Just In
- 8 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 8 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 10 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 10 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟೊಯೊಟಾ ಹೈಲಕ್ಸ್ ಪಿಕ್ಅಪ್
ಟೊಯೊಟಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಬಹುನೀರಿಕ್ಷಿತ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರನ್ನು ಕಂಪನಿಯು ಈಗಾಗಲೇ ತನ್ನ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿದೆ.

ಹೊಸ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯು ಮುಂದಿನ ತಿಂಗಳ ಮಧ್ಯಂತರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಪಿಕ್ಅಪ್ ಮಾದರಿಯು ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಆಕರ್ಷಕ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಹೊಸ ಕಾರು ಆನ್ ರೋಡ್ ಮತ್ತು ಆಫ್ ರೋಡ್ ಎರಡಲ್ಲೂ ಗಮನಸೆಳೆಯಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಎಂಪಿವಿ ಮತ್ತು ಫಾರ್ಚೂನರ್ ಎಸ್‌ಯುವಿ ನಡುವಿನ ಸ್ಥಾನದಲ್ಲಿ ಮಾರಾಟಗೊಳ್ಳಲಿದೆ.

ಇನೋವೆಟಿವ್ ಮಲ್ಟಿ ಪರ್ಪಸ್ ವೆಹಿಕಲ್(ಐಎಂವಿ2) ಆರ್ಕಿಟೆಕ್ಚರ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿರುವ ಹೊಸ ಕಾರು ಪೂರ್ವ ನಿಗದಿಯಂತೆ ಇದೇ ತಿಂಗಳು ಆರಂಭದಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಬಿಡುಗಡೆ ಅವಧಿಯನ್ನು ಮುಂದೂಡಲಾಗಿದ್ದು, ಇದೀಗ ಹೊಸ ಕಾರನ್ನು ಕಂಪನಿಯು ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.

ಹೊಸ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು ಬಿಡದಿ ಕಾರು ಉತ್ಪಾದನಾ ಘಟಕದಲ್ಲಿಯೇ ಉತ್ಪಾದನೆ ಆರಂಭಿಸಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳ ಕಾರುಗಳ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ಸಾಕಷ್ಟು ಹೆಚ್ಚಳವಾಗುತ್ತಿರುವುದೇ ಹೊಸ ಕಾರು ಬಿಡುಗಡೆಗೆ ಮುಖ್ಯ ಕಾರಣವಾಗಿದೆ.

ಟೊಯೊಟಾ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯನ್ನು ಆಧರಿಸಿ ಜಾಗತಿಕ ಮಾರುಕಟ್ಟೆಗಳಲ್ಲಿನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡುತ್ತಿದ್ದು, ಹೈಲಕ್ಸ್ ನಂತರ ಮತ್ತಷ್ಟು ಹೊಸ ಕಾರು ಮಾದರಿಗಳು ಭಾರತಕ್ಕೆ ಪ್ರವೇಶ ಪಡೆಯಲಿವೆ ಎನ್ನಲಾಗಿದೆ.

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೈಲಕ್ಸ್ ಮಾದರಿಯು ಸಹ ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಹೈಲಕ್ಸ್ ಪಿಕ್ಅಪ್ ಮಾದರಿಯು ಭಾರತೀಯ ಮಾರುಕಟ್ಟೆಗಳಲ್ಲಿನ ಪ್ರತಿಸ್ಪರ್ಧಿ ಪಿಕ್ಅಪ್ ಮಾದರಿಗಳಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯಲ್ಲಿ ಬೆಲೆ ಕಡಿತಕ್ಕಾಗಿ ಕೆಲವು ಬದಲಾವಣೆಗಳನ್ನು ತರಲಾಗಿದೆ.

ಹೈಲಕ್ಸ್ ಪಿಕ್ಅಪ್ ಮಾದರಿಯು ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಪಿಕ್ಅಪ್‌ನಲ್ಲಿ ಟೊಯೊಟಾ ಕಂಪನಿಯು ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆ ಮಾಡುತ್ತಿದೆ.

2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 4x4 ಡ್ರೈವ್‌ಟ್ರೈನ್‌ನೊಂದಿಗೆ ಮ್ಯಾನುವಲ್ ಮಾದರಿಯು 204 ಬಿಎಚ್‌ಪಿ, 420 ಎನ್ಎಂ ಟಾರ್ಕ್ ಮತ್ತು ಆಟೋಮ್ಯಾಟಿಕ್ ಮಾದರಿಯು 204 ಬಿಎಚ್‌ಪಿ, 500 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಹೈಲಕ್ಸ್ ಮಾದರಿಯು ದೊಡ್ಡ ಆಯಾಮದೊಂದಿಗೆ ವಿಶಾಲವಾದ ಟ್ರೆಪೆಜಾಯಿಡಲ್ ಗ್ರಿಲ್, ದೊಡ್ಡದಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 18-ಇಂಚಿನ ಮಿಶ್ರಲೋಹದ ಚಕ್ರಗಳು, ಸೈಡ್-ಸ್ಟೆಪ್‌ಗಳು ಮತ್ತು ಇ-ಆಕಾರದ ಎಲ್‌ಇಡಿ ಸಿಗ್ನೇಚರ್‌ನೊಂದಿಗೆ ಲಂಬವಾದ ಟೈಲ್ ಲೈಟ್, ಹೆಚ್ಚಿನ ಮಟ್ಟದ ಗ್ರೌಂಡ್ ಕ್ಲಿಯರೆನ್ಸ್ ಮತ್ತು ಕಸ್ಟಮೈಸೇಶನ್‌ಗಾಗಿ ಬಿಡಿಭಾಗಗಳ ದೀರ್ಘವಾದ ಪಟ್ಟಿಯನ್ನೇ ಹೊಂದಿದೆ.

ಜೊತೆಗೆ ಹೊಸ ಪಿಕ್ಅಪ್ ಮಾದರಿಯು ಸಂಪೂರ್ಣ ಬ್ಲ್ಯಾಕ್ ಕ್ಯಾಬಿನ್ ಹೊಂದಿದ್ದು, 8 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಯುನಿಟ್ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್-ಜೋನ್ ಸ್ವಯಂಚಾಲಿತ ಎಸಿ ಯುನಿಟ್, ಸ್ವಯಂಚಾಲಿತ ರೈನ್ ವೈಪರ್‌ಗಳು, ಪುಶ್-ಬಟನ್ ಸ್ಟಾಪ್/ಸ್ಟಾರ್ಟ್ ಸೇರಿದಂತೆ ಪ್ರಮುಖ ತಾಂತ್ರಿಕ ಅಂಶಗಳನ್ನು ಹೊಂದಿದೆ.

ಹೊಸ ಪಿಕ್ಅಪ್ ಮಾದರಿಯಲ್ಲಿ ಪ್ರೀಮಿಯಂ ಫೀಚರ್ಸ್ ಜೊತೆ ಸುರಕ್ಷತಾ ವೈಶಿಷ್ಟ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮುಂಭಾಗ ಮತ್ತು ಎರಡು ಬದಿಗಳಲ್ಲೂ ಒಟ್ಟು ಏಳು ಏರ್‌ಬ್ಯಾಗ್‌ಗಳು, ಎಬಿಡಿ, ಇಬಿಡಿ, ಹಿಲ್ ಅಸಿಸ್ಟ್ ಕಂಟ್ರೋಲ್, ಮುಂಭಾಗದಲ್ಲಿ ಪಾರ್ಕಿಂಗ್ ಸೆನ್ಸಾರ್‌ಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಹೆಚ್ಚಿನ ವೇಗದಲ್ಲಿ ಸ್ಟೀರಿಂಗ್ ಅನ್ನು ಭಾರವಾಗಿಸುವ ವೇರಿಯಬಲ್ ಫ್ಲೋ ಕಂಟ್ರೋಲ್, ಇಕೋ ಮತ್ತು ಪವರ್ ಡ್ರೈವಿಂಗ್ ಮೋಡ್‌ಗಳು, ಟೈರ್ ಆಂಗಲ್ ಮಾನಿಟರ್ ಸೇರಿದಂತೆ ಪ್ರಮುಖ ಫೀಚರ್ಸ್‌ಗಳಿವೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸದ್ಯ ಹೈಲಕ್ಸ್ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ 40ಕ್ಕೂ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲಿ ಹೊಸ ಮಾದರಿಯನ್ನು ರೂ.25 ಲಕ್ಷದಿಂದ ರೂ. 30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಗಾಗಿ ಕೆಲವು ಕೆಲವು ವೆರಿಯೆಂಟ್‌ನೊಂದಿಗೆ ಮಾತ್ರ ಬಿಡುಗಡೆಯಾಗುತ್ತಿದೆ.
Source: Rushlane