ಕಾರು ಖರೀದಿಗೆ ಸುವರ್ಣಾವಕಾಶ: ವರ್ಷಾಂತ್ಯದಲ್ಲಿ ಅತಿ ಹೆಚ್ಚು ಡಿಸ್ಕೌಂಟ್ ಹೊಂದಿರುವ ಟಾಪ್ ಎಸ್‍ಯುವಿಗಳು

ಪ್ರತಿಯೊಬ್ಬರೂ ಜೀವನದಲ್ಲಿ ಸ್ವಂತ ವಾಹನ ಹೊಂದಬೇಕೆಂದು ಕನಸು ಕಾಣುತ್ತಾರೆ. ನೀವು ವಾಹನ ಖರೀದಿಸಲು ಬಯಸಿದರೆ ವರ್ಷಾಂತ್ಯವು ಖಂಡಿತವಾಗಿಯೂ ಹೊಸ ಕಾರನ್ನು ಖರೀದಿಸಲು ವರ್ಷದ ಅತ್ಯುತ್ತಮ ಸಮಯಗಳಲ್ಲಿ ಒಂದಾಗಿದೆ, , ಏಕೆಂದರೆ ವಾಹನ ತಯಾರಕರು ತಮ್ಮ ಕಾರುಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ನೀಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಸ್‍ಯುವಿಗಳಿಗೆ ಹೆಚ್ಚು ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ಬಹುತೇಕ ಎಲ್ಲಾ ಜನಪ್ರಿಯ ಕಾರು ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ಈ ವಿಭಾಗದಲ್ಲಿ ಬಿಡುಗಡೆಗೊಳಿಸಿವೆ. ಹೊಸ ಕಾರನ್ನು ಖರೀದಿಸಲು ಸೇರುವ ಗ್ರಾಹಕರು ಎಸ್‌ಯುವಿ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಎಸ್‌ಯುವಿ ಮಾದರಿಯು ಅತ್ಯುತ್ತಮ ಪೀಚರ್ಸ್, ಪ್ರಾಯೋಗಿಕತೆ, ಕಾರ್ಯಕ್ಷಮತೆ ಮತ್ತು ಹೆಚ್ಚಿನ ಸ್ಪೇಸ್ ನಿಂದ ಕೂಡಿರುತ್ತದೆ. ಈ ಕಾರಣದಿಂದ ಎಸ್‌ಯುವಿ ಮಾದರಿಗಳು ಹೆಚ್ಚು ಜನಪ್ರಿಯತೆಗಳಿಸುತ್ತಿದೆ, ಈ ವರ್ಷಾಂತ್ಯದಲ್ಲಿ ಅತಿ ಹೆಚ್ಚು ರಿಯಾಯಿತಿಗಳನ್ನು ಹೊಂದಿರುವ ಟಾಪ್ ಎಸ್‍ಯುವಿಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅತಿ ಹೆಚ್ಚು ಡಿಸ್ಕೌಂಟ್ ಹೊಂದಿರುವ ಟಾಪ್ ಎಸ್‍ಯುವಿಗಳು

ಜೀಪ್ ಮೆರಿಡಿಯನ್
ಈ ವರ್ಷದ ಆರಂಭದಲ್ಲಿ ಜೀಪ್ ಮೆರಿಡಿಯನ್ ಅನ್ನು ಬಿಡುಗಡೆ ಮಾಡಲಾಗಿತ್ತು. ಅಮೆರಿಕ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿ ಜೀಪ್ ಭಾರತದಲ್ಲಿ ಮೆರಿಡಿಯನ್ ಎಸ್‍ಯುವಿ ಮೇಲೆ ರೂ. 2.5 ಲಕ್ಷದವರೆಗೆ ಯಾಯಿತಿಯನ್ನು ನೀಡುತ್ತಿದ್ದಾರೆ. ಜೀಪ್ ಮೆರಿಡಿಯನ್ ಬಗ್ಗೆ ಹೇಳುವುದಾದರೆ, ಜೀಪ್ ಮೆರಿಡಿಯನ್ ಎಸ್‍ಯುವಿಯನ್ನು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ ಮತ್ತು ಕಂಪಾಸ್ ಆಧಾರಿತವಾದ ಫ್ಲಾಟ್ ಫಾರ್ಮ್ ಅನ್ನು ಹಂಚಿಕೊಳ್ಳುತ್ತದೆ. ಈ ಹೊಸ ಜೀಪ್ ಮೆರಿಡಿಯನ್ ಜನಪ್ರಿಯ ಕಂಪಾಸ್ ಎಸ್‍ಯುವಿಯನ್ನು ಆಧರಿಸಿದೆ.

ಜೀಪ್ ಮೆರಿಡಿಯನ್ ಮಾದರಿ ದಕ್ಷಿಣ ಅಮೆರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಜೀಪ್ ಕಮಾಂಡರ್‌ನೊಂದಿಗೆ ಹಲವಾರು ಸಾಮ್ಯತೆಯನ್ನು ಹೊಂದಿದೆ. ಈ ಜೀಪ್ ಮೆರಿಡಿಯನ್‌ ಎಸ್‍ಯುವಿಯಲ್ಲಿ 2.0 ಲೀಟರ್ ನಾಲ್ಕು-ಸಿಲಿಂಡರ್ ಮಲ್ಟಿಜೆಟ್ II ಡೀಸೆಲ್ ಎಂಜಿನ್‌ ಅನ್ನು ಹೊಂದಿರಲಿದೆ. ಈ ಎಂಜಿನ್ 168 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 9-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಜೋಡಿಸಲಾಗಿದೆ.

ಸ್ಕೋಡಾ ಕುಶಾಕ್
ಕಂಪನಿಯ ವರ್ಷಾಂತ್ಯದ ಕೊಡುಗೆಗಳ ಭಾಗವಾಗಿ ಜೆಕ್ ಕಾರು ತಯಾರಕರು ಈ ಡಿಸೆಂಬರ್‌ನಲ್ಲಿ ಸ್ಕೋಡಾ ಕುಶಾಕ್ ಎಸ್‌ಯುವಿಯಲ್ಲಿ 1.25 ಲಕ್ಷ ರೂಪಾಯಿಗಳವರೆಗೆ ರಿಯಾಯಿತಿಗಳು ಮತ್ತು ಪ್ರಯೋಜನಗಳನ್ನು ನೀಡುತ್ತಿದ್ದಾರೆ. ಸ್ಕೋಡಾ ಕುಶಾಕ್ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯಲ್ಲಿ 1.0-ಲೀಟರ್ TSI ಪೆಟ್ರೋಲ್ ಎಂಜಿನ್ ಅಥವಾ ಹೆಚ್ಚು ಪವರ್ ಫುಲ್ 1.5-ಲೀಟರ್ TSI ಪೆಟ್ರೋಲ್ ಎಂಜಿನ್‌ನೊಂದಿಗೆ ನಿರ್ದಿಷ್ಟಪಡಿಸಬಹುದು. ಇದಲ್ಲದೆ, ಎರಡೂ ಪವರ್‌ಟ್ರೇನ್‌ಗಳನ್ನು ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್ರ್ ಬಾಕ್ಸ್ ನೊಂದಿಗೆ ನಿರ್ದಿಷ್ಟಪಡಿಸಬಹುದು.

ಫೋಕ್ಸ್ ಕ್ಸ್‌ವ್ಯಾಗನ್ ಟೈಗನ್
ಫೋಕ್ಸ್ ಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ ಯಾಂತ್ರಿಕವಾಗಿ ಸ್ಕೋಡಾ ಕುಶಾಕ್ ಎಸ್‌ಯುವಿಗೆ ಹೋಲುತ್ತದೆ ಮತ್ತು ಎರಡೂ ಎಸ್‌ಯುವಿಗಳನ್ನು ಫೋಕ್ಸ್‌ವ್ಯಾಗನ್‌ನ ಎಂಕ್ಯೂಬಿ-ಎ0 ಐಎನ್ ಪ್ಲಾಟ್‌ಫಾರ್ಮ್‌ ಅಡಿಯಲ್ಲಿ ನಿರ್ಮಿಸಲಾಗಿದೆ. ಈ ಫೋಕ್ಸ್ ಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಮೇಲೆ ರೂ.1 ಲಕ್ಷದವರೆಗೆ ರಿಯಾಯಿತಿಗಳು ಮತ್ತು ಪ್ರಯೋಜನಗಳನ್ನು ನೀಡುತ್ತಿದೆ. ಸ್ಕೋಡಾ ಕುಶಾಕ್‌ನಂತೆ, ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ ಜರ್ಮನ್ ವಾಹನ ತಯಾರಕರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಬೆಳೆವಣಿಗೆಯನ್ನು ಸಾಧಿಸಲು ನೆರವಾಗಿದೆ.

ಟಾಟಾ ಸಫಾರಿ/ಟಾಟಾ ಹ್ಯಾರಿಯರ್
ಟಾಟಾ ಮೋಟಾರ್ಸ್ ತನ್ನ ಮಾರಾಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ವರ್ಷಾಂತ್ಯದ ಕೊಡುಗೆಗಳ ಭಾಗವಾಗಿ ಟಾಟಾ ಸಫಾರಿ ಮತ್ತು ಹ್ಯಾರಿಯರ್ ಎಸ್‌ಯುವಿ ಎರಡರಲ್ಲೂ ರೂ 1 ಲಕ್ಷದವರೆಗೆ ಪ್ರಯೋಜನಗಳು ಮತ್ತು ರಿಯಾಯಿತಿಗಳನ್ನು ನೀಡುತ್ತಿದೆ. ಟಾಟಾ ಸಫಾರಿ ಮತ್ತು ಟಾಟಾ ಹ್ಯಾರಿಯರ್ ಎಸ್‍ಯುವಿಗಳಲ್ಲಿ 2.0-ಲೀಟರ್, ಟರ್ಬೋಚಾರ್ಜ್ಡ್, 4-ಸಿಲಿಂಡರ್ ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿವೆ. ಅದರ ಮೇಲೆ, ಈ ಪವರ್‌ಟ್ರೇನ್ ಅನ್ನು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನೊಂದಿಗೆ ಬರುತ್ತಿದೆ.

ಈ ಸಫಾರಿ ಎಸ್‍ಯುವಿಯಲ್ಲಿ 2741 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಪನೋರಮಿಕ್ ಸನ್ ರೂಫ್, ಸಿಗ್ನೇಚರ್ ಆಸ್ಟರ್ ವೈಟ್ ಇಂಟೀರಿಯರ್ಸ್ ಜೊತೆಗೆ ಆಶ್‌ವುಡ್ ಫಿನಿಶ್ ಡ್ಯಾಶ್‌ಬೋರ್ಡ್ ಮತ್ತು 8.8 ಇಂಚಿನ ಫ್ಲೋಟಿಂಗ್ ಐಲ್ಯಾಂಡ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಒಳಗೊಂಡಿದೆ. ಈ ಎಸ್‍ಯುವಿಯ ಬೆಸ್ ರೂಪಾಂತರಗಳಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಅನ್ನು ಒಳಗೊಂಡಿದೆ.

Most Read Articles

Kannada
English summary
Top suvs highest year end offers details
Story first published: Monday, December 19, 2022, 11:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X