ಇದೇ ತಿಂಗಳು 23ರಂದು ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಟೊಯೊಟಾ(Toyota) ಕಂಪನಿಯು ಭಾರತದಲ್ಲಿ 2022ರ ಅವಧಿಗೆ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗಿದ್ದು, ಬಹುನೀರಿಕ್ಷಿತ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಇದೇ ತಿಂಗಳು 23ರಂದು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಹೊಸ ಕಾರುಗಳ ಪೈಕಿ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಪ್ರಮುಖವಾಗಿದ್ದು, ಹೊಸ ಕಾರು ಬಿಡುಗಡೆಯಾಗಿ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ. ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯ ಬಿಡುಗಡೆಗೂ ಮುನ್ನ ಟೊಯೊಟಾ ಕಂಪನಿಯು ಹೊಸ ಕಾರನ್ನು ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿದ್ದು, ಹೊಸ ಕಾರು ಮಾದರಿಯು ಆಫ್ ರೋಡ್ ಪ್ರಿಯರನ್ನು ಸೆಳೆಯಲಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಹೊಸ ಕಾರು ಮಾದರಿಗಳ ಬಿಡುಗಡೆಗಾಗಿ ಬೃಹತ್ ಯೋಜನೆಗೆ ಚಾಲನೆ ನೀಡಿರುವ ಟೊಯೊಟಾ ಕಂಪನಿಯು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿರುವ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಹಂತ-ಹಂತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆಯ ಭಾಗವಾಗಿ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯು ಬಿಡುಗಡೆಯಾಗಲಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳ ಕಾರುಗಳ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚುತ್ತಿದ್ದು, ಟೊಯೊಟಾ ಕಂಪನಿಯು ಸಹ ಮಾರುಕಟ್ಟೆಯಲ್ಲಿನ ಬೇಡಿಕೆಯನ್ನು ಆಧರಿಸಿ ಜಾಗತಿಕ ಮಾರುಕಟ್ಟೆಗಳಲ್ಲಿನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡುತ್ತಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

2022ರ ಅಂತ್ಯಕ್ಕೆ ಒಟ್ಟು ನಾಲ್ಕು ಹೊಸ ಕಾರುಗಳನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿರುವ ಟೊಯೊಟಾ ಕಂಪನಿಯು ಮೊದಲ ಮಾದರಿಯಾಗಿ ಹಿಲಕ್ಸ್ ಪಿಕ್‌ಅಪ್ ನಂತರ ರಾವ್4 ಹಾಗೂ ಮತ್ತೆರಡು ರೀಬ್ಯಾಡ್ಜ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಕೇಂದ್ರ ಸರ್ಕಾರದ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಕಾರು ಕಂಪನಿಗಳು ವಾರ್ಷಿಕವಾಗಿ 2,500 ಯುನಿಟ್ ಕಾರುಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವುದು ಟೊಯೊಟಾ ಕಂಪನಿಗೂ ಇದು ವರದಾನವಾಗಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಟೊಯೊಟಾ ಕಂಪನಿಯು ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಪ್ರಮುಖ ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಈಗಾಗಲೇ ಹೊಸ ಆಮದು ನೀತಿ ಅಡಿಯಲ್ಲಿ ವೆಲ್‌ಫೈರ್ ಐಷಾರಾಮಿ ಎಂಪಿವಿ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲಕ್ಸ್ ಮಾದರಿಯು ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಹಿಲಕ್ಸ್ ಕಾರು ಭಾರತೀಯ ಮಾರುಕಟ್ಟೆಗಳಲ್ಲಿನ ಪಿಕ್ಅಪ್ ಮಾದರಿಗಳಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯು ಬೆಲೆ ಕಡಿತಕ್ಕಾಗಿ ಕೆಲವು ಬದಲಾವಣೆಗಳೊಂದಿಗೆ ಪ್ರಮುಖ ಎರಡು ಡೀಸೆಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಹಿಲಕ್ಸ್ ಪಿಕ್ಅಪ್ ಮಾದರಿಯು ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಪ್ರಮುಖ ಎರಡು ಮಾದರಿಗಳಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರು 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಬಿಡುಗಡೆಯಾಗಬಹುದಾಗಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಹೊಸ ಕಾರು ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಮಾರಾಟವಾಗುತ್ತಿರುವ ಹಿಲಕ್ಸ್ ಮಾದರಿಯು ಭಾರತದಲ್ಲಿ ಎರಡು ಎಂಜಿನ್ ಆಯ್ಕೆಯೊಂದಿಗೆ ಕೆಲವೇ ವೆರಿಯೆಂಟ್‌ನಲ್ಲಿ ಮಾರಾಟಗೊಳ್ಳಲಿದೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಹೊಸ ಕಾರು ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ನಡುವಿನ ಸ್ಥಾನದಲ್ಲಿ ಮಾರಾಟಗೊಳ್ಳಲಿದ್ದು, ಹೊಸ ಕಾರು ಆರಂಭಿಕವಾಗಿ ರೂ. 19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 25 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಇದೇ ತಿಂಗಳು 23ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಹಿಲಕ್ಸ್ ಪಿಕ್ಅಪ್

ಜೊತೆಗೆ ಹೊಸ ಪಿಕ್ಅಪ್ ಮಾದರಿಯಲ್ಲಿ ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಸಹ ನೀಡಲಾಗಿದ್ದು, ಆಫ್ ರೋಡ್ ಪ್ರಿಯರು ಹೊಸ ಕಾರು ಮಾದರಿಯನ್ನು ವಿವಿಧ ಬಗೆಯಲ್ಲಿ ಮಾಡಿಫೈ ಸೌಲಭ್ಯಗಳನ್ನು ಮಾರ್ಪಾಡುಗೊಳಿಸಲು ಸೂಕ್ತ ಕಾರು ಮಾದರಿಯಾಗಿದೆ.

Most Read Articles

Kannada
Read more on ಟೊಯೊಟಾ toyota
English summary
Toyota hilux pickup india launch on 23rd january
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X