ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಹೊಚ್ಚ ಹೊಸ ಟೊಯೊಟಾ(Toyota) ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯು ಇದೇ ತಿಂಗಳು 20ರಂದು ಬಿಡುಗಡೆಯಾಗಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಮತ್ತೊಂದು ಟೀಸರ್ ಹಂಚಿಕೊಂಡಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಭಾರತದಲ್ಲಿ ಟೊಯೊಟಾ ಕಂಪನಿಯು ಹೊಸದಾಗಿ ಬಿಡುಗಡೆ ಮಾಡುತ್ತಿರುವ ನಾಲ್ಕು ಹೊಸ ಕಾರು ಮಾದರಿಯಲ್ಲಿ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯು ಸಹ ಒಂದಾಗಿದ್ದು, ಹೊಸ ಪಿಕ್ಅಪ್ ಮಾದರಿಯಾಗಿ ಕಂಪನಿಯು ಈಗಾಗಲೇ ರೂ.1 ಲಕ್ಷ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸುವುದರ ಜೊತೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಕಾರಿನ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಈ ತಿಂಗಳು 20ರಂದು ಬಿಡುಗಡೆಯಾಗಲಿರುವ ಹೊಸ ಪಿಕ್ಅಪ್ ಮಾದರಿಯು ಮುಂಬರುವ ಮಾರ್ಚ್‌ ಆರಂಭದಲ್ಲಿ ಗ್ರಾಹಕರ ಕೈಸೇರಲಿದ್ದು, ಹೊಸ ಕಾರು ಮಾದರಿಯು ಆಕರ್ಷಕ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಆಫ್ ರೋಡ್ ಪ್ರಿಯರನ್ನು ಸೆಳೆಯಲಿದೆ.

ಹೊಸ ಪಿಕ್ಅಪ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಎಂಪಿವಿ ಮತ್ತು ಫಾರ್ಚೂನರ್ ಎಸ್‌ಯುವಿ ನಡುವಿನ ಸ್ಥಾನದಲ್ಲಿ ಮಾರಾಟಗೊಳ್ಳಲಿದ್ದು, ಇನೋವೆಟಿವ್ ಮಲ್ಟಿ ಪರ್ಪಸ್ ವೆಹಿಕಲ್(ಐಎಂವಿ) ಪ್ಲ್ಯಾಟ್‌ಫಾರ್ಮ್ ಆಧರಿಸಿ ಹೈಲಕ್ಸ್ ಮಾದರಿಯು ಅಭಿವೃದ್ದಿಗೊಂಡಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಹೊಸ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು ಬಿಡದಿ ಕಾರು ಉತ್ಪಾದನಾ ಘಟಕದಲ್ಲಿಯೇ ಉತ್ಪಾದನೆಗಾಗಿ ಈಗಾಗಲೇ ಎಲ್ಲಾ ಸಿದ್ದತೆ ನಡೆಸಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳ ಕಾರುಗಳ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ಸಾಕಷ್ಟು ಹೆಚ್ಚಳವಾಗುತ್ತಿರುವುದೇ ಹೊಸ ಕಾರು ಬಿಡುಗಡೆಗೆ ಮುಖ್ಯ ಕಾರಣವಾಗಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಟೊಯೊಟಾ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯನ್ನು ಆಧರಿಸಿ ಜಾಗತಿಕ ಮಾರುಕಟ್ಟೆಗಳಲ್ಲಿನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡುತ್ತಿದ್ದು, ಹೈಲಕ್ಸ್ ನಂತರ ಮತ್ತಷ್ಟು ಹೊಸ ಕಾರು ಮಾದರಿಗಳು ಭಾರತಕ್ಕೆ ಪ್ರವೇಶ ಪಡೆಯಲಿವೆ ಎನ್ನಲಾಗಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

2022ರ ಅಂತ್ಯಕ್ಕೆ ಒಟ್ಟು ನಾಲ್ಕು ಹೊಸ ಕಾರುಗಳನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿರುವ ಟೊಯೊಟಾ ಕಂಪನಿಯು ಮೊದಲ ಮಾದರಿಯಾಗಿ ಹೈಲಕ್ಸ್ ಪಿಕ್‌ಅಪ್ ನಂತರ ರಾವ್4 ಹಾಗೂ ಮತ್ತೆರಡು ರೀಬ್ಯಾಡ್ಜ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೈಲಕ್ಸ್ ಮಾದರಿಯು ಸಹ ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

1968ರಿಂದಲೇ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳುತ್ತಿರುವ ಹೈಲಕ್ಸ್ ಪಿಕ್ಅಪ್ ಮಾದರಿಯು ಟೊಯೊಟಾ ಕಂಪನಿಯ ಯಶಸ್ವಿ ಕಾರು ಮಾದರಿಗಳಲ್ಲಿ ಒಂದಾಗಿದ್ದು, 180ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮಾರಾಟಗೊಳ್ಳುತ್ತಿರುವ ಹೈಲಕ್ಸ್ ಪಿಕ್ಅಪ್ ಇದುವರೆಗೆ ಸುಮಾರು 2 ಕೋಟಿ ಯುನಿಟ್ ಮಾರಾಟ ದಾಖಲೆ ಹೊಂದಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಮೊದಲ ತಲೆಮಾರಿನಿಂದಲೂ ಹೆಚ್ಚಿನ ಬೇಡಿಕೆ ಹೊಂದಿರುವ ಹೈಲಕ್ಸ್ ಮಾದರಿಯು ಕಾಲಾಂತರದಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಇದೀಗ ಹೈಲಕ್ಸ್ ಮಾದರಿಯು ಅಧಿಕೃತವಾಗಿ ಭಾರತದಲ್ಲೂ ಮಾರಾಟಕ್ಕೆ ಲಭ್ಯವಾಗುತ್ತಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಹೈಲಕ್ಸ್ ಪಿಕ್ಅಪ್ ಮಾದರಿಯು ಭಾರತೀಯ ಮಾರುಕಟ್ಟೆಗಳಲ್ಲಿನ ಪ್ರತಿಸ್ಪರ್ಧಿ ಪಿಕ್ಅಪ್ ಮಾದರಿಗಳಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯಲ್ಲಿ ಬೆಲೆ ಕಡಿತಕ್ಕಾಗಿ ಕೆಲವು ಬದಲಾವಣೆಗಳನ್ನು ತರಲಾಗಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಹೈಲಕ್ಸ್ ಪಿಕ್ಅಪ್ ಮಾದರಿಯು ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಪಿಕ್ಅಪ್‌ನಲ್ಲಿ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಬಿಡುಗಡೆ ಮಾಡಬಹುದಾಗಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸದ್ಯ ಹೈಲಕ್ಸ್ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ 40ಕ್ಕೂ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲಿ ಹೊಸ ಮಾದರಿಯನ್ನು ರೂ.18 ಲಕ್ಷದಿಂದ ರೂ. 25 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಗಾಗಿ ಕೆಲವು ಕೆಲವು ವೆರಿಯೆಂಟ್‌ನೊಂದಿಗೆ ಬಿಡುಗಡೆಯಾಗುತ್ತಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಜೊತೆಗೆ ಹೊಸ ಪಿಕ್ಅಪ್ ಮಾದರಿಯಲ್ಲಿ ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಸಹ ನೀಡಲಾಗಿದ್ದು, ಆಫ್ ರೋಡ್ ಪ್ರಿಯರು ಹೊಸ ಕಾರು ಮಾದರಿಯನ್ನು ವಿವಿಧ ಬಗೆಯಲ್ಲಿ ಮಾಡಿಫೈ ಸೌಲಭ್ಯಗಳನ್ನು ಮಾರ್ಪಾಡುಗೊಳಿಸಲು ಸೂಕ್ತ ಕಾರು ಮಾದರಿಯಾಗಿದೆ.

ಬಿಡುಗಡೆಗೂ ಮುನ್ನ ಹೈಲಕ್ಸ್ ಪಿಕ್ಅಪ್ ಹೊಸ ಟೀಸರ್ ಬಿಡುಗಡೆ ಮಾಡಿದ ಟೊಯೊಟಾ

ಹೊಸ ಪಿಕ್ಅಪ್ ಮಾದರಿಗಾಗಿ ಟೊಯೊಟಾ ಕಂಪನಿಯು ಭಾರತದಲ್ಲಿ 3 ವರ್ಷ ಅಥವಾ 1 ಲಕ್ಷ ಕಿ.ಮೀ ಮೇಲೆ ಸ್ಟ್ಯಾಂಡರ್ಡ್ ವಾರಂಟಿ ನೀಡಲು ನಿರ್ಧರಿಸಿದ್ದು, ಹೊಸ ಪಿಕ್ಅಪ್ ಮಾದರಿಯು ಎಮೊಷನಲ್ ರೆಡ್, ಗ್ರೆ ಮೆಟಾಲಿಕ್, ವೈಟ್ ಪರ್ಲ್ ಸಿಎಸ್, ಸಿಲ್ವರ್ ಮೆಟಾಲಿಕ್ ಮತ್ತು ಸೂಪರ್ ವೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

Most Read Articles

Kannada
Read more on ಟೊಯೊಟಾ toyota
English summary
Toyota hilux pickup teaser released ahead of launch
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X