ವಾರದ ಸುದ್ದಿ: ಪೆಟ್ರೋಲ್, ಡಿಸೇಲ್ ದರ ಇಳಿಕೆ, ಜೀಪ್ ಮೆರಿಡಿಯನ್ ಬಿಡುಗಡೆ, ಅನಾವರರಣಗೊಂಡ ಸ್ಕಾರ್ಪಿಯೋ-ಎನ್..

ನಿರಂತರ ಏರಿಕೆಯ ಹಾದಿಯಲ್ಲಿದ್ದ ಇಂಧನಗಳ ದರ ಇಳಿಸುವ ಮೂಲಕ ಕೇಂದ್ರ ಸರ್ಕಾರವು ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ವಾರದ ಪ್ರಮುಖ ಸುದ್ದಿಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇಳಿಕೆ ಸುದ್ದಿಯ ಜೊತೆಗೆ ಪ್ರಮುಖ ಕಾರು ಮಾದರಿಗಳ ಬಿಡುಗಡೆ ಸುದ್ದಿಗಳು ಕೂಡಾ ಹೆಚ್ಚು ಸದ್ದು ಮಾಡಿವೆ. ಕೆಳಗಿನ ಸ್ಲೈಡ್‌ಗಳಲ್ಲಿ ಈ ವಾರದ ಪ್ರಮುಖ ಸುದ್ದಿಗಳ ಮತ್ತಷ್ಟು ಮಾಹಿತಿಗಳನ್ನು ಒಂದೊಂದಾಗಿ ನೋಡೋಣ.

ವಾರದ ಪ್ರಮುಖ ಆಟೋ ಸುದ್ದಿಗಳು

ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ

ದಿನಂಪ್ರತಿ ಹೆಚ್ಚುತ್ತಿರುವ ಇಂಧನ ಬೆಲೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂಧನಗಳ ಮೇಲೆ ಅಬಕಾರಿ ಸುಂಕ(Excise Duty) ಪ್ರಮಾಣವನ್ನು ಕಡಿತ ಮಾಡಿದೆ. ಅಬಕಾರಿ ಸುಂಕ ಇಳಿಕೆ ಮಾಡಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಲಿದ್ದು, ನಿರಂತರ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ತುಸು ರೀಲಿಫ್ ಸಿಕ್ಕಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲೆ ರೂ. 8 ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ರೂ. 6 ಇಳಿಕೆ ಮಾಡಿದ್ದು, ಇದರಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ.9.50 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ.7 ಇಳಿಕೆಯಾಗಲಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಜೀಪ್ ಮೆರಿಡಿಯನ್ ಬಿಡುಗಡೆ

ಭಾರತದಲ್ಲಿ ಮಧ್ಯಮ ಕ್ರಮಾಂಕದಲ್ಲಿರುವ ಫುಲ್ ಸೈಜ್ ಎಸ್‌ಯುವಿ ಮಾದರಿಗಳಿಗೆ ಪೈಪೋಟಿಯಾಗಿ ಜೀಪ್ ಮೆರಿಡಿಯನ್ ಬಿಡುಗಡೆಗೊಂಡಿದ್ದು, ಹೊಸ ಕಾರು ಹಲವಾರು ವಿಭಿನ್ನತೆಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ. ಮೆರಿಡಿಯನ್ ಎಸ್‌ಯುವಿ ಜನಪ್ರಿಯ ಎಸ್‌ಯುವಿ ಮಾದರಿಯಾದ ಕಂಪಾಸ್ ಆಧರಿಸಿದ್ದು, ಮೂರು ಸಾಲಿನ ಆಸನ ಸೌಲಭ್ಯದೊಂದಿಗೆ 7 ಸೀಟರ್ ಸೌಲಭ್ಯವನ್ನು ಪಡೆದುಕೊಂಡಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಪ್ರಮುಖ ಐದು ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರನ್ನು ಎಕ್ಸ್‌ಶೋರೂಂ ಪ್ರಕಾರ ರೂ. 29.90 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ. 36.95 ಲಕ್ಷಕ್ಕೆ ನಿಗದಿಪಡಿಸಿದ್ದು, ಹೊಸ ಕಾರಿನಲ್ಲಿ 2.0 ಲೀಟರ್ ನಾಲ್ಕು-ಸಿಲಿಂಡರ್ ಮಲ್ಟಿಜೆಟ್ ಟರ್ಬೊ ಡೀಸೆಲ್ ಎಂಜಿನ್‌ ಆಯ್ಕೆ ನೀಡಲಾಗಿದೆ. ಹೊಸ ಕಾರು 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 9-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 168 ಬಿಹೆಚ್‍ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಪೋರ್ಷೆ 718 ಕೆಮನ್ ಜಿಟಿ4 ಆರ್‌ಎಸ್ ಬಿಡುಗಡೆ

ಜರ್ಮನ್ ಸ್ಪೋರ್ಟ್ಸ್ ಕಾರ್ ತಯಾರಕ ಪೋರ್ಷೆ ತನ್ನ 718 ಕೆಮನ್ ಜಿಟಿ4 ಆರ್‌ಎಸ್‌ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಪೋರ್ಷೆ 718 ಕೆಮನ್ ಜಿಟಿ4 ಆರ್‌ಎಸ್‌ ಕಾರಿನ ಬೆಲೆಯು ಎಕ್ಸ್ ಶೋ ರೂಂ ಪ್ರಕಾರ ರೂ.2.54 ಕೋಟಿಯಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಪೋರ್ಷೆ 718 ಕೆಮನ್ ಜಿಟಿ4 ಆರ್‌ಎಸ್‌ ಪೋರ್ಷೆ ಮಿಡ್ ಇಂಜಿನ್‌ನ 718 ಕೇಮನ್ ಸ್ಪೋರ್ಟ್ಸ್ ಕಾರ್‌ನ ಅತ್ಯಂತ ಹಾರ್ಡ್‌ಕೋರ್ ಆವೃತ್ತಿಯಾಗಿದೆ. 718 ಕೆಮನ್ ಜಿಟಿ4 ಆರ್‌ಎಸ್‌ ಕಾರು ಹೊಸ 911 GT3 ಪಡೆದ ಎಂಜಿನ್ ಅನ್ನು ಪಡೆಯುತ್ತದೆ, ಇದು , 4.0-ಲೀಟರ್ ನ್ಯಾಚುರಲ್ ಆಸ್ಪೈರಡ್ ಫ್ಲಾಟ್-ಸಿಕ್ಸ್ ಎಂಜಿನ್ ಆಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಅನಾವರಣ

ಮಹೀಂದ್ರಾ(Mahindra) ಕಂಪನಿಯು ತನ್ನ ಬಹುನೀರಿಕ್ಷಿತ ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಕಂಪನಿಯು ಹೊಸ ಮಾದರಿಯನ್ನು ಮುಂದಿನ ತಿಂಗಳು ಜೂನ್ 27ರಂದು ಅಧಿಕೃತವಾಗಿ ಬಿಡುಗಡೆ ಮಾಡುವ ಮಾಹಿತಿ ಹಂಚಿಕೊಂಡಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಮಾದರಿಯನ್ನು ಕಂಪನಿಯು ಹೊಸ ಮಾದರಿಯನ್ನು ಸ್ಕಾರ್ಪಿಯೋ-ಎನ್(Scorpio-N) ಹೆಸರಿನೊಂದಿಗೆ ಮಾರಾಟ ಮಾಡಲಿದ್ದು, ಹೊಸ ಕಾರಿನಲ್ಲಿ ಪ್ರಸ್ತುತ ಮಾದರಿಯನ್ನು ಸ್ಕಾರ್ಪಿಯೋ ಕ್ಲಾಸಿಕ್(Scorpio Classic) ಎಂದು ಹೆಸರಿನಲ್ಲಿ ಮಾರಾಟ ಮುಂದುವರಿಸಲಿದೆ. ಹೊಸ ಕಾರಿನಲ್ಲಿ ಕಂಪನಿಯು ಎಕ್ಸ್‌ಯುವಿ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಹಲವಾರು ಹೊಸ ಬದಲಾವಣೆಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳಲುವ ನೀರಿಕ್ಷೆಯಲ್ಲಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ರೇಂಜ್ ರೋವರ್ ಸ್ಪೋರ್ಟ್ ಬುಕಿಂಗ್ ಆರಂಭ

ಹೊಸ ರೇಂಜ್ ರೋವರ್ ಸ್ಪೋರ್ಟ್ ಎಸ್‌ಯುವಿ ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಕಂಪನಿಯು ಹೊಸ ಕಾರಿನ ಬೆಲೆ ಮಾಹಿತಿಯನ್ನು ಸಹ ಹಂಚಿಕೊಂಡಿದೆ. ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.64 ಕೋಟಿ ಬೆಲೆ ಹೊಂದಿದ್ದು, ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಡೈನಾಮಿಕ್ ಎಸ್‌ಇ, ಡೈನಾಮಿಕ್ ಹೆಚ್ಎಸ್ಇ, ಆಟೋಬಯೋಗ್ರಫಿ ಮತ್ತು ಫಸ್ಟ್ ಎಡಿಷನ್ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಖರೀದಿಗೆ ಬುಕಿಂಗ್ ಆರಂಭಗೊಂಡಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ರೇಂಜ್ ರೋವರ್ ಸ್ಪೋರ್ಟ್ ಕಾರಿನ ಆರಂಭಿಕ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.64 ಕೋಟಿ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 1.84 ಕೋಟಿ ಬೆಲೆ ಹೊಂದಿರಲಿದ್ದು, 3.0 ಲೀಟರ್ ಪೆಟ್ರೋಲ್ ಹೈಬ್ರಿಡ್, 3.0 ಲೀಟರ್ ಡೀಸೆಲ್ ಟರ್ಬೊ ಮತ್ತು 4.0 ಲೀಟರ್ ಟ್ವಿನ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರುವ ಹೊಸ ಕಾರು ಮಾದರಿಯು ಮುಂಬರುವ ನವೆಂಬರ್ ವೇಳೆಗೆ ಶೋರೂಂಗಳಿಗೆ ತಲುಪುವ ನೀರಿಕ್ಷೆಗಳಿವೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹ್ಯಾರಿಯರ್ ಎಕ್ಸ್‌ಜೆಡ್ಎಸ್ ವೆರಿಯೆಂಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯಲ್ಲಿ ಬಿಎಸ್-6 ವರ್ಷನ್ ಬಿಡುಗಡೆ ನಂತರ ಗ್ರಾಹಕರ ಬೇಡಿಕೆಯೆಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸಿದ್ದು, ಇದೀಗ ಹೊಸ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್‌ವೊಂದನ್ನು ಬಿಡುಗಡೆ ಮಾಡಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹ್ಯಾರಿಯರ್ ಮಾದರಿಯ ಟಾಪ್ ಎಂಡ್ ವೆರಿಯೆಂಟ್‌‌ಗಳನ್ನು ಆಧರಿಸಿ ಕಂಪನಿಯು ಎಕ್ಸ್‌ಜೆಡ್ಎಸ್ ಎನ್ನುವ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್ ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ನಡುವಿನ ಸ್ಥಾನ ಪಡೆದುಕೊಂಡಿದೆ. ಹೊಸ ವೆರಿಯೆಂಟ್ ಗ್ರಾಹಕರ ಬೇಡಿಕೆಯೆಂತೆ ಸಿಂಗಲ್ ಟೋನ್, ಡ್ಯುಯಲ್ ಟೋನ್, ಡಾರ್ಕ್ ಎಡಿಷನ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20 ಲಕ್ಷ ಬೆಲೆ ಹೊಂದಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಚಾರ್ಜಿಂಗ್ ಸೌಲಭ್ಯಕ್ಕಾಗಿ ಪಾಲುದಾರಿಕೆ

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಮೋಟಾರ್ ಇಂಡಿಯಾ ಕಂಪನಿಯು ಟಾಟಾ ಪವರ್ ಜೊತೆ ಕೈಜೋಡಿಸಿದ್ದು, ದೇಶದಲ್ಲಿನ ತನ್ನ ಆಯ್ದ ಡೀಲರ್‌ಶಿಪ್‌ಗಳಲ್ಲಿ ಫಾಸ್ಟ್ ಚಾರ್ಜಿಂಗ್ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಮೂಲಸೌಕರ್ಯವನ್ನು ಸ್ಥಾಪಿಸಲು ಬೃಹತ್ ಯೋಜನೆ ರೂಪಿಸಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಭಾರತದಲ್ಲಿ ಹ್ಯುಂಡೈ ಕಂಪನಿಯು ಶೀಘ್ರದಲ್ಲಿಯೇ ತನ್ನ ಎರಡು ಬಹುನೀರಿಕ್ಷಿತ ಇವಿ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರುಗಳ ಬಿಡುಗಡೆಗೂ ಮನ್ನ ಕಂಪನಿಯು ತನ್ನ ಡೀಲರ್‌ಶಿಪ್ ಫಾಸ್ಟ್ ಚಾರ್ಜಿಂಗ್ ಯುನಿಟ್‌ಗಳನ್ನು ಹೆಚ್ಚಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದೆ.

Most Read Articles

Kannada
English summary
Top auto news of the week petrol diesel price cut jeep meridian launched and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X