ವಾರದ ಸುದ್ದಿ: ಟೊಯೊಟಾ ಹೈರೈಡರ್ ಮತ್ತು ಹ್ಯಂಡೈ ವೆನ್ಯೂ ಎನ್ ಲೈನ್ ಬಿಡುಗಡೆ, ಮಹೀಂದ್ರಾ ಎಕ್ಸ್‌ಯುವಿ400 ಅನಾವರಣ..

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳಲ್ಲಿ ಪ್ರಮುಖ ಹೊಸ ಕಾರುಗಳ ಬಿಡುಗಡೆ ಮತ್ತು ಕಾರುಗಳ ಅನಾವರಣ ಸುದ್ದಿಗಳು ಪ್ರಮುಖವಾಗಿದ್ದು, ಇದರ ಜೊತೆಗೆ ಆಟೋಮೊಬೈಲ್ ವಲಯದಲ್ಲಿ ಜರುಗಿದ ಈ ವಾರದ ಪ್ರಮುಖ ಸುದ್ದಿಗಳನ್ನು ಕೆಳಗಿನ ಸ್ಲೈಡ್‌ಗಳಲ್ಲಿ ಒಂದೊಂದಾಗಿ ನೋಡೋಣ.

ಈ ವಾರದ ಪ್ರಮುಖ ಸುದ್ದಿಗಳು

ಎಕ್ಸ್‌ಯುವಿ400 ಎಲೆಕ್ಟ್ರಿಕ್ ಎಸ್‌ಯುವಿ ಅನಾವರಣ

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ವಿಶೇಷ ಆಸಕ್ತಿ ವಹಿಸಿರುವ ಮಹೀಂದ್ರಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಮಾದರಿಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಹೊಸ ಯೋಜನೆಯ ಮೊದಲ ಮಾದರಿಯಾಗಿ ಎಕ್ಸ್‌ಯುವಿ400 ಇವಿ ಎಸ್‌ಯುವಿಯನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ.

ಹೊಸ ಕಾರನ್ನು ಕಂಪನಿಯು 2023ರ ಜನವರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿ ಅದೇ ತಿಂಗಳು ವಿತರಣೆ ಆರಂಭಿಸಲಿದ್ದು, ಹೊಸ ಕಾರು 39.4 kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 100kW ಎಲೆಕ್ಟ್ರಿಕ್ ಮೋಟಾರ್ ಪಡೆದುಕೊಂಡಿದ್ದು, ಇದು ಅತ್ಯುತ್ತಮ ಪರ್ಫಾಮೆನ್ಸ್‌ ಜೊತೆಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 456 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಈ ವಾರದ ಪ್ರಮುಖ ಸುದ್ದಿಗಳು

ಬೆಲೆ, ಮೈಲೇಜ್ ಮತ್ತು ತಾಂತ್ರಿಕ ಸೌಲಭ್ಯಗಳ ವಿಚಾರದಲ್ಲಿ ಹೊಸ ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ವಿವಿಧ ವೆರಿಯೆಂಟ್‌ಗಳೊಂದಿಗೆ ರೂ. 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

ಈ ವಾರದ ಪ್ರಮುಖ ಸುದ್ದಿಗಳು

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಬಿಡುಗಡೆ

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹೈಬ್ರಿಡ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.99 ಲಕ್ಷ ಬೆಲೆ ಹೊಂದಿದೆ. ವಿವಿಧ ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಇ, ಎಸ್, ಜಿ, ವಿ ವೆರಿಯೆಂಟ್‌ಗಳನ್ನು ಹೊಂದಿದ್ದು, ಸದ್ಯಕ್ಕೆ ಹೈಬ್ರಿಡ್ ಮಾದರಿಯ ಬೆಲೆ ಮಾಹಿತಿ ಬಹಿರಂಗಪಡಿಸಲಾಗಿದೆ.

ಈ ವಾರದ ಪ್ರಮುಖ ಸುದ್ದಿಗಳು

ಅರ್ಬನ್ ಕ್ರೂಸರ್ ಹೈರೈಡರ್‌ನಲ್ಲಿ ಟೊಯೊಟಾ ಕಂಪನಿಯು 1.5 ಲೀಟರ್ ಅಟ್ಕಿನ್ಸನ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಇದು ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ. ಇದರಲ್ಲಿ ಇ-ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಸಾಮಾನ್ಯ ಮಾದರಿಯು 1.5 ಲೀಟರ್ K15C ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಮುಂದಿನ ವಾರ ಬೆಲೆ ಮಾಹಿತಿ ಲಭ್ಯವಾಗಲಿದೆ.

ಈ ವಾರದ ಪ್ರಮುಖ ಸುದ್ದಿಗಳು

ಹ್ಯುಂಡೈ ವೆನ್ಯೂ ಎನ್ ಲೈನ್ ವರ್ಷನ್ ಬಿಡುಗಡೆ

ಹ್ಯುಂಡೈ ಕಂಪನಿಯು ತನ್ನ ಬಹುನೀರಿಕ್ಷಿತ ವೆನ್ಯೂ ಎನ್ ಲೈನ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.16 ಲಕ್ಷ ಬೆಲೆ ಹೊಂದಿದೆ. ಹೊಸ ವೆನ್ಯೂ ಎನ್ ಲೈನ್ ಆವೃತ್ತಿಯು ವಿವಿಧ ತಾಂತ್ರಿಕ ಅಂಶಗಳನ್ನು ಆಧರಿಸಿ ಎನ್6 ಮತ್ತು ಎನ್8 ಎನ್ನುವ ಎರಡು ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದ್ದು, ಎನ್8 ರೂಪಾಂತರವು ರೂ. 13.15 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ಎನ್6 ಮತ್ತು ಎನ್8 ರೂಪಾಂತರಗಳು ಸ್ಟ್ಯಾಂಡರ್ಡ್ ರೂಪಾಂತರಗಳಾದ ಎಸ್(ಒ) ಮತ್ತು ಎಸ್ಎಕ್ಸ್(ಒ) ರೂಪಾಂತರಗಳನ್ನು ಆಧರಿಸಿದ್ದು, ಹೊಸ ಆವೃತ್ತಿಯನ್ನು ಕಂಪನಿಯು ಕೇವಲ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಮಾರಾಟ ಮಾಡುತ್ತಿದೆ. ಹೊಸ ಮಾದರಿಯಲ್ಲಿ ಹಲವಾರು ಹೊಸ ಫೀಚರ್ಸ್ ನೀಡಿದ್ದು, ಇವು ಸ್ಟ್ಯಾಂಡರ್ಡ್ ಮಾದರಿಗಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳಲು ಸಹಕಾರಿಯಾಗಲಿವೆ.

ಈ ವಾರದ ಪ್ರಮುಖ ಸುದ್ದಿಗಳು

ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಸ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಎಸ್‌ಯುವಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 36.67 ಲಕ್ಷ ಬೆಲೆ ಹೊಂದಿದೆ. ಸಿ5 ಏರ್‌ಕ್ರಾಸ್ ಕಾರು ಮಾದರಿಯು ಇದೀಗ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಕೇವಲ ಶೈನ್ ಟಾಪ್ ಎಂಡ್ ವೆರಿಯೆಂಟ್‌ನಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ.

ಈ ವಾರದ ಪ್ರಮುಖ ಸುದ್ದಿಗಳು

ಹೊಸ ಫೇಸ್‌ಲಿಫ್ಟ್ ಕಾರಿನಲ್ಲಿ ಸಿಟ್ರನ್ ಕಂಪನಿಯು ಈ ಹಿಂದಿನ ಮಾದರಿಯಲ್ಲಿದ್ದ 2.0 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 177 ಬಿಎಚ್‌ಪಿ ಮತ್ತು 400 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಫೇಸ್‌ಲಿಫ್ಟ್ ಮಾದರಿಯಲ್ಲಿ ಕಂಪನಿಯು ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದೆ.

ಈ ವಾರದ ಪ್ರಮುಖ ಸುದ್ದಿಗಳು

ಬಿಎಂಡಬ್ಲ್ಯು ಹೊಸ ಎಕ್ಸ್4 50 ಜಹ್ರೇ ಎಂ ಎಡಿಷನ್ ಬಿಡುಗಡೆ

ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಸರಣಿಯಲ್ಲಿ ಹೊಸದಾಗಿ 50 ಜಹ್ರೇ ಎಂ ಎಡಿಷನ್ ಬಿಡುಗಡೆಗೊಳಿಸುತ್ತಿದ್ದು, ಇದೀಗ ಎಕ್ಸ್4 ಕೂಪೆ ಮಾದರಿಯಲ್ಲೂ ಹೊಸ ಎಡಿಷನ್ ಪರಿಚಯಿಸಲಾಗಿದೆ. ಹೊಸ ಎಕ್ಸ್4 50 ಜಹ್ರೇ ಎಂ ಎಡಿಷನ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 72.90 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಸುಮಾರು ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ಬಿಎಂಡಬ್ಲ್ಯು ಕಂಪನಿಯು ಹೊಸ ಎಕ್ಸ್4 50 ಜಹ್ರೇ ಎಂ ಎಡಿಷನ್ ಅನ್ನು ಎರಡು ವೆರಿಯೆಂಟ್‌ಗಳಲ್ಲಿ ಪರಿಚಯಿಸಿದ್ದು, ಆರಂಭಿಕ ಮಾದರಿಯಾದ ಎಕ್ಸ್4 30ಐ ಎಂ ಸ್ಪೋರ್ಟ್ 50 ಜಹ್ರೇ ಎಂ ಎಡಿಷನ್ ಬೆಲೆ ರೂ. 72.90 ಲಕ್ಷವಾದರೆ ಎಕ್ಸ್4 30ಡಿ ಎಂ ಸ್ಪೋರ್ಟ್ 50 ಜಹ್ರೇ ಎಂ ಎಡಿಷನ್ ರೂ. 74.90 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ಆಡಿ ಕ್ಯೂ7 ಲಿಮಿಟೆಡ್ ಎಡಿಷನ್ ಬಿಡುಗಡೆ

ಆಡಿ ಇಂಡಿಯಾ ಕಂಪನಿಯು ಮುಂಬರುವ ದಸರಾ ಮತ್ತು ದೀಪಾವಳಿ ವಿಶೇಷತೆಗಾಗಿ ತನ್ನ ಫ್ಲ್ಯಾಗ್‌ಶಿಪ್ ಎಸ್‌ಯುವಿಯಾದ ಕ್ಯೂ7 ಲಿಮಿಟೆಡ್ ಎಡಿಷನ್ ಪರಿಚಯಿಸಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 88.08 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ಭಾರತದಲ್ಲಿ ಮುಂಬರುವ ಹಬ್ಬದ ಋತುಗಳ ವಿಶೇಷತೆಗಾಗಿ ವಿವಿಧ ವಾಹನ ಕಂಪನಿಗಳು ತನ್ನ ಪ್ರಮುಖ ವಾಹನಗಳಲ್ಲಿ ವಿಶೇಷ ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದ್ದು, ಇದೀಗ ಆಡಿ ಕಂಪನಿಯು ಸಹ ಕ್ಯೂ7 ಎಸ್‌ಯುವಿ ವಿಶೇಷ ಆವೃತ್ತಿಯನ್ನು ಸೀಮಿತ ಸಂಖ್ಯೆಯಲ್ಲಿ ಬಿಡುಗಡೆ ಮಾಡಿದೆ. ಹೊಸ ಕಾರು ಸ್ಟ್ಯಾಂಡರ್ಡ್ ಮಾದರಿಗಿಂತಲೂ ತುಸು ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಈ ವಾರದ ಪ್ರಮುಖ ಸುದ್ದಿಗಳು

ಬಿಡುಗಡೆಯಾಗಲಿದೆ ಬಿವೈಡಿ ಅಟ್ಟೊ 3

ಚೀನಿ ಮೂಲದ ಬಿವೈಡಿ(ಬಿಲ್ಡ್ ಯುವರ್ ಡ್ರಿಮ್) ಕಂಪನಿಯು ಭಾರತದಲ್ಲಿ 2007ರಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದು, ಆರಂಭದಲ್ಲಿ ಎಲೆಕ್ಟ್ರಾನಿಕ್ ಬಿಡಿಭಾಗಗಳು ಮತ್ತು ಬ್ಯಾಟರಿ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟ ಆರಂಭಿಸಿದ ಕಂಪನಿಯು ಇದೀಗ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೂ ಪ್ರವೇಶಿಸಿದೆ. ಮೊದಲ ಹಂತದಲ್ಲಿ ಇ6 ಎಂಪಿವಿ ಕಾರು ಬಿಡುಗಡೆ ಮಾಡಿದ್ದ ಕಂಪನಿಯು ಇದೀಗ ಎಸ್‌ಯುವಿ ವಿಭಾಗಗಕ್ಕೆ ಹೊಸ ಅಟ್ಟೊ 3 ಪರಿಚಯಿಸುತ್ತಿದೆ.

ಈ ವಾರದ ಪ್ರಮುಖ ಸುದ್ದಿಗಳು

ಅಟ್ಟೊ 3 ಎಸ್‌ಯುವಿ ಮಾದರಿಯಲ್ಲಿ ಬಿವೈಡಿ ಕಂಪನಿಯು 60.48kWh ಮತ್ತು 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಯಿದ್ದು, ಗ್ರಾಹಕರು ತಮ್ಮ ಅಗತ್ಯತೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಖರೀದಿಸಬಹುದಾಗಿದೆ. ಪ್ರತಿ ಚಾರ್ಜ್‌ಗೆ 320 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಹೊಂದಿದ್ದು, ಎಂಜಿ ಜೆಡ್ಎಸ್ ಇವಿ ಮತ್ತು ಹ್ಯುಂಡೈ ಕೊನಾ ಇವಿ ಕಾರುಗಳಿಗೆ ಇದು ಉತ್ತಮ ಪೈಪೋಟಿಯಾಗಲಿದೆ.

ಈ ವಾರದ ಪ್ರಮುಖ ಸುದ್ದಿಗಳು

ದಂಡೇರಾ ಓಟುವಾ ಕಾರ್ಗೋ ಎಲೆಕ್ಟ್ರಿಕ್ ವಾಹನ ಬಿಡುಗಡೆ

2022ರ ಇವಿ ಇಂಡಿಯಾ ಎಕ್ಸ್‌ಪೋ ಗ್ರೇಟರ್ ನೋಯ್ಡಾದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಇವಿ ಆಟೋ ಎಕ್ಸ್‌ಪೋದಲ್ಲಿ ಹಲವಾರು ಹೊಸ ಮಾದರಿಯ ಇವಿ ವಾಹನಗಳನ್ನು ಪ್ರದರ್ಶನಗೊಳ್ಳುತ್ತಿವೆ. ಇವಿ ಇಂಡಿಯಾ ಎಕ್ಸ್‌ಪೋದಲ್ಲಿ ಸ್ಟಾರ್ಟ್ಅಪ್ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಯಾಗಿರುವ ದೆಹಲಿ ಮೂಲದ ದಂಡೇರಾ ವೆಂಚರ್ಸ್ ತನ್ನ ಹೊಸ ಇವಿ ವಾಹನಗಳನ್ನು ಪ್ರದರ್ಶನಗೊಳಿಸುತ್ತಿದ್ದು, ಬಹುನೀರಿಕ್ಷಿತ ಮಾದರಿಯಾದ ಓಟುವಾ ಕಾರ್ಗೋ ಎಲೆಕ್ಟ್ರಿಕ್ ತ್ರಿ-ಚಕ್ರ ವಾಹನವನ್ನು ಬಿಡುಗಡೆ ಮಾಡಿದೆ.

ಈ ವಾರದ ಪ್ರಮುಖ ಸುದ್ದಿಗಳು

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರ್ಗೊ ಅಪ್ಲಿಕೇಷನ್ ಆಧರಿಸಿ ದಂಡೇರಾ ಓಟುವಾ ಕಾರ್ಗೋ ಎಲೆಕ್ಟ್ರಿಕ್ ವಾಹನವು ಅಭಿವೃದ್ದಿಗೊಂಡಿದ್ದು, ಇದು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 3.50 ಲಕ್ಷದಿಂದ ರೂ. 5.50 ಲಕ್ಷ ಬೆಲೆ ಹೊಂದಿದೆ. ಇದು ಪ್ರತಿ ಚಾರ್ಜ್‌ಗೆ 165 ಕಿ.ಮೀ ಮೈಲೇಜ್‌ನೊಂದಿಗೆ ಗರಿಷ್ಠ 900 ಕೆ.ಜಿ ಸರಕು ಸಾಗಾಣಿಕೆ ಸಾಮರ್ಥ್ಯ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

ಮಾಂಟ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ

ಮಾಂಟ್ರಾ ಎಲೆಕ್ಟ್ರಿಕ್ ತ್ರಿ ಚಕ್ರ ಆಟೋ ಮಾದರಿಯು ಭಾರತದಲ್ಲಿ ಬಿಡುಗಡೆಗೊಂಡಿದ್ದು, ಹೊಸ ಇವಿ ಆಟೋ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 3.02 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಸುದ್ದಿಗಳು

10kWh ಬ್ಯಾಟರಿ ಪ್ಯಾಕ್ಅಪ್ ಮೂಲಕ ಹೊಸ ಇವಿ ವಾಹನವು ಪ್ರತಿ ಚಾರ್ಜ್‌ಗೆ ಗರಿಷ್ಠ 197 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಪ್ರಯಾಣಿಕ ಸಾಗಾಣಿಕೆಯೊಂದಿಗೆ ಕನಿಷ್ಠ 155 ಕಿ.ಮೀ ರಿಯಲ್ ವರ್ಲ್ಡ್ ಮೈಲೇಜ್ ಖಾತ್ರಿಪಡಿಸುತ್ತದೆ.

ಈ ವಾರದ ಪ್ರಮುಖ ಸುದ್ದಿಗಳು

ಎಕ್ಸ್‌ಯುವಿ700 ಎಸ್‌ಯುವಿ ಬೆಲೆ ಇಳಿಕೆ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಇದೀಗ ಹೊಸ ಕಾರಿನಲ್ಲಿ ಕೆಲವು ಬದಲಾವಣೆಗಳೊಂದಿಗೆ ಬೆಲೆ ಇಳಿಕೆ ಘೋಷಣೆ ಮಾಡಿದೆ.

ಈ ವಾರದ ಪ್ರಮುಖ ಸುದ್ದಿಗಳು

ಎಕ್ಸ್‌ಯುವಿ700 ಎಸ್‌ಯುವಿಯ ಪ್ರಮುಖ ವೆರಿಯೆಂಟ್‌ಗಳ ಬೆಲೆಯಲ್ಲಿ ಕಂಪನಿಯು ಎಕ್ಸ್‌ಶೋರೂಂ ದರದಲ್ಲಿ ಸುಮಾರು ರೂ. 6 ಸಾವಿರದಷ್ಟು ಬೆಲೆ ಇಳಿಕೆ ಮಾಡಿದ್ದು, ಹೊಸ ದರಪಟ್ಟಿಯಲ್ಲಿ ಇದೀಗ ಆರಂಭಿಕ ಮಾದರಿಯು 13.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.58 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Top auto news of the week toyota hyryder launched mahindra xuv400 unveiled and more
Story first published: Saturday, September 10, 2022, 22:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X