ವಾರದ ಸುದ್ದಿ: ಟಾಟಾ ಕರ್ವ್ ಇವಿ ಅನಾವರಣ, ಹೊಸ ಕಾರುಗಳ ಬೆಲೆ ಹೆಚ್ಚಳ, ಗುಡ್‌ಬೈ ಹೇಳಿದ ಪೊಲೊ..

ಆಟೋಮೊಬೈಲ್ ಮಾರುಕಟ್ಟೆ ಸೆಮಿಕಂಡಕ್ಟರ್ ಕೊರತೆ ಪರಿಣಾಮ ತಗ್ಗಿದ್ದ ಹೊಸ ವಾಹನ ಮಾರಾಟ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ದುಬಾರಿ ಇಂಧನಗಳ ಪರಿಣಾಮ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬರುತ್ತಿದೆ. ಆದರೂ ಬೆಲೆ ಏರಿಕೆ ಪ್ರಮಾಣವು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳನ್ನು ಕೆಳಗಿನ ಸ್ಲೈಡ್‌ಗಳಲ್ಲಿ ಮತ್ತಷ್ಟು ಮಾಹಿತಿಗಳೊಂದಿಗೆ ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಆಟೋಮೊಬೈಲ್ ಮಾರುಕಟ್ಟೆ ಸೆಮಿಕಂಡಕ್ಟರ್ ಕೊರತೆ ಪರಿಣಾಮ ತಗ್ಗಿದ್ದ ಹೊಸ ವಾಹನ ಮಾರಾಟ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ದುಬಾರಿ ಇಂಧನಗಳ ಪರಿಣಾಮ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬರುತ್ತಿದೆ. ಆದರೂ ಬೆಲೆ ಏರಿಕೆ ಪ್ರಮಾಣವು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳನ್ನು ಕೆಳಗಿನ ಸ್ಲೈಡ್‌ಗಳಲ್ಲಿ ಮತ್ತಷ್ಟು ಮಾಹಿತಿಗಳೊಂದಿಗೆ ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಟಾಟಾ ಕರ್ವ್ ಇವಿ ಅನಾವರಣ

ಟಾಟಾ ಹೊಸ ಕಾನ್ಸೆಪ್ಟ್ ಕಾರು ಕೂಪೆ ಎಸ್‌ಯುವಿ ವಿನ್ಯಾಸವನ್ನು ಪಡೆದುಕೊಂಡಿದ್ದು, ಇದು ಆಕರ್ಷಕ ಮತ್ತು ಸ್ಪೋರ್ಟಿಯಾಗಿ ಕಾಣುತ್ತದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಬಿಡುಗಡೆಯಾಗಲಿದೆ ಎಂದು ಕಂಪನಿ ತಿಳಿಸಿದ್ದು, ಹೊಸ ಕಾನ್ಸೆಪ್ಟ್ ಮಾದರಿಯು ಎಲೆಕ್ಟ್ರಿಕ್ ಮಾದರಿಯಲ್ಲಿ ಮಾತ್ರವಲ್ಲದೆ ಪೆಟ್ರೋಲ್ ಮಾದರಿಯಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾನ್ಸೆಪ್ಟ್ ಕರ್ವ್ ಇವಿ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ನೆಕ್ಸಾನ್ ಇವಿ ಮಾದರಿಗಿಂತಲೂ ಉನ್ನತ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಸ್ಪೋರ್ಟಿ ಕೂಪೆ ಬಾಡಿ ಶೈಲಿಯು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಿದೆ. 2024ರ ವೇಳೆಗೆ ಹೊಸ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 450 ಕಿ.ಮೀ ನಿಂದ 500 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ಕಿಯಾ ಸೆಲ್ಟೊಸ್ ಮತ್ತು ಸೊನೆಟ್ ಬಿಡುಗಡೆ

ಹೊಸ ಸೊನೆಟ್ ಕಾರು ಮಾದರಿಯೊಂದಿಗೆ ಕಿಯಾ ಕಂಪನಿಯು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ಬಾರಿ ಎಂಟ್ರಿ ಲೆವಲ್ ಮಾದರಿಯಲ್ಲೂ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ಅಳವಡಿಸಿದೆ. ಹೀಗಾಗಿ ಹೊಸ ಕಾರಿನ ಬೆಲೆಯಲ್ಲಿ ತುಸು ಹೆಚ್ಚಳವಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.15 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.69 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2022ರ ಸೆಲ್ಟೊಸ್ ಮಾದರಿಯ ಬೆಸ್ ವೆರಿಯೆಂಟ್‌ನಲ್ಲೂ ಈ ಬಾರಿ ಹಲವಾರು ಹೊಸ ಫೀಚರ್ಸ್ ನೀಡಿರುವ ಕಿಯಾ ಕಂಪನಿಯು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಹೊಸ ಮಾದರಿಯು ಹೆಚ್ಚಿನ ಮಟ್ಟದ ಸೇಫ್ಟಿ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.45 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಪೊಲೊ ಮಾರಾಟಕ್ಕೆ ಗುಡ್‌ಬೈ ಹೇಳಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕಾರು ಮಾರಾಟ ಪಟ್ಟಿಯಲ್ಲಿ ಜಾಗತಿಕವಾಗಿ ಅಗ್ರಸ್ಥಾನದಲ್ಲಿರುವ ಪೊಲೊ ಹ್ಯಾಚ್‌ಬ್ಯಾಕ್ ಮಾದರಿಯು ಭಾರತದಲ್ಲೂ ಉತ್ತಮ ಬೇಡಿಕೆ ಹೊಂದಿದ್ದರೂ ಪ್ರತಿಸ್ಪರ್ಧಿ ಮಾದರಿಗಳ ಅಬ್ಬರದ ನಡುವೆ ಇತ್ತೀಚೆಗೆ ಬೇಡಿಕೆಯಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಹೀಗಾಗಿ ಪೊಲೊ 2022ರ ಮಾದರಿಯನ್ನು ಬಿಡುಗಡೆ ಮಾಡದೆ ಅಧಿಕೃತವಾಗಿ ಭಾರತದಲ್ಲಿ ಸ್ಥಗಿತಗೊಳಿಸಿರುವ ಬಗೆಗೆ ಮಾಹಿತಿ ಹಂಚಿಕೊಂಡಿದ್ದು, ಪೊಲೊ ಸ್ಥಗಿತಗೊಳಿಸಿರುವ ಬಗೆಗೆ ತನ್ನ ಗ್ರಾಹಕರಿಗೆ ಭಾವನಾತ್ಮಕ ಪತ್ರ ಬರೆದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಭಾರತದಲ್ಲಿ ಪೊಲೊ ಮಾದರಿಯನ್ನು ಬಿಡುಗಡೆ ಮಾಡಿ 12 ವರ್ಷಗಳ ಯಶಸ್ವಿ ಪ್ರಯಾಣದ ಬಗೆಗೆ ಹೆಮ್ಮೆ ವ್ಯಕ್ತಪಡಿಸಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಭಾರತೀಯ ಗ್ರಾಹಕರಿಗೆ ಧನ್ಯವಾದಗಳನ್ನು ತಿಳಿಸಿದ್ದು, ಸದ್ಯ ಸ್ಟಾಕ್ ಲಭ್ಯವಿರುವ ತನಕ ಮಾತ್ರವೇ ಖರೀದಿಗೆ ಅವಕಾಶ ನೀಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಪೊಲೊ ಲೆಜೆಂಡ್ ಎಡಿಷನ್ ಬಿಡುಗಡೆ

ಪೊಲೊ ಲೆಜೆಂಡ್ ವಿಶೇಷ ಮಾದರಿಯನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಸೀಮಿತ ಅವಧಿಗಾಗಿ ಮಾತ್ರ ಬಿಡುಗಡೆ ಮಾಡಿದ್ದು, ಕೇವಲ 700 ಯುನಿಟ್ ಮಾತ್ರ ಉತ್ಪಾದನೆ ಮಾಡಲು ನಿರ್ಧರಿಸಿದೆ. ಹೀಗಾಗಿ ನಿಗದಿತ ಕಾರು ಮಾರಾಟದ ನಂತರ ಲೆಜೆಂಡ್ ಎಡಿಷನ್ ಮಾರಾಟ ಮುಕ್ತಾಯಗೊಳ್ಳಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಪೊಲೊ ಲೆಜೆಂಡ್ ಮಾದರಿಯು ಜಿಟಿ ಟಿಎಸ್ಐ ಟಾಪ್ ಎಂಡ್ ಮಾದರಿಯನ್ನು ಆಧರಿಸಿ ಬಿಡುಗಡೆಗೊಂಡಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.25 ಲಕ್ಷ ಬೆಲೆ ಹೊಂದಿದೆ. ಪೊಲೊ ಲೆಜೆಂಡ್ ಮಾದರಿಯಲ್ಲಿ ಕಂಪನಿಯು ಕೆಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ನೀಡಿದ್ದು, ಕಾರಿನ ಫೆಂಡರ್ ಮತ್ತು ಹಿಂಬದಿಯಲ್ಲಿ ಲೆಜೆಂಡ್ ಬೂಟ್ ಬ್ಯಾಜ್ಡ್ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಎಲೆಕ್ಟ್ರಿಕ್ ಕಾರು ವಿತರಣೆಯಲ್ಲಿ ಹೊಸ ದಾಖಲೆ

ಟಾಟಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಇವಿ ಕಾರುಗಳ ಮಾರಾಟದಲ್ಲಿ ದಿನದಿಂದ ದಿನಕ್ಕೆ ಹಲವಾರು ಹೊಸ ದಾಖಲೆಗಳೊಂದಿಗೆ ಮುನ್ನುತ್ತಿದ್ದು, ಟಾಟಾ ಇವಿ ಕಾರುಗಳ ವಿತರಣೆಯನ್ನು ಹೊಸ ದಾಖಲೆಯೊಂದಿಗೆ ನಿರ್ಮಾಣವಾಗಿದೆ. ಇತ್ತೀಚೆಗೆ ಕಂಪನಿಯು ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ಪ್ರಮುಖ ಡೀಲರ್ಸ್‌ಗಳಲ್ಲಿ ಒಂದೇ ದಿನ ಬರೋಬ್ಬರಿ 712 ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳನ್ನು ವಿತರಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ವಿತರಣೆ ಮಾಡಲಾದ 712 ಕಾರುಗಳಲ್ಲಿ 564 ನೆಕ್ಸಾನ್ ಇವಿ ಮತ್ತು 148 ಟಿಗೋರ್ ಇವಿ ಮಾದರಿಗಳನ್ನು ಒಳಗೊಂಡಿದ್ದು, ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಣಾಮ ಹೊಸ ಕಾರು ಖರೀದಿದಾರರು ಇವಿ ಮಾದರಿಗಳಿಗೆ ಆದ್ಯತೆ ನೀಡುತ್ತಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಉತ್ಪಾದನಾ ವೆಚ್ಚವನ್ನು ಸರಿದೂಗಿಸಲ ದರ ಹೆಚ್ಚಿಸಲಾಗುತ್ತಿದೆ. ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದ್ದು, ಕಳೆದ ಜನವರಿಯಲ್ಲಿ ದರ ಹೆಚ್ಚಿಸಿದ್ದ ಪ್ರಮುಖ ವಾಹನ ಉತ್ಪಾದನಾ ಕಂಪನಿಯು ಇದೀಗ ವರ್ಷದಲ್ಲಿ ಎರಡನೇ ಬಾರಿಗೆ ದರ ಹೆಚ್ಚಿಸಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ದರಪಟ್ಟಿಯಲ್ಲಿ ಎಂಟ್ರಿ ಲೆವಲ್ ಕಾರುಗಳ ಬೆಲೆಯು ರೂ. 5 ಸಾವಿರದಿಂದ ರೂ. 15 ಸಾವಿರ ತನಕ ಹೆಚ್ಚಳವಾಗಿದ್ದರೆ, ಮಧ್ಯಮ ಕ್ರಮಾಂಕದ ಕಾರುಗಳ ಬೆಲೆಯಲ್ಲಿ ರೂ. 10 ಸಾವಿರದಿಂದ ರೂ. 60 ಸಾವಿರ ತನಕ ಮತ್ತು ರೂ. 20 ಲಕ್ಷ ಮೌಲ್ಯ ಮೇಲ್ಪಟ್ಟ ಎಸ್‌ಯುವಿ ಕಾರುಗಳ ಬೆಲೆಯಲ್ಲಿ ರೂ.40 ಸಾವಿರ ರೂ.90 ಸಾವಿರ ತನಕ ದರ ಹೆಚ್ಚಳವಾಗಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಐಷಾರಾಮಿ ಕಾರುಗಳ ಬೆಲೆಗಳಲ್ಲೂ ಕೂಡಾ ವಿವಿಧ ಮಾದರಿಗಳನ್ನು ಆಧರಿಸಿ ಶೇ.1 ರಿಂದ ಶೇ.3 ರ ತನಕ ದರ ಹೆಚ್ಚಳವಾಗಬಹುದಾಗಿದ್ದು, ರೂ.50 ಸಾವಿರದಿಂದ ರೂ. 2 ಲಕ್ಷದ ತನಕ ದರ ಹೆಚ್ಚಳವಾಗಿವೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

Most Read Articles

Kannada
English summary
Top auto news of the week tata curvv unveiled cars prices hiked and more
Story first published: Sunday, April 10, 2022, 2:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X