ವಾರದ ಸುದ್ದಿ: ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಮತ್ತೆ ಏರಿಕೆ, ಎಲೆಕ್ಟ್ರಿಕ್ ವಾಹನಗಳಿಗೆ ಶುಕ್ರದೆಸೆ..

ಆಟೋಮೊಬೈಲ್ ಮಾರುಕಟ್ಟೆ ಸೆಮಿಕಂಡಕ್ಟರ್ ಕೊರತೆ ಪರಿಣಾಮ ತಗ್ಗಿದ್ದ ಹೊಸ ವಾಹನ ಮಾರಾಟ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಹೊಸ ವಾಹನ ಮಾರಾಟ ಚೇತರಿಕೆಯ ಸಂದರ್ಭದಲ್ಲಿಯೇ ದುಬಾರಿ ಇಂಧನ ದರವು ಹೊಸ ವಾಹನಗಳ ಮಾರಾಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದರೆ ದುಬಾರಿ ಇಂಧನಗಳ ಪರಿಣಾಮ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬರುತ್ತಿದ್ದು, ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳಲ್ಲಿ ಇವಿ ವಾಹನಗಳ ಸುದ್ದಿ ಪ್ರಮುಖವಾಗಿದ್ದು, ಕೆಳಗಿನ ಸ್ಲೈಡ್‌ಗಳಲ್ಲಿ ಮತ್ತಷ್ಟು ಮಾಹಿತಿಗಳನ್ನು ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಹೆಚ್ಚಳ

ಜಾಗತಿಕವಾಗಿ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಹೆಚ್ಚಳ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ ಆರಂಭಗೊಂಡಿದ್ದು, ಕಳೆದ 12 ದಿನಗಳಲ್ಲಿ ದೇಶಾದ್ಯಂತರ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ರೂ.5 ರಿಂದ ರೂ.8 ತನಕ ಹೆಚ್ಚಳವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ನಿರಂತರ ಇಂಧನಗಳ ದರ ಹೆಚ್ಚಳದ ನಂತರ ಸದ್ಯ ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಬೆಲೆ ರೂ.108.14 ಪೈಸೆ ಬೆಲೆ ಹೊಂದಿದ್ದರೆ ಡೀಸೆಲ್ ಪ್ರತಿ ಲೀಟರ್ ಬೆಲೆಯು ರೂ. 92.51 ಪೈಸೆ ಬೆಲೆ ಹೊಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಯ ಪರಿಣಾಮ ಇದು ಮುಂಬರುವ ದಿನಗಳಲ್ಲಿ ಇನ್ನಷ್ಟು ದುಬಾರಿಯಾಗಿ ಪರಿಣಮಿಸಲಿದ್ದು, ಜೊತೆಗೆ ವಿವಿಧ ರಾಜ್ಯಗಳು ಇಂಧನಗಳ ವಿಧಿಸುವ ಅಬಕಾರಿ ಸುಂಕಗಳು ಇಂಧನ ಬೆಲೆಯನ್ನು ಮತ್ತಷ್ಟು ದುಬಾರಿಯಾಗಿಸುತ್ತವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದರಿಂದ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಪ್ರಮುಖ ಮಾಹಾನಗರಗಳಲ್ಲಿನ ಇವಿ ವಾಹನ ನೋಂದಣಿಯಲ್ಲಿ ಸಾಕಷ್ಟು ಹೆಚ್ಚಳವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ಎಂಜಿ ಜೆಡ್ಎಸ್ ಇವಿ ಮಾದರಿಗೆ ಭರ್ಜರಿ ಬೇಡಿಕೆ

ಎಂಜಿ ಮೋಟಾರ್(MG Motor) ಕಂಪನಿಯು 2022ರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಹೊಸ ಕಾರು ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಸುಮಾರು 1,500 ಗ್ರಾಹಕರಿಂದ ಬೇಡಿಕೆ ಸಲ್ಲಿಕೆಯಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಂಡಿದ್ದು, 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ ಮೂಲಕ ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ ಹೊಸ ಾಕ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21,99,800 ರಿಂದ ಟಾಪ್ ಎಂಡ್ ಮಾದರಿಯು ರೂ. 25,88,000 ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಇವಿ ಕಾರು ಮಾರಾಟದಲ್ಲಿ ಟಾಟಾ ಕಂಪನಿಗೆ ಅಗ್ರಸ್ಥಾನ

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಮಾರ್ಚ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 42,293 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 3,357 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ. ಮಾರ್ಚ್ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿನ 492 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಶೇ.432 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

7 ಸೀಟರ್ ಸೌಲಭ್ಯದ ಜೀಪ್ ಮೆರಿಡಿಯನ್ ಅನಾವರಣ

ಜೀಪ್ ಕಂಪನಿಯು ತನ್ನ ಬಹುನೀರಿಕ್ಷಿತ ಮೆರಿಡಿಯನ್ 7-ಸೀಟರ್ ಪ್ರೀಮಿಯಂ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿ ಬುಕಿಂಗ್ ಆರಂಭಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರು 2.0 ಲೀಟರ್ ನಾಲ್ಕು-ಸಿಲಿಂಡರ್ ಮಲ್ಟಿಜೆಟ್ II ಡೀಸೆಲ್ ಎಂಜಿನ್‌ ಹೊಂದಿದ್ದು, ಇದರಲ್ಲಿ 4×2 ಸಿಸ್ಟಂ ಮತ್ತು 4×4 ಕಾನ್ಫಿಗರೇಶನ್‌ ನೀಡಲಾಗುತ್ತಿದೆ. ಹೊಸ ಕಾರನ್ನು ಕಂಪನಿಯು ಸಂಪೂರ್ಣವಾಗಿ 'ಮೇಕ್-ಇನ್-ಇಂಡಿಯಾ' ಯೋಜನೆ ಅಡಿ ತಯಾರಿಸಲಿದ್ದು, ಟೊಯೊಟಾ ಫಾರ್ಚೂನರ್ ಮಾದರಿಗೆ ಪ್ರಬಲ ಪೈಪೋಟಿಯಾಗಿರುವ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 28 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.34 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಟೊಯೊಟಾ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್

ಹೊಸ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು 4x4 ಸ್ಟ್ಯಾಂಡರ್ಡ್ ಮತ್ತು 4x4 ಹೈ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದ್ದು, 4x4 ಸ್ಟ್ಯಾಂಡರ್ಡ್ ಮಾದರಿಯು ಕೇವಲ ಮ್ಯಾನುವಲ್ ಆವೃತ್ತಿ ಖರೀದಿಗೆ ಲಭ್ಯವಿದ್ದರೆ 4x4 ಹೈ ಮಾದರಿಯಲ್ಲಿ ಕಂಪನಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ 4x4 ಸ್ಟ್ಯಾಂಡರ್ಡ್ ಮ್ಯಾನುವಲ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 34 ಲಕ್ಷ ಬೆಲೆ ಹೊಂದಿದ್ದರೆ 4x4 ಹೈ ಮ್ಯಾನುವಲ್ ಮಾದರಿಯು ರೂ. 35.80 ಲಕ್ಷ ಮತ್ತು 4x4 ಹೈ ಆಟೋಮ್ಯಾಟಿಕ್ ಮಾದರಿಯು ರೂ. 36.80 ಲಕ್ಷ ಬೆಲೆ ಹೊಂದಿದೆ. ಹೊಸ ಪಿಕ್ಅಪ್‌ನಲ್ಲಿ ಟೊಯೊಟಾ ಕಂಪನಿಯು ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಬಿಡುಗಡೆ ಮಾಡಲಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ರೆನಾಲ್ಟ್ ಕಿಗರ್

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಹೊಸ ಆವೃತ್ತಿಗಳನ್ನು ಉನ್ನತೀಕರಿಸುತ್ತಿದ್ದು, ಕಂಪನಿಯು ಇದೀಗ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ 2022ರ ಮಾದರಿಯನ್ನು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡಿದೆ. ಹೊಸ ಫೀಚರ್ಸ್‌ಗಳೊಂದಿಗೆ ಕಿಗರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.40 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕೆಲವು ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರಿನಲ್ಲಿ ಈ ಹಿಂದಿನಂತೆ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಮಾರುತಿ ಸುಜುಕಿ ವ್ಯಾಗನ್ ಆರ್ ಟೂರ್ H3

ಮಾರುತಿ ಸುಜುಕಿ ತನ್ನ ಹೊಸ ವ್ಯಾಗನ್ ಆರ್ ಅನ್ನು ಬಿಡುಗಡೆ ಮಾಡಿದೆ. ಕಂಪನಿಯು ಈ ಮಾರುತಿ ವ್ಯಾಗನ್ ಆರ್ ಅನ್ನು ವ್ಯಾಗನ್ಆರ್ ಟೂರ್ ಹೆಚ್ (3 WagonR Tour H3) ಹೆಸರಿನಲ್ಲಿ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಜನಪ್ರಿಯ ಟೋಲ್ ಬಾಯ್ ಕಾರ್ "ವ್ಯಾಗನ್ಆರ್"ನ ಹೊಸ ರೂಪಾಂತರವನ್ನು ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು CNG ಇಂಧನ ಆಯ್ಕೆಗಳೊಂದಿಗೆ ಈ ಕಾರನ್ನು ಪರಿಚಯಿಸಿದೆ. ವ್ಯಾಗನ್ಆರ್ ಟೂರ್ ಹೆಚ್3 ಪೆಟ್ರೋಲ್ ಆವೃತ್ತಿಯ ಬೆಲೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ 5.39 ಲಕ್ಷ ಆದರೆ ಸಿಎನ್‌ಜಿ ಆವೃತ್ತಿಯ ಬೆಲೆ 6.34 ಲಕ್ಷದಿಂದ ಪ್ರಾರಂಭವಾಗುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಭಾರತದಲ್ಲಿ ಡಸ್ಟರ್ ಮಾರಾಟ ಸ್ಥಗಿತಗೊಳಿಸಿದ ರೆನಾಲ್ಟ್

ರೆನಾಲ್ಟ್ ಡಸ್ಟರ್ ಎಸ್‍ಯುವಿಯು 2012ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿತ್ತು. ಬಿಡುಗಡೆಯ ನಂತರ ಹಲವಾರು ಬದಲಾವಣೆಗಳೊಂದಿಗೆ ಉತ್ತಮ ಬೇಡಿಕೆ ಹೊಂದಿದ್ದ ಡಸ್ಟರ್ ಕಾರು ಇತ್ತೀಚೆಗೆ ವಿವಿಧ ಹೊಸ ಕಾರು ಮಾದರಿಗಳಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ. ಹೀಗಾಗಿ ಹಳೆಯ ತಲೆಮಾರಿನ ಡಸ್ಟರ್ ಮಾದರಿಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಮೂರನೇ ತಲೆಮಾರಿನ ಡಸ್ಟರ್ ಪರಿಚಯಿಸುತ್ತಿರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Top auto news of the week petrol diesel price hike ev registration increased and more
Story first published: Sunday, April 3, 2022, 0:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X