ವಾರದ ಸುದ್ದಿ: ಹೊಸ ವಾಹನಗಳ ಬೆಲೆ ಹೆಚ್ಚಳ, ಹ್ಯುಂಡೈ ಹಿಂದಿಕ್ಕಿದ ಟಾಟಾ, ಹಿಲಕ್ಸ್ ಬುಕ್ಕಿಂಗ್ ಆರಂಭ..

ಸೆಮಿಕಂಡಕ್ಟರ್ ಕೊರತೆಯು ಹೊಸ ವಾಹನಗಳ ಉತ್ಪಾದನೆ ವೆಚ್ಚ ಹೆಚ್ಚಿಸುತ್ತಿದ್ದು, ನಿರಂತರವಾಗಿ ಹೆಚ್ಚುತ್ತಿರುವ ಬಿಡಿಭಾಗಗಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಹೊಸ ವರ್ಷದ ಆರಂಭದಲ್ಲೇ ಬೆಲೆ ಹೆಚ್ಚಳ ಘೋಷಣೆ ಮಾಡಿವೆ. ಈ ವಾರದ ಸುದ್ದಿಗಳಲ್ಲಿ ಸೆಮಿಕಂಡಕ್ಟರ್ ಕೊರತೆ ಪರಿಣಾಮ ವಾಹನ ಬೆಲೆ ಹೆಚ್ಚಳ ಮತ್ತು ವಾಹನ ಖರೀದಿಗಾಗಿ ಉತ್ಪಾದನಾ ಕಂಪನಿಗಳ ಆಫರ್ ಸುದ್ದಿಗಳು ಕೂಡಾ ಪ್ರಮುಖವಾಗಿದೆ. ಹಾಗಾದರೆ ವಾರದ ಪ್ರಮುಖ ಸುದ್ದಿಗಳಲ್ಲಿ ಇನ್ನು ಯಾವೆಲ್ಲಾ ಸುದ್ದಿಗಳಿವೆ ಎನ್ನುವುದು ಕೆಳಗಿನ ಸ್ಲೈಡ್‌ಗಳಲ್ಲಿ ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ದುಬಾರಿಯಾದ ಹೊಸ ಕಾರುಗಳು

ಹೊಸ ವರ್ಷದಿಂದಲೇ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ವಾಹನಗಳ ಬೆಲೆ ಹೆಚ್ಚಳ ಪ್ರಕಟಿಸಿದ್ದು, ಜನವರಿ 1ರಿಂದಲೇ ಹೊಸ ಕಾರುಗಳ ದರ ಏರಿಕೆ ಮಾಡಿರುವುದಾಗಿ ಘೋಷಣೆ ಮಾಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಬಹುತೇಕ ವಾಹನ ಕಂಪನಿಗಳು ತಮ್ಮ ಹೊಸ ವಾಹನಗಳ ದರ ಏರಿಕೆ ಮಾಡಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರುಗಳ ಬೆಲೆಯು ಬಜೆಟ್ ಮಾದರಿಗಳಲ್ಲಿ ರೂ.5 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಮಧ್ಯಮ ಗಾತ್ರದ ವಾಹನಗಳಲ್ಲಿ ರೂ.20 ಸಾವಿರದಿಂದ ರೂ.50 ಸಾವಿರದಷ್ಟು ಮತ್ತು ಐಷಾರಾಮಿ ಕಾರುಗಳ ಬೆಲೆಯು ರೂ. 80 ಸಾವಿರದಿಂದ ರೂ.3 ಲಕ್ಷದಷ್ಟು ಹೆಚ್ಚಳವಾಗಬಹುದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ವರ್ಷಕ್ಕೆ ಹೊಸ ಆಫರ್

ಕೋವಿಡ್ ಪರಿಣಾಮ ಕುಸಿತ ಕಂಡಿದ್ದ ಹೊಸ ವಾಹನ ಮಾರಾಟವು ಇದೀಗ ಸಾಕಷ್ಟು ಸುಧಾರಿಸಿದ್ದು, ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹೋಂಡಾ ಕಾರ್ಸ್ ಸೇರಿದಂತೆ ವಿವಿಧ ಕಂಪನಿಗಳು ಹೊಸ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಾರು ಮಾರಾಟದಲ್ಲಿ ಸ್ಥಿರತೆಗಾಗಿ ಕಂಪನಿಯು ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಕೊಡುಗೆಗಳನ್ನು ಪ್ರಕಟಿಸುತ್ತಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ, ಟಾಟಾ ಮೋಟಾರ್ಸ್, ರೆನಾಲ್ಟ್ ಇಂಡಿಯಾ ಕಂಪನಿಗಳು 2022ರ ಜನವರಿ ಅವಧಿಗೆ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಪೋರ್ಷೆ ಹೊಸ ಕಾರುಗಳು ಬಿಡುಗಡೆ

ಜರ್ಮನ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಪೋರ್ಷೆ ತನ್ನ ಜನಪ್ರಿಯ ಮಧ್ಯಮ ಕ್ರಮಾಂಕದ ಐಷಾರಾಮಿ ಸ್ಪೋರ್ಟ್ ಕಾರು ಮಾದರಿಗಳಾದ 718 ಕೆಮನ್ ಜಿಟಿಎಸ್ 4.0 ಮತ್ತು 718 ಬಾಕ್ಸ್‌ಸ್ಟರ್ ಜಿಟಿಎಸ್ 4.0 ಮಾದರಿಗಳನ್ನು ಭಾರತದಲ್ಲಿ ಸಂಕ್ರಾಂತಿ ವಿಶೇಷವಾಗಿ ಬಿಡುಗಡೆ ಮಾಡಿದ್ದು, ಹೊಸ ಕಾರು ಈ ಬಾರಿ ಸುಧಾರಿತ ಎಂಜಿನ್ ಮತ್ತು ನವೀಕೃತ ಸ್ಪೋರ್ಟಿ ವಿನ್ಯಾಸದಲ್ಲಿ ಮಾರುಕಟ್ಟೆ ಪ್ರವೇಶಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ 718 ಕೆಮನ್ ಜಿಟಿಎಸ್ 4.0 ಮತ್ತು 718 ಬಾಕ್ಸ್‌ಸ್ಟರ್ ಜಿಟಿಎಸ್ 4.0 ಮಾದರಿಗಳು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಕಾರುಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1,46,50,000 ಮತ್ತು ಟಾಪ್ ಎಂಡ್ ಮಾದರಿಯು ರೂ. 1,49,78,000 ಬೆಲೆ ಹೊಂದಿವೆ. ಹೊಸ ಕಾರುಗಳು ಸುಧಾರಿತ 7-ಸ್ಪೀಡ್ ಪಿಡಿಕೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌‌ನೊಂದಿಗೆ 4.0-ಲೀಟರ್(4 ಸಾವಿರ ಸಿಸಿ) ಆರು-ಸಿಲಿಂಡರ್ ಫ್ಲಾಟ್ ಎಂಜಿನ್‌ನಿಂದ ಚಾಲನೆಗೊಳ್ಳಲಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಮರ್ಸಿಡಿಸ್ ಬೆಂಝ್ ವಿಷನ್ ಇಕ್ಯೂಎಕ್ಸ್ಎಕ್ಸ್ ಕಾನ್ಸೆಪ್ಟ್ ಅನಾವರಣ

ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಹೊಸ ವಿಷನ್ ಇಕ್ಯೂಎಕ್ಸ್ಎಕ್ಸ್ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರನ್ನು ಅನಾವರಣಗೊಳಿಸಿದ್ದು, ಇದು ಒಂದೇ ಚಾರ್ಜ್‌ನಲ್ಲಿ ಗರಿಷ್ಠ 1 ಸಾವಿರ ಕಿಲೋ ಮೀಟರ್ ರೇಂಜ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಆಶ್ಚರ್ಯಕರವಾಗಿ, ಇದು ಅತ್ಯಂತ ಏರೋಡೈನಾಮಿಕ್ ಆಗಿ ಕಾಣುವ ಸಣ್ಣ ಫ್ಯೂಚರಿಸ್ಟಿಕ್ ಸೆಡಾನ್ ರೂಪದಲ್ಲಿರುವ ಎಕ್ಯೂಎಸ್ ನಂತೆಯೇ ಸರಿಸುಮಾರು ಅದೇ ಗಾತ್ರದ ಬ್ಯಾಟರಿಯೊಂದಿಗೆ ಬರುತ್ತದೆ. ಇದು ಪ್ರಪಂಚದಲ್ಲೇ ಅತ್ಯಂತ ಏರೋಡೈನಾಮಿಕ್ ಕಾರ್ ಆಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕ ಕಾರು ಮಾರಾಟ ವಿಭಾಗದಲ್ಲಿ ತನ್ನ ಪ್ರಬಲ ಪೈಪೋಟಿಯಾಗಿರುವ ಹ್ಯುಂಡೈ ಕಂಪನಿಯನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2021ರ ಡಿಸೆಂಬರ್ ಅವಧಿಯಲ್ಲಿನ ಪ್ರಯಾಣಿಕರ ಕಾರು ಮಾರಾಟ ಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದುಕೊಂಡಿದ್ದು, ಕಳೆದ ಒಂದು ದಶಕದ ನಂತರ ಟಾಟಾ ಮೋಟಾರ್ಸ್ ಕಂಪನಿಯು ಕಾರು ಮಾರಾಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಟಾಟಾ ಕಂಪನಿಯು 2021ರ ಡಿಸೆಂಬರ್ ಅವಧಿಯಲ್ಲಿ ಒಟ್ಟಾರೆ 35,299 ಕಾರುಗಳನ್ನು ಮಾರಾಟ ಮಾಡಿದ್ದು, ಇದೇ ಅವಧಿಯಲ್ಲಿ ಹ್ಯುಂಡೈ ಕಂಪನಿಯು 32,312 ಯುನಿಟ್ ಕಾರುಗಳನ್ನು ಮಾರಾಟ ಮಾಡಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಟೊಯೊಟಾ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಬುಕ್ಕಿಂಗ್ ಆರಂಭ

ಟೊಯೊಟಾ ಕಂಪನಿಯು ಭಾರತದಲ್ಲಿ ಇದೇ ತಿಂಗಳು 23ರಂದು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ರೂ.2 ಲಕ್ಷ ಮುಂಗಡ ಪಾವತಿಯೊಂದಿಗೆ ಬುಕ್ಕಿಂಗ್ ಸ್ವಿಕರಿಸಲಾಗುತ್ತಿದ್ದು, ಹೊಸ ಕಾರು ಮಾದರಿಯು ಆಫ್ ರೋಡ್ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹಿಲಕ್ಸ್ ಪಿಕ್ಅಪ್ ಮಾದರಿಯು ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಪ್ರಮುಖ ಎರಡು ಮಾದರಿಗಳಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರು 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ರೂ.25 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದಾಗಿದೆ.

Most Read Articles

Kannada
English summary
Top auto news of the week new cars price increased cars discounts offers and more
Story first published: Sunday, January 9, 2022, 3:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X