ವಾರದ ಸುದ್ದಿ: ನೆಕ್ಸಾನ್ ಇವಿ ಮ್ಯಾಕ್, ಹೊಸ ಸಿ-ಕ್ಲಾಸ್ ಬಿಡುಗಡೆ, ಹೊಸ ಘಟಕ ಸ್ಥಾಪನೆಗೆ ಸಿದ್ದವಾದ ಮಾರುತಿ ಸುಜುಕಿ..

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ನೆಕ್ಸಾನ್ ಇವಿ ಮ್ಯಾಕ್ಸ್ ಜೊತೆಗೆ ಇನ್ನು ಪ್ರಮುಖ ಕಾರು ಮಾದರಿಗಳು ಈ ವಾರ ಮಾರುಕಟ್ಟೆ ಪ್ರವೇಶಿಸಿವೆ. ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳಲ್ಲಿ ನೆಕ್ಸಾನ್ ಇವಿ ಮ್ಯಾಕ್ ಬಿಡುಗಡೆ ಸೇರಿದಂತೆ ಇನ್ನು ಹಲವು ಸುದ್ದಿಗಳಿದ್ದು, ಕೆಳಗಿನ ಸ್ಲೈಡ್‌ಗಳಲ್ಲಿ ಮತ್ತಷ್ಟು ಮಾಹಿತಿಗಳನ್ನು ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಸುದ್ದಿಗಳು

ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 17.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.24 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಈ ವಾರದ ಪ್ರಮುಖ ಸುದ್ದಿಗಳು

ಹೊಸ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಬಿಡುಗಡೆ

ನ್ಯೂ ಜನರೇಷನ್ ವೈಶಿಷ್ಟ್ಯತೆಯ ಸಿ-ಕ್ಲಾಸ್ ಮಾದರಿಯು ಎಂಜಿನ್ ಆಯ್ಕೆಗೆ ಅನುಗುಣವಾಗಿ ಸಿ200, ಸಿ220ಡಿ ಮತ್ತು ಸಿ300ಡಿ ಎನ್ನುವ ಮೂರು ವೆರಿಯೆಂಟ್‌ಗಳೊಂದಿಗೆ ಒಟ್ಟು ಎರಡು ಎರಡು ಡೀಸೆಲ್ ಮತ್ತು ಒಂದು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಆರಂಭಿಕ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 55 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 61 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ಹೊಸ ಕಾರಿನಲ್ಲಿ ಸಿ200 ಆವೃತ್ತಿಯು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ನಿಂದ ಚಾಲಿತವಾಗಲಿದ್ದು, ಇದು 201 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಡೀಸೆಲ್ ಮಾದರಿಗಳಲ್ಲಿರುವ 2.0 ಲೀಟರ್ ಫೋರ್ ಸಿಲಿಂಡರ್ ಮಾದರಿಯನ್ನು ಕಂಪನಿಯು ಎರಡು ರೀತಿಯಲ್ಲಿ ಪರ್ಫಾಮೆನ್ಸ್ ಟ್ಯೂನ್ ಮಾಡಿದ್ದು, ಸಿ220ಡಿ ಡೀಸೆಲ್ ಮಾದರಿಯು 197 ಬಿಎಚ್‌ಪಿ ಮತ್ತು 440 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ ಹೈ ಎಂಡ್ ಮಾದರಿಯಲ್ಲಿರುವ ಡೀಸೆಲ್ ಮಾದರಿಯು 261.5 ಬಿಎಚ್‌ಪಿ ಮತ್ತು 550 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ವಾರದ ಪ್ರಮುಖ ಸುದ್ದಿಗಳು

ಸ್ಕೋಡಾ ಕುಶಾಕ್ ಮಾಂಟೆ ಕಾರ್ಲೊ

ಮಾಂಟೆ ಕಾರ್ಲೊ ಆವೃತ್ತಿಯು ಎರಡು ಎಂಜಿನ್ ಆಯ್ಕೆಯೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳನ್ನು ಒಳಗೊಂಡಿದ್ದು, ಆರಂಭಿಕ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿವೆ.

ಈ ವಾರದ ಪ್ರಮುಖ ಸುದ್ದಿಗಳು

ಸ್ಟ್ಯಾಂಡರ್ಡ್ ಕುಶಾಕ್ ಮಾದರಿಗಿಂತ ಮಾಂಟೆ ಕಾರ್ಲೊ ಮಾದರಿಯು ಸುಮಾರು ರೂ.70 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆಗೆ ಅನುಗುಣವಾಗಿ ಹೊಸ ಮಾದರಿಯಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ. ಮಾಂಟೆ ಕಾರ್ಲೊ ಮಾದರಿಯು ಟೊರ್ನಾಡೊ ರೆಡ್ ಮತ್ತು ಕ್ಯಾಂಡಿ ವೈಟ್ ಎನ್ನುವ ಎರಡು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಬ್ಲ್ಯಾಕ್ಔಟ್ ಫೀಚರ್ಸ್ ಕಾರಿನ ಪ್ರಮುಖ ಆಕರ್ಷಣೆಯಾಗಿದೆ. ಹೊಸ ಕಾರಿನ ಗ್ರಿಲ್, ಬಂಪರ್, ಏರ್ ಇನ್‌ಟೆಕ್, ಫ್ರಂಟ್ ಡಿಫ್ಯೂಸರ್‌ಗಳು ಸ್ಪೋರ್ಟಿ ವಿನ್ಯಾಸವನ್ನು ಹೊಂದಿವೆ.

ಈ ವಾರದ ಪ್ರಮುಖ ಸುದ್ದಿಗಳು

ಟೊಯೊಟಾ ಫಾರ್ಚೂನರ್ ಜಿಆರ್ ಸ್ಪೋರ್ಟ್ ಬಿಡುಗಡೆ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಹೊಸ ಟೊಯೊಟಾ ಫಾರ್ಚೂನರ್ ಜಿಆರ್ ಸ್ಪೋರ್ಟ್ ವೆರಿಯೆಂಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 48.43 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ಟೊಯೊಟಾ ಕಂಪನಿಯು ಫಾರ್ಚೂನರ್ ಜಿಆರ್ ಸ್ಪೋರ್ಟ್ ಎಂಬ ಹೊಸ ಟಾಪ್ ವೇರಿಯಂಟ್‌ನ ಸೇರ್ಪಡೆಯೊಂದಿಗೆ ಫಾರ್ಚೂನರ್ ಸರಣಿಯನ್ನು ವಿಸ್ತರಿಸಿದೆ. ಹೊಸ ಆವೃತ್ತಿಯು ಲೆಜೆಂಡರ್ 4X4 ಗಿಂತಲೂ ಸುಮಾರು ರೂ.3.8 ಲಕ್ಷ ದುಬಾರಿಯಾಗಿದೆ. ಈ ಎಸ್‍ಯುವಿಯ ಹೊಸ ರೂಪಾಂತರವು ಕೆಲವು ಕಾಸ್ಮೆಟಿಕ್ ನವೀಕರಣಗಳು, ವೈಶಿಷ್ಟ್ಯದ ನವೀಕರಣಗಳು ಮತ್ತು ಕೆಲವು ಯಾಂತ್ರಿಕ ಬದಲಾವಣೆಗಳೊಂದಿಗೆ ಬರುತ್ತದೆ.

ಈ ವಾರದ ಪ್ರಮುಖ ಸುದ್ದಿಗಳು

ರೇಂಜ್ ರೋವರ್ ಸ್ಪೋರ್ಟ್ ಎಸ್‍ಯುವಿ ಅನಾವರಣ

2022ರ ಲ್ಯಾಂಡ್ ರೋವರ್ ರೇಂಜ್ ರೋವರ್ ಸ್ಪೋರ್ಟ್ ಎಸ್‍ಯುವಿಯು ಸುಧಾರಿತ ಸ್ಟೈಲಿಂಗ್, ಹೆಚ್ಚು ದುಬಾರಿ ಒಳಾಂಗಣ ಮತ್ತು ಪವರ್ ಫುಲ್ ಪವರ್‌ಟ್ರೇನ್ ಆಯ್ಕೆಗಳೊಂದಿಗೆ ಬರುತ್ತದೆ. ಹೊಸ ಲ್ಯಾಂಡ್ ರೋವರ್ ರೇಂಜ್ ರೋವರ್ ಸ್ಪೋರ್ಟ್ ಎಸ್‍ಯುವಿಯು ಎಸ್, ಎಸ್ಇ, ಹೆಚ್‌ಎಸ್ಇ ಮತ್ತು ಆಟೋಬಯೋಗ್ರಫಿ ಎಂಬ ರೂಪಾಂತರಗಳಲ್ಲಿ ಲಭ್ಯವಿರಲಿದೆ. ಲ್ಯಾಂಡ್ ರೋವರ್ ತನ್ನ ಎಲೆಕ್ಟ್ರಿಕರಣ ಪ್ರಯಾಣವನ್ನು ಮುಂದುವರೆಸುತ್ತಿರುವುದರಿಂದ, 2024ರಲ್ಲಿ ರೇಂಜ್ ರೋವರ್ ಸ್ಪೋರ್ಟ್ ಎಸ್‍ಯುವಿಯನ್ನು ಎಲೆಕ್ಟ್ರಿಕ್ ಆವೃತ್ತಿಯಾಗಿ ಪರಿಚಯಿಸಲಿದೆ.

ಈ ವಾರದ ಪ್ರಮುಖ ಸುದ್ದಿಗಳು

ಹೊಸ ರೇಂಜ್ ರೋವರ್ ಸ್ಪೋರ್ಟ್ ಎಲೆಕ್ಟ್ರಿಫೈಡ್ ಪವರ್‌ಟ್ರೇನ್‌ಗಳ ಸಮಗ್ರ ಸರಣಿಯೊಂದಿಗೆ ಬರುತ್ತದೆ. ಮೈಲ್ಡ್ -ಹೈಬ್ರಿಡ್ ತಂತ್ರಜ್ಞಾನವನ್ನು ಬಳಸಿಕೊಂಡು ಆರು-ಸಿಲಿಂಡರ್ ಇಂಜಿನಿಯಮ್ ಪೆಟ್ರೋಲ್ ಮತ್ತು ಡೀಸೆಲ್ ಮತ್ತು ಎಲ್ಲಾ ಹೊಸ V8 ಟ್ವಿನ್ ಟರ್ಬೊ. ಬ್ರಿಟಿಷ್ ಕಾರು ತಯಾರಕರು 2024 ರ ವೇಳೆಗೆ ಎಲೆಕ್ಟ್ರಿಕ್ ರೇಂಜ್ ರೋವರ್ ಸ್ಪೋರ್ಟ್ ಅನ್ನು ಸಹ ಪರಿಚಯಿಸುತ್ತಾರೆ.

ಈ ವಾರದ ಪ್ರಮುಖ ಸುದ್ದಿಗಳು

ಹೊಸ ಘಟಕದ ಮೇಲೆ ಭಾರೀ ಹೂಡಿಕೆಗೆ ಸಿದ್ದವಾದ ಮಾರುತಿ ಸುಜುಕಿ

ಹರಿಯಾಣ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (HSIIDC) ಸಂಸ್ಥೆಯು ಸೋನಿಪತ್ ಜಿಲ್ಲೆಯ ಐಎಂಟಿ ಖಾರ್ಖೋಡಾದಲ್ಲಿ ಬರೋಬ್ಬರಿ 800 ಎಕರೆ ಜಮೀನು ಮಂಜೂರು ಮಾಡಿದ್ದು, ಹೊಸ ಘಟಕವನ್ನು ಹಂತ-ಹಂತವಾಗಿ ಅಭಿವೃದ್ದಿಗೊಳಿಸಲಿರುವ ಕಂಪನಿಯು 2025ರ ವೇಳೆಗೆ ಅಧಿಕೃತವಾಗಿ ಉತ್ಪಾದನಾ ಪ್ರಕ್ರಿಯೆ ಕೈಗೊಳ್ಳಲಿದೆ.

ಈ ವಾರದ ಪ್ರಮುಖ ಸುದ್ದಿಗಳು

ಆರಂಭಿಕವಾಗಿ 2.50 ಲಕ್ಷ ವಾಹನಗಳನ್ನು ವಾರ್ಷಿಕವಾಗಿ ಉತ್ಪಾದನೆ ಕೈಗೊಳ್ಳಲಿರುವ ಮಾರುತಿ ಸುಜುಕಿ ಕಂಪನಿಯು ಭೂ ಸ್ವಾಧೀನ ಪ್ರಕ್ರಿಯೆಗೆ ಮತ್ತು ಮೊದಲ ಹಂತದ ಕಾರು ಘಟಕದ ನಿರ್ಮಾಣಕ್ಕಾಗಿ ಬರೋಬ್ಬರಿ ರೂ.11 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದೆ.

ಈ ವಾರದ ಪ್ರಮುಖ ಸುದ್ದಿಗಳು

ರಾಜ್ಯಾದ್ಯಂತ 1 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣ

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳನ್ನು ಸಹ ಹೆಚ್ಚಿಸಲಾಗುತ್ತಿದ್ದು, ಇನ್ನೆರಡು ತಿಂಗಳಿನಲ್ಲಿ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬರೋಬ್ಬರಿ ಒಂದು ಸಾವಿರ ಹೊಸ ಇವಿ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಇಂಧನ ಸಚಿವ ವಿ ಸುನಿಲ್‌ ಕುಮಾರ್‌ ಭರವಸೆ ನೀಡಿದ್ದಾರೆ.

ಈ ವಾರದ ಪ್ರಮುಖ ಸುದ್ದಿಗಳು

ಮೈಸೂರು ತಾಲೂಕಿನ ಕಡಕೊಳದಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌) ವತಿಯಿಂದ ಆಯೋಜಿಸಿದ್ದ ವಿದ್ಯುತ್‌ ಚಾಲಿತ ವಾಹನಗಳ ಮತ್ತು ಅದರ ಚಾರ್ಜಿಂಗ್‌ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ್ದ ಸಚಿವ ವಿ ಸುನಿಲ್‌ ಕುಮಾರ್‌ ಅವರು, ಮುಂದಿನ ತಿಂಗಳಾಂತ್ಯಕ್ಕೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ಪ್ರವಾಸಿ ತಾಣಗಳು, ಹೆದ್ದಾರಿ ಮತ್ತು ಸರಕಾರಿ ಕಚೇರಿ ಆವರಣದಲ್ಲಿ ಕನಿಷ್ಠ ಒಂದು ಸಾವಿರ ವಿದ್ಯುತ್‌ ಚಾರ್ಜಿಂಗ್‌ ಕೇಂದ್ರಗಳ ಸ್ಥಾಪನೆಯ ಗುರಿ ಹೊಂದಲಾಗಿದೆ ಎಂದರು.

Most Read Articles

Kannada
English summary
Top auto news of the week tata nexon ev max launched mercedes c class launched and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X