Just In
- 1 hr ago
2023ರಿಂದ ಭಾರತದಲ್ಲಿ ಮಾರಾಟಗೊಳ್ಳಲಿದೆ ಜೈವಿಕ ಇಂಧನ ಒಳಗೊಂಡ ಇ20 ಪೆಟ್ರೋಲ್ ಮಾದರಿ
- 1 hr ago
ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲು ಹೊಸ ರೂಪದಲ್ಲಿ ಬರುತ್ತಿದೆ ಮಾರುತಿ ಆಲ್ಟೋ ಕೆ10
- 2 hrs ago
ಹೊಸ ಆಕ್ಟಿವಾ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿದ ಹೋಂಡಾ: ಆಕ್ಟಿವಾ 7G ಆಗಿರಬಹುದೇ?
- 3 hrs ago
ಇವಿ ಸ್ಕೂಟರ್ಗಳ ಬೆಲೆ ನಿಯಂತ್ರಿಸಲು ಬೃಹತ್ ಯೋಜನೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್
Don't Miss!
- Finance
ಪೇಟಿಎಂ ಷೇರು ಶೇಕಡ 6ರಷ್ಟು ಕುಸಿತ, ಕಾರಣವೇನು?
- News
ಬಿಜೆಪಿ ನಾಯಕರಿಗೆ 'ಈಗಲೇ ಬಿಟ್ಟು ಹೊರಡಿ' ಎಂಬ ಸಂದೇಶ ನೀಡುತ್ತಿದ್ದಾರೆ ನಿತೀಶ್ ಕುಮಾರ್
- Sports
ಲೆಜೆಂಡ್ಸ್ ಲೀಗ್ ಕ್ರಿಕೆಟ್: ಇಂಡಿಯಾ ಮಹಾರಾಜಸ್ vs ವರ್ಲ್ಡ್ ಜೈಂಟ್ಸ್ ತಂಡಗಳು; ಪಂದ್ಯದ ದಿನಾಂಕ, ಸ್ಥಳ
- Technology
ಭಾರತದಲ್ಲಿ ವಿವೋ V25 ಪ್ರೊ ಸ್ಮಾರ್ಟ್ಫೋನಿನ ಲಾಂಚ್ ಡೇಟ್ ಬಹಿರಂಗ!
- Movies
ರಶ್ಮಿಕಾ ಆಯ್ತು, ಅನನ್ಯಾ ಪಾಂಡೆ ಕಡೆ ವಾಲಿದ ವಿಜಯ್ ದೇವರಕೊಂಡ!
- Lifestyle
ವಿಶ್ವ ಆನೆ ದಿನ 2022: ಆನೆಗಳ ಕುರಿತ ಈ ಆಸಕ್ತಿಕರ ಸಂಗತಿಗಳು ಗೊತ್ತಿದೆಯೇ?
- Travel
ಮಕ್ಕಳ ಜೊತೆ ಭೇಟಿ ಕೊಡಬಹುದಾದ ಕರ್ನಾಟಕದಲ್ಲಿಯ ಮೋಜಿನ ಸ್ಥಳಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಭಾರತದಲ್ಲಿ ಮತ್ತಷ್ಟು ದುಬಾರಿಯಾದ ಟೊಯೊಟಾ ಫಾರ್ಚುನರ್ ಎಸ್‍ಯುವಿ
ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ತನ್ನ ಫುಲ್ ಸೈಜ್ ಫಾರ್ಚುನರ್ ಎಸ್‍ಯುವಿಯ ಬೆಲೆಯನ್ನು ಮತ್ತೆ ಏರಿಕೆ ಮಾಡಿದೆ. ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯು ಮತ್ತಷ್ಟು ದುಬಾರಿಯಾಗಿದೆ.

ಟೊಯೊಟಾ ಕಂಪನಿಯು ಕಳೆದ ವರ್ಷದ ಆರಂಭದಲ್ಲಿ ಭಾರತದಲ್ಲಿ ಫೇಸ್‌ಲಿಫ್ಟೆಡ್ ಫಾರ್ಚೂನರ್ ಅನ್ನು ಪರಿಚಯಿಸಿತು. ಇದರ ಜೊತೆಗೆ ಟಾಪ್-ಎಂಡ್ ಲೆಜೆಂಡರ್ 4×2 ರೂಪಾಂತರವು ಒಳಗೆ ಮತ್ತು ಹೊರಗೆ ಹಲವಾರು ಬದಲಾವಣೆಗಳೊಂದಿಗೆ ಪರಿಚಯಿಸಿತು. ಇನ್ನು ಕಳೆದ ವರ್ಷದ ಕೊನೆಯಲ್ಲಿ, ಟೊಯೋಟಾ ಲೆಜೆಂಡರ್‌ನ 4×4 ರೂಪಾಂತರವನ್ನು ಫಾರ್ಚುನರ್‌ನ ಶ್ರೇಣಿಗೆ ಸೇರಿಸಿತು ಮತ್ತು ಇದು ಕ್ಲಾಸ್-ಲೀಡಿಂಗ್ 7-ಸೀಟರ್ ಎಸ್‍ಯುವಿಯ ಬೆಲೆಯನ್ನು ಮತ್ತಷ್ಟು ಹೆಚ್ಚಿಸಿತು. ಫಾರ್ಚುನರ್‌ನ ಜಿಆರ್-ಸ್ಪೋರ್ಟ್ ರೂಪಾಂತರವನ್ನು ಕೂಡ ಬಿಡುಗಡೆಗೊಳಿಸಿತ್ತು.

ಟೊಯೊಟಾ ಫಾರ್ಚುನರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.31.79 ಲಕ್ಷದಿಂದ ರೂ.48.43 ಲಕ್ಷವಾಗಿದೆ.4×2 ರೂಪಾಂತರಕ್ಕೆ ರೂ.61,000 ಆದರೆ 4×4 ರೂಪಾಂತರಕ್ಕೆ ರೂ.80,000 ಗಳಾದರೆ ಜಿಆರ್-ಸ್ಪೋರ್ಟ್ ಮತ್ತು ಲೆಜೆಂಡರ್ ರೂಪಾಂತರಗಳಿಗೆ ಹೆಚ್ಚಿನ ಬೆಲೆ ಏರಿಕೆಗೆ ಸಾಕ್ಷಿಯಾಗಿದೆ. ಕ್ರಮವಾಗಿ ರೂ.1.14 ಲಕ್ಷ ಹೆಚ್ಚು.

ನಿರ್ದಿಷ್ಟವಾಗಿ ಹೇಳುವುದಾದರೆ, 4×2 ಎಂಟಿ ಪೆಟ್ರೋಲ್, 4×2 ಎಟಿ ಪೆಟ್ರೋಲ್, 4×2 ಎಂಟಿ ಡೀಸೆಲ್ ಮತ್ತು 4×2 ಎಟಿ ಡೀಸೆಲ್‌ನಂತಹ ಟೊಯೊಟಾ ಫಾರ್ಚುನರ್ ಟ್ರಿಮ್‌ಗಳ ಬೆಲೆಗಳು ರೂ.61,000 ವರೆಗೆ ಏರಿಕೆಯಾದರೆ, 4×4 ಎಂಟಿ ಡೀಸೆಲ್ ಮತ್ತು 4×4 ಎಟಿ ಡೀಸೆಲ್ ಆವೃತ್ತಿಗಳ ಬೆಲೆಗಳನ್ನು ರೂ.80,000 ಆದರೆ 4×2 ಎಟಿ 2.8 ಲೆಜೆಂಡರ್, 4×4 ಎಟಿ 2.8 ಲೆಜೆಂಡರ್ ಮತ್ತು ಜಿಆರ್-ಎಸ್ ಎಟಿಯ ರೂಪಾಂತರಗಳ ಬೆಲೆಯು ರೂ.1.14 ಲಕ್ಷದವರೆಗೂ ಹೆಚ್ಚಾಗಿದೆ.

ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಬೆಲೆಗಳಲ್ಲಿನ ಹೆಚ್ಚಳವನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಫಾರ್ಚೂನರ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿವೆ.

ಇನ್ನು ಫಾರ್ಚುನರ್ ಎಸ್‍ಯುವಿ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ. ಇದರಲ್ಲಿ ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಹೊಂದಿವೆ.

ಫಾರ್ಚುನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರ್ಸ್ ಅನ್ನು ಹೊಂದಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಕೂಡ ಹೊಂದಿದೆ.

ಈ ಎಸ್‍ಯುವಿಯ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿವೆ. ಇನ್ನು ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿತ್ತು. ಈ ಜನಪ್ರಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ.

ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ನೀಡಲಾಗುತ್ತಿದೆ. ಟೊಯೊಟಾ ಫಾರ್ಚುನರ್ ಲೆಜೆಂಡರ್ 4X2 ಮಾದರಿಗೆ ಹೋಲಿಸಿದರೆ 4X4 ವೆರಿಯೆಂಟ್ ಯಾವುದೇ ವಿಶೇಷ ಬಾಹ್ಯ ಬಿಟ್‌ಗಳನ್ನು ಪಡೆಯುವುದಿಲ್ಲ. ಫಾರ್ಚುನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ.

ಲೆಜೆಂಡರ್ ಮರುವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಡಿಆರ್‌ಎಲ್‌ಗಳು ಹೊಂದಿದೆ. ಇದನ್ನು ಟೊಯೊಟಾ ವಾಟರ್ ಫಾಲ್ ಡಿಆರ್‌ಎಲ್‌ಗಳು ಎಂದು ಕರೆಯಲಾಗುತ್ತದೆ.ಈ ಎಸ್‍ಯುವಿ ಹೆಡ್‌ಲ್ಯಾಂಪ್‌ಗಳ ಕೆಳಗೆ ಫಾಗ್ ಲ್ಯಾಂಪ್ ಗಳಿವೆ. ಇನ್ನು ಡೈನಾಮಿಕ್ ಟರ್ನ್ ಸಿಗ್ನಲ್ ಇಂಡೀಕೆಟರ್ ಗಳಿವೆ. ಫಾರ್ಚೂನರ್ ಲೆಜೆಂಡರ್ ಸುತ್ತಲೂ ಎಲ್ಇಡಿ ಲೈಟಿಂಗ್ ಹೊಂದಿದೆ. ಇನ್ನು ಇದರ ಸೈಡ್ ಪ್ರೊಫೈಲ್ ಬಗ್ಗೆ ಹೇಳುವುದಾದರೆ, ಇದರಲ್ಲಿ 18 ಇಂಚಿನ ಮೆಷಿನ್-ಕಟ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಲಾಗಿದೆ. ಇನ್ನು ಡೋರಿನ ಹ್ಯಾಂಡಲ್‌ಗಳಲ್ಲಿ ಕೆಲವು ಕ್ರೋಮ್ ಇದೆ ಮತ್ತು ಉದ್ದಕ್ಕೂ ಸ್ಟ್ರಿಪ್ ಅನ್ನು ಸಹ ಕ್ರೋಮ್‌ನಿಂದ ಮಾಡಲಾಗಿದೆ.

ಇನ್ನು ಈ ಲೆಜೆಂಡರ್ ವೆರಿಯೆಂಟ್ ಮಾದರಿಯ ಹಿಂಭಾಗದಲ್ಲಿ ನಯವಾದ-ಕಾಣುವ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದು ಬ್ಲ್ಯಾಕ್ ಸ್ಟ್ರಿಪ್ ಸಹ ಪಡೆಯುತ್ತದೆ, ಅದು ಎರಡೂ ಟೈಲ್ ಲೈಟ್‌ಗಳನ್ನು ಅದರ ಉದ್ದಕ್ಕೂ 'ಫೋರ್ಟೂನರ್' ಬ್ರ್ಯಾಂಡಿಂಗ್‌ನೊಂದಿಗೆ ಸಂಪರ್ಕಗೊಂಡಿದೆ, ಲೆಜೆಂಡರ್ ವೆರಿಯೆಂಟ್ ಒಳಭಾಗದಲ್ಲಿಯು ಕೆಲವು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ. ಫಾರ್ಚೂನರ್ ಲೆಜೆಂಡರ್ ಇಂಟಿರಿಯರ್ ಅಥವಾ ಒಳಭಾಗದಲ್ಲಿ ಡ್ಯುಯಲ್-ಟೋನ್ (ಬ್ಲ್ಯಾಕ್ ಮತ್ತು ಮರೂನ್) ಅಂಶಗಳನ್ನು ಹೊಂದಿದೆ,

ಇದರಲ್ಲಿ ಸುತ್ತಲೂ ವೈಟ್ ಅಬೈಂಡ್ ಲೈಟ್ ಅನ್ನು ಹೊಂದಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇಯನ್ನು ಒಳಗೊಂಡಿರುವ ದೊಡ್ಡ ಇನ್ಫೋಟೈನ್ಮೆಂಟ್ ಸಿಸ್ಟಂ ಹೊಂದಿದೆ.ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ನಲ್ಲಿ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಬ್ರೇಕ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, ಸ್ಟೆಬಿಲಿಟಿ ಕಂಟ್ರೋಲ್, ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಡ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ (ಆಟೋ ಎಮರ್ಜೆನ್ಸಿ ಅನ್‌ಲಾಕ್) ಮತ್ತು ಎಮರ್ಜನ್ಸಿ ಬ್ರೇಕ್ ಸಿಗ್ನಲ್‌ನಂತಹ ಸಾಕಷ್ಟು ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ.

ಟೊಯೊಟಾ ಫಾರ್ಚೂನರ್ ಎಸ್‍ಯುವಿಯಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಸ್‍ಯುವಿಯು ಟೂ ವ್ಹೀಲ್ ಡ್ರೈವ್ ಮತ್ತು ಫ್ಹೋರ್ ವ್ಹೀಲ್ ಡ್ರೈವ್ ಕಾನ್ಫಿಗರೇಶನ್‌ಗಳ ಆಯ್ಕೆಗಳನ್ನು ಹೊಂದಿವೆ.