೆಯಾಗಲಿದೆ. ಹೊಸ ಸಿ3 ಮಾದರಿಯಲ್ಲಿ ಸಿಟ್ರನ್ ಕಂಪನಿಯು ಎರಡು ಎಂಜಿನ್ ಆಯ್ಕೆಗಳನ್ನು ನೀಡಿದ್ದು, ಮೂಲ ರೂಪಾಂತರವು 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮೂರು-ಸಿಲಿಂಡರ್ ಪ್ಯೂರ್‌ಟೆಕ್ 82 ಪೆಟ್ರೋಲ್ ಎಂಜಿನ್‌ನಿಂದ ಚಾಲಿತವಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಬೆಸ್ ಮಾದರಿಯು 80.8 ಬಿಎಚ್‌ಪಿ ಪವರ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಗರಿಷ್ಠ 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಬೆಸ್ ವೆರಿಯೆಂಟ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆ ಮಾತ್ರ ನೀಡಲಾಗಿದೆ. ಮತ್ತೊಂದು ಶಕ್ತಿಶಾಲಿ ಮಾದರಿಯೆಂದರೆ ಅದು ಟರ್ಬೊ ಚಾರ್ಜ್ ವೈಶಿಷ್ಟ್ಯತೆ 1.2 ಲೀಟರ್ ಎಂಜಿನ್. ಇದನ್ನು ತಾಂತ್ರಿಕವಾಗಿ ಪ್ಯೂರ್‌ಟೆಕ್ 110 ಎಂಜಿನ್ ಎಂದು ಹೆಸರಿಸಲಾಗಿದ್ದು, ಇದು 108.4 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಈ ಎಂಜಿನ್‌ನಲ್ಲಿ ಕಂಪನಿಯು 6-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಇವಿ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ರಾಜ್ಯ ಸರ್ಕಾರದ ಸಬ್ಸಡಿ ಯೋಜನೆ ಜಾರಿ ನಂತರ ಇದುವರೆಗೆ ಕರ್ನಾಟಕದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಮಾತ್ರವಲ್ಲದೆ ಹೊಸದಾಗಿ ಇವಿ ವಾಹನ ಉತ್ಪಾದನೆಗೆ ಪೂರಕವಾದ ಸ್ಟಾರ್ಟ್‌ಅಪ್ ಕಂಪನಿಗಳಿಗೂ ರಾಜ್ಯ ಸರ್ಕಾರವು ಹಲವಾರು ಸಬ್ಸಡಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಕರ್ನಾಟಕದಲ್ಲಿ ಇದೀಗ 45ಕ್ಕೂ ಹೆಚ್ಚು ಇವಿ ವಾಹನಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ.

Most Read Articles

Kannada
English summary
Top auto news of the week mahindra scorpion launched toyota highrider unveiled and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X