ದಸರಾ ಮತ್ತು ದೀಪಾವಳಿ ಸಂಭ್ರಮದಲ್ಲಿ ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಟೊಯೊಟಾ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳನ್ನು ಇಂದಿನಿಂದ ಹೆಚ್ಚಳ ಮಾಡಿದ್ದು, ಜನಪ್ರಿಯ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ, ಫಾರ್ಚೂನರ್, ಕ್ಯಾಮ್ರಿ ಮತ್ತು ವೆಲ್‌ಫೈರ್ ಎಂಪಿವಿ ಮಾದರಿಗಳ ಬೆಲೆಯಲ್ಲಿ ಸಾಕಷ್ಟು ಹೆಚ್ಚಳವಾಗಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆಯನ್ನು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸಿದ್ದು, ಹೊಸ ದರಪಟ್ಟಿಯಲ್ಲಿ ಪ್ರಮುಖ ಮಾದರಿಗಳ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ. 19 ಸಾವಿರದಿಂದ ರೂ. 1.85 ಲಕ್ಷದಷ್ಟು ದುಬಾರಿಯಾಗಿವೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಟೊಯೊಟಾ ಕಂಪನಿಯು ಹೊಸ ಕಾರುಗಳ ಬೆಲೆಯನ್ನು ಈ ವರ್ಷ ನಾಲ್ಕನೇ ಬಾರಿಗೆ ಹೆಚ್ಚಳ ಮಾಡಿದ್ದು, ಕೆಲವು ಕಾರಣಾಂತರಗಳಿಂದ ಕಾರುಗಳ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿವೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಪ್ರೀಮಿಯಂ ಕಾರು ಮಾದರಿಗಳಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ ಕಂಪನಿಯು ಇನೋವಾ ಕ್ರಿಸ್ಟಾ ಎಂಪಿವಿ ಮಾದರಿಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 23 ಸಾವಿರದಷ್ಟು ಹೆಚ್ಚಳ ಮಾಡಿದ್ದು, ಹೊಸ ಬೆಲೆ ಪಟ್ಟಿಯಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 17.54 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 26.77 ಲಕ್ಷ ಬೆಲೆ ಹೊಂದಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಹೊಸ ದರ ಪಟ್ಟಿಯಲ್ಲಿ ಕ್ಯಾಮ್ರಿ ಹೈಬ್ರಿಡ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 45.25 ಲಕ್ಷ ಬೆಲೆ ಹೊಂದಿದ್ದು, ಒಂದೇ ವೆರಿಯೆಂಟ್ ಹೊಂದಿರುವ ಈ ಹೈಬ್ರಿಡ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಅತ್ಯುತ್ತಮ ಹೈಬ್ರಿಡ್ ಐಷಾರಾಮಿ ಸೆಡಾನ್ ಮಾದರಿಯಾಗಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಇನೋವಾ ಕ್ರಿಸ್ಟಾ ಮತ್ತು ಕ್ಯಾಮ್ರಿ ನಂತರ ಫಾರ್ಚೂನರ್ ಎಸ್‌ಯುವಿ ಕೂಡಾ ದುಬಾರಿ ಬೆಲೆ ಪಡೆದುಕೊಂಡಿದ್ದು, ಇದು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 77 ಸಾವಿರದಷ್ಟು ಗರಿಷ್ಠ ಬೆಲೆ ಹೆಚ್ಚಳದೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಇದೀಗ ರೂ. 32 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 50.34 ಲಕ್ಷ ಬೆಲೆ ಹೊಂದಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಇನ್ನು ಹೊಸ ದರಪಟ್ಟಿ ವೆಲ್‌ಫೈರ್ ಹೈಬ್ರಿಡ್ ಎಂಪಿವಿ ಮಾದರಿಯು ಕೂಡಾ ದುಬಾರಿ ಬೆಲೆ ಏರಿಕೆ ಪಡೆದುಕೊಂಡಿದ್ದು, ರೂ. 1.85 ಲಕ್ಷ ಬೆಲೆ ಹೆಚ್ಚಳದೊಂದಿಗೆ ಹೊಸ ಕಾರು ಇದೀಗ ಎಕ್ಸ್‌ಶೋರೂಂ ಪ್ರಕಾರ ರೂ. 94.25 ಲಕ್ಷ ಬೆಲೆ ಹೊಂದಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಕಾರುಗಳ ಬಿಡಿಭಾಗಗಳ ಬೆಲೆ ಹೆಚ್ಚುತ್ತಿರುವ ಪರಿಣಾಮ ಬೆಲೆಯಲ್ಲಿ ನಿರಂತವಾಗಿ ಹೆಚ್ಚಳವಾಗುತ್ತಿದ್ದು, ದಸರಾ ಮತ್ತು ದೀಪಾವಳಿ ಸಂಭ್ರಮದಲ್ಲಿ ಹೊಸ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಹೆಚ್ಚಳದ ಬಿಸಿಯು ತಟ್ಟಲಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ನವೀಕೃತ ದರಪಟ್ಟಿಯಲ್ಲಿ ಟೊಯೊಟಾ ಕಂಪನಿಯು ಇನೋವಾ ಕ್ರಿಸ್ಟಾ, ಫಾರ್ಚೂನರ್, ಕ್ಯಾಮ್ರಿ ಮತ್ತು ವೆಲ್‌ಫೈರ್ ಹೊರತುಪಡಿಸಿ ಅರ್ಬನ್ ಕ್ರೂಸರ್, ಹೈರೈಡರ್ ಹೈಬ್ರಿಡ್, ಗ್ಲಾಂಝಾ ಮತ್ತು ಹೈಲಕ್ಸ್ ಪಿಕ್ಅಪ್ ಎಸ್‌ಯುವಿಯ ಬೆಲೆಯಲ್ಲಿ ಯಾವುದೇ ಬದಲವಾಣೆ ಮಾಡಿಲ್ಲ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಇನ್ನು ಟೊಯೊಟಾ ಇಂಡಿಯಾ ಕಂಪನಿಯು ಭಾರತದಲ್ಲಿ ಇನೋವಾ ಎಂಪಿಯ ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೈಕ್ರಾಸ್ ಹೆಸರಿನಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಭಾರತದಲ್ಲಿ ಇತ್ತೀಚೆಗೆ ಇನೋವಾ ಕ್ರಿಸ್ಟಾ ಕಾರಿನ ಡೀಸೆಲ್ ಎಂಜಿನ್ ಮಾದರಿಯ ಬುಕಿಂಗ್ ಸ್ಥಗಿತಗೊಳಿಸಿರುವ ಟೊಯೊಟಾ ಕಂಪನಿಯು ಸದ್ಯಕ್ಕೆ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಮುಂದಿನ ತಲೆಮಾರಿನ ಇನೋವಾ ಹೈಕ್ರಾಸ್ ಮಾದರಿಯು 2023ರ ಆರಂಭದಲ್ಲಿ ಬಿಡುಗಡೆಗೊಳ್ಳಲು ಸಾಧ್ಯತೆಗಳಿವೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಹೊಸ ತಲೆಮಾರಿನ ಇನೋವಾ ಹೈಕ್ರಾಸ್‌ನಲ್ಲಿ ಕಂಪನಿಯು ಡೀಸೆಲ್ ಎಂಜಿನ್ ತೆಗೆದುಹಾಕುವ ಸುಳಿವು ನೀಡಿದ್ದು, ಕೇವಲ ಪೆಟ್ರೋಲ್ ಮತ್ತು ಸ್ಟಾಂಗ್ ಹೈಬ್ರಿಡ್ ಮಾದರಿಯನ್ನು ಪರಿಚಯಿಸುವ ಯೋಜನೆಯಲ್ಲಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಡೀಸೆಲ್ ಕಾರುಗಳ ಮಾಲಿನ್ಯ ತಡೆಯಲು ಜಾರಿಗೊಳಿಸಲಾಗುತ್ತಿರುವ ಹೊಸ ಮಾನದಂಡಗಳನ್ನು ಜಾರಿಗೊಳಿಸುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಡೀಸೆಲ್ ಕಾರುಗಳ ಬೆಲೆ ಇನ್ನಷ್ಟು ಹೆಚ್ಚಳವಾಗಲಿದ್ದು, ಇದರಿಂದ ಡೀಸೆಲ್ ಮಾದರಿಗೆ ಪರ್ಯಾಯವಾಗಿ ಹೈಬ್ರಿಡ್ ಮಾದರಿಯನ್ನು ಪರಿಚಯಿಸಲು ಮುಂದಾಗಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಒಂದು ವೇಳೆ ಹೊಸ ತಲೆಮಾರಿನ ಇನೋವಾದಲ್ಲಿ ಡೀಸೆಲ್ ಮಾದರಿಯನ್ನು ಪರಿಚಯಿಸಿದರೆ ಹೊಸ ಮಾನದಂಡ ಪೂರೈಸಬೇಕಿರುವ 2.4 ಲೀಟರ್ ಡೀಸೆಲ್ ಮಾದರಿಯು ಹೆಚ್ಚಿನ ಬೆಲೆ ಪಡೆದುಕೊಳ್ಳಲಿದೆ. ಜೊತೆಗೆ ಭವಿಷ್ಯದಲ್ಲಿ ಡೀಸೆಲ್ ಕಾರುಗಳ ಸಂಚಾರಕ್ಕೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುತ್ತಿರುವುದರಿಂದ ಕಂಪನಿಯು ಹೈಬ್ರಿಡ್ ಮತ್ತು ಪೆಟ್ರೋಲ್ ಮಾದರಿಗಳ ಮೇಲೆ ಮಾತ್ರ ಗಮನಹರಿಸಲು ನಿರ್ಧರಿಸಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಹೈಬ್ರಿಡ್ ತಂತ್ರಜ್ಞಾನದಲ್ಲಿ ಈಗಾಗಲೇ ಯಶಸ್ವಿ ಕಂಡಿರುವ ಟೊಯೊಟಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳನ್ನು ಈಗಾಗಲೇ ಸಂಪೂರ್ಣವಾಗಿ ಹೈಬ್ರಿಡ್ ಎಂಜಿನ್‌ನಲ್ಲಿ ಮಾತ್ರ ಮಾರಾಟ ಮಾಡುತ್ತಿದ್ದು, ಇದೀಗ ಡೀಸೆಲ್ ಮಾದರಿಯೊಂದಿಗೆ ಜನಪ್ರಿಯವಾಗಿ ಇನೋವಾ ಎಂಪಿವಿಯಲ್ಲೂ ಹೊಸ ಬದಲಾವಣೆ ಸಿದ್ದವಾಗಿದೆ.

ಟೊಯೊಟಾ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಕ್ಯಾಮ್ರಿ ಸೆಡಾನ್ ಮಾದರಿಯಲ್ಲಿರುವ 2.5 ಲೀಟರ್ ಆಟ್ಕಿನ್ಸ್ ಸೈಕಲ್ ಹೈಬ್ರಿಡ್ ಎಂಜಿನ್ ಅನ್ನು ಇನೋವಾ ಹೈಕ್ರಾಸ್‌ನಲ್ಲಿ ಬಳಕೆ ಮಾಡಬಹುದಾಗಿದ್ದು, ಇದು ಸೆಲ್ಫ್ ಚಾರ್ಜಿಂಗ್ ವೈಶಿಷ್ಟ್ಯತೆಯೊಂದಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ 17 ರಿಂದ 19 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Article Published On: Monday, October 3, 2022, 11:34 [IST]
English summary
Toyota cars price hike up to 1 85 lakh details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+