ವಾರದ ಸುದ್ದಿ: 6 ಏರ್‌ಬ್ಯಾಗ್ ಕಡ್ಡಾಯ, ಕಾರುಗಳ ಬೆಲೆ ಹೆಚ್ಚಳ, ಕಿಯಾ ಕಾರೆನ್ಸ್ ಬುಕ್ಕಿಂಗ್ ಆರಂಭ..

ಹೊಸ ವಾಹನಗಳ ಉತ್ಪಾದನೆ ವೆಚ್ಚವು ನಿರಂತರವಾಗಿ ಹೆಚ್ಚಿಸುತ್ತಿದ್ದು, ದುಬಾರಿ ಬಿಡಿಭಾಗಗಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಹೊಸ ವರ್ಷದ ಆರಂಭದಲ್ಲೇ ಬೆಲೆ ಹೆಚ್ಚಳ ಘೋಷಣೆ ಮಾಡಿವೆ. ಈ ವಾರದ ಸುದ್ದಿಗಳಲ್ಲಿ ವಾಹನಗಳ ಬೆಲೆ ಹೆಚ್ಚಳದ ಜೊತೆ ಹೊಸ ಕಾರುಗಳ ಬಿಡುಗೆ ಪ್ರಕ್ರಿಯೆ ಕೂಡಾ ಪ್ರಮುಖವಾಗಿದೆ. ಹಾಗಾದರೆ ಈ ವಾರದ ಪ್ರಮುಖ ಸುದ್ದಿಗಳಲ್ಲಿ ಇನ್ನು ಯಾವೆಲ್ಲಾ ಸುದ್ದಿಗಳಿವೆ ಎನ್ನುವುದನ್ನು ಕೆಳಗಿನ ಸ್ಲೈಡ್‌ಗಳಲ್ಲಿ ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಹೊಸ ಕಾರುಗಳು ಮತ್ತಷ್ಟು ದುಬಾರಿ

ಹೊಸ ವರ್ಷದಿಂದಲೇ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ವಾಹನಗಳ ಬೆಲೆ ಹೆಚ್ಚಳ ಪ್ರಕಟಿಸಿದ್ದು, ಜನವರಿ 1ರಿಂದಲೇ ಹೊಸ ಕಾರುಗಳ ದರ ಏರಿಕೆ ಮಾಡಿರುವುದಾಗಿ ಘೋಷಣೆ ಮಾಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಬಹುತೇಕ ವಾಹನ ಕಂಪನಿಗಳು ತಮ್ಮ ಹೊಸ ವಾಹನಗಳ ದರ ಏರಿಕೆ ಮಾಡಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರುಗಳ ಬೆಲೆಯು ಬಜೆಟ್ ಮಾದರಿಗಳಲ್ಲಿ ರೂ.5 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಮಧ್ಯಮ ಗಾತ್ರದ ವಾಹನಗಳಲ್ಲಿ ರೂ.20 ಸಾವಿರದಿಂದ ರೂ.50 ಸಾವಿರದಷ್ಟು ಮತ್ತು ಐಷಾರಾಮಿ ಕಾರುಗಳ ಬೆಲೆಯು ರೂ. 80 ಸಾವಿರದಿಂದ ರೂ.3 ಲಕ್ಷದಷ್ಟು ಹೆಚ್ಚಳವಾಗಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

6 ಏರ್‌ಬ್ಯಾಗ್ ಕಡ್ಡಾಯ- ನಿತಿನ್ ಗಡ್ಕರಿ

ಕಾರುಗಳ ಸುರಕ್ಷಿತೆಗಾಗಿ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದೆ. ವ್ಯಯಕ್ತಿಕ ಬಳಕೆಯ ಕಾರುಗಳಿಗೂ ಕನಿಷ್ಠ 6 ಏರ್‌ಬ್ಯಾಗ್ ಜೋಡಣೆ ಮಾಡುವ ಕುರಿತಂತೆ ಕರಡು ಜಿಎಸ್ಆರ್ ಅಧಿಸೂಚನೆ ಹೊರಡಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಹೊಸ ಸುರಕ್ಷಾ ಸೌಲಭ್ಯ ಕಡ್ಡಾಯದೊಂದಿಗೆ ಬೆಲೆ ನಿಗದಿ ಕುರಿತಂತೆ ಪ್ರಮುಖ ಆಟೋ ಉತ್ಪದನಾ ಕಂಪನಿಗಳ ಜೊತೆಗೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಹೆಚ್ಚುವರಿ ಏರ್‍‌ಬ್ಯಾಗ್ ಅಳವಡಿಕೆ ಕುರಿತಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದಾಗಿ ಸರಣಿ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತದಲ್ಲಿ ಮೋಟಾರು ವಾಹನಗಳನ್ನು ಹಿಂದಿಗಿಂತಲೂ ಸುರಕ್ಷಿತವಾಗಿಸಲು ಇದು ನಿರ್ಣಾಯಕ ಹೆಜ್ಜೆಯಾಗಲಿದೆ ಎಂದಿರುವ ಕೇಂದ್ರ ಸಚಿವರು ಎಂ1 ವಾಹನ ವಿಭಾಗದಲ್ಲಿ(ಎಂಪಿವಿ) ಕಾರುಗಳಿಗೆ 4 ಹೆಚ್ಚುವರಿ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಕಾರೆನ್ಸ್ ಎಸ್‌ಯುವಿ ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಹೊಸ ಕಾರೆನ್ಸ್ ಎಸ್‌ಯುವಿ ಖರೀದಿಗಾಗಿ ರೂ. 25 ಸಾವಿರ ಮುಂಗಡ ಹಣದೊಂದಿಗೆ ಇಂದಿನಿಂದ ಅಧಿಕೃತ ಬುಕ್ಕಿಂಗ್ ಸ್ವಿಕರಿಸುತ್ತಿದ್ದು, ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ಹೊಸ ಕಾರು ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಸೆಲ್ಟೊಸ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿರುವ ಹೊಸ ಕಾರೆನ್ಸ್ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದ್ದು, ಹೊಸ ಕಾರು ಮೂರು ಸಾಲಿನ ಆಸನ ಸೌಲಭ್ಯಗಳನ್ನು ಹೊಂದಿರುವ ಮಧ್ಯಮ ಕ್ರಮಾಂಕದ ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ. ಕಾರೆನ್ಸ್ ಎಸ್‌ಯುವಿ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಸೆಲ್ಟೊಸ್ ಎಸ್‌ಯುವಿ ಮಾದರಿಯಲ್ಲಿರುವ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಬಿಡುಗಡೆಯಾಗಲಿದೆ ಜೆಡ್ಎಸ್ ಇವಿ ಫೇಸ್‌ಲಿಫ್ಟ್

ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಹೊಸ ಕಾರಿನಲ್ಲಿ ದೊಡ್ಡ ಬದಲಾವಣೆಯೆಂದೆರೆ ಅದರ ಪವರ್‌ಟ್ರೇನ್, ಹೊಸ ಕಾರಿನ ಪವರ್‌ಟ್ರೇನ್ ಹೆಚ್ಚು ಸುಧಾರಣೆಗೊಂಡಿದೆ. ಹೊಸ ಕಾರಿನಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 44.5 kWh ಬ್ಯಾಟರಿಗಿಂತಲೂ ಸುಧಾರಿತ ಬ್ಯಾಟರಿ ಪ್ಯಾಕ್ ನೀಡಲಾಗುತ್ತಿದ್ದು, ಹೊಸ ಎಸ್‍ಯುವಿಯಲ್ಲಿ ಪ್ರಸ್ತುತ 419 ಕಿಮೀ ರೇಂಜ್ ಅನ್ನು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಹಾಗೆಯೇ ನವೀಕರಿಸಿದ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಕಾರಿನ ಮುಂಭಾಗದ ಪ್ರೊಫೈಲ್ ಗಮನಾರ್ಹ ಬದಲಾವಣೆಯನ್ನು ಪಡೆದಿದೆ. ಇದು ಐಸಿಇ ಚಾಲಿತ ಜೆಡ್ಎಸ್ ನಂತೆಯೇ ಹೊಸ ತೀಕ್ಷ್ಣವಾದ LED ಹೆಡ್‌ಲ್ಯಾಂಪ್‌ಗಳು ಮತ್ತು ಟೈಲ್‌ಲೈಟ್‌ಗಳನ್ನು ಪಡೆಯುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಭಾರತ್ ಪೆಟ್ರೋಲಿಯಂ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ-ಹಂತವಾಗಿ 7 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜನೆ ಸಿದ್ದಪಡಿಸಿದ್ದು, ಅಸ್ತಿತ್ವದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇವಿ ನಿಲ್ದಾಣಗಳನ್ನು ತೆರೆಯಲಾಗುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಭಾರತ್ ಪೆಟ್ರೋಲಿಯಂ ಕಂಪನಿಯ ಹೊಸ ಪ್ರಕಟನೆಯಲ್ಲಿ ಮುಂದಿನ ಅಕ್ಟೋಬರ್ ವೇಳೆಗೆ ದೇಶದ ಪ್ರಮುಖ ಕಡೆಗಳಲ್ಲಿ ಒಂದು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿರುವುದಾಗಿ ಭರವಸೆ ನೀಡಿದ್ದು, ಇಂಧನ ಚಾಲಿತ ಬದಲಾಗಿ ಪರಿಸರ ಸ್ನೇಹಿ ವಾಹನಗಳನ್ನು ಉತ್ತೇಜಿಸಲು ಎಲ್ಲಾ ಮೂಲಭೂತ ಸೌಕರ್ಯ ಒದಗಿಸುವುವಲ್ಲಿ ಕಂಪನಿಯು ಬದ್ದವಾಗಿದೆ ಎಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಬಿಡುಗಡೆಗೊಂಡ ಹೊಸ ಟೊಯೊಟಾ ಕ್ಯಾಮ್ರಿ ಹೈಬ್ರಿಡ್

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ನವೀಕರಿಸಿದ ಕ್ಯಾಮ್ರಿ ಹೈಬ್ರಿಡ್‌ ಸೆಡಾನ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟೊಯೊಟಾ ಕ್ಯಾಮ್ರಿ ಹೈಬ್ರಿಡ್‌ ಸೆಡಾನ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.41.70 ಲಕ್ಷವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ನವೀಕರಿಸಿದ ಟೊಯೊಟಾ ಕ್ಯಾಮ್ರಿ ಅದರ ಬಾಹ್ಯ ವಿನ್ಯಾಸ, ಕ್ಯಾಬಿನ್ ವಿನ್ಯಾಸ ಮತ್ತು ವೈಶಿಷ್ಟ್ಯಗಳ ಪಟ್ಟಿಯನ್ನು ಒಳಗೊಂಡಿರುವ ನವೀಕರಣಗಳನ್ನು ಪಡೆದಿದೆ. ಈ ಹೊಸ ಟೊಯೊಟಾ ಕ್ಯಾಮ್ರಿ ಹೈಬ್ರಿಡ್‌ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿಸಲಾಗಿದೆ. ಹೊಸ ಕ್ಯಾಮ್ರಿ ಹೈಬ್ರಿಡ್ ಕಾರಿನಲ್ಲಿ 2.5-ಲೀಟರ್, ನಾಲ್ಕು-ಸಿಲಿಂಡರ್ ಪೆಟ್ರೋಲ್ ಹೈಬ್ರಿಡ್ ಡೈನಾಮಿಕ್ ಫೋರ್ಸ್ ಎಂಜಿನ್‌ ಅನ್ನು ಹೊಂದಿದೆ, ಇದು ಶಕ್ತಿಯುತ ಮೋಟಾರ್ ಜನರೇಟರ್‌ನೊಂದಿಗೆ ಜೋಡಿಯಾಗಿ 160kW (218PS) ಸಂಯೋಜಿತ 218 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಬಿಡುಗಡೆ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ಬಹುನಿರೀಕ್ಷಿತ 2022ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಸೋಲ್ಡ್ ಔಟ್ ಆಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

2022ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲಿ ಸ್ಕೋಡಾ ಆಟೋ ಇಂಡಿಯಾ ಮುಂದಿನ ನಾಲ್ಕು ತಿಂಗಳುಗಳ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಸ್ಕೋಡಾ ಕೊಡಿಯಾಕ್ ಅನ್ನು ಭಾರತದಲ್ಲಿ ಎರಡು ವರ್ಷಗಳ ವಿರಾಮದ ನಂತರ ರೂ.34.99 ಲಕ್ಷದ ಆರಂಭಿಕ ಬೆಲೆಗೆ ಬಿಡುಗಡೆಯಾಗಿದೆ, 7-ಸೀಟುಗಳ ಈ ಎಸ್‍ಯುವಿಯ ಸಂಪೂರ್ಣವಾಗಿ ನಾಕ್ಡ್ ಡೌನ್ (CKD) ಘಟಕವಾಗಿ ನೀಡಲಾಗುತ್ತದೆ ಮತ್ತು ಔರಂಗಾಬಾದ್‌ನಲ್ಲಿರುವ ಸ್ಕೋಡಾ ಆಟೋ ವೋಕ್ಸ್‌ವ್ಯಾಗನ್ ಇಂಡಿಯಾದ ಉತ್ಪಾದನಾ ಘಟಕದಲ್ಲಿ ಸ್ಥಳೀಯವಾಗಿ ಜೋಡಿಸಲಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಭಾರತದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕಾರು ಮಾರಾಟ ಆರಂಭಿಸಿದ ನಂತರ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಟಾಟಾ ಕಂಪನಿಯು 2021ರ ಅವಧಿಯಲ್ಲಿ ಈ ಹಿಂದೆಂದಿಗಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕ ಕಾರು ಮಾರಾಟ ವಿಭಾಗದಲ್ಲಿ ತನ್ನ ಪ್ರತಿ ಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಕಂಪನಿಯು 2021ರ ಅವಧಿಯಲ್ಲಿ ಒಟ್ಟು 3.31 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ. ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ 31 ವರ್ಷಗಳ ನಂತರ ಟಾಟಾ ಮೋಟಾರ್ಸ್ ಕಂಪನಿಯು ವಾರ್ಷಿಕವಾಗಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಹ್ಯುಂಡೈ ಕಂಪನಿಗೆ ತೀವ್ರ ಪೈಪೋಟಿ ನೀಡಿದ ಟಾಟಾ ಮೋಟಾರ್ಸ್ ಕಂಪನಿಯು ತಿಂಗಳ ಕಾರು ಮಾರಾಟ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಇವಿ ಕಾರು ಬಿಡುಗಡೆ ಬಗೆಗೆ ಪ್ರತಿಕ್ರಿಯಿಸಿದ ಎಲಾನ್ ಮಸ್ಕ್

ಟೆಸ್ಲಾ ಕಂಪನಿಯು ಭಾರತಕ್ಕೆ ಕಾಲಿಡಲು ಕಳೆದ ಕೆಲವು ವರ್ಷಗಳಿಂದ ಸತತ ಪ್ರಯತ್ನ ನಡೆಯುತ್ತಿದ್ದು, ಭಾರತದಲ್ಲಿ ಟೆಸ್ಲಾ ಎಲೆಕ್ಟ್ರಿಕ್ ವಾಹನಗಳ ಮಾರಾಟ ಆರಂಭಿಸುವ ಟೆಸ್ಲಾ ಕನಸನ್ನು ಎಲಾನ್ ಮಸ್ಕ್ ಹಂಚಿಕೊಂಡಿದ್ದರು. ಆದರೆ ಅದು ಇನ್ನು ಕೂಡಾ ಸಾಧ್ಯವಾಗಿಲ್ಲ. ಇತ್ತೀಚೆಗೆ ಟ್ವಿಟ್ಟರ್‌ನಲ್ಲಿ ಭಾರತದಲ್ಲಿ ಟೆಸ್ಲಾ ಕಾರು ಬಿಡುಗಡೆ ಕುರಿತಂತೆ ಸಂಭಾವ್ಯ ಗ್ರಾಹಕರೊಬ್ಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರದ ಜೊತೆ ಹಲವು ಸುತ್ತಿನ ಮಾತುಕತೆಗಳು ನಡೆದಿವೆಯಾದರೂ ಬಿಡುಗಡೆಗೆ ಹಲವಾರು ಸವಾಲುಗಳಿವೆ ಎಂದಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಭಾರತದಲ್ಲಿ ಹೆಚ್ಚಿನ ಮಟ್ಟದ ಆಮದು ಸುಂಕ ಪ್ರಮಾಣದ ಬಗೆಗೆ ಟೆಸ್ಲಾ ಕಂಪನಿಯು ಅಸಮಾಧಾನ ಹೊರಹಾಕಿದ್ದು, ಶೇ.100ರಷ್ಟು ಆಮದು ಶುಂಕು ಪಾವತಿ ಭಾರತದಲ್ಲಿ ಕಾರು ಮಾರಾಟವು ಟೆಸ್ಲಾ ಕಂಪನಿಗೆ ಹಿನ್ನಡೆ ಉಂಟುಮಾಡಲಿದೆ ಎನ್ನುವುದು ಕಂಪನಿಯ ಲೆಕ್ಕಾಚಾರವಾಗಿದೆ.

Most Read Articles

Kannada
English summary
Top auto news of the week new 6 airbags compulsory carens booking new kodiaq launched more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X