ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಟೊಯೊಟಾ ಕಂಪನಿಯು ತನ್ನ ಬಹುನೀರಿಕ್ಷಿತ ಹೈಲಕ್ಸ್ ಪಿಕ್‌ಅಪ್ ಟ್ರಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಕಾರಣಾಂತರಗಳಿಂದ ಹೊಸ ಕಾರಿನ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಜಾಗತಿಕವಾಗಿ ಎದುರಾಗಿರುವ ಸೆಮಿಕಂಡಕ್ಟರ್ ಕೊರತೆಯು ಆಟೋ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಹೊಸ ವಾಹನಗಳ ಬಿಡುಗಡೆಯಲ್ಲಿ ಇನ್ನಷ್ಟು ವಿಳಂಬವಾಗಬಹುದಾಗಿದೆ. ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಟೊಯೊಟಾ ಮಾತ್ರವಲ್ಲ ಪ್ರಮುಖ ಕಾರು ಕಂಪನಿಗಳು ಕಾರು ಉತ್ಪಾದನೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದು, ಸೆಮಿಕಂಡಕ್ಟರ್ ಪೂರೈಕೆ ಚೇತರಿಕೆಯ ನಂತರವಷ್ಟೇ ಟೊಯೊಟಾ ಹೊಸ ಕಾರು ಭಾರತೀಯ ಮಾರುಕಟ್ಟೆ ಪ್ರವೇಶಿಸಬಹುದಾಗಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಕೋವಿಡ್ ನಂತರ ಆರ್ಥಿಕ ಬೆಳವಣಿಗೆ ಸುಧಾರಿಸುತ್ತಿರುವುದರಿಂದ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ. ಹೊಸ ತಂತ್ರಜ್ಞಾನ ಪ್ರೇರಿತ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಚೀನಿ ಮಾರುಕಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದುಗೊಳ್ಳುತ್ತಿದ್ದ ಎಲೆಕ್ಟ್ರಾನಿಕ್ ಚಿಪ್ ಪ್ರಮಾಣವನ್ನು ಕಡಿತಗೊಳಿಸಿರುವುದರಿಂದ ಇತರೆ ದೇಶಗಳಲ್ಲಿನ ಉತ್ಪಾದನಾ ಲಭ್ಯತೆ ಆಧರಿಸಿ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್‌ಗಳಿಲ್ಲದೆ ಪ್ರಮುಖ ಕಾರು ಕಂಪನಿಯು ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿವೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಎಲೆಕ್ಟ್ರಾನಿಕ್ ಚಿಪ್ ಇಲ್ಲದೆ ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳನ್ನು ಜೋಡಿಸಲು ಸಾಧ್ಯವೇ ಇಲ್ಲ ಎನ್ನಬಹುದು. ಹೊಸ ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟ್ಯಾಬಿಲಿಟಿ ಕಂಟ್ರೋಲ್, ಲೈಟಿಂಗ್ ಕಂಟ್ರೋಲ್, ಆಟೋ ಫೋಲ್ಡಿಂಗ್ ಒಆರ್‌ವಿಎಂ, ಡಿಜಿಟಲ್ ಕೀ ಮತ್ತು ಕಾರ್ ಕನೆಕ್ಟ್ ಫೀಚರ್ಸ್ ಸೇರಿ ಪ್ರಮುಖ ತಾಂತ್ರಿಕ ಸಾಧನಗಳು ಕಾರ್ಯನಿರ್ವಹಿಸಲು ಸೆಮಿ ಕಂಡಕ್ಟರ್ ಅವಶ್ಯವಾಗಿವೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಕೋವಿಡ್ ಪರಿಣಾಮ ಬಿಡಿಭಾಗಗಳ ಪೂರೈಕೆಯ ಸರಪಳಿಯಲ್ಲಿ ಆಗಿರುವ ಸಮಸ್ಯೆಯೇ ಎಲೆಕ್ಟ್ರಾನಿಕ್ ಚಿಪ್ ಕೊರತೆಗೆ ಪ್ರಮುಖ ಕಾರಣವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳಿಗೆ ಪೂರೈಕೆಯಾಗಬೇಕಿದ್ದ ಹೆಚ್ಚಿನ ಪ್ರಮಾಣದ ಎಲೆಕ್ಟ್ರಾನಿಕ್ ಚಿಪ್ ಸ್ಟಾಕ್ ಇದೀಗ ಹೆಚ್ಚಿನ ಪ್ರಮಾಣದಲ್ಲಿ ಲ್ಯಾಪ್‌ಟಾಪ್‌, ಮೊಬೈಲ್‌ಗಳು ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನ ಉತ್ಪಾದನೆಗೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಹೀಗಾಗಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ಭಾರತದಲ್ಲೂ ದಿನಂಪ್ರತಿ ಸಾವಿರಾರು ಕಾರುಗಳನ್ನು ಉತ್ಪಾದಿಸುವ ಪ್ರಮುಖ ಕಂಪನಿಗಳ ಕಾರುಗಳ ಉತ್ಪಾದನೆಗೆ ಸಾಕಷ್ಟು ಹೊಡೆತ ನೀಡಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಇದರಿಂದ ಹೊಸ ಟೊಯೊಟಾ ಪಿಕ್‌ಅಪ್ ಟ್ರಕ್ ಮಾದರಿಯು ಮುಂಬರುವ ಜೂನ್ ವೇಳೆಗೆ ಬಿಡುಗಡೆಯಾಗಬಹುದಾಗಿದ್ದು, ಹೊಸ ಕಾರು ಇನೋವೆಟಿವ್ ಮಲ್ಟಿ ಪರ್ಪಸ್ ವೆಹಿಕಲ್(ಐಎಂವಿ2) ಆರ್ಕಿಟೆಕ್ಚರ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಳ್ಳಲಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಹೊಸ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು ಬಿಡದಿ ಕಾರು ಉತ್ಪಾದನಾ ಘಟಕದಲ್ಲಿಯೇ ಉತ್ಪಾದನೆಗಾಗಿ ಈಗಾಗಲೇ ಎಲ್ಲಾ ಸಿದ್ದತೆ ನಡೆಸಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳ ಕಾರುಗಳ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ಸಾಕಷ್ಟು ಹೆಚ್ಚಳವಾಗುತ್ತಿರುವುದೇ ಹೊಸ ಕಾರು ಬಿಡುಗಡೆಗೆ ಮುಖ್ಯ ಕಾರಣವಾಗಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೈಲಕ್ಸ್ ಮಾದರಿಯು ಸಹ ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಹೈಲಕ್ಸ್ ಪಿಕ್ಅಪ್ ಮಾದರಿಯು ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಪಿಕ್ಅಪ್‌ನಲ್ಲಿ ಟೊಯೊಟಾ ಕಂಪನಿಯು ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಬಿಡುಗಡೆ ಮಾಡುತ್ತಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ ಮಾದರಿಯು 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 4x4 ಡ್ರೈವ್‌ಟ್ರೈನ್‌ನೊಂದಿಗೆ ಮ್ಯಾನುವಲ್ ಮಾದರಿಯು 204 ಬಿಎಚ್‌ಪಿ, 420 ಎನ್ಎಂ ಟಾರ್ಕ್ ಮತ್ತು ಆಟೋಮ್ಯಾಟಿಕ್ ಮಾದರಿಯು 204 ಬಿಎಚ್‌ಪಿ, 500 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಹೊಸ ಪಿಕ್ಅಪ್ ಮಾದರಿಯಲ್ಲಿ ಪ್ರೀಮಿಯಂ ಫೀಚರ್ಸ್ ಜೊತೆ ಸುರಕ್ಷತಾ ವೈಶಿಷ್ಟ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮುಂಭಾಗ ಮತ್ತು ಎರಡು ಬದಿಗಳಲ್ಲೂ ಒಟ್ಟು ಏಳು ಏರ್‌ಬ್ಯಾಗ್‌‌ಗಳು, ಎಬಿಡಿ, ಇಬಿಡಿ, ಹಿಲ್ ಅಸಿಸ್ಟ್ ಕಂಟ್ರೋಲ್, ಮುಂಭಾಗದಲ್ಲಿ ಪಾರ್ಕಿಂಗ್ ಸೆನ್ಸಾರ್‌ಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಹೆಚ್ಚಿನ ವೇಗದಲ್ಲಿ ಸ್ಟೀರಿಂಗ್ ಅನ್ನು ಭಾರವಾಗಿಸುವ ವೇರಿಯಬಲ್ ಫ್ಲೋ ಕಂಟ್ರೋಲ್, ಇಕೋ ಮತ್ತು ಪವರ್ ಡ್ರೈವಿಂಗ್ ಮೋಡ್‌ಗಳು, ಟೈರ್ ಆಂಗಲ್ ಮಾನಿಟರ್ ಸೇರಿದಂತೆ ಪ್ರಮುಖ ಫೀಚರ್ಸ್‌ಗಳಿವೆ.

ಕಾರಣಾಂತರಗಳಿಂದ ಭಾರತದಲ್ಲಿ ಇನ್ನಷ್ಟು ತಡವಾಗಲಿದೆ ಟೊಯೊಟಾ ಹೈಲಕ್ಸ್ ಬಿಡುಗಡೆ

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸದ್ಯ ಹೈಲಕ್ಸ್ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ 40ಕ್ಕೂ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲಿ ಹೊಸ ಮಾದರಿಯನ್ನು ರೂ.25 ಲಕ್ಷದಿಂದ ರೂ. 30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಗಾಗಿ ಕೆಲವು ಕೆಲವು ವೆರಿಯೆಂಟ್‌ನೊಂದಿಗೆ ಮಾತ್ರ ಬಿಡುಗಡೆಯಾಗುತ್ತಿದೆ.

Article Published On: Tuesday, March 29, 2022, 9:00 [IST]
English summary
Toyota hilux pickup launch delayed in india reason
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+