ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ Toyota Fortuner ಎಸ್‍ಯುವಿ
ಭಾರತದಲ್ಲಿ ಹೊಸ ವರ್ಷದಲ್ಲಿ ಹಲವು ವಾಹನ ತಯಾರಿ ಕಂಪನಿಗಳು ತಮ್ಮ ವಾಹನಗಳ ಬೆಲೆ ಏರಿಕೆ ಮಾಡಿದೆ. ಇದಲ್ಲಿ ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಟೊಯೊಟಾ ಕೂಡ ಒಳಗೊಂಡಿದೆ. ಟೊಯೊಟಾದ ಪ್ರಮುಖ ಮಾದರಿಯಾದ ಫಾರ್ಚುನರ್ ಬೆಲೆಯನ್ನು ರೂ.1.10 ಲಕ್ಷದವರೆಗೂ ಹೆಚ್ಚಿಸಿದೆ.

ಈ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಬೆಲೆಯನ್ನು ಈ ಹಿಂದೆ 2021 ಅಕ್ಟೋಬರ್ ತಿಂಗಳಿನಲ್ಲಿ ಏರಿಕೆ ಮಾಡಲಾಗಿತ್ತು, ಇದೀಗ ಫಾರ್ಚುನರ್‌ನ ಪೆಟ್ರೋಲ್ ಮತ್ತು ಡೀಸೆಲ್ 4x2 ಎರಡೂ ರೂಪಾಂತರಗಳ ಬೆಲೆಗಳನ್ನು ರೂ.66,000 ಗಳವರೆಗೆ ಹೆಚ್ಚಿಸಲಾಗಿದೆ. ಈ ಎಸ್‍ಯುವಿಯ 4x4 ರೂಪಾಂತರಗಳ ಬೆಲೆಯನ್ನು ರೂ.1.10 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಕುತೂಹಲಕಾರಿಯಾಗಿ, ಫಾರ್ಚುನರ್ ಲೆಜೆಂಡರ್‌ನ 4x2 ಮತ್ತು 4x4 ಎರಡೂ ರೂಪಾಂತರಗಳ ಬೆಲೆಗಳನ್ನು ಸಹ ರೂ.1.10 ಲಕ್ಷದವರೆ ಗೆಹೆಚ್ಚಿಸಲಾಗಿದೆ. ಫಾರ್ಚೂನರ್ ಎಸ್‍ಯುವಿಯ ಬೆಲೆಗಳಲ್ಲಿನ ಹೆಚ್ಚಳವನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಯನ್ನು ಮಾಡಿಲ್ಲ.

ಈ ಟೊಯೋಟಾ ಫಾರ್ಚೂನರ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ. ಇದರೊಂದಿಗೆ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ.

ಇದರಲ್ಲಿ ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಹೊಂದಿದೆ. ಇನ್ನು ಈ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರ್ಸ್ ಅನ್ನು ಹೊಂದಿದೆ.

ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ. ಇದರೊಂದಿಗೆ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿವೆ.

ಇನ್ನು ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿತ್ತು. ಈ ಜನಪ್ರಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ. ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ನೀಡಲಾಗುತ್ತಿದೆ.

ಟೊಯೊಟಾ ಫಾರ್ಚುನರ್ ಲೆಜೆಂಡರ್ 4X2 ಮಾದರಿಗೆ ಹೋಲಿಸಿದರೆ 4X4 ವೆರಿಯೆಂಟ್ ಯಾವುದೇ ವಿಶೇಷ ಬಾಹ್ಯ ಬಿಟ್‌ಗಳನ್ನು ಪಡೆಯುವುದಿಲ್ಲ. ಈ ಹೊಸ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ. ಲೆಜೆಂಡರ್ ಮರುವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಡಿಆರ್‌ಎಲ್‌ಗಳು ಹೊಂದಿದೆ. ಇದನ್ನು ಟೊಯೊಟಾ ವಾಟರ್ ಫಾಲ್ ಡಿಆರ್‌ಎಲ್‌ಗಳು ಎಂದು ಕರೆಯಲಾಗುತ್ತದೆ.

ಇದರ ಹೆಡ್‌ಲ್ಯಾಂಪ್‌ಗಳ ಕೆಳಗೆ ಫಾಗ್ ಲ್ಯಾಂಪ್ ಗಳಿವೆ. ಇನ್ನು ಡೈನಾಮಿಕ್ ಟರ್ನ್ ಸಿಗ್ನಲ್ ಇಂಡೀಕೆಟರ್ ಗಳಿವೆ. ಫಾರ್ಚೂನರ್ ಲೆಜೆಂಡರ್ ಸುತ್ತಲೂ ಎಲ್ಇಡಿ ಲೈಟಿಂಗ್ ಹೊಂದಿದೆ. ಇನ್ನು ಇದರ ಸೈಡ್ ಪ್ರೊಫೈಲ್ ಬಗ್ಗೆ ಹೇಳುವುದಾದರೆ, ಇದರಲ್ಲಿ 18 ಇಂಚಿನ ಮೆಷಿನ್-ಕಟ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಲಾಗಿದೆ. ಇನ್ನು ಡೋರಿನ ಹ್ಯಾಂಡಲ್‌ಗಳಲ್ಲಿ ಕೆಲವು ಕ್ರೋಮ್ ಇದೆ ಮತ್ತು ಉದ್ದಕ್ಕೂ ಸ್ಟ್ರಿಪ್ ಅನ್ನು ಸಹ ಕ್ರೋಮ್‌ನಿಂದ ಮಾಡಲಾಗಿದೆ.

ಇನ್ನು ಈ ಲೆಜೆಂಡರ್ ವೆರಿಯೆಂಟ್ ಮಾದರಿಯ ಹಿಂಭಾಗದಲ್ಲಿ ನಯವಾದ-ಕಾಣುವ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದು ಬ್ಲ್ಯಾಕ್ ಸ್ಟ್ರಿಪ್ ಸಹ ಪಡೆಯುತ್ತದೆ, ಅದು ಎರಡೂ ಟೈಲ್ ಲೈಟ್‌ಗಳನ್ನು ಅದರ ಉದ್ದಕ್ಕೂ 'ಫೋರ್ಟೂನರ್' ಬ್ರ್ಯಾಂಡಿಂಗ್‌ನೊಂದಿಗೆ ಸಂಪರ್ಕಗೊಂಡಿದೆ,

ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ಒಳಭಾಗದಲ್ಲಿಯು ಕೆಲವು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ. ಫಾರ್ಚೂನರ್ ಲೆಜೆಂಡರ್ ಇಂಟಿರಿಯರ್ ಅಥವಾ ಒಳಭಾಗದಲ್ಲಿ ಡ್ಯುಯಲ್-ಟೋನ್ (ಬ್ಲ್ಯಾಕ್ ಮತ್ತು ಮರೂನ್) ಅಂಶಗಳನ್ನು ಹೊಂದಿದೆ, ಇದರಲ್ಲಿ ಸುತ್ತಲೂ ವೈಟ್ ಅಬೈಂಡ್ ಲೈಟ್ ಅನ್ನು ಹೊಂದಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇಯನ್ನು ಒಳಗೊಂಡಿರುವ ದೊಡ್ಡ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ,

ಈ ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ನಲ್ಲಿ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಬ್ರೇಕ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, ಸ್ಟೆಬಿಲಿಟಿ ಕಂಟ್ರೋಲ್, ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಡ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ (ಆಟೋ ಎಮರ್ಜೆನ್ಸಿ ಅನ್‌ಲಾಕ್) ಮತ್ತು ಎಮರ್ಜನ್ಸಿ ಬ್ರೇಕ್ ಸಿಗ್ನಲ್‌ನಂತಹ ಸಾಕಷ್ಟು ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ.

ಫಾರ್ಚೂನರ್ ಎಸ್‍ಯುವಿಯಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಸ್‍ಯುವಿಯು ದ್ದು ಟೂ ವ್ಹೀಲ್ ಮತ್ತು ಫ್ಹೋರ್ ವ್ಹೀಲ್ ಡ್ರೈವ್ ಕಾನ್ಫಿಗರೇಶನ್‌ಗಳ ಆಯ್ಕೆಯನ್ನು ಹೊಂದಿದೆ.


Click it and Unblock the Notifications