ವಾರದ ಸುದ್ದಿ: ವೊಲ್ವೊ ಹೊಸ ಇವಿ ಕಾರು ಬಿಡುಗಡೆ, ಬುಕಿಂಗ್‌ನಲ್ಲಿ ಸ್ಕಾರ್ಪಿಯೋ ಎನ್ ಹೊಸ ದಾಖಲೆ..

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳಲ್ಲಿ ಹೊಸ ಕಾರುಗಳ ಬಿಡುಗಡೆ, ಕಾರು ಮಾರಾಟದಲ್ಲಿ ಪ್ರಮುಖ ಬದಲಾವಣೆಗಳ ಸುದ್ದಿಗಳು ಪ್ರಮುಖವಾಗಿದ್ದು, ಕೆಳಗಿನ ಸ್ಲೈಡ್‌ಗಳಲ್ಲಿ ಈ ವಾರದ ಪ್ರಮುಖ ಸುದ್ದಿಗಳ ಮತ್ತಷ್ಟು ಮಾಹಿತಿಗಳನ್ನು ಒಂದೊಂದಾಗಿ ನೋಡೋಣ.

ವಾರದ ಪ್ರಮುಖ ಆಟೋ ಸುದ್ದಿಗಳು

ವೊಲ್ವೊ ಎಕ್ಸ್‌ಸಿ40 ರೀಚಾರ್ಜ್ ಇವಿ ಬಿಡುಗಡೆ

ವೊಲ್ವೊ ಕಂಪನಿಯು ಎಕ್ಸ್‌ಸಿ40 ರೀಚಾರ್ಜ್ ಇವಿ ಕಾರು ಮಾದರಿಯನ್ನು ಎಕ್ಸ್‌ಶೋರೂಂ ಪ್ರಕಾರ ರೂ. 55.90 ಲಕ್ಷಕ್ಕೆ ಬಿಡುಗಡೆ ಮಾಡಿದ್ದು, ಹೊಸ ಎಕ್ಸ್‌ಸಿ40 ರೀಚಾರ್ಜ್ ಮಾದರಿಯಲ್ಲಿ 78kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದೆ. ಇದು ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಆಯ್ಕೆ ಹೊಂದಿರುವ ಹೊಸ ಕಾರು 402 ಬಿಎಚ್‌ಪಿ ಮತ್ತು 660 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರಿನಲ್ಲಿ ಕಂಪನಿಯು ಸ್ಟ್ಯಾಂಡರ್ಡ್ ಆಗಿ 11kW ಹೋಂ ಚಾರ್ಜರ್ ನೀಡಲಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ನೀಡುವುದಾಗಿ ಡಬ್ಲ್ಯುಎಲ್‌ಟಿಪಿ ಟೆಸ್ಟಿಂಗ್‌ ಮೂಲಕ ಪ್ರಮಾಣೀಕರಿಸಲಾಗಿದೆ. 11kW ಹೋಂ ಚಾರ್ಜರ್ ಮೂಲಕ ಬ್ಯಾಟರಿ ಪೂರ್ತಿ ಚಾರ್ಜ್ ಮಾಡಲು ಕನಿಷ್ಠ 12 ರಿಂದ 18 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 50kW ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಎರಡೂವರೆ ಗಂಟೆಗಳಲ್ಲಿ ಪೂರ್ತಿ ಚಾರ್ಜ್ ಮಾಡಬಹುದಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಸ್ಕಾರ್ಪಿಯೋ-ಎನ್ ಬುಕಿಂಗ್

ಮಹೀಂದ್ರಾ ಕಂಪನಿಯು ತನ್ನ ಹೊಸ ಸ್ಕಾರ್ಪಿಯೋ-ಎನ್ ಎಸ್‌ಯುವಿ ಮಾದರಿಗಾಗಿ ಇಂದು ಬೆಳಗ್ಗೆ 11 ಗಂಟೆಯಿಂದ ರೂ. 21 ಸಾವಿರ ಮುಂಗಡದೊಂದಿಗೆ ಬುಕಿಂಗ್ ಆರಂಭಿಸಿತ್ತು. ಬುಕಿಂಗ್ ಆರಂಭವಾದ ಮೊದಲ 1 ನಿಮಿಷದಲ್ಲಿ 25 ಸಾವಿರ ಗ್ರಾಹಕರು ಬುಕಿಂಗ್ ಸಲ್ಲಿಸಿದರೆ 30 ನಿಮಿಷದೊಳಗಾಗಿ ಒರೋಬ್ಬರಿ 1 ಲಕ್ಷ ಗ್ರಾಹಕರು ಬುಕಿಂಗ್ ಸಲ್ಲಿಸಿದ್ದಾರೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಸ್ಕಾರ್ಪಿಯೋ-ಎನ್ ಕಾರು ಖರೀದಿಗೆ ಅಧಿಕೃತ ವೆಬ್‌ಸೈಟ್ ಮೂಲಕ ಇಲ್ಲವೇ ನೇರವಾಗಿ ಡೀಲರ್ಸ್‌ಗಳಲ್ಲೂ ಬುಕಿಂಗ್ ದಾಖಲಿಸಬಹುದಾಗಿದ್ದು, ಸೆಪ್ಟೆಂಬರ್ 26 ರಿಂದ ಹೊಸ ಕಾರಿನ ವಿತರಣೆ ಆರಂಭವಾಗಲಿದೆ. ಹೊಸ ಕಾರು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಇ-ಅಮೃತ್ ಮೊಬೈಲ್ ಆಪ್ ಬಿಡುಗಡೆ

ಭಾರತದಲ್ಲಿ ಎಲೆಕ್ಟ್ರಿಕ್ ಮೊಬಿಲಿಟಿಯನ್ನು ಉತ್ತೇಜಿಸಲು ನೀತಿ ಆಯೋಗ ಕೆಲವು ಪ್ರಮುಖ ಉಪಕ್ರಮಗಳನ್ನು ತೆಗೆದುಕೊಂಡಿದೆ. ಇದರ ಭಾಗವಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿದ ಸಂಸ್ಥೆಯು ಭಾರತೀಯ ನಾಗರಿಕರಲ್ಲಿ ಇ-ಮೊಬಿಲಿಟಿ ಬಗ್ಗೆ ಜಾಗೃತಿ ಮೂಡಿಸಲು ಇ-ಅಮೃತ್ ಹೆಸರಿನ ಮೊಬೈಲ್ ಅಪ್ಲಿಕೇಶನ್ (ಆಪ್) ಅನ್ನು ಪ್ರಾರಂಭಿಸಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಆಂಡ್ರಾಯ್ಡ್ ಆಧಾರಿತ ಸ್ಮಾರ್ಟ್‌ಫೋನ್‌ಗಳಿಗಾಗಿ ಅಪ್ಲಿಕೇಶನ್ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದೆ. ಇ-ಅಮೃತ್ ಮೊಬೈಲ್ ಅಪ್ಲಿಕೇಶನ್ ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಬಳಕೆದಾರರಿಗೆ ಒದಗಿಸುತ್ತದೆ. ಎಲೆಕ್ಟ್ರಿಕ್ ವಾಹನಗಳ ಪ್ರಯೋಜನಗಳನ್ನು ನಿರ್ಣಯಿಸಲು, ಉಳಿತಾಯವನ್ನು ನಿರ್ಧರಿಸಲು ಇದು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ಮತ್ತು ಉದ್ಯಮದ ಅಭಿವೃದ್ಧಿಯ ಕುರಿತು ಎಲ್ಲಾ ಮಾಹಿತಿಯನ್ನು ಒದಗಿಸುತ್ತದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಎಕ್ಸ್5 ಎಕ್ಸ್‌ಡ್ರೈವ್ 30ಡಿ ಎಂ ಸ್ಪೋರ್ಟ್ ಬಿಡುಗಡೆ

ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಬಿಎಂಡಬ್ಲ್ಯು ಎಕ್ಸ್5 ಸರಣಿಯಲ್ಲಿ ಹೊಸ ವೆರಿಯೆಂಟ್ ಒಂದನ್ನು ಪರಿಚಯಿಸಿದ್ದು, ಹೊಸ ಎಕ್ಸ್5 ಎಕ್ಸ್‌ಡ್ರೈವ್ 30ಡಿ ಎಂ ಸ್ಪೋರ್ಟ್ ಬಿಡುಗಡೆಯಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಬಿಎಂಡಬ್ಲ್ಯು ಎಕ್ಸ್5 ಎಕ್ಸ್‌ಡ್ರೈವ್ 30ಡಿ ಎಂ ಸ್ಪೋರ್ಟ್ ಎಕ್ಸ್5 ಸರಣಿಯ ಟಾಪ್ ಎಂಡ್ ಆವೃತ್ತಿಯಾಗಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 97.90 ಲಕ್ಷ ಬೆಲೆ ಹೊಂದಿದೆ. ಹೊಸ ಮಾದರಿಯೊಂದಿಗೆ ಕಂಪನಿಯು ಹೆಚ್ಚಿನ ಮಟ್ಟದ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರನ್ನು ಸೆಳೆಯಲಿದ್ದು, ಸ್ಪೋರ್ಟಿ ವಿನ್ಯಾಸ ಮತ್ತು ಕೆಲವು ಹೆಚ್ಚುವರಿ ಪ್ರೀಮಿಯಂ ಫೀಚರ್ಸ್ ಹೊರತುಪಡಿಸಿ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ವಾರದ ಪ್ರಮುಖ ಆಟೋ ಸುದ್ದಿಗಳು

ಇವಿ ವಾಹನಗಳಿಗಾಗಿ ವಿಶೇಷ ಟೈರ್ ಅನಾವರಣ

ದೇಶಿಯ ಮಾರುಕಟ್ಟೆಯಲ್ಲಿನ ಟೈರ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಜೆಕೆ ಟೈರ್ ಕಂಪನಿಯು ಎಲೆಕ್ಟ್ರಿಕ್ ವಾಹನಗಳಿಗಾಗಿ ವಿಶೇಷ ತಂತ್ರಜ್ಞಾನ ಪ್ರೇರಿತ ಸ್ಮಾರ್ಟ್ ರೇಡಿಯಲ್ ಟೈರ್ ಶ್ರೇಣಿಯನ್ನು ಅನಾವರಣಗೊಳಿಸಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಆಟೋ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಜೆಕೆ ಟೈರ್ ಕಂಪನಿಯು ಹೊಸ ಬಗೆಯ ಟೈರ್ ಶ್ರೇಣಿಯನ್ನು ಅನಾವರಣ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಿ ಅಭಿವೃದ್ದಿಪಡಿಸಲಾಗಿದೆ. ಹೊಸ ಟೈರ್ ಮಾದರಿಗಳನ್ನು ಎಲೆಕ್ಟ್ರಿಕ್ ಬಸ್, ಕಾರು ಮತ್ತು ವಾಣಿಜ್ಯ ವಾಹನಗಳಿಗಾಗಿ ಸಿದ್ದಪಡಿಸಿದ್ದು, ಹೊಸ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸ್ಮಾರ್ಟ್ ರೇಡಿಯಲ್ ಟೈರ್‌ಗಳು ಉತ್ತಮ ಕಾರ್ಯಕ್ಷಮತೆಗೆ ಸಹಕಾರಿಯಾಗಲಿವೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ್ದು, ಹೊಸ ದರ ಪಟ್ಟಿಯಲ್ಲಿ ವಿವಿಧ ಮಾದರಿಗಳಿಗೆ ಅನುಸಾರವಾಗಿ ಗರಿಷ್ಠ ಶೇ. 0.55 ರಿಂದ ಶೇ. 1.50 ರಷ್ಟು ದರ ಹಚ್ಚಿಸಲಾಗಿದೆ. ಕಳೆದ ಮಾರ್ಚ್‌ನಲ್ಲಿ ಪ್ರತಿ ಕಾರು ಬೆಲೆಯಲ್ಲಿ ಶೇ. 1ರಿಂದ ಶೇ.2 ರಷ್ಟು ಹೆಚ್ಚಳ ಘೋಷಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಜುಲೈ 9ರಿಂದ ಜಾರಿಗೆ ಬರುವಂತೆ ವಿವಿಧ ಕಾರುಗಳ ಬೆಲೆಯಲ್ಲಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ. 0.55ರಿಂದ ಶೇ.1.50 ರಷ್ಟು ಬೆಲೆ ಏರಿಕೆ ಮಾಡಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ದರ ಪಟ್ಟಿಯಲ್ಲಿ ವಿವಿಧ ರೂಪಾಂತರಗಳ ಆಧಾರದ ಮೇಲೆ ರೂ. 17 ಸಾವಿರ ತನಕ ಬೆಲೆ ಹೆಚ್ಚಿಸಲಾಗಿದ್ದು, ನೆಕ್ಸಾನ್‌ ಮಾದರಿಯಲ್ಲಿ ಗರಿಷ್ಠ ರೂ 17 ಸಾವಿರ ತನಕ ದರ ಹೆಚ್ಚಿಸಲಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಎಕ್ಸ್‌ಯುವಿ700 ಎಸ್‌ಯುವಿಯಲ್ಲಿ ಹೊಸ ಬದಲಾವಣೆ

ಹೊಸ ಎಕ್ಸ್‌ಯುವಿ700 ಮೂಲಕ ಎಸ್‌ಯುವಿ ಕಾರು ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಮಹೀಂದ್ರಾ ಕಂಪನಿಯು ಗ್ರಾಹಕರ ಬೇಡಿಕೆ ಪೂರೈಕೆಯನ್ನು ಸರಳಗೊಳಿಸಲು ಹೊಸ ಕಾರಿನಲ್ಲಿ ಕೆಲವು ಫೀಚರ್ಸ್‌ಗಳನ್ನು ಬದಲಾವಣೆಗೊಳಿಸಿದ್ದು, ಹೊಸ ಬದಲಾವಣೆಯಲ್ಲಿ ಕೆಲವು ವೆರಿಯೆಂಟ್‌ಗಳಲ್ಲಿ ಪ್ರಮುಖ ಫೀಚರ್ಸ್ ಕಳೆದುಕೊಳ್ಳಲಿದ್ದರೆ ಇನ್ನು ಕೆಲವು ವೆರಿಯೆಂಟ್‌ಗಳಲ್ಲಿ ಹೊಸ ಫೀಚರ್ಸ್ ಸೇರಿಸಲಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಸೆಮಿಕಂಡಕ್ಟರ್ ಕೊರತೆಯಿಂದಾಗಿ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಮಾದರಿಯ ಕೆಲವು ವೆರಿಯೆಂಟ್‌ಗಳಲ್ಲಿ ಸೆಮಿಕಂಡಕ್ಟರ್ ಆಧರಿತ ಕೆಲವು ಫೀಚರ್ಸ್‌ಗಳನ್ನು ಕೈಬಿಡಲಾಗಿದ್ದು, ಹೈ ಎಂಡ್ ಮಾದರಿಯಲ್ಲಿ ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್ ಸೇರಿಸಲಾಗಿದೆ.

Most Read Articles

Kannada
English summary
Top auto news of the week volvo xc40 recharge launched scorpio n registers 1 lakh bookings more
Story first published: Saturday, July 30, 2022, 22:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X